Homeಮುಖಪುಟಪ್ರೀತಿಯಷ್ಟೇ ಬಯಸಿದ್ದು; 200 ಕೋಟಿ ರೂ. ಜೀವನಾಂಶ ನಿರಾಕರಿಸಿದ ನಟಿ ಸಮಂತಾ!

ಪ್ರೀತಿಯಷ್ಟೇ ಬಯಸಿದ್ದು; 200 ಕೋಟಿ ರೂ. ಜೀವನಾಂಶ ನಿರಾಕರಿಸಿದ ನಟಿ ಸಮಂತಾ!

- Advertisement -
- Advertisement -

ತೆಲುಗಿನ ಅದ್ಭುತ ಜೋಡಿ ಎಂದೇ ಖ್ಯಾತವಾಗಿದ್ದ ಸಮಂತಾ ಪ್ರಭು ಹಾಗೂ ನಾಗಚೈತನ್ಯ ಅವರು ವಿಚ್ಛೇದನ ಪಡೆದಿದ್ದಾರೆ. ಇಬ್ಬರೂ ವಿಚ್ಛೇದನಾ ಪಡೆದಿರುವುದಾಗಿ ಸಮಂತಾ ಅವರು ತಮ್ಮ ಇನ್ಸ್‌ಸ್ಟಾಗ್ರಾಮ್‌ ಖಾತೆಯಲ್ಲಿ ತಿಳಿಸಿದ್ದಾರೆ.

ಸಮಂತಾ ಹೀಗೆ ಬರೆದುಕೊಂಡಿದ್ದಾರೆ: “ಸಾಕಷ್ಟು ಆಲೋಚಿಸಿ ಈ ನಿರ್ಧಾರ ಕೈಗೊಂಡಿದ್ದೇವೆ. ನಾವು ಸ್ವಂತ ಮಾರ್ಗಗಳನ್ನು ಅನುಸರಿಸಲು ಹಾಗೂ ಗಂಡ, ಹೆಂಡತಿಯಾಗಿ ಬೇರೆಯಾಗಲು ನಿರ್ಧರಿಸಿದ್ದೇವೆ. ಒಂದು ದಶಕದ ಸ್ನೇಹವನ್ನು ಹೊಂದಲು ನಾವು ಅದೃಷ್ಟಶಾಲಿಯಾಗಿದ್ದೇವೆ. ಅದು ನಮ್ಮ ಸಂಬಂಧದ ಮೂಲಸೆಲೆಯಾಗಿತ್ತು. ಅದು ನಮ್ಮ ನಡುವೆ ವಿಶೇಷ ಬಾಂಧವ್ಯವನ್ನು ಉಳಿಸಿಕೊಳ್ಳುತ್ತದೆ ಎಂದು ನಾವು ನಂಬುತ್ತೇವೆ. ಈ ಕಷ್ಟದ ಸಮಯದಲ್ಲಿ ನಮ್ಮ ಅಭಿಮಾನಿಗಳು, ಹಿತೈಷಿಗಳು ಮತ್ತು ಮಾಧ್ಯಮಗಳು ನಮಗೆ ಸಹಕರಿಸಬೇಕು, ನಾವು ಮುಂದುವರಿಯಲು ನಮಗೆ ಖಾಸಗಿತನವನ್ನು ನೀಡಬೇಕು” ಎಂದು ಬರೆದುಕೊಂಡಿದ್ದಾರೆ.


ಇದನ್ನೂ ಓದಿ: ಯುಪಿ ರೈತರ ಹತ್ಯೆ ವಿರೋಧಿಸಿ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ- ಬಿಜೆಪಿ ವಿರುದ್ಧ ಆಕ್ರೋಶ


ವಿಚ್ಛೇದನ ಪಡೆದಿರುವ ಸಮಂತಾ ಅವರು ಐವತ್ತು ಕೋಟಿ ರೂ. ಜೀವನಾಂಶವನ್ನು ಪಡೆಯುತ್ತಾರೆ ಎಂಬ ವರದಿಗಳಾಗಿದ್ದು, ಅದನ್ನು ಸಮಂತಾ ನಿರಾಕರಿಸಿದ್ದಾರೆ. ಅಧಿಕೃತ ಮೂಲವೊಂದರ ಪ್ರಕಾರ ಸಮಂತಾ ಅವರಿಗೆ 200 ಕೋಟಿ ರೂ.ಗಿಂ ಹೆಚ್ಚು ಜೀವನಾಂಶದ ಅವಕಾಶ ಬಂದಿತ್ತು. ಆದರೆ ತನ್ನ ಸಂಬಂಧವನ್ನು ಕೊನೆಗೊಳಿಸಲು ಸಮಂತಾ ಒಂದು ರೂಪಾಯಿ ಕೂಡ ಬಯಸಿಲ್ಲ ಎಂದು ಹಿಂದೂಸ್ತಾನ್‌ ಟೈಮ್ಸ್‌ ವರದಿ ಮಾಡಿದೆ.

“ಹೃದಯ ಘಾಸಿಗೊಂಡ ಮತ್ತು ದಿಗ್ಭ್ರಮೆಯಾದ ಸಮಂತಾ ಅವರಿಗೆ ಈ ವಿವಾಹದಿಂದ ಪ್ರೀತಿ ಮತ್ತು ಒಡನಾಟ ಮಾತ್ರ ಬೇಕಿತ್ತು. ಆದರೆ ಈಗ ಅದು ಮುಗಿದಿದೆ. ಸಮಂತಾ ಅವರಿಗೆ ಪ್ರೀತಿ ಮತ್ತು ಒಡನಾಟದ ಹೊರತಾಗಿ ಬೇರೇನೂ ಅಗತ್ಯವಿರಲಿಲ್ಲ” ಎಂದು ಮೂಲಗಳು ತಿಳಿಸಿರುವುದಾಗಿ ವರದಿ ಹೇಳಿದೆ.

ಸಮಂತಾ ಹಾಗೂ ನಾಗಚೈತನ್ಯ ಅವರ ನಡುವಿನ ಪ್ರೀತಿ 2010ರಲ್ಲಿ ‘ಯೇ ಮಾಯಾ ಚೇಸವೆ’ ಸಿನಿಮಾದಲ್ಲಿ ಕೆಲಸ ಮಾಡುವಾಗ ಆರಂಭವಾಗಿತ್ತು. 2017ರಲ್ಲಿ ವಿವಾಹವಾಗಿದ್ದರು. ಇತ್ತೀಚೆಗೆ ಈ ಜೋಡಿಯ ನಡುವೆ ಬಿರುಕು ಮೂಡಿರುವ ವಿಷಯಗಳು ಹರಿದಾಡಿದ್ದವು.  ಸಮಂತಾ ಅಕ್ಕಿನೇನಿ ಎಂಬುದನ್ನು ‘ಎಸ್‌’ ಎಂಬುದಾಗಿ ಅವರು ಬದಲಿಸಿದ್ದರಿಂದ ವಿಚ್ಛೇದನ ಕುರಿತು ಸುದ್ದಿಗಳು ಹರಿದಾಡಿದ್ದವು. ಚೈತನ್ಯ ಅವರ ಕುಟುಂಬವು ಅಮೀರ್‌ ಖಾನ್‌ ಅವರಿಗೆ ಆಯೋಜಿಸಿದ್ದ ಔತಣ ಕೂಟವು ಈ ಅನುಮಾನಗಳಿಗೆ ಬಲ ನೀಡಿತ್ತು. ಈಗ ವಿಚ್ಛೇದನ ವಿಷಯವನ್ನು ಬಹಿರಂಗಪಡಿಸಲಾಗಿದೆ.

ಇದನ್ನೂ ಓದಿ: ನಾಲ್ವರು ರೈತರ ಹತ್ಯೆ: ಕೇಂದ್ರ ಸಚಿವ ಮತ್ತು ಮಗನ ಮೇಲೆ ಕೊಲೆ ಪ್ರಕರಣ ದಾಖಲು

ಈ ಆಘಾತದಿಂದ ಹೊರ ಬರಲು ಸಮಂತಾ ಅವರು ತಮ್ಮ ಕೆಲಸಗಳಲ್ಲಿ ಹೆಚ್ಚು ತೊಡಗಿಸಿಕೊಂಡಿದ್ದಾರೆ. ತನ್ನ ವೈಯಕ್ತಿಕ ಜೀವನದ ಕಾರಣದಿಂದ ತನಗೆ ಸಂಬಂಧಿಸಿರುವ ಯಾವುದೇ ಪ್ರಾಜೆಕ್ಟ್‌ ನರಳಬಾರದು ಎಂದು  ಸಮಂತಾ ಬಯಸುತ್ತಾರೆ. ಸಮಂತಾ ಅವರು ತಮ್ಮ ವೃತ್ತಿಗೆ ಬದ್ಧರಾಗಿದ್ದು, ಅದನ್ನು ಸಾಕಷ್ಟು ಪ್ರೀತಿಸುತ್ತಾರೆ ಎಂದು ಮೂಲಗಳು ಹೇಳಿವೆ.


ಇದನ್ನೂ ಓದಿರಿ: ವಿಚ್ಛೇದನದ ನಂತರ ಅಮಿರ್ ಖಾನ್-ಕಿರಣ್ ರಾವ್ ಭಾವನಾತ್ಮಕ ವಿಡಿಯೋ ಸಂದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...