Homeಮುಖಪುಟಗುಜರಾತ್‌ ಪೊಲೀಸರಿಂದ ಮೂರನೇ ಬಾರಿಗೆ ಸಾಕೇತ್‌ ಗೋಖಲೆ ಬಂಧನ

ಗುಜರಾತ್‌ ಪೊಲೀಸರಿಂದ ಮೂರನೇ ಬಾರಿಗೆ ಸಾಕೇತ್‌ ಗೋಖಲೆ ಬಂಧನ

- Advertisement -
- Advertisement -

ಗುಜರಾತ್ ಪೊಲೀಸರು ಗುರುವಾರ ತೃಣಮೂಲ ಕಾಂಗ್ರೆಸ್ ವಕ್ತಾರ ಸಾಕೇತ್ ಗೋಖಲೆ ಅವರನ್ನು ಮೂರನೇ ಬಾರಿಗೆ ಬಂಧಿಸಿದ್ದಾರೆ ಎಂದು ಹೆಸರು ಹೇಳಲಿಚ್ಛಿಸದ ಅಧಿಕಾರಿಗಳು ಮಾಹಿತಿ ನೀಡಿರುವುದಾಗಿ ಪಿಟಿಐ ವರದಿ ಮಾಡಿದೆ. ಒಂದೇ ತಿಂಗಳಲ್ಲಿ ಸಾಕೇತ್‌ ಮೂರನೇ ಸಲ ಬಂಧನಕ್ಕೆ ಒಳಗಾಗಿದ್ದಾರೆ.

ಕ್ರೌಡ್ ಫಂಡಿಂಗ್ ಮೂಲಕ ಸಂಗ್ರಹಿಸಿದ ಹಣವನ್ನು ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ಗೋಖಲೆ ಅವರನ್ನು ಗುರುವಾರ ತಡರಾತ್ರಿ ದೆಹಲಿಯಲ್ಲಿ ಅಹಮದಾಬಾದ್ ಸೈಬರ್ ಕ್ರೈಂ ಬ್ರಾಂಚ್ ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗೋಖಲೆ ಮತ್ತು ಅಪರಾಧ ವಿಭಾಗದ ಅಧಿಕಾರಿಗಳು ಶುಕ್ರವಾರ ಸಂಜೆ ಅಹಮದಾಬಾದ್ ತಲುಪುವ ನಿರೀಕ್ಷೆಯಿದೆ.

“ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ತಮ್ಮ ತಂಡವು ನವದೆಹಲಿ ಜಿಲ್ಲೆಗೆ ಬರುತ್ತಿದೆ ಮತ್ತು ದಾಳಿ ನಡೆಸಲಿದೆ ಎಂದು ಗುಜರಾತ್ ಪೊಲೀಸರು ನಮಗೆ ತಿಳಿಸಿದ್ದಾರೆ” ಎಂದು ಅಪರಿಚಿತ ದೆಹಲಿ ಪೊಲೀಸ್ ಅಧಿಕಾರಿಯೊಬ್ಬರು ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ. “ನಂತರ ಅವರು ಗೋಖಲೆ ಅವರನ್ನು ಬಂಧಿಸಿದ್ದಾರೆ. ಗೋಖಲೆ ಬಂಧನದ ಬಗ್ಗೆ ನಮಗೆ ತಿಳಿದಿರಲಿಲ್ಲ. ದಾಳಿಯ ಸ್ಥಳ ಮತ್ತು ಬಂದ ತಂಡದ ಬಗ್ಗೆ ಮಾತ್ರ ನಮಗೆ ತಿಳಿಸಲಾಗಿದೆ” ಎಂದಿದ್ದಾರೆ ಅಧಿಕಾರಿ.

ತೃಣಮೂಲ ಕಾಂಗ್ರೆಸ್ ಮೂಲಗಳು ‘ಸ್ಕ್ರಾಲ್‌.ಇನ್‌’ಗೆ ಪ್ರತಿಕ್ರಿಯಿಸಿದ್ದು, “ಗೋಖಲೆ ಅವರನ್ನು ದೆಹಲಿಯ ಬಂಗಾ ಭವನದಲ್ಲಿ ಅರೆಸ್ಟ್ ಮಾಡಲಾಗಿದೆ. ಸೈಬರ್‌ ಪ್ರಕರಣದ ಹಿನ್ನೆಲೆಯಲ್ಲಿ ಬಂಧಿಸಲಾಗಿದೆ” ಎಂದಿವೆ. ಮೋದಿ ಸರ್ಕಾರದ ವಿರುದ್ಧ ಟೀಕೆ ಮಾಡಿದ್ದರಿಂದ ಗೋಖಲೆಯವರ ಬಂಧನವಾಗಿದೆ ಎಂದು ಟಿಎಂಸಿ ಆರೋಪಿಸಿದೆ.

“ಮೋರ್ಬಿ ತೂಗು ಸೇತುವೆ ದುರಂತ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿ ನೀಡಿದ್ದರು. ಆ ವೇಳೆ 30 ಕೋಟಿ ರೂಪಾಯಿ ಖರ್ಚಾಗಿದೆ” ಎಂದು ಪ್ರತಿಪಾದಿಸಿದ ಸುದ್ದಿ ತುಣುಕನ್ನು ಸಾಮಾಜಿಕ ಮಾಧ್ಯಮದಲ್ಲಿ ಗೋಖಲೆ ಹಂಚಿಕೊಂಡ ಬಳಿಕ ಪ್ರಕರಣ ದಾಖಲಾಗಿತ್ತು. ಗೋಖಲೆ ಅವರು ನಾಲ್ಕು ದಿನಗಳಲ್ಲಿ ಎರಡು ಬಾರಿ ಬಂಧಿಸಲ್ಪಟ್ಟಿದ್ದರು. ಆದರೆ, ಪ್ರೆಸ್ ಇನ್‌ಫರ್ಮೇಷನ್ ಬ್ಯೂರೋ ಈ ಮಾಹಿತಿಯು ಸುಳ್ಳು ಎಂದು ಪ್ರತಿಕ್ರಿಯಿಸಿತ್ತು.

ಮಚ್ಚು ನದಿಯ ಸೇತುವೆ ಕುಸಿದು 141 ಜನರು ಸಾವನ್ನಪ್ಪಿದ ಒಂದು ದಿನದ ನಂತರ ನವೆಂಬರ್ 1 ರಂದು ಪ್ರಧಾನಿ ಮೊರ್ಬಿಗೆ ಭೇಟಿ ನೀಡಿದ್ದರು.

ಗೋಖಲೆಯವರನ್ನು ಮೊದಲು ಡಿಸೆಂಬರ್ 5 ರಂದು ಜೈಪುರದಲ್ಲಿ ಗುಜರಾತ್ ಪೊಲೀಸರು, ರಾಜಸ್ಥಾನ ಪೊಲೀಸರಿಗೆ ತಿಳಿಯದಂತೆ ಬಂಧಿಸಿದ್ದರು. ಅವರನ್ನು ಅಹಮದಾಬಾದ್‌ಗೆ ಕರೆತಂದ ನಂತರ ಔಪಚಾರಿಕವಾಗಿ ಬಂಧಿಸಲಾಯಿತು. ಡಿಸೆಂಬರ್ 8ರವರೆಗೆ ಪೊಲೀಸ್ ಕಸ್ಟಡಿಗೆ ಕಳುಹಿಸಲಾಯಿತು. ರಾಜಕೀಯ ಮೈಲೇಜ್ ಪಡೆಯಲು ಮೋದಿಯವರ ಕುರಿತು ಸುಳ್ಳು ಸುದ್ದಿ ಟ್ವೀಟ್ ಮಾಡಿದ್ದಾರೆ ಎಂದು ಗುಜರಾತ್ ಪೊಲೀಸರು ಆರೋಪಿಸಿದ್ದರು.

ಡಿಸೆಂಬರ್ 8ರಂದು ಅಹಮದಾಬಾದ್ ನ್ಯಾಯಾಲಯವು ಸಾಕೇತ್‌ ಅವರಿಗೆ ಜಾಮೀನು ನೀಡಿತು, ಆದರೆ ಮೊರ್ಬಿ ಜಿಲ್ಲೆಯಲ್ಲಿ ದಾಖಲಾದ ಮತ್ತೊಂದು ಪ್ರಕರಣದಲ್ಲಿ ಅವರನ್ನು ಶೀಘ್ರದಲ್ಲೇ ಮರು ಬಂಧಿಸಲಾಯಿತು. ಗೋಖಲೆಯವರು ಮೋದಿಯವರ ಬಗ್ಗೆ ಸುಳ್ಳು ಸುದ್ದಿಗಳನ್ನು ಹರಡುವುದನ್ನು ಹೊರತುಪಡಿಸಿ “ಚುನಾವಣೆಗಳ ಸಮಯದಲ್ಲಿ ವರ್ಗಗಳ ನಡುವೆ ದ್ವೇಷವನ್ನು ಉತ್ತೇಜಿಸಿದ್ದಾರೆ” ಎಂದು ಮೋರ್ಬಿ ಪೊಲೀಸರು ದೂರಿದ್ದರು.

ಡಿಸೆಂಬರ್ 9 ರಂದು ಗೋಖಲೆ ಎರಡನೇ ಪ್ರಕರಣದಲ್ಲೂ ಜಾಮೀನು ಪಡೆಯುವಲ್ಲಿ ಯಶಸ್ವಿಯಾದರು. ಗುರುವಾರ ಅವರನ್ನು ಮೂರನೇ ಬಾರಿಗೆ ಬಂಧಿಸಲ್ಪಡುವ ಕೆಲವು ಗಂಟೆಗಳ ಮೊದಲು, ಗೋಖಲೆಯವರು ಗುಜರಾತ್ ಪೊಲೀಸರ ಕುರಿತು ಟ್ವೀಟ್ ಮಾಡಿದ್ದರು. “ಮೊದಲ ಪ್ರಕರಣದಲ್ಲಿ ನನ್ನನ್ನು ಗುಜರಾತ್ ಪೊಲೀಸರು ಬಂಧಿಸಿದ್ದರ ಕುರಿತು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು ಕಾನೂನುಬಾಹಿರ ಬಂಧನದ ಪ್ರಕರಣವನ್ನು ದಾಖಲಿಸಿದೆ” ಎಂದು ಟ್ವೀಟ್‌ನಲ್ಲಿ ತಿಳಿಸಿದ್ದರು.

“3 ವಾರಗಳ ಹಿಂದೆ ನನ್ನ ಬಂಧನಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು ಗುಜರಾತ್ ಪೊಲೀಸರ ವಿರುದ್ಧ ಪ್ರಕರಣ ದಾಖಲಿಸಿದೆ ಎಂದು ಘೋಷಿಸಲು ಸಂತೋಷವಾಗಿದೆ. ಜೈಪುರದಿಂದ ಅಹಮದಾಬಾದ್‌ಗೆ ಟ್ರಾನ್ಸಿಟ್ ರಿಮಾಂಡ್ ಇಲ್ಲದೆ (ಮತ್ತು ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡದೆ) ನನ್ನನ್ನು ಅಕ್ರಮವಾಗಿ ಬಂಧಿಸಿದ್ದಕ್ಕೆ ಸಂಬಂಧಿಸಿದ ಪ್ರಕರಣ ಇದಾಗಿದೆ” ಎಂದು ಮಾಹಿತಿ ನೀಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...