Homeಮುಖಪುಟಸರ್ಕಾರ ವಿಫಲವಾದಾಗ ಪ್ರತಿಪಕ್ಷಗಳು ’ಇಡಿ’ ಪರೀಕ್ಷೆ ಎದುರಿಸಬೇಕು- ಅಖಿಲೇಶ್ ಯಾದವ್

ಸರ್ಕಾರ ವಿಫಲವಾದಾಗ ಪ್ರತಿಪಕ್ಷಗಳು ’ಇಡಿ’ ಪರೀಕ್ಷೆ ಎದುರಿಸಬೇಕು- ಅಖಿಲೇಶ್ ಯಾದವ್

- Advertisement -
- Advertisement -

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಕಳೆದ ಮೂರು ದಿನಗಳಿಂದ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ವಿಚಾರಣೆ ನಡೆಸುತ್ತಿರುವುದರ ಕುರಿತು ಪ್ರತಿಕ್ರಿಯೆ ನೀಡಿರುವ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್, ’ಸರ್ಕಾರ ವಿಫಲವಾದಾಗ ಪ್ರತಿಪಕ್ಷಗಳು ಇಡಿ ಪರೀಕ್ಷೆ ಎದುರಿಸಬೇಕು” ಎಂದಿದ್ದಾರೆ.

ಬುಧವಾರ ಈ ಬಗ್ಗೆ ತಮ್ಮ ಅಧಿಕೃತ ಟ್ವಿಟರ್‌ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಜಾರಿ ನಿರ್ದೇಶನಾಲಯವನ್ನು “ಪ್ರಜಾಪ್ರಭುತ್ವದಲ್ಲಿ ಪರೀಕ್ಷೆ” (Examination in Democracy) ಎಂದು ಕರೆದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮುಂದುವರೆದು ರಾಜಕೀಯದಲ್ಲಿ ಸರ್ಕಾರ ವಿಫಲವಾದಾಗ ಪ್ರತಿಪಕ್ಷಗಳು ಈ ಪರೀಕ್ಷೆಯಲ್ಲಿ ತೇರ್ಗಡೆಯಾಗಬೇಕಾಗುತ್ತದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ತಮಿಳುನಾಡಿನಲ್ಲಿ ಮರ್ಯಾದೆಗೇಡು ಹತ್ಯೆ: ತಂಗಿ-ಬಾವನನ್ನು ಊಟಕ್ಕೆ ಕರೆದು ಕೊಲೆ ಮಾಡಿದ ಅಣ್ಣ

“ಇಡಿ ಎಂದರೆ ‘ಎಕ್ಸಾಮಿನೇಷನ್ ಇನ್ ಡೆಮಾಕ್ರಸಿ’. ರಾಜಕೀಯದಲ್ಲಿ ಪ್ರತಿಪಕ್ಷಗಳು ಈ ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕು. ಸರ್ಕಾರವೇ ವಿಫಲವಾದಾಗ ಈ ಪರೀಕ್ಷೆಯನ್ನು ಘೋಷಿಸುತ್ತದೆ. ಯಾರ ತಯಾರಿ ಉತ್ತಮವಾಗಿರುತ್ತದೋ ಅವರು ಲಿಖಿತ – ಓದುವ ಪರೀಕ್ಷೆ ಅಥವಾ ಮೌಖಿಕ ಪರೀಕ್ಷಗೆ ಹೆದರುವುದಿಲ್ಲ ಮತ್ತು ಯಾವತ್ತಿಗೂ ಭಯಪಡಬಾರದು” ಎಂದು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ನ್ಯಾಷನಲ್ ಹೆರಾಲ್ಡ್ ಪ್ರಕರಣದ ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಕಳೆದ ಮೂರು ದಿನಗಳಿಂದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಜಾರಿ ನಿರ್ದೇಶನಾಲಯದ ಮುಂದೆ ವಿಚಾರಣೆಗೆ ಹಾಜರಾಗುತ್ತಿದ್ದಾರೆ. ಮೂರನೇ ದಿನವಾದ ಬುಧವಾರ ದೆಹಲಿ ಕಾಂಗ್ರೆಸ್‌ನಿಂದ ಭಾರಿ ಪ್ರತಿಭಟನೆ ನಡೆದಿದೆ.

ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಮಾಲೀಕತ್ವವನ್ನು ಹೊಂದಿರುವ ಯಂಗ್ ಇಂಡಿಯನ್‌ನಲ್ಲಿ ಹಣಕಾಸಿನ ಅಕ್ರಮಗಳು ನಡೆದಿವೆ ಎಂದು ತನಿಖೆ ನಡೆಸಲಾಗುತ್ತಿದೆ. 2013ರಲ್ಲಿ ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಅವರು ಸಲ್ಲಿಸಿದ್ದ ಖಾಸಗಿ ಕ್ರಿಮಿನಲ್ ದೂರಿನ ವಿಚಾರಣೆಯನ್ನು ದೆಹಲಿ ನ್ಯಾಯಾಲಯವು ಪರಿಗಣಿಸಿದ ನಂತರ ಇ.ಡಿ.ಯು ಹಣ ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್‌ಎ) ಕ್ರಿಮಿನಲ್ ನಿಬಂಧನೆಗಳ ಅಡಿಯಲ್ಲಿ ಹೊಸ ಪ್ರಕರಣವನ್ನು ದಾಖಲಿಸಿದೆ.


ಇದನ್ನೂ ಓದಿ: ದೆಹಲಿ: ಕಾಂಗ್ರೆಸ್ ಕಚೇರಿಗೆ ನುಗ್ಗಿ ಮುಖಂಡರು, ಕಾರ್ಯಕರ್ತರ ಮೇಲೆ ಪೊಲೀಸರ ಹಲ್ಲೆ- ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...