Homeಮುಖಪುಟಸಲ್ಮಾನ್ ಖಾನ್‌ಗೆ ಮತ್ತೆ ಬೆದರಿಕೆ : ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ ಜೊತೆ ಸಂಧಾನಕ್ಕೆ ₹ 5...

ಸಲ್ಮಾನ್ ಖಾನ್‌ಗೆ ಮತ್ತೆ ಬೆದರಿಕೆ : ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ ಜೊತೆ ಸಂಧಾನಕ್ಕೆ ₹ 5 ಕೋಟಿ ಬೇಡಿಕೆ

- Advertisement -
- Advertisement -

ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಗುಂಪಿನಿಂದ ಜೀವ ಬೆದರಿಕೆ ಇರುವ ಬಗ್ಗೆ ಚರ್ಚೆಯಾಗುತ್ತಿರುವಾಗಲೇ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ಮತ್ತೊಂದು ಜೀವ ಬೆದರಿಕೆ ಬಂದಿದೆ ಎಂದು ವರದಿಯಾಗಿದೆ.

ಸಲ್ಮಾನ್ ಖಾನ್ ಅವರಿಂದ 5 ಕೋಟಿ ರೂಪಾಯಿ ಕೊಡಿಸುವಂತೆ ಮುಂಬೈ ಸಂಚಾರ ಪೊಲೀಸರಿಗೆ ಗುರುವಾರ ಮಧ್ಯಾಹ್ನ ವಾಟ್ಸಾಪ್ ಮುಖಾಂತರ ಬೆದರಿಕೆ ಸಂದೇಶ ಬಂದಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ಹೊಸದಾಗಿ ಬೆದರಿಕೆ ಸಂದೇಶ ಕಳುಹಿಸಿದವರಿಗೂ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನೊಂದಿಗೆ ಸಂಪರ್ಕ ಹೊಂದಿದ್ದು, ಹಣ ಪಾವತಿಸದಿದ್ದರೆ ಸಲ್ಮಾನ್ ಖಾನ್ ಅವರ ಜೀವಕ್ಕೆ ಅಪಾಯವಿದೆ ಎಂದು ಎಚ್ಚರಿಸಿದ್ದಾರೆ ಎಂಬುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

ಈ ಸಂಬಂಧ ಮುಂಬೈನ ವರ್ಲಿ ಪೊಲೀಸರು ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಅಡಿಯಲ್ಲಿ ಬೆದರಿಕೆ ಮತ್ತು ಸುಲಿಗೆ ಪ್ರಕರಣ ದಾಖಲಿಸಿದ್ದಾರೆ.

ಮುಂಬೈ ಪೊಲೀಸರ ಪ್ರಕಾರ, ಮುಂಬೈ ಸಂಚಾರ ಪೊಲೀಸರ ವಾಟ್ಸಾಪ್ ಸಂಖ್ಯೆಗೆ ಬೆದರಿಕೆ ಸಂದೇಶ ಬಂದಿದೆ, ಲಾರೆನ್ಸ್ ಬಿಷ್ಣೋಯ್ ಜೊತೆಗಿನ ದೀರ್ಘಕಾಲದ ಸಂಘರ್ಷ ಅಥವಾ ದ್ವೇಷ ಕೊನೆಗೊಳಿಸಲು ನಟ ಸಲ್ಮಾನ್ ಖಾನ್ ಅವರಿಂದ 5 ಕೋಟಿ ರೂ. ಕೊಡಿಸುವಂತೆ ಬೇಡಿಕೆ ಇಡಲಾಗಿದೆ.

ಮುಂದುವರೆದು, ಈ ಸಂದೇಶವನ್ನು ಲಘುವಾಗಿ ಪರಿಗಣಿಸಬೇಡಿ. ಸಲ್ಮಾನ್ ಖಾನ್ ಬದುಕಲು ಮತ್ತು ಲಾರೆನ್ಸ್ ಬಿಷ್ಣೋಯ್ ಅವರೊಂದಿಗಿನ ದ್ವೇಷವನ್ನು ಕೊನೆಗೊಳಿಸಲು ಬಯಸಿದರೆ, ಅವರು 5 ಕೋಟಿ ರೂಪಾಯಿ ಪಾವತಿಸಬೇಕಾಗುತ್ತದೆ. ಹಣ ನೀಡದಿದ್ದರೆ, ಸಲ್ಮಾನ್ ಖಾನ್ ಸ್ಥಿತಿ ಬಾಬಾ ಸಿದ್ದಿಕ್ ಅವರಿಗಿಂತ ಕೆಟ್ಟದಾಗಿರಲಿದೆ ಎಂದು ಸಂದೇಶದಲ್ಲಿ ಹೇಳಲಾಗಿದೆ.

ಮುಂಬೈ ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ತನಿಖೆ ಆರಂಭಿಸಿದ್ದಾರೆ. ಅಕ್ಟೋಬರ್ 12ರಂದು ನಿರ್ಮಲ್ ನಗರದಲ್ಲಿನ ತನ್ನ ಕಚೇರಿಯ ಹೊರಗೆ ಗುಂಡಿಕ್ಕಿ ಕೊಲ್ಲಲ್ಪಟ್ಟ ಎನ್‌ಸಿಪಿ ನಾಯಕ ಬಾಬಾ ಸಿದ್ದಿಕ್ ಅವರ ಹತ್ಯೆಯ ನಂತರ ಸಲ್ಮಾನ್ ಖಾನ್‌ಗೆ ಹೊಸ ಬೆದರಿಕೆ ಬಂದಿದೆ.

ಸಲ್ಮಾನ್‌ ಖಾನ್ ಅವರನ್ನು ಕೊಲ್ಲುವುದಾಗಿ ಈ ಹಿಂದೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ ಬೆದರಿಕೆಗಳು ಬಂದಿದ್ದವು. ಕಳೆದ ಏಪ್ರಿಲ್‌ನಲ್ಲಿ ನಟನ ಬಾಂದ್ರಾ ಮನೆಯ ಹೊರಗೆ ಬಿಷ್ಣೋಯ್ ಗ್ಯಾಂಗ್ ಸದಸ್ಯರು ಗುಂಡು ಹಾರಿಸಿದ್ದರು.

ಜೂನ್‌ನಲ್ಲಿ ಬಿಷ್ಣೋಯ್ ಗ್ಯಾಂಗ್ ಖಾನ್ ಅವರನ್ನು ಕೊಲ್ಲಲು ಸಂಚು ರೂಪಿಸಿತ್ತು ಎಂದು ನವಿ ಮುಂಬೈ ಪೊಲೀಸರು ಗುರುವಾರ ಬಹಿರಂಗಪಡಿಸಿದ್ದಾರೆ. ಸಲ್ಮಾನ್‌ ಹತ್ಯೆ ಅಣಿಯಾಗಿದ್ದ ಶೂಟರ್‌ಗಳಲ್ಲಿ ಒಬ್ಬನನ್ನು ಹರಿಯಾಣದ ಪಾಣಿಪತ್‌ನ ಸುಖಬೀರ್ ಸಿಂಗ್ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.\

ಇದನ್ನೂ ಓದಿ : ಬಿಜೆಪಿ ಟಿಕೆಟ್ ಕೊಡಿಸುವುದಾಗಿ ₹ 2 ಕೋಟಿ ಸುಲಿಗೆ ಆರೋಪ : ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸಹೋದರರ ವಿರುದ್ಧ ಎಫ್‌ಐಆರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...