Homeಮುಖಪುಟಬ್ರಿಜ್ ಭೂಷಣ್ ಬೆಂಬಲಿಗರಿಂದ ನನ್ನ ತಾಯಿಗೆ ಬೆದರಿಕೆ ಕರೆಗಳು ಬರುತ್ತಿವೆ: ಸಾಕ್ಷಿ ಮಲಿಕ್

ಬ್ರಿಜ್ ಭೂಷಣ್ ಬೆಂಬಲಿಗರಿಂದ ನನ್ನ ತಾಯಿಗೆ ಬೆದರಿಕೆ ಕರೆಗಳು ಬರುತ್ತಿವೆ: ಸಾಕ್ಷಿ ಮಲಿಕ್

- Advertisement -
- Advertisement -

ತನ್ನ ತಾಯಿಗೆ ಬ್ರಿಜ್ ಭೂಷಣ್ ಸಿಂಗ್ ಬೆಂಬಲಿಗರಿಂದ ಬೆದರಿಕೆ ಕರೆಗಳು ಬರುತ್ತಿವೆ ಎಂದು ಒಲಿಂಪಿಕ್ ಪದಕ ವಿಜೇತ ಕುಸ್ತಿಪಟು ಸಾಕ್ಷಿ ಮಲಿಕ್ ಆರೋಪಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಬ್ರಿಜ್ ಭೂಷಣ್ ಸಿಂಗ್ ಅವರ ಗೂಂಡಾಗಳು ಸಕ್ರಿಯರಾಗಿದ್ದಾರೆ. ನನ್ನ ತಾಯಿಗೆ ಫೋನ್ ಮುಖಾಂತರ ಬೆದರಿಕೆ ಹಾಕುತ್ತಿದ್ದಾರೆ. ನಮ್ಮ ರಕ್ಷಣೆ ಸರ್ಕಾರದ ಹೊಣೆ” ಎಂದು ಹೇಳಿದ್ದಾರೆ.

ಬ್ರಿಜ್ ಭೂಷಣ್ ಪ್ರಭಾವಿ ಎಂದು ನಮಗೆ ಗೊತ್ತಿತ್ತು. ಆದರೆ, ಅವರು ಯಾರೊಂದಿಗೂ ಚರ್ಚಿಸದೆ ತಮ್ಮ ಊರಿನಲ್ಲಿ ರಾಷ್ಟ್ರೀಯ ಮಟ್ಟದ ಕ್ರೀಡಾಕೂಟ ಘೋಷಣೆ ಮಾಡುವಷ್ಟು ಶಕ್ತಿಶಾಲಿ ಎಂದು ತಿಳಿದಿರಲಿಲ್ಲ. ಈಗ ನಾವು ಕಿರಿಯ ಕುಸ್ತಿಪಟುಗಳ ಭವಿಷ್ಯ ಹಾಳು ಮಾಡಿದ ಆರೋಪ ಎದುರಿಸುತ್ತಿದ್ದೇವೆ. ನಾನು ಕುಸ್ತಿಯಿಂದ ಸನ್ಯಾಸತ್ವ ಸ್ವೀಕರಿಸಿದ್ದೇನೆ. ನನ್ನಿಂದ ಸಾಧ್ಯವಾಗದಿದ್ದನ್ನು ನನ್ನ ಜೂನಿಯರ್ ಹುಡುಗಿಯರು ಮಾಡಬೇಕೆಂದು ನಾನು ಬಯಸುತ್ತೇನೆ. ಅವರು ದೇಶಕ್ಕಾಗಿ ಬೆಳ್ಳಿ, ಚಿನ್ನ ಗೆಲ್ಲಬೇಕೆಂದು ಆಶಿಸುತ್ತೇನೆ. ಯಾವುದೇ ಜೂನಿಯರ್ ನಮಗಾಗಿ ನೋವು ಅನುಭವಿಸುವುದು ಬೇಡ ಎಂದಿದ್ದಾರೆ.

ಕುಸ್ತಿ ಫೆಡರೇಶನ್‌ನ ಹೊಸ ಆಡಳಿತ ಸಮಿತಿ ಅಥವಾ ತಾತ್ಕಾಲಿಕ ನಿರ್ವಹಣಾ ಸಮಿತಿ ಜೊತೆ ನಮಗೆ ಯಾವುದೇ ಸಮಸ್ಯೆ ಇಲ್ಲ. ಬ್ರಿಜ್ ಭೂಷಣ್ ಆಪ್ತ ಸಂಜಯ್ ಸಿಂಗ್ ಜೊತೆ ಮಾತ್ರ ನಮ್ಮ ವಿರೋಧ ಇತ್ತು ಎಂದು ಸಾಕ್ಷಿ ತಿಳಿಸಿದ್ದಾರೆ.

ಕಳೆದ ವರ್ಷದಿಂದ ನಾನು ಮಾನಸಿಕವಾಗಿ ಮತ್ತು ದೈಹಿಕವಾಗಿ ದಣಿದಿದ್ದೇನೆ. ಬ್ರಿಜ್ ಭೂಷಣ್ ಆಪ್ತ ಸಂಜಯ್ ಸಿಂಗ್ ಕುಸ್ತಿ ಫೆಡರೇಶನ್‌ನ ನೂತನ ಅಧ್ಯಕ್ಷರಾಗಿ ಆಯ್ಕೆಯಾಗುತ್ತಾರೆ ಎಂಬ ಕಲ್ಪನೆ ನನಗಿರಲಿಲ್ಲ. ಅವರು ಆಯ್ಕೆಗೊಂಡಾಗ ಬೇಸರಗೊಂಡು ಕುಸ್ತಿಗೆ ವಿದಾಯ ಹೇಳಿದ್ದೇನೆ. ಮುಂದೆ ಏನು ಮಾಡಬೇಕು ಎಂದು ನನಗೆ ಗೊತ್ತಿಲ್ಲ ಎಂದು ಸಾಕ್ಷಿ ಮಲಿಕ್ ಬೇಸರ ಹೊರ ಹಾಕಿದ್ದಾರೆ.

ಬಿಜೆಪಿ, ಸಂಸದ ಮತ್ತು ಭಾರತೀಯ ಕುಸ್ತಿ ಫೆಡರೇಶನ್‌ನ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ಅವರ ಆಪ್ತ ಸಂಜಯ್ ಸಿಂಗ್ ಕುಸ್ತಿ ಫೆರೇಶನ್‌ನ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಕ್ಕೆ ಬೇಸರಗೊಂಡು ಸಾಕ್ಷಿ ಮಲಿಕ್ ಕುಸ್ತಿಗೆ ವಿದಾಯ ಹೇಳಿದ್ದಾರೆ.

ಡಿಸೆಂಬರ್ 21ರಂದು ಭಾರತೀಯ ಕುಸ್ತಿ ಫೆಡರೇಶನ್‌(ಡಬ್ಲ್ಯುಎಫ್‌ಐ)ಗೆ ನಡೆದ ಚುನಾವಣೆಯಲ್ಲಿ ಲೈಂಗಿಕ ಕಿರುಕುಳದ ಆರೋಪಿ ಬ್ರಿಜ್ ಭೂಷಣ್ ಸಿಂಗ್ ಆಪ್ತ ಸಂಜಯ್‌ ಸಿಂಗ್ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಈ ಬೆನ್ನಲ್ಲೇ ಸುದ್ದಿಗೋಷ್ಠಿ ನಡೆಸಿದ್ದ ಸಾಕ್ಷಿ ಮಲಿಕ್ ತಮ್ಮ ಬೂಟು ಕಳಚಿಟ್ಟು ಕುಸ್ತಿಗೆ ವಿದಾಯ ಹೇಳಿದ್ದರು.

ಸಾಕ್ಷಿ ಮಲಿಕ್‌ ಬೆಂಬಲಿಸಿದ್ದ ಮತ್ತೋರ್ವ ಕುಸ್ತಿಪಟು ಬಜರಂಗ್ ಪೂನಿಯಾ ತಮ್ಮ ಪದ್ಮಶ್ರೀ ಪ್ರಶಸ್ತಿಯನ್ನು ದೆಹಲಿಯ ಕರ್ತವ್ಯ ಪಥದಲ್ಲಿ ಇಟ್ಟು ಪ್ರಧಾನಿಗೆ ತಲುಪಿಸುವಂತೆ ಹೇಳಿ ಹೊರಟು ಹೋಗಿದ್ದರು. ಇದರ ಬೆನ್ನಲ್ಲೇ ಕುಸ್ತಿಪಟು ವಿರೇಂದರ್ ಯಾದವ್ ತಮ್ಮ ಪದ್ಮಶ್ರೀ ಪ್ರಶಸ್ತಿ ಮರಳಿಸುವುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಘೋಷಿಸಿದ್ದರು. ಬಳಿಕ ಕುಸ್ತಿಪಟು ವಿನೇಶ್ ಫೋಗಟ್ ಕೂಡ ತಮ್ಮ ಖೇಲ್ ರತ್ನ ಮತ್ತು ಅರ್ಜುನ ಪ್ರಶಸ್ತಿಗಳನ್ನು ದೆಹಲಿಯ ಕರ್ತವ್ಯ ಪಥದ ಪಾದಾಚಾರಿ ಮಾರ್ಗದಲ್ಲಿಟ್ಟು ತೆರಳಿದ್ದರು.

ಜೂನಿಯರ್ ಕುಸ್ತಿಪಟುಗಳಿಂದ ಪ್ರತಿಭಟನೆ

ಕುಸ್ತಿ ಫೆಡರೇಶ್‌ನ ಮಾಜಿ ಅಧ್ಯಕ್ಷ ಬ್ರಿಜ್‌ಭೂಷಣ್ ವಿರುದ್ದ ಹೋರಾಟ ನಡೆಸಿದ್ದ ಖ್ಯಾತ ಕುಸ್ತಿಪಟುಗಳಾದ ಸಾಕ್ಷಿ ಮಲಿಕ್, ಬಜರಂಗ್ ಪೂನಿಯಾ ಮತ್ತು ವಿನೇಶ್ ಫೋಗಟ್ ವಿರುದ್ದವೇ ಇಂದು ಜೂನಿಯರ್ ಕುಸ್ತಿಪಟುಗಳು ಪ್ರತಿಭಟನೆ ನಡೆಸಿದ್ದಾರೆ.

ದೆಹಲಿಯ ಜಂತರ್ ಮಂತರ್‌ನಲ್ಲಿ ಜಮಾಯಿಸಿದ ಜೂನಿಯರ್ ಕುಸ್ತಿಪಟುಗಳು ಸಾಕ್ಷಿ ಮಲಿಕ್, ಬಜರಂಗ್ ಪೂನಿಯಾ ಮತ್ತು ವಿನೇಶ್ ಫೋಗಟ್ ಒಂದು ವರ್ಷದಿಂದ ನಮ್ಮ ಕುಸ್ತಿ ತರಬೇತಿಯನ್ನು ಹಾಳುಗೆಡವಿದ್ದಾರೆ. ಅವರಿಂದಾಗಿ ನಾವು ಅತಂತ್ರರಾಗಿದ್ದೇವೆ. ಈ ಮೂವರಿಂದ ಕುಸ್ತಿ ಫೆಡರೇಶನ್‌ ರಕ್ಷಿಸಿ ಎಂದು ಬ್ಯಾನರ್ ಹಿಡಿದು ಘೋಷಣೆ ಕೂಗಿದ್ದಾರೆ.

ಇದನ್ನೂ ಓದಿ : ಮೋದಿ 3D ಸೆಲ್ಫಿ ಬೂತ್‌ ನಿರ್ಮಾಣ ವೆಚ್ಚದ ಮಾಹಿತಿ ನೀಡಿದ ಅಧಿಕಾರಿ ದಿಡೀರ್‌ ವರ್ಗಾವಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...