Homeಮುಖಪುಟಯು.ಪಿ: ಸಮಾಜವಾದಿ ಪಕ್ಷದ ನಾಯಕ & ಪುತ್ರನನ್ನು ಗುಂಡಿಕ್ಕಿ ಹತ್ಯೆ

ಯು.ಪಿ: ಸಮಾಜವಾದಿ ಪಕ್ಷದ ನಾಯಕ & ಪುತ್ರನನ್ನು ಗುಂಡಿಕ್ಕಿ ಹತ್ಯೆ

ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲಾಗಿದೆ.

- Advertisement -
- Advertisement -

ಉತ್ತರ ಪ್ರದೇಶ ಸಮಾಜವಾದಿ ಪಕ್ಷದ ಸ್ಥಳೀಯ ನಾಯಕ ಮತ್ತು ಅವರ ಪುತ್ರನನ್ನು ಇಬ್ಬರು ದುಷ್ಕರ್ಮಿಗಳು ಗುಂಡಿಕ್ಕಿ ಕೊಂದ ಘಟನೆ ಸಂಭಾಲ್ ಜಿಲ್ಲೆಯಲ್ಲಿ ನಡೆದಿದೆ.

ಉತ್ತರ ಪ್ರೇದೇಶದ ರಾಜಧಾನಿ ಲಕ್ನೋದಿಂದ 379 ಕಿ.ಮೀ. ದೂರದ ಸಂಭಾಲ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದ್ದು, ನರೇಗಾದಡಿ ರಸ್ತೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಇಬ್ಬರು ಬಂದೂಕುಧಾರಿ ವ್ಯಕ್ತಿಗಳೊಡನೆ ವಾಗ್ವಾದದ ನಂತರ ಈ ಘಟನೆ ನಡೆದಿದೆ.

ಸಮಾಜವಾದಿ ಪಕ್ಷದ ನಾಯಕ ಚೋಟೆ ಲಾಲ್ ದಿವಾಕರ್ ಮತ್ತು ಅವರ ಪುತ್ರ ಸುನಿಲ್ ಅವರು ಗ್ರಾಮದ ಹೊಲವೊಂದಕ್ಕೆ ಅಡ್ಡಲಾಗಿರುವ ರಸ್ತೆಯನ್ನು ಪರಿಶೀಲಿಸಲು ಹೋಗಿದ್ದರು.

ಹೊಲದ ಮಧ್ಯದಲ್ಲಿರುವ ಕಿರಿದಾದ ರಸ್ತೆಯಲ್ಲಿ ರೈಫಲ್ ಹಿಡಿದಿದ್ದ ಇಬ್ಬರೊಂದಿಗೆ ವಾಗ್ವಾದ ನಡೆಸಿದಾಗ, ರೊಚ್ಚಿಗೆದ್ದ ಬಂದೂಕುಧಾರಿಗಳು ಗುಂಡು ಸಿಡಿಸಿದ್ದಾರೆ. ಗುಂಡಿಗೆ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಗುಂಡು ಸಿಡಿಸಿದವರಲ್ಲಿ ಒಬ್ಬರನ್ನು ಸ್ಥಳೀಯ ಪ್ರಭಾವಶಾಲಿ ವ್ಯಕ್ತಿ ಸವಿಂದರ್ ಎಂದು ಗುರುತಿಸಲಾಗಿದೆ.

ಘಟನೆಯ 2 ನಿಮಿಷ, 30 ಸೆಕೆಂಡಿನ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲಾಗಿದೆ. ಇದರಲ್ಲಿ ಇಬ್ಬರು ಬಂದೂಕುಧಾರಿಗಳೊಂದಿಗೆ ವಾಗ್ವಾದ ನಡೆಸುವ ಹಾಗೂ ಗುಂಡು ಸಿಡಿಸುವ ದೃಶ್ಯವನ್ನು ಕಾಣಬಹುದಾಗಿದೆ.

ನರೇಗಾ ಯೋಜನೆಯಡಿ ನಿರ್ಮಿಸಲಾಗುತ್ತಿರುವ ರಸ್ತೆಯಿಂದ ತಮ್ಮ ಹೊಲಗಳ ಅತಿಕ್ರಮಣವಾಗುತ್ತಿದೆ ಎಂದು ಗುಂಡು ಸಿಡಿಸಿದವರು ಕೋಪಗೊಂಡಿದ್ದರು ಎನ್ನಲಾಗಿದೆ.

ಘಟನೆಯ ಬಗ್ಗೆ ಇನ್ನೂ ಯಾರನ್ನೂ ಬಂಧಿಸಿಲ್ಲ ಆದರೆ ಶೀಘ್ರದಲ್ಲೇ ಬಂಧನ ಮಾಡುವುದಾಗಿ ಪೊಲೀಸರು ಹೇಳಿದ್ದಾರೆ.


ಓದಿ: ರಿಪಬ್ಲಿಕ್ ಟಿವಿ ಅರ್ನಾಬ್ ಗೋಸ್ವಾಮಿ ಮನವಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್


 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಅರವಿಂದ್ ಕೇಜ್ರಿವಾಲ್, ಕೆ. ಕವಿತಾಗೆ ನೋ ರಿಲೀಫ್‌: ನ್ಯಾಯಾಂಗ ಬಂಧನ ಮೇ 7ರವರೆಗೆ ವಿಸ್ತರಣೆ

0
ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ನಾಯಕಿ ಕೆ ಕವಿತಾ ಅವರ ನ್ಯಾಯಾಂಗ ಬಂಧನವನ್ನು...