Homeಕರ್ನಾಟಕಸೆಲೂನ್ ಮೇಲೆ ರಾಮ ಸೇನಾ ದುಷ್ಕರ್ಮಿಗಳ ದಾಳಿಗೆ ಮಂಗಳೂರು ಪೊಲೀಸ್ ಕಮೀಷನರ್ ನೇರ ಹೊಣೆ -...

ಸೆಲೂನ್ ಮೇಲೆ ರಾಮ ಸೇನಾ ದುಷ್ಕರ್ಮಿಗಳ ದಾಳಿಗೆ ಮಂಗಳೂರು ಪೊಲೀಸ್ ಕಮೀಷನರ್ ನೇರ ಹೊಣೆ – ಡಿವೈಎಫ್‌ಐ

- Advertisement -
- Advertisement -

ಮಂಗಳೂರಿನ ಬಿಜೈ ಬಳಿಯ ಕಲರ್ಸ್ ಯುನಿಸೆಕ್ಸ್ ಸೆಲೂನ್ ಮೇಲೆ ರಾಮ ಸೇನೆ ದುಷ್ಕರ್ಮಿಗಳು ದಾಂಧಲೆ ಮೆರೆಯಲು ಮಂಗಳೂರು ನಗರದ ಪೊಲೀಸ್ ಕಮೀಷನರ್ ಅನುಪಮ್ ಅಗ್ರವಾಲ್ ನೇರ ಹೊಣೆ ಎಂದು ಡಿವೈಎಫ್‌ಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಗುರುವಾರ ಆರೋಪಿಸಿದೆ. ಅನೈತಿಕ ಚಟುವಟಿಕೆಗಳಿಗೆ ಮುಕ್ತ ಅವಕಾಶಕೊಟ್ಟು ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿರುವ ಕಾರಣಕ್ಕೆ ಮತ್ತೆ ನೈತಿಕ ಪೊಲೀಸ್ ಗಿರಿ ತಲೆಎತ್ತಿ ಮಂಗಳೂರಿನ ಮಾನವನ್ನು ಹರಾಜಿಗಿಟ್ಟಿದೆ ಎಂದು ಸಂಘಟನೆ ಆರೋಪಿಸಿದೆ. ಸೆಲೂನ್ ಮೇಲೆ ರಾಮ ಸೇನಾ

ಈ ಬಗ್ಗೆ ಜಂಟಿ ಪತ್ರಿಕಾ ಹೇಳಿಕೆ ನೀಡಿರುವ ಡಿವೈಎಫ್‌ಐ ಜಿಲ್ಲಾಧ್ಯಕ್ಷ ಬಿ.ಕೆ. ಇಮ್ತಿಯಾಜ್ ಮತ್ತು ಕಾರ್ಯದರ್ಶಿ ಸಂತೋಷ್ ಕುಮಾರ್ ಬಜಾಲ್, “ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಮಸಾಜ್ ಪಾರ್ಲರ್, ಅಕ್ರಮ ಮರಳುಗಾರಿಕೆ, ವೇಶ್ಯಾವಾಟಿಕೆ, ಜುಗಾರಿ ಅಡ್ಡೆ, ಮಡ್ಕ ಸೇರಿದಂತೆ ಹಲವು ಬಗೆಯ ಗ್ಯಾಂಬ್ಲಿಂಗ್ ಗಳು ರಾಜಾರೋಷವಾಗಿ ನಡೆಯುತ್ತಲೆ ಇದೆ. ಈ ಬಗ್ಗೆ ಡಿವೈಎಫ್ಐ ಸಂಘಟನೆ ಪ್ರಾರಂಭದಿಂದಲೇ ಆರೋಪಿಸುತ್ತಾ ಬಂದಿದ್ದರೂ, ಈಗಿನ ಪೊಲೀಸ್ ಕಮೀಷನರ್ ಅನುಪಮ್ ಅಗ್ರವಾಲ್ ಈ ಬಗ್ಗೆ ಈವರೆಗೂ ಯಾವುದೇ ಕ್ರಮಕೈಗೊಳ್ಳದೆ ಅವುಗಳಿಗೆ ಮುಕ್ತವಾಗಿ ಅವಕಾಶಕೊಟ್ಟು ನಗರದಲ್ಲಿಂದು ಹರಾಜಕತೆಯನ್ನು ಸೃಷ್ಟಿಸಿದ್ದಾರೆ.” ಎಂದು ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಪ್ರಗತಿಪರರು ನಡೆಸುವ ಜನಪರ ಹೋರಾಟಗಳಿಗೆ ಅವಕಾಶಕೊಡದೆ ವಿನಾಕಾರಣ ಕೇಸು ದಾಖಲಿಸುವ ಕಮೀಷನರ್ ಅನುಪಮ್ ಅದೇ ಸಂಘಪರಿವಾರದ ಕಾರ್ಯಕ್ರಮಕ್ಕೆ ಎಲ್ಲೆಂದರಲ್ಲಿ (ಕಾನೂನು ನಿಯಮ ಮೀರಿ) ಅವಕಾಶ ಕಲ್ಪಿಸಿ ನೇರ ಬೆಂಬಲಿಸುತ್ತಾ ಬಂದ ಕಾರಣಕ್ಕೆ ಇಂದು ರಾಮ ಸೇನೆ ಕಾರ್ಯಕರ್ತರು ಮತ್ತೆ ನಗರದಲ್ಲಿ ನೈತಿಕ ಗೂಂಡಾಗಿರಿ ಮೆರೆಯಲು ಅವಕಾಶ ಮಾಡಿಕೊಟ್ಟಂತಾಗಿದೆ. ಈಗಾಗಲೇ ಒಂದಷ್ಟು ನಿಯಂತ್ರಿಸಲಾಗಿದ್ದ ಸಂಘಪಾರಿವಾರದ ನೈತಿಕ ಪೊಲೀಸ್ ಗಿರಿ ಮತ್ತೆ ಪುನರಾವರ್ತಿಸುವಲ್ಲಿ ಕಮೀಷನರ್ ಅಗ್ರವಾಲ್ ನೇರ ಹೊಣೆಯಾಗಿದ್ದು ಮಂಗಳೂರು ನಗರದ ಮಾನವನ್ನು ಮತ್ತೆ ಹರಾಜು ಹಾಕಿ ತಲೆ ತಗ್ಗಿಸುವಂತೆ ಮಾಡಿದೆ” ಎಂದು ಡಿವೈಎಫ್‌ಐ ಹೇಳಿದೆ. ಸೆಲೂನ್ ಮೇಲೆ ರಾಮ ಸೇನಾ

“ನಗರದ ಪೊಲೀಸ್ ಇಲಾಖೆಯ ವೈಫಲ್ಯತೆ ಬಗ್ಗೆ ಮತ್ತು ಕಳಂಕಿತ ಪೊಲೀಸ್ ಕಮೀಷನರ್ ಅನುಪಮ್ ಅಗ್ರವಾಲರನ್ನು ಅಮಾನತುಗೊಳಿಸಿ ವರ್ಗಾಹಿಸಲು ಮುಖ್ಯಮಂತ್ರಿ, ಗೃಹ ಮಂತ್ರಿಗಳ ಗಮನಕ್ಕೆ ತಂದರೂ ಈ ಬಗ್ಗೆ ಕ್ರಮಕೈಗೊಳ್ಳುವಲ್ಲಿ ಬೇಜವಾಬ್ದಾರಿಯನ್ನು ವಹಿಸಿದ್ದಾರೆ. ನಗರದ ಪೊಲೀಸ್ ಅವ್ಯವಸ್ಥೆಯನ್ನು ಸರಿಪಡಿಸದ ಕಾರಣಕ್ಕೆ ಸಂಘಪರಿವಾರದ ಕಾರ್ಯಕರ್ತರು ಮತ್ತೆ ನೈತಿಕ ಪೊಲೀಸ್ ಗಿರಿ ಮೂಲಕ ನಗರದಲ್ಲಿ ಮೆರೆಯಲು ಅವಕಾಶ ಮಾಡಿಕೊಟ್ಟಂತಾಗಿದೆ” ಎಂದು ಸಂಘಟನೆ ಹೇಳಿದೆ.

ಈ ಎಲ್ಲಾ ಬೆಳವಣೆಗೆ ಮಂಗಳೂರು ನಗರದಲ್ಲಿ ಮತ್ತೆ ಅಶಾಂತಿ ಸೃಷ್ಟಿಸಿ ಸಾಮಾರಸ್ಯ ಕದಡಲು ಅವಕಾಶ ಮಾಡಿಕೊಡುವಂತಹ ಬೆಳವಣೆಗೆಗೂ ಕಾಂಗ್ರೇಸ್ ಸರಕಾರವೂ ನೇರ ಹೊಣೆ ಹೊರಬೇಕಾಗಿದೆ ಎಂದು ಡಿವೈಎಫ್‌ಐ ಹೇಳಿದೆ.

ಕರ್ನಾಟಕ ರಾಜ್ಯ ಸರಕಾರ ಈ ಕೂಡಲೇ ಎಚ್ಚೆತ್ತು ರಾಮ ಸೇನೆ ನಡೆಸಿದ ದಾಂಧಲೆ ನೈತಿಕಪೊಲೀಸ್ ಗಿರಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸಮಗ್ರ ತನಿಖೆಗೊಳಪಡಿಸಬೇಕು ಎಂದು ಆಗ್ರಹಿಸಿರುವ ಡಿವೈಎಫ್‌ಐ,  ಮಂಗಳೂರು ನಗರದಲ್ಲಿ ಹದಗೆಟ್ಟಿರುವ ಪೊಲೀಸ್ ವ್ಯವಸ್ಥೆಯನ್ನು ಸರಿಪಡಿಸಬೇಕು. ಅಕ್ರಮ ಚಟುವಟಿಕೆ ನಿಯಂತ್ರಿಸಲಾಗದ ಕಳಂಕಿತ ಪೊಲೀಸ್ ಕಮೀಷನರ್ ಅನುಪಮ್ ಅಗ್ರವಾಲರನ್ನು ಕೂಡಲೇ ಅಮಾನತುಗೊಳಿಸಿ ವರ್ಗಾಹಿಸಬೇಕು” ಎಂದು ರಾಜ್ಯ ಸರಕಾರವನ್ನು ಒತ್ತಾಯಿಸಿದೆ.

ಇದನ್ನೂಓದಿ:  ಬಂಧನ ಕೇಂದ್ರದಿಂದ ವಿದೇಶಿಯರ ಗಡೀಪಾರು ಮಾಡುವಲ್ಲಿ ಅಸ್ಸಾಂ ಸರ್ಕಾರ ವಿಫಲ – ಸುಪ್ರೀಂಕೋರ್ಟ್ ಟೀಕೆ

ಬಂಧನ ಕೇಂದ್ರದಿಂದ ವಿದೇಶಿಯರ ಗಡೀಪಾರು ಮಾಡುವಲ್ಲಿ ಅಸ್ಸಾಂ ಸರ್ಕಾರ ವಿಫಲ – ಸುಪ್ರೀಂಕೋರ್ಟ್ ಟೀಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...