Homeಮುಖಪುಟಸಂಭಾಲ್: ಅಲಹಾಬಾದ್ ಹೈಕೋರ್ಟ್‌ನಿಂದ ಆಜಾದ್ ಜನ್ನತ್ ನಿಶಾ ಶಾಲೆಯ ನೆಲಸಮಕ್ಕೆ ತಡೆ

ಸಂಭಾಲ್: ಅಲಹಾಬಾದ್ ಹೈಕೋರ್ಟ್‌ನಿಂದ ಆಜಾದ್ ಜನ್ನತ್ ನಿಶಾ ಶಾಲೆಯ ನೆಲಸಮಕ್ಕೆ ತಡೆ

- Advertisement -
- Advertisement -

ಸಂಭಾಲ್: ಇಲ್ಲಿನ ಆಲಂ ಸರಾಯ್‌ನಲ್ಲಿರುವ ಸುದೀರ್ಘ ಇತಿಹಾಸವಿರುವ ಶಿಕ್ಷಣ ಸಂಸ್ಥೆ ಆಜಾದ್ ಜನ್ನತ್ ನಿಶಾ ಶಾಲೆಯ ಕಟ್ಟಡವನ್ನು ನೆಲಸಮಗೊಳಿಸದಂತೆ ಅಲಹಾಬಾದ್ ಹೈಕೋರ್ಟ್ ಉತ್ತರಪ್ರದೇಶ ಸರ್ಕಾರಕ್ಕೆ ಮಹತ್ವದ ಆದೇಶ ನೀಡಿದೆ.

46 ವರ್ಷಗಳ ಹಿಂದೆ ಭೂಮಿ ಮಾರಾಟ ಮಾಡಿದವರ ಕಾನೂನುಬದ್ಧ ಉತ್ತರಾಧಿಕಾರಿಗಳು ಆಸ್ತಿಯ ಮಾಲೀಕತ್ವವನ್ನು ಪ್ರತಿಪಾದಿಸಿ, ಹೈಕೋರ್ಟ್‌ನಲ್ಲಿ ದಾವೆ ಹೂಡಿದ್ದ ಹಿನ್ನೆಲೆಯಲ್ಲಿ ಈ ಆದೇಶ ಬಂದಿದೆ. ಈ ದಾವೆಗೆ ಸ್ಥಳೀಯ ಹಿಂದೂತ್ವ ಗುಂಪುಗಳ ಬೆಂಬಲವೂ ಇತ್ತು ಎಂದು ಹಿಂದಿನ ಮೂಲಗಳಿಂದ ತಿಳಿದುಬಂದಿದೆ.

ಆಲಂ ಸರಾಯ್‌ನಲ್ಲಿರುವ ಆಜಾದ್ ಜನ್ನತ್ ನಿಶಾ ಶಾಲೆಯ ವ್ಯವಸ್ಥಾಪಕ ಮೊಹಮ್ಮದ್ ಶಹವೇಜ್ ಆಲಂ ಅವರು ನ್ಯಾಯಾಲಯದ ಮೊರೆ ಹೋಗಿದ್ದರು. 1979ರಿಂದ ತಾನೇ ಭೂಮಿಯ ನಿಜವಾದ ಮಾಲೀಕ ಎಂದು ಅವರು ತಮ್ಮ ಅರ್ಜಿಯಲ್ಲಿ ಪ್ರತಿಪಾದಿಸಿದ್ದರು.

ನ್ಯಾಯಮೂರ್ತಿಗಳಾದ ಸಿದ್ಧಾರ್ಥ ವರ್ಮಾ ಮತ್ತು ಹರ್ವೀರ್ ಸಿಂಗ್ ಅವರನ್ನೊಳಗೊಂಡ ಪೀಠವು ಶಾಲಾ ಕಟ್ಟಡವನ್ನು ನೆಲಸಮಗೊಳಿಸದಂತೆ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿದ್ದು, ಸಂಸ್ಥೆಯ ಶಾಂತಿಯುತ ಕಾರ್ಯನಿರ್ವಹಣೆಗೆ ಯಾವುದೇ ರೀತಿಯಲ್ಲಿ ಹಸ್ತಕ್ಷೇಪ ಮಾಡದಂತೆ ನಿರ್ದೇಶಿಸಿದೆ.

ಈ ಸಮಸ್ಯೆಯು 2025ರ ಜನವರಿ 13ರಂದು ಪ್ರಾರಂಭವಾಯಿತು. ಅಂದು ಜಿಲ್ಲಾಧಿಕಾರಿ, ಉಪವಿಭಾಗೀಯ ದಂಡಾಧಿಕಾರಿ, ಪೊಲೀಸ್ ಪಡೆ ಮತ್ತು ತಹಸೀಲ್ದಾರ್, ಲೇಖಪಾಲ್, ನಾಯಬ್ ಲೇಖಪಾಲ್ ಸೇರಿದಂತೆ ಸ್ಥಳೀಯ ಅಧಿಕಾರಿಗಳು, ಭೂಮಿಯ ಮಾಲೀಕತ್ವವನ್ನು ಪ್ರತಿಪಾದಿಸಿದವರೊಂದಿಗೆ ಶಾಲಾ ಆವರಣಕ್ಕೆ ಆಗಮಿಸಿ, ಮಾಲೀಕರಿಗೆ ಬೆದರಿಕೆ ಹಾಕಲು ಮುಂದಾದರು.

ತಮ್ಮ ತಂದೆ 1979ರ ಜನವರಿ 8ರಂದು ನೋಂದಾಯಿತ ಮಾರಾಟ ಪತ್ರದ ಮೂಲಕ ಗಂಗಾ ಪ್ರಸಾದ್ ಮತ್ತು ಹರ್ ಪ್ರಸಾದ್ ಅವರಿಂದ ಭೂಮಿಯನ್ನು ಖರೀದಿಸಿದ್ದರು. ಆದರೆ ಈಗ ಅವರ ಉತ್ತರಾಧಿಕಾರಿಗಳು ಆಸ್ತಿಯ ಮಾಲೀಕತ್ವವನ್ನು ಪ್ರತಿಪಾದಿಸುತ್ತಿದ್ದಾರೆ ಎಂದು ಶಾಲಾ ವ್ಯವಸ್ಥಾಪಕರು ವಾದಿಸಿದ್ದಾರೆ.

ಉತ್ತರಪ್ರದೇಶ ಮಂಡಳಿಗೆ ಸಂಯೋಜಿತವಾಗಿರುವ ಈ ಶಾಲೆಯು ಪ್ರಸ್ತುತ ನರ್ಸರಿಯಿಂದ 10ನೇ ತರಗತಿಯವರೆಗೆ ತರಗತಿಗಳನ್ನು ನಡೆಸುತ್ತಿದೆ. ದಶಕಗಳಿಂದ ಶಾಂತಿಯುತವಾಗಿ, ಯಾವುದೇ ಅಡೆತಡೆಯಿಲ್ಲದೆ ಕಾರ್ಯನಿರ್ವಹಿಸುತ್ತಿದೆ.

2025ರ ಜನವರಿಯಿಂದ ಜೂನ್‌ವರೆಗೆ ಸ್ಥಳೀಯ ನಾಯಕರು ಮತ್ತು ಅಧಿಕಾರಿಗಳು ಯಾವುದೇ ಕಾನೂನುಬದ್ಧ ಆದೇಶವಿಲ್ಲದೆ ಶಾಲಾ ಆವರಣಕ್ಕೆ ಭೇಟಿ ನೀಡಿ, ಕಾಲಕಾಲಕ್ಕೆ ಮಾಲೀಕರಿಗೆ ಬೆದರಿಕೆ ಹಾಕುವುದನ್ನು ಮುಂದುವರೆಸಿದ್ದರು ಎಂದು ಅಸೋಸಿಯೇಷನ್ ಫಾರ್ ಪ್ರೊಟೆಕ್ಷನ್ ಆಫ್ ಸಿವಿಲ್ ರೈಟ್ಸ್ (APCR) ಹೊರಡಿಸಿದ ಪತ್ರಿಕಾ ಪ್ರಕಟಣೆ ತಿಳಿಸಿದೆ.

2025ರ ಮೇ 15ರಂದು ಆಡಳಿತವು ಶಾಲೆಯ ಮುಖ್ಯ ದ್ವಾರದ ಜೊತೆಗೆ ಹಲವು ತರಗತಿ ಕೊಠಡಿಗಳನ್ನು ನೆಲಸಮಗೊಳಿಸಿದ್ದು, ಇದರಿಂದ ಸುಮಾರು ₹30 ಲಕ್ಷ ರೂ. ಮೌಲ್ಯದ ನಷ್ಟ ಉಂಟಾಗಿದೆ ಎಂದು ಆರೋಪಿಸಲಾಗಿದೆ. ಅಷ್ಟೇ ಅಲ್ಲದೆ, ಅರ್ಜಿದಾರರ ಮಾಲೀಕತ್ವದಲ್ಲಿರುವ ಶಾಲೆಗೆ ಹೋಗುವ ದಾರಿಯನ್ನೂ ಒಳಗೊಂಡಂತೆ ಶಾಲಾ ಭೂಮಿಯ ಕೆಲವು ಭಾಗಗಳನ್ನು ವಶಪಡಿಸಿಕೊಳ್ಳಲಾಗಿತ್ತು.

2024ರ ನವೆಂಬರ್‌ನಲ್ಲಿ ಸಂಭಾಲ್‌ನಲ್ಲಿ ನಡೆದ ಹಿಂಸಾಚಾರದ ನಂತರ ಕೋಮು ಉದ್ವಿಗ್ನತೆಗಳು ಹೆಚ್ಚಾದಾಗ ಈ ವಿವಾದ ಮತ್ತಷ್ಟು ಉಲ್ಬಣಗೊಂಡಿದೆ ಎಂದು APCR ಪ್ರತಿಪಾದಿಸಿದೆ.

ಶಾಲಾ ಕಟ್ಟಡವನ್ನು ನೆಲಸಮಗೊಳಿಸುವ ಯಾವುದೇ ಯೋಜನೆ ಪ್ರಸ್ತುತ ಇಲ್ಲ ಎಂದು ರಾಜ್ಯದ ಪರ ವಾದ ಮಂಡಿಸಿದ ವಕೀಲ ಗೋಪಾಲ್ ಸಕ್ಸೇನಾ ಅವರು ಸ್ಪಷ್ಟಪಡಿಸಿದರು. ಭವಿಷ್ಯದಲ್ಲಿ ಯಾವುದೇ ಕ್ರಮ ತೆಗೆದುಕೊಳ್ಳಬೇಕಾದರೂ ಕಾನೂನುಬದ್ಧ ಪ್ರಕ್ರಿಯೆಗಳನ್ನು ಅನುಸರಿಸಲಾಗುವುದು ಎಂದು ಅವರು ನ್ಯಾಯಾಲಯಕ್ಕೆ ಭರವಸೆ ನೀಡಿದರು.

ಕೇರಳ | ಸ್ನೇಹಿತನೊಂದಿಗೆ ಮಾತನಾಡಿದ್ದಕ್ಕೆ ಗುಂಪು ವಿಚಾರಣೆ: ಮಹಿಳೆ ಆತ್ಮಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...

ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ಸಾವು : ಪಿತೂರಿ ಶಂಕೆ ವ್ಯಕ್ತಪಡಿಸಿದ ಮಮತಾ ಬ್ಯಾನರ್ಜಿ, ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದ ರಾಜಕೀಯ ನಾಯಕರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವಿಗೆ ಕಾರಣವಾದ ಬಾರಾಮತಿ ವಿಮಾನ ಪತನದ ಕುರಿತು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ಜ.28) ಒತ್ತಾಯಿಸಿದ್ದಾರೆ....

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಯುಜಿಸಿ ಹೊಸ ನಿಯಮ; ಮುಂದುವರೆದ ಪ್ರಬಲಜಾತಿ ಗುಂಪಿನ ವಿರೋಧ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ಪರಿಹರಿಸುವ ಗುರಿಯನ್ನು ಹೊಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಪರಿಷ್ಕೃತ ನಿಯಮಗಳ ಕುರಿತು ದೇಶದಲ್ಲಿ ಭಾರಿ ರಾಜಕೀಯ ವಾಗ್ವಾದ ಭುಗಿಲೆದ್ದಿದೆ. ಹೊಸ ಮಾರ್ಗಸೂಚಿಗಳ ಕುರಿತು...

ಜನಸೇನಾ ಶಾಸಕನಿಂದ ಅತ್ಯಾಚಾರ, ಬಲವಂತದ ಗರ್ಭಪಾತ : ಮಹಿಳೆ ಆರೋಪ

ಆಂಧ್ರ ಪ್ರದೇಶದ ರೈಲ್ವೆ ಕೊಡೂರು ವಿಧಾನಸಭಾ ಕ್ಷೇತ್ರದ ಜನ ಸೇನಾ ಶಾಸಕ ಮತ್ತು ಸರ್ಕಾರಿ ಸಚೇತಕ ಅರವ ಶ್ರೀಧರ್ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಮತ್ತು ಬಲವಂತದ ಗರ್ಭಪಾತ ಆರೋಪ ಮಾಡಿದ್ದಾರೆ. ಈ ಕುರಿತು ವಿಡಿಯೋ...