Homeಕರ್ನಾಟಕಸಕಲೇಶಪುರ: ದಲಿತರ ಮೇಲೂ ಪ್ರಕರಣ ದಾಖಲು; ಬಜರಂಗದಳ ವಿರುದ್ಧ ಬೀದಿಗಿಳಿದ ಭೀಮ ಪುತ್ರರು

ಸಕಲೇಶಪುರ: ದಲಿತರ ಮೇಲೂ ಪ್ರಕರಣ ದಾಖಲು; ಬಜರಂಗದಳ ವಿರುದ್ಧ ಬೀದಿಗಿಳಿದ ಭೀಮ ಪುತ್ರರು

ದನ ಸಾಗಣೆ ಮಾಡಲಾಗುತ್ತಿದೆ ಎಂದು ಆರೋಪಿಸಿ ದಲಿತ ಮುಖಂಡನ ಮೇಲೆ ಬಜರಂಗದಳದವರು ಹಲ್ಲೆ ನಡೆಸಿದ ಬಳಿಕ ದಲಿತರ ಆಕ್ರೋಶ ಭುಗಿಲೆದ್ದಿದೆ.

- Advertisement -
- Advertisement -

ಸಕಲೇಶಪುರ: ಮನೆಗೆ ಕರು ಸಾಗಿಸುತ್ತಿದ್ದ ದಲಿತ ಮುಖಂಡ ಹಾಗೂ ಅವರ ಸಂಬಂಧಿಕರ ಮೇಲೆ ಹಲ್ಲೆ ನಡೆಸಿದ ಬಜರಂಗ ದಳದ 9 ಕಾರ್ಯಕರ್ತರ ಮೇಲೆ ಪಟ್ಟಣ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿದ್ದು, ಬಳಿಕ 9 ಮಂದಿ ದಲಿತರ ಮೇಲೂ ಕೇಸು ದಾಖಲಾಗಿದೆ. ಇದರ ವಿರುದ್ಧ ದಲಿತರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ.

ಹಲಸುಲಿಗೆ ಗ್ರಾಮ ಪಂಚಾಯತ್‌ ಮಾಜಿ ಉಪಾಧ್ಯಕ್ಷ ಹಾಗೂ ಹಾಲಿ ಸದಸ್ಯರಾಗಿರುವ ಮಂಜುನಾಥ್‌ ಮೇಲೆ ಬಜರಂಗದಳದ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದರು. ಮಂಜುನಾಥ್‌ ನೀಡಿದ ದೂರಿನ ಆಧಾರದಲ್ಲಿ ಭಜರಂಗದಳದ ಕಾರ್ಯಕರ್ತರಾದ ಗುರು, ರಘು, ಕಿರಣ, ಕೌಶಿಕ್, ಕಟ್ಟನಗದ್ದೆ ನವೀನ, ಲೋಕೇಶ್, ಶಿವು ಜಿಫ್ಟಿ, ರಘು ಹಾಗೂ ಇವರ ಸಹಚರರ ಮೇಲೆ ಐಪಿಸಿ ಸೆಕ್ಷನ್‌ 341, 323, 504, 506 ಮತ್ತು ಎಸ್‌ಸಿ, ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯ ಸೆಕ್ಷನ್‌ 3(1), 3(2) ಅಡಿಯಲ್ಲಿ ಪ್ರಕರಣದ ದಾಖಲಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮಂಜುನಾಥ್‌ ಅವರ ಸಂಬಂಧಿ ಕಾಲೇಶ್ ಎಂಬವರ ಮೇಲೆಯೂ ಬಜರಂಗದಳದ ಕಾರ್ಯಕರ್ತರು ಹಲ್ಲೆ ನಡೆಸಿದ್ದು, ಇವರು ನೀಡಿದ ದೂರಿನ ಅನ್ವಯ ಐಪಿಸಿ ಸೆಕ್ಷನ್‌ 323, 341, 504, 506, 114, 34 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಬಳಿಕ ಭಜರಂಗದಳದ ಕಾರ್ಯಕರ್ತ ಶಿವು ಎಂಬಾತ ತನ್ನ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಿ ದೂರು ನೀಡಿದ್ದಾನೆ. ಈತನ ದೂರಿನ ಆಧಾರದಲ್ಲಿ ದಲಿತ ಮುಖಂಡರಾದ ಪುರಸಭೆ ಸದಸ್ಯ ಅಣ್ಣಪ್ಪ, ಬೈಕೆರೆ ದೇವರಾಜ್, ವಕೀಲ ವೇಣುಕುಮಾರ್ ಸೇರಿದಂತೆ 9 ಜನರ ಮೇಲೆ ಪ್ರಕರಣದ ದಾಖಲಿಸಲಾಗಿದೆ.

ತಾಲ್ಲೂಕಿನಲ್ಲಿ ನಡೆಯುತ್ತಿರುವ ಬಜರಂಗದಳ ಅತಿರೇಕಗಳನ್ನು ಖಂಡಿಸಿ, ದಲಿತರ ಮೇಲೆ ಸುಳ್ಳು ಪ್ರಕರಣಗಳನ್ನು ದಾಖಲಿಸಲಾಗಿದ್ದು, ಅವುಗಳನ್ನು ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹಿಸಿ ದಲಿತರು ಬೃಹತ್‌ ಪ್ರತಿಭಟನೆ ನಡೆಸಿದ್ದಾರೆ. ಸಾವಿರಾರು ಮಂದಿ ದಲಿತರು ಜಮಾಯಿಸಿ, ಬಜರಂಗದಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

107 ಕೇಸಿನ ಉದ್ದೇಶಿತ ನಿಯಮಗಳನ್ನು ಉಲ್ಲಂಘನೆ ಮಾಡಿರುವ ಆರೋಪಿಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. ದಲಿತರ ಮೇಲೆ ನಕಲಿ ಪ್ರಕರಣ ದಾಖಲಿಸಲಾಗಿದೆ ಎಂದು ಆರೋಪಿಸಿದ್ದಾರೆ.

ಭಜರಂಗದಳದ ಕಾರ್ಯಕರ್ತರಾದ ಗುರು, ರಘು, ಕಿರಣ, ಕೌಶಿಕ್, ಕಟ್ಟನಗದ್ದೆ ನವೀನ, ಲೋಕೇಶ್, ಶಿವು ಜಿಫ್ಟಿ, ರಘು ಮತ್ತು ಅವರ ಸಂಗಡಿಗರು ಸಕಲೇಶಪುರದ ನಗರ ಪೊಲೀಸ್ ಠಾಣೆಯಲ್ಲಿ ರೌಡಿಶೀಟರ್ ಪಟ್ಟಿಯಲ್ಲಿದ್ದಾರೆ. ಇವರುಗಳು ತಾಲ್ಲೂಕಿನ ಶಾಂತಿ ಕದಡಲು ದಿನನಿತ್ಯ ಇಲ್ಲಸಲ್ಲದ ಕೃತ್ಯಗಳನ್ನು ನಡೆಸುತ್ತಿದ್ದಾರೆ ಎಂದು ದಲಿತ ಮುಖಂಡರು ಎಚ್ಚರಿಸಿದ್ದಾರೆ.

ಇದನ್ನೂ ಓದಿರಿ: ಸಕಲೇಶಪುರ: ದನ ಸಾಗಿಸುತ್ತಿದ್ದಾನೆಂದು ದಲಿತ ಮುಖಂಡನ ಮೇಲೆ ಬಜರಂಗದಳದ ದುಷ್ಕರ್ಮಿಗಳಿಂದ ಹಲ್ಲೆ

ಈ ರೌಡಿಶೀಟರ್‌ಗಳು ತಾಲ್ಲೂಕಿನ ಶಾಂತಿಗೆ ಧಕ್ಕೆ ಬರಬಹುದು ಎಂಬ ಗುಪ್ತಚರ ಖಚಿತ ಮಾಹಿತಿ ಮೇರೆಗೆ ಸಕಲೇಶಪುರದ ಪೊಲೀಸ್ ಇಲಾಖೆ ಇವರುಗಳ ಮೇಲೆ 107 ಕೇಸು ದಾಖಲಿಸಿ ತಾಲೂಕು ದಂಡಾಧಿಕಾರಿಗಳಿಗೆ ಶಿಫಾರಸು ಮಾಡಿ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದಾರೆ. ಆರೋಪಿಗಳು ತಾಲೂಕು ದಂಡಾಧಿಕಾರಿಗಳ ಬಳಿ ಹೋಗಿ ಮುಂದಿನ 6 ತಿಂಗಳವರೆಗೆ ನಾವು ಯಾವುದೇ ರೀತಿಯ ಸಮಾಜಘಾತಕ ಚಟುವಟಿಕೆಗಳನ್ನು, ಯಾವುದೇ ಶಾಂತಿ ಕದಡುವ ಕೆಲಸ ನಡೆಸುವುದಿಲ್ಲ ಎಂದು ಪ್ರಮಾಣ ಮಾಡಿ ಮುಚ್ಚಳಿಕೆ ಬರೆದುಕೊಟ್ಟಿದ್ದಾರೆ. ಇಷ್ಟೆಲ್ಲದರ ನಡುವೆ ಅಹಿತಕರ ಘಟನೆಗಳಿಗೆ ಈ ಕಿಡಿಗೇಡಿಗಳು ಕಾರಣವಾಗಿದ್ದಾರೆ ಎಂದು ದೂರಿದ್ದಾರೆ.

ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಸಕಲೇಶಪುರದ ಆನೆಮಹಾಲ್ ಗ್ರಾಮದ ಮೂಲಕ ತೆರಳುತ್ತಿದ್ದ ಸಂದರ್ಭದಲ್ಲಿ ಪೊಲೀಸ್‌ ಇಲಾಖೆಗೆ ಮಾಹಿತಿ ನೀಡದೆ, ಅನುಮತಿ ಪಡೆಯದೆ ಕಾನೂನು ಉಲ್ಲಂಘನೆ ಮಾಡಿ ಪ್ರತಿಭಟನೆ ನೆಪದಲ್ಲಿ ಗಲಾಟೆ ಮಾಡಿದ್ದಾರೆ. ಸಮಾಜದ ಶಾಂತಿ ಕದಡಲು ಯತ್ನಿಸಿರುತ್ತಾರೆ.‌ ಇವರ ಮೇಲೆ ಕ್ರಮ ಕೈಗೊಳ್ಳಲು ಕಾಂಗ್ರೆಸ್ ಪಕ್ಷದ ಮುಖಂಡರು ಪ್ರತಿಭಟನೆ ನಡೆಸಿ ಪೋಲಿಸರಿಗೆ ದೂರು ನೀಡಿದ್ದಾರೆ. ಆನಂತರದಲ್ಲಿ ದಲಿತರಾದ ಮಂಜುನಾಥ್ ಮತ್ತು ಕಾಲೇಶ್ ಎಂಬವರ ಮೇಲೆ ಹಲ್ಲೆ ನಡೆಸಿರುತ್ತಾರೆ ಎಂದು ತಿಳಿಸಿದ್ದಾರೆ.

ಪ್ರತಿಭಟನೆಯಲ್ಲಿ ಮಾತನಾಡಿದ ದಲಿತ ಮುಖಂಡರು, “ದಲಿತರ ಮೇಲೆ ವಿನಾಕಾರಣ ಪ್ರಕರಣ ದಾಖಲಿಸಿದ್ದೀರಾ. ದಲಿತರು ದನವನ್ನು ಕುಯ್ಯಲೇಬೇಕೆಂದು ನಿಂತರೆ ಹಳ್ಳಿಹಳ್ಳಿಯಲ್ಲಿ ಕುಯ್ಯಲಿದ್ದಾರೆ. ಆದರೆ ನಾವೆಲ್ಲ ಭೀಮಪುತ್ರರು. ಬಾಬಾ ಸಾಹೇಬರ ಅನುಯಾಯಿಗಳು. ಅವರು ಬರೆದಿರುವ ಸಂವಿಧಾನಕ್ಕೆ ಬೆಲೆ ಕೊಡುವವರು. ಬಾಬಾ ಸಾಹೇಬರ ರಕ್ತವನ್ನು ಹಂಚಿಕೊಂಡು ಹುಟ್ಟಿರುವ ನಾವು, ಕಾನೂನನ್ನು ಗೌರವಿಸುತ್ತೇವೆ” ಎಂದು ಗುಡುಗಿದ್ದಾರೆ.

“ದಲಿತರ ಮೇಲೆ ಸುಳ್ಳು ಕೇಸು ದಾಖಲಿಸಲಾಗಿದೆ. ಬಜರಂಗದಳದ ಕಿಡಿಗೇಡಿಗಳನ್ನು ಬಂಧಿಸಿ ಗಡಿಪಾರು ಮಾಡಬೇಕು. ಭಾರತ ದೇಶವನ್ನು ಕಟ್ಟಿ ಬೆಳೆಸಿದ ವಂಶ ನಮ್ಮದು. ನಾವು ಮೂಲ ನಿವಾಸಿಗಳು. ಎಲ್ಲ ಜನಾಂಗ ಇರುವ ದೇಶ ಭಾರತ. ಈ ಭವ್ಯ ಭಾರತಕ್ಕೆ ಕಪ್ಪುಚುಕ್ಕಿ ಇಂತಹ ಕಿಡಿಗೇಡಿಗಳು. ನಾವೆಲ್ಲ ಹಿಂದೂ ನಾವೆಲ್ಲ ಒಂದು ಎನ್ನುತ್ತಾರೆ. ಆದರೆ ದಲಿತರ ಮೇಲೆ ಹಲ್ಲೆ ನಡೆಸುತ್ತಾರೆ. ನಿಜವಾದ ದೇಶದ್ರೋಹಿಗಳಿವರು” ಎಂದು ಸಿಡಿದೆದ್ದಿದ್ದಾರೆ.

ಇದನ್ನೂ ಓದಿರಿ: ಆಹಾರದ ಹಕ್ಕು ಎತ್ತಿ ಹಿಡಿದ ಸಿದ್ದರಾಮಯ್ಯ: ಸೋಷಿಯಲ್‌ ಮೀಡಿಯಾ ತುಂಬಾ ಈಗ ಬಾಡಿನ ಘಮಲು

“ದೇಶದ್ರೋಹಿಗಳನ್ನು ಬಂಧಿಸಿ ಎಂದರೆ ಹೋರಾಟಗಾರರ ಮೇಲೆ ಪ್ರಕರಣ ದಾಖಲಿಸುತ್ತೀರಿ. ಸಕಲೇಶಪುರದ ಡಿವೈಎಸ್‌ಪಿ ಮನಸ್ಥಿತಿ ಜಾತೀಯತೆಯಿಂದ ಕೂಡಿದೆ. ಯಾರೋ ಕಿಡಿಗೇಡಿ ಕೊಟ್ಟ ದೂರು ಆಧರಿಸಿ, ಸ್ಟೇಷನ್‌ ಒಳಗೆ ಕೂತು ಕಟ್ಟಲಾದ ದೂರು ಆಧರಿಸಿ ಪ್ರಕರಣ ದಾಖಲಿಸಲಾಗಿದೆ. ಹೋರಾಟಗಾರರ ದನಿಯನ್ನು ಅಡಗಿಸಲು ಸಾಧ್ಯವಿಲ್ಲ” ಎಂದು ಎಚ್ಚರಿಸಿದ್ದಾರೆ.

ದಲಿತ ಮುಖಂಡರಾದ ಎಸ್‌.ಎನ್‌.ಮಲ್ಲಪ್ಪ, ರಾಜಶೇಖರ್‌ ಹುಲಿಕಲ್ಲು, ಎಚ್‌.ಕೆ. ಸಂದೇಶ, ಹೊಳಲಹಳ್ಳಿ ವೀರೇಶ್‌, ವೇಣು, ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಧರ್ಮೇಶ್‌ ಮೊದಲಾದವರು ಪ್ರತಿಭಟನೆಯಲ್ಲಿ ಮಾತನಾಡಿದ್ದಾರೆ. ತಮ್ಮ ಮನವಿ ಪತ್ರವನ್ನು ಉಪವಿಭಾಗಾಧಿಕಾರಿ, ತಹಸೀಲ್ದಾರ್‌ಗೆ ಮನವಿ ಪತ್ರವನ್ನು ಸಲ್ಲಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...