Homeಅಂತರಾಷ್ಟ್ರೀಯಪಂಜಾಬ್‌ನಲ್ಲಿ 128 ಸಾವುಗಳು, ನಾಪತ್ತೆಗಳಿಗೆ ಕಾರಣನಾಗಿದ್ದ ನಿಜ್ಜರ್‌ ಹತ್ಯೆ ಪ್ರಕರಣದಲ್ಲಿ ಆರೋಪಿತ ಅಧಿಕಾರಿ?

ಪಂಜಾಬ್‌ನಲ್ಲಿ 128 ಸಾವುಗಳು, ನಾಪತ್ತೆಗಳಿಗೆ ಕಾರಣನಾಗಿದ್ದ ನಿಜ್ಜರ್‌ ಹತ್ಯೆ ಪ್ರಕರಣದಲ್ಲಿ ಆರೋಪಿತ ಅಧಿಕಾರಿ?

- Advertisement -
- Advertisement -

ಕೆನಡಾದಲ್ಲಿ ಖಲಿಸ್ತಾನ್ ಪರ ನಾಯಕ ಹರ್ದೀಪ್ ಸಿಂಗ್ ನಿಜ್ಜರ್  ಹತ್ಯೆಯ ಹಿಂದಿನ ಮಾಸ್ಟರ್‌ ಮೈಂಡ್‌ ಎಂದು ಆಪಾದಿತ ಮಾಜಿ ಸಂಶೋಧನಾ ಮತ್ತು ವಿಶ್ಲೇಷಣಾ ವಿಭಾಗ (R&AW) ನ ಮಾಜಿ ಮುಖ್ಯಸ್ಥ ಸಮಂತ್ ಗೋಯೆಲ್ 1980ರ ದಶಕದಲ್ಲಿ ಪಂಜಾಬ್‌ನಲ್ಲಿ 128 ಸಾವುಗಳು ಮತ್ತು ನಾಪತ್ತೆಗಳಿಗೆ ಕಾರಣವೆಂದು ಹೇಳಲಾಗಿದೆ. ಈ ಕುರಿತು ಅಲ್‌ಜಝೀರ ಕೂಡ ಹೇಳಿಕೊಂಡಿದೆ.

ಸಮಂತ್ ಕುಮಾರ್ ಗೋಯೆಲ್ ಅವರು 1980 ಮತ್ತು 1990ರ ದಶಕದಲ್ಲಿ ಪಂಜಾಬ್‌ನಲ್ಲಿ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (SSP) ಆಗಿದ್ದರು. ಇದು ಪಂಜಾಬ್ ಪೋಲೀಸರು ‘ನಕಲಿ ಎನ್‌ಕೌಂಟರ್’ಗಳಿಗೆ ಕುಖ್ಯಾತಿ ಗಳಿಸಿದ ಅವಧಿಯಾಗಿದೆ.  ಮುಖ್ಯವಾಗಿ ಸಿಖ್ ಯುವಕರನ್ನು ಈ ಅವಧಿಯಲ್ಲಿ ಬಂಧಿಸಲಾಗುತ್ತಿತ್ತು ಮತ್ತು ಮತ್ತೆ ಅವರನ್ನು ಎಲ್ಲೂ ನೋಡಲಾಗಿಲ್ಲ. ಅಂದರೆ ಅವರ ಕೊಲೆ ಮಾಡಲಾಗಿತ್ತು.

ಗೋಯೆಲ್ ತನ್ನ ಅಧೀನ ಅಧಿಕಾರಿಗಳು ಮತ್ತು ಇತರ ಭದ್ರತಾ ಪಡೆಗಳಿಗೆ ತನ್ನ  ನಿಯೋಜಿತ ನ್ಯಾಯವ್ಯಾಪ್ತಿಯ ನಿವಾಸಿಗಳ ವಿರುದ್ಧ ಹಿಂಸಾಚಾರವನ್ನು ಎಸಗಲು ಹೇಗೆ ಅನುಮತಿ ನೀಡಿದ್ದಾನೆ ಎಂಬುದನ್ನು ದಾಖಲೆಯು ಸೂಚಿಸುತ್ತದೆ. ನರಹಂತಕ ಪಾತ್ರವನ್ನು ವಹಿಸಿಕೊಳ್ಳುವಲ್ಲಿ ಗೋಯೆಲ್ ಹೆಚ್ಚು ಉತ್ಸಕನಾಗಿದ್ದರು ಎನ್ನಲಾಗಿದೆ. ಈ ವರ್ಷದ ಬೇಸಿಗೆಯವರೆಗೂ ಗೋಯೆಲ್ ಅವರು ಭಾರತದ ಪೊಲೀಸ್ ಇಲಾಖೆಗಳಲ್ಲಿ ಪ್ರಮುಖ ಪಾತ್ರಗಳಲ್ಲಿ ಇದ್ದರು.

ವಾಸ್ತವದಲ್ಲಿ ಗೋಯೆಲ್ ತಪ್ಪಿತಸ್ಥನಾಗಿರುವ ಹಲವು ಹೆಚ್ಚುವರಿ ಪ್ರಕರಣಗಳಿವೆ, ಆದರೆ ಭಾರತ ಸರ್ಕಾರದ ನಿರಾಕರಣೆ ಮತ್ತು ಈ ಮಾನವ ಹಕ್ಕುಗಳ ಉಲ್ಲಂಘನೆಯನ್ನು ಮುಚ್ಚಿಡುವ ಅವರ ಪ್ರಯತ್ನಗಳು ಬಲಿಪಶುಗಳು ಮತ್ತು ಅವರ ಕುಟುಂಬಗಳನ್ನು ಮೌನಗೊಳಿಸಿದೆ ಎನ್ನಲಾಗಿದೆ.

ಜೂ.18ರಂದು ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದ ಪಂಜಾಬಿ ಪ್ರಾಬಲ್ಯದ ಸರ್ರೆ ನಗರದಲ್ಲಿರುವ ಗುರುನಾನಕ್ ಸಿಖ್ ಗುರುದ್ವಾರದ ಪಾರ್ಕಿಂಗ್ ಸ್ಥಳದಲ್ಲಿ ಖಲಿಸ್ತಾನಿ ಪ್ರತ್ಯೇಕತಾವಾದಿ ನಿಜ್ಜರ್ ಹತ್ಯೆ ನಡೆದಿತ್ತು. ನಿಜ್ಜರ್‌ ಹತ್ಯೆಯಲ್ಲಿ ಭಾರತೀಯ ಏಜೆಂಟರ ಸಂಭಾವ್ಯ ಕೈವಾಡದ ಬಗ್ಗೆ ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಸೆಪ್ಟೆಂಬರ್‌ನಲ್ಲಿ ಆರೋಪಿಸಿದ್ದರು. ಟ್ರುಡೊ ಅವರ ಆರೋಪಗಳನ್ನು ಭಾರತವು ಅಸಂಬದ್ಧ ಎಂದು ತಿರಸ್ಕರಿಸಿತ್ತು. ಆ ಬಳಿಕ ಭಾರತ ಮತ್ತು ಕೆನಡಾ ನಡುವಿನ ಸಂಬಂಧಗಳು ಹದಗೆಟ್ಟಿದ್ದವು. ಎರಡೂ ದೇಶಗಳ ರಾಜತಾಂತ್ರಿಕ ಅಧಿಕಾರಿಗಳ ಉಚ್ಛಾಟಣೆಯು ನಡೆದಿತ್ತು. ಭಾರತವು ಕೆನಡಾದ ನಾಗರಿಕರಿಗೆ ವೀಸಾಗಳನ್ನು ನೀಡುವುದನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿತ್ತು. ಆ ಬಳಿಕ ವೀಸಾ ಸೇವೆಗಳನ್ನು ಭಾರತವು ಪುನರಾರಂಭಿಸಿತ್ತು.

ಸಿಖ್‌ ಪ್ರತ್ಯೇಕತಾವಾದಿ ನಾಯಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯ ಉದ್ದೇಶಿತ ವಿಡಿಯೋವನ್ನು ಕೆನಡಾ ಮೂಲದ ಸಿಬಿಸಿ ನ್ಯೂಸ್ ಪ್ರಸಾರ ಮಾಡಿತ್ತು. ಆ ಬಳಿಕ ಪ್ರಕರಣಕ್ಕೆ ಸಂಬಂಧಿಸಿ ಭಾರತೀಯ ಮೂಲದ ಆರೋಪಿಗಳನ್ನು ಬಂಧಿಸಿತ್ತು.

ಇದನ್ನು ಓದಿ: ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ಪ್ರಕರಣ: ಕೆನಡಾದಲ್ಲಿ ಶಂಕಿತ ಮೂವರು ಭಾರತೀಯರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...