Homeಮುಖಪುಟಪುರುಷ ಪ್ರಧಾನ ನೈತಿಕತೆ ಪ್ರಶ್ನಿಸಿ ನಟಿ ಸಮಂತಾ ಪೋಸ್ಟ್‌; ಆರೋಪಗಳಿಗೆ ಸ್ಪಷ್ಟನೆ

ಪುರುಷ ಪ್ರಧಾನ ನೈತಿಕತೆ ಪ್ರಶ್ನಿಸಿ ನಟಿ ಸಮಂತಾ ಪೋಸ್ಟ್‌; ಆರೋಪಗಳಿಗೆ ಸ್ಪಷ್ಟನೆ

- Advertisement -
- Advertisement -

ಬಹುಭಾಷಾ ನಟಿ ಸಮಂತಾ ರುತ್ ಪ್ರಭು ಮತ್ತು ನಟ ನಾಗಚೈತನ್ಯ ನಡುವಿನ ವಿವಾಹ ಸಂಬಂಧವನ್ನು ಇಬ್ಬರು ನಿರ್ಧರಿಸಿ ಕೊನೆಗೊಳಿಸಿಕೊಂಡಿದ್ದಾರೆ. ಈ ಬಗ್ಗೆ ಇಬ್ಬರೂ ಸ್ಪಷ್ಟವಾಗಿ ಮಾಹಿತಿಯನ್ನು ನೀಡಿದ್ದಾರೆ. ಆದರೆ, ಸಾಮಾಜಿಕ ಜಾಲತಾಣಗಳಲ್ಲಿ ಮಾತ್ರ ನಟಿ ಸಮಂತಾ ಅವರದ್ದೇ ತಪ್ಪು ಎನ್ನುವಂತೆ ಟೀಕಿಸಲಾಗುತ್ತಿದೆ.

ನಟಿಯ ಬಾಲಿವುಡ್ ಪ್ರವೇಶ, ಫ್ಯಾಮಿಲಿ ಮ್ಯಾನ್-2 ವೆಬ್‌ ಸೀರೀಸ್‌ನಲ್ಲಿನ ಬೋಲ್ಡ್ ದೃಶ್ಯಗಳು ಮತ್ತು ಡಿಸೈನರ್‌ ಜೊತೆಗಿನ ಚಿತ್ರಗಳನ್ನು ಶೇರ್‌ ಮಾಡುತ್ತಾ ಸಂಬಂಧ ಕೊನೆಗೊಳ್ಳು ಇವುಗಳೇ ಕಾರಣ ಎಂದು ಬಿಂಬಿಸಲಾಗುತ್ತಿದೆ.

10 ವರ್ಷಗಳಿಗೂ ಹೆಚ್ಚಿನ ಸ್ನೇಹ, 4 ವರ್ಷದ ದಾಂಪತ್ಯ ಕೊನೆಗೊಂಡ ಬಗ್ಗೆ ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದಾರೆ. ಜೊತೆಗೆ ಹಲವು ಮಂದಿ ಟೀಕೆ ಕೂಡ ಮಾಡಿದ್ದಾರೆ. ಇವುಗಳಿಗೆ ಉತ್ತರವಾಗಿ ಶುಕ್ರವಾರ (ಅ.08) ಇನ್ಸ್ಟಾಗ್ರಾಮ್ ವೇದಿಕೆಯಲ್ಲಿ ಗುಡ್ ಮಾರ್ನಿಂಗ್ ಜೊತೆಗೆ ಕೆಲವು ಸಾಲುಗಳನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಪ್ರೀತಿಯಷ್ಟೇ ಬಯಸಿದ್ದು; 200 ಕೋಟಿ ರೂ. ಜೀವನಾಂಶ ನಿರಾಕರಿಸಿದ ನಟಿ ಸಮಂತಾ!

 

ಶುಕ್ರವಾರ ಬೆಳಿಗ್ಗೆ, ಸಮಂತಾ ರುತ್ ಪ್ರಭು ಲೇಖಕಿ ಫರೀಡಾ ಡಿ ಅವರ ಹೇಳಿಕೆಯನ್ನು ಹಂಚಿಕೊಂಡಿದ್ದಾರೆ. “ಕೆಲವು ವಿಷಯಗಳಲ್ಲಿ ನಿರಂತರವಾಗಿ ಮಹಿಳೆಯರು ಮಾತ್ರ ನೈತಿಕವಾಗಿ ಪ್ರಶ್ನಾರ್ಹವಾಗಿದ್ದರೇ, ಅದೇ ಕೆಲಸ ಪುರುಷ ಮಾಡಿದಾಗ ನೈತಿಕವಾಗಿ ಪ್ರಶ್ನಿಸಲ್ಪಡುವುದಿಲ್ಲ ಎಂದರೆ, ನಾವು ನಮ್ಮ ಸಮಾಜದಲ್ಲಿ ಮೂಲಭೂತವಾಗಿ ಯಾವುದೇ ನೈತಿಕತೆಯನ್ನು ಹೊಂದಿಲ್ಲ” ಎಂದಿದ್ದಾರೆ.

Samantha removes 'Akkineni' from Twitter, Instagram user names

ತೆಲುಗು ನಟ ನಾಗ ಚೈತನ್ಯ ಜತೆಗಿನ ಮದುವೆ ಮುರಿದು ವಿಚ್ಛೇದನ ಪಡೆದುಕೊಂಡ ಬಳಿಕ ನಟಿ ಸಮಂತಾ ರುತ್ ಪ್ರಭು ಅವರ ಕುರಿತು ಇಲ್ಲಸಲ್ಲದ ಆರೋಪಗಳನ್ನು ಮಾಡಲಾಗಿತ್ತು. “ಸುಮಂತಾ ಅವರಿಗೆ ಬೇರೆ ಸಂಬಂಧವಿತ್ತು. ಅವರು ಗರ್ಭಪಾತ ಮಾಡಿಸಿಕೊಂಡಿದ್ದಾರೆ” ಎಂದೆಲ್ಲ ಸುದ್ದಿ ಹಬ್ಬಿಸಲಾಗಿತ್ತು. ಇದಕ್ಕೂ ಸ್ಪಷ್ಟನೆ ನೀಡಿರುವ ಸಮಂತಾ, ಈ ಆರೋಪಗಳಿಗೆ ಬೇಸರ ವ್ಯಕ್ತಪಡಿಸಿದ್ದಾರೆ.

“ಈ ಸಂದರ್ಭದಲ್ಲಿ ನನ್ನ ಜತೆಗಿರುವ ಎಲ್ಲರಿಗೂ ಧನ್ಯವಾದಗಳು, ನನ್ನ ಬಗ್ಗೆ ಹಲವು ಊಹಾಪೋಹಗಳನ್ನು ಹರಡಲಾಗಿದೆ. ನನಗೆ ಬೇರೆ ಸಂಬಂಧವಿತ್ತು, ನಾನು ಗರ್ಭಪಾತ ಮಾಡಿಸಿಕೊಂಡಿದ್ದೆ, ನನಗೆ ಮಕ್ಕಳು ಬೇಕಿರಲಿಲ್ಲ ಮತ್ತು ನಾನು ಅವಕಾಶವಾದಿಯಾಗಿದ್ದೆ ಎಂದೆಲ್ಲ ಹೇಳಲಾಗಿದೆ. ಆದರೆ ಅವೆಲ್ಲವೂ ನಿಜವಲ್ಲ. ವಿಚ್ಛೇದನದ ನೋವೇ ದೊಡ್ಡದಾಗಿದೆ. ಅದರ ಜತೆಗೆ ಇಂತಹ ಮಾತುಗಳಿಂದ ನನ್ನ ಮನಸ್ಸನ್ನು ಘಾಸಿಗೊಳಿಸಲಾಗುತ್ತಿದೆ. ಇದಕ್ಕೆ ನಾನು ಅವಕಾಶ ಕೊಡುವುದಿಲ್ಲ. ನನ್ನ ಬಗೆಗಿನ ವದಂತಿಗಳೆಲ್ಲವೂ ಸುಳ್ಳು ಎಂದು ಹೇಳುತ್ತಿದ್ದೇನೆ. ಇದರಿಂದ ಹೊರಬರಲು ನನಗೆ ಇನ್ನಷ್ಟು ಸಮಯ ಬೇಕಿದೆ” ಎಂದು ಸುಮಂತಾ ಸಾಮಾಜಿಕ ಮಾಧ್ಯಮದಲ್ಲಿ ಹೇಳಿದ್ದಾರೆ.

ಅಕ್ಟೋಬರ್‌ 2 ರಂದು ಸಮಂತಾ ಪ್ರಭು ಹಾಗೂ ನಾಗಚೈತನ್ಯ ವಿಚ್ಛೇದನ ಪಡೆದಿರುವುದಾಗಿ ತಮ್ಮ ಇನ್ಸ್‌ಸ್ಟಾಗ್ರಾಮ್‌ ಖಾತೆಯಲ್ಲಿ ತಿಳಿಸಿ, ಹಲವು ದಿನಗಳ ವದಂತಿಗೆ ಅಂತ್ಯ ಹಾಡಿದ್ದರು.

“ಸಾಕಷ್ಟು ಆಲೋಚಿಸಿ ಈ ನಿರ್ಧಾರ ಕೈಗೊಂಡಿದ್ದೇವೆ. ನಾವು ಸ್ವಂತ ಮಾರ್ಗಗಳನ್ನು ಅನುಸರಿಸಲು ಹಾಗೂ ಗಂಡ, ಹೆಂಡತಿಯಾಗಿ ಬೇರೆಯಾಗಲು ನಿರ್ಧರಿಸಿದ್ದೇವೆ. ಒಂದು ದಶಕದ ಸ್ನೇಹವನ್ನು ಹೊಂದಲು ನಾವು ಅದೃಷ್ಟಶಾಲಿಯಾಗಿದ್ದೇವೆ. ಅದು ನಮ್ಮ ಸಂಬಂಧದ ಮೂಲ ಸೆಲೆಯಾಗಿತ್ತು. ಅದು ನಮ್ಮ ನಡುವೆ ವಿಶೇಷ ಬಾಂಧವ್ಯವನ್ನು ಉಳಿಸಿಕೊಳ್ಳುತ್ತದೆ ಎಂದು ನಾವು ನಂಬುತ್ತೇವೆ. ಈ ಕಷ್ಟದ ಸಮಯದಲ್ಲಿ ನಮ್ಮ ಅಭಿಮಾನಿಗಳು, ಹಿತೈಷಿಗಳು ಮತ್ತು ಮಾಧ್ಯಮಗಳು ನಮಗೆ ಸಹಕರಿಸಬೇಕು, ನಾವು ಮುಂದುವರಿಯಲು ನಮಗೆ ಖಾಸಗಿತನವನ್ನು ನೀಡಬೇಕು” ಎಂದು ಬರೆದುಕೊಂಡಿದ್ದರು.

ವಿಚ್ಛೇದನ ಪಡೆದಿರುವ ಸಮಂತಾ ಅವರು ಐವತ್ತು ಕೋಟಿ ರೂ. ಜೀವನಾಂಶವನ್ನು ಪಡೆಯುತ್ತಾರೆ ಎಂಬ ವರದಿಗಳಾಗಿದ್ದವು. ಆದರೆ, ಅದನ್ನು ಸಮಂತಾ ನಿರಾಕರಿಸಿದ್ದಾರೆ. ಅಧಿಕೃತ ಮೂಲವೊಂದರ ಪ್ರಕಾರ ಸಮಂತಾ ಅವರಿಗೆ 200 ಕೋಟಿ ರೂ.ಗಿಂ ಹೆಚ್ಚು ಜೀವನಾಂಶದ ಅವಕಾಶ ಬಂದಿತ್ತು. ಆದರೆ ತನ್ನ ಸಂಬಂಧವನ್ನು ಕೊನೆಗೊಳಿಸಲು ಆಕೆ ಒಂದು ರೂಪಾಯಿ ಕೂಡ ಬಯಸಿಲ್ಲ ಎಂದು ಹಿಂದೂಸ್ತಾನ್‌ ಟೈಮ್ಸ್‌ ವರದಿ ಮಾಡಿದೆ.

ಸಮಂತಾ ಹಾಗೂ ನಾಗಚೈತನ್ಯ ಅವರ ನಡುವೆ 2010ರಲ್ಲಿ ‘ಯೇ ಮಾಯಾ ಚೇಸವೆ’ ಸಿನಿಮಾದಲ್ಲಿ ಕೆಲಸ ಮಾಡುವಾಗ ಗೆಳೆತನ ಆರಂಭವಾಗಿತ್ತು. 2017ರಲ್ಲಿ ವಿವಾಹವಾಗಿದ್ದರು.


ಇದನ್ನೂ ಓದಿ: ಅಕ್ಟೋಬರ್‌ನಲ್ಲಿ ಒಟಿಟಿ ವೇದಿಕೆಯಲ್ಲಿ ಸಿಗಲಿರುವ ಸಿನಿಮಾಗಳ ಪಟ್ಟಿ ಇಲ್ಲಿದೆ ನೋಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...