Homeಮುಖಪುಟಸಂಭಾಲ್ ಮಸೀದಿ ಸಮೀಕ್ಷೆಗೆ ಸುಪ್ರೀಂ ಕೋರ್ಟ್ ತಡೆ : ಶಾಂತಿ, ಸೌಹಾರ್ದತೆ ಕಾಪಾಡಲು ಸೂಚನೆ

ಸಂಭಾಲ್ ಮಸೀದಿ ಸಮೀಕ್ಷೆಗೆ ಸುಪ್ರೀಂ ಕೋರ್ಟ್ ತಡೆ : ಶಾಂತಿ, ಸೌಹಾರ್ದತೆ ಕಾಪಾಡಲು ಸೂಚನೆ

- Advertisement -
- Advertisement -

ಉತ್ತರ ಪ್ರದೇಶದ ಸಂಭಾಲ್‌ ಜಿಲ್ಲೆಯ ಚಂದೌಸಿಯಲ್ಲಿರುವ ಶಾಹಿ ಜಾಮಾ ಮಸೀದಿ ಆವರಣದಲ್ಲಿ ಸಮೀಕ್ಷೆಗೆ ಸುಪ್ರೀಂ ಕೋರ್ಟ್ ಇಂದು (ನ.29) ತಡೆ ನೀಡಿದ್ದು, ಶಾಂತಿ, ಸೌಹಾರ್ದತೆ ಕಾಪಾಡುವಂತೆ ಸರ್ಕಾರಕ್ಕೆ ಸೂಚಿಸಿದೆ.

ಸಮೀಕ್ಷೆ ಆದೇಶವನ್ನು ಪ್ರಶ್ನಿಸಿ ಮಸೀದಿ ಸಮಿತಿ ಅಲಹಾಬಾದ್ ಹೈಕೋರ್ಟ್‌ಗೆ ಸಲ್ಲಿಸಿರುವ ಅರ್ಜಿ ವಿಚಾರಣೆಗೆ ಪಟ್ಟಿ ಮಾಡುವವರೆಗೆ ಸಮೀಕ್ಷೆ ವಿಚಾರದಲ್ಲಿ ಮುಂದುವರೆಯದಂತೆ ವಿಚಾರಣಾ ನ್ಯಾಯಾಲಯಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.

“ಮಸೀದಿ ಸಮೀಕ್ಷೆಗೆ ಸಂಬಂಧಿಸಿದ ಅಡ್ವೊಕೇಟ್ ಕಮಿಷನರ್ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಇಡಬೇಕು. ಮುಂದಿನ ಆದೇಶದವರೆಗೆ ತೆರಯಬಾರದು. ಯಾವುದೇ ಬೆಲೆ ತೆತ್ತಾದರೂ ಸರ್ಕಾರ ಶಾಂತಿ, ಸೌಹಾರ್ದತೆ ಕಾಪಾಡಬೇಕು” ಎಂದು ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ಸಂಜಯ್ ಕುಮಾರ್ ಅವರಿದ್ದ ದ್ವಿಸದಸ್ಯ ಪೀಠ ನಿರ್ದೇಶಿಸಿದೆ.

“ಮಸೀದಿಯ ಸಮೀಕ್ಷೆಗೆ ಆದೇಶ ನೀಡಿರುವ ವಿಚಾರಣಾ ನ್ಯಾಯಾಲಯ ಮುಂದಿನ ಯಾವುದೇ ಕ್ರಮಗಳನ್ನು ಕೈಗೊಳ್ಳಬಾರದು. ಮಸೀದಿ ಸಮಿತಿ ಹೈಕೋರ್ಟ್‌ಗೆ ತೆರಳುವವರೆಗೆ ಏನೂ ಆಗಬಾರದು ಎಂದು ನಾವು ಬಯಸುತ್ತೇವೆ. ವಿಚಾರಣಾ ನ್ಯಾಯಾಲಯ ತನ್ನ ಆದೇಶವನ್ನು ಜಾರಿಗೆ ತರಬಾರದು” ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಮಸೀದಿ ಈ ಹಿಂದೆ ದೇವಾಲಯವಾಗಿತ್ತು ಎಂದು ಅರ್ಜಿ ಸಲ್ಲಿಕೆಯಾದ ಕೂಡಲೇ ಜಿಲ್ಲಾ ನ್ಯಾಯಾಲಯ ತರಾತುರಿಯಲ್ಲಿ ಸಮೀಕ್ಷೆಗೆ ಆದೇಶ ನೀಡಿದೆ. ಜಿಲ್ಲಾ ನ್ಯಾಯಾಲಯದ ಸಿವಿಲ್ ನ್ಯಾಯಾಧೀಶರು ನವೆಂಬರ್ 19ರಂದು ಸಮೀಕ್ಷೆಗೆ ಆದೇಶಿಸಿ ನೀಡಿರುವ ಆದೇಶಕ್ಕೆ ತಡೆಯಾಜ್ಞೆ ನೀಡಬೇಕು ಎಂದು ಸಂಭಾಲ್‌ನ ಶಾಹಿ ಜಾಮಾ ಮಸೀದಿ ಸಮಿತಿ (ಎಸ್‌ಎಸ್‌ಜೆಂಸಿ) ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು.

ಮಸೀದಿ ಸಮಿತಿ ತನ್ನ ಅರ್ಜಿಯನ್ನು ತುರ್ತು ವಿಚಾರಣೆ ನಡೆಸುವಂತೆ ಸುಪ್ರೀಂ ಕೋರ್ಟ್‌ಗೆ ಕೋರಿತ್ತು. ಅದಕ್ಕೆ ಒಪ್ಪಿದ್ದ ಸುಪ್ರೀಂ ಕೋರ್ಟ್, ಇಂದು ವಿಚಾರಣೆ ನಿಗದಿ ಮಾಡಿತ್ತು.

ನವೆಂಬರ್ 19 ರಂದು, ಸಂಭಾಲ್‌ನ ಸಿವಿಲ್ ನ್ಯಾಯಾಧೀಶ (ಹಿರಿಯ ವಿಭಾಗ) ಆದಿತ್ಯ ಸಿಂಗ್ ಅವರು ಶಾಹಿ ಜಾಮಾ ಮಸೀದಿಯ ಸಮೀಕ್ಷೆಯನ್ನು ನಡೆಸುವಂತೆ ಅಡ್ವೊಕೇಟ್‌ ಕಮಿಷನರ್‌ಗೆ ನಿರ್ದೇಶನ ನೀಡಿದ್ದರು. ನ.29ರೊಳಗೆ ಸಮೀಕ್ಷೆ ನಡೆಸಿ ವರದಿ ಸಲ್ಲಿಸುವಂತೆ ಆದೇಶಿಸಿ, ರಮೇಶ್ ರಾಘವ್ ಅವರನ್ನು ಅಡ್ವೊಕೇಟ್ ಕಮಿಷನರ್ ಆಗಿ ನೇಮಿಸಿದ್ದರು.

ಮೊಘಲರ ಕಾಲದಲ್ಲಿ ಧ್ವಂಸಗೊಂಡ ದೇವಾಲಯದ ಮೇಲೆ ಮಸೀದಿಯನ್ನು ನಿರ್ಮಿಸಲಾಗಿದೆ ಎಂದು ಆರೋಪಿಸಿ ವಕೀಲ ಹರಿಶಂಕರ್ ಜೈನ್ ಮತ್ತು ಇತರ ಏಳು ಮಂದಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ್ದ ನ್ಯಾಯಾಧೀಶರು ಸಮೀಕ್ಷೆಗೆ ಆದೇಶಿಸಿದ್ದರು.

ನ್ಯಾಯಾಲಯದ ಆದೇಶದಂತೆ ಮಸೀದಿಯ ಸಮೀಕ್ಷೆ ಮುಂದಾದಾಗ ಭುಗಿಲೆದ್ದ ಹಿಂಸಾಚಾರದಲ್ಲಿ ಕನಿಷ್ಠ ಆರು ಮುಸ್ಲಿಂ ಯುವಕರು ಕೊಲ್ಲಲ್ಪಟ್ಟಿದ್ದಾರೆ.

ಇದನ್ನೂ ಓದಿ : ವಕ್ಫ್‌ ಮಸೂದೆ | ಸಂಸದೀಯ ಸಮಿತಿ ಕಾರ್ಯಾವಧಿ ವಿಸ್ತರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಏ.10ರಂದು ಇಸ್ಲಾಮಾಬಾದ್‌ನಲ್ಲಿ ಅಮೆರಿಕ-ಇರಾನ್ ಶಾಂತಿ ಮಾತುಕತೆ : 10 ಷರತ್ತುಗಳನ್ನು ಮುಂದಿಟ್ಟ ಇರಾನ್

ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಪಾಕಿಸ್ತಾನದ ಮಧ್ಯಸ್ಥಿಕೆಯಲ್ಲಿ ಇಸ್ಲಾಮಾಬಾದ್‌ನಲ್ಲಿ ಶಾಂತಿ ಮಾತುಕತೆ ಆಯೋಜಿಸಲಾಗಿದೆ. ಅಮೆರಿಕ ಮತ್ತು ಇರಾನ್ ನಿಯೋಗಗಳ ನಡುವಿನ ಈ ಮಹತ್ವದ ಮಾತುಕತೆಯು 2026ರ ಏಪ್ರಿಲ್ 10ರಂದು (ಶುಕ್ರವಾರ) ಇಸ್ಲಾಮಾಬಾದ್‌ನಲ್ಲಿ ನಡೆಯಲಿದೆ ಎಂದು ಪಾಕಿಸ್ತಾನದ...

ಕದನ ವಿರಾಮ | ಟ್ರಂಪ್ ನಿರ್ಧಾರಕ್ಕೆ ಇಸ್ರೇಲ್ ಬೆಂಬಲ; ಲೆಬನಾನ್‌ಗೆ ಅನ್ವಯಿಸುವುದಿಲ್ಲ ಎಂದ ನೆತನ್ಯಾಹು!

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿರುವ ಎರಡು ವಾರಗಳ ಕದನ ವಿರಾಮಕ್ಕೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಬೆಂಬಲ ಸೂಚಿಸಿದ್ದಾರೆ. ಆದರೆ, ಈ ಕದನ ವಿರಾಮವು ಕೇವಲ ಇರಾನ್‌ಗೆ ಮಾತ್ರ ಸೀಮಿತವಾಗಿದ್ದು, ಲೆಬನಾನ್‌ಗೆ ಅನ್ವಯಿಸುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಇರಾನ್ ತಕ್ಷಣವೇ ಹಾರ್ಮುಝ್...

ಹಾರ್ಮುಝ್ ಜಲಸಂಧಿಯ ಮೂಲಕ ಎರಡು ವಾರಗಳ ಸುರಕ್ಷಿತ ಸಂಚಾರಕ್ಕೆ ಅವಕಾಶ : ಇರಾನ್ ಭರವಸೆ

ಅಮೆರಿಕ ಮತ್ತು ಇರಾನ್ ನಡುವೆ ಏರ್ಪಟ್ಟಿರುವ ಎರಡು ವಾರಗಳ ತಾತ್ಕಾಲಿಕ ಕದನ ವಿರಾಮದ ಹಿನ್ನೆಲೆ, ಹಾರ್ಮುಝ್ ಜಲಸಂಧಿ  ಮೂಲಕ ಹಡಗುಗಳ ಸುರಕ್ಷಿತ ಸಂಚಾರಕ್ಕೆ ಅವಕಾಶ ನೀಡುವುದಾಗಿ ಇರಾನ್ ಭರವಸೆ ನೀಡಿದೆ. ವಿಶ್ವದ ಒಟ್ಟು ಪೆಟ್ರೋಲಿಯಂ ರಫ್ತಿನ...

ಇರಾನ್ ಮೇಲಿನ ದಾಳಿ ಸ್ಥಗಿತ : ಎರಡು ವಾರಗಳ ಕದನ ವಿರಾಮ ಘೋಷಿಸಿದ ಟ್ರಂಪ್

ಇರಾನ್ ಮೇಲೆ ನಡೆಸುತ್ತಿರುವ ಬಾಂಬ್ ದಾಳಿ ಹಾಗೂ ಮಿಲಿಟರಿ ಕಾರ್ಯಾಚರಣೆಯನ್ನು ಎರಡು ವಾರಗಳ ಕಾಲ ಸ್ಥಗಿತಗೊಳಿಸುವ ಕದನ ವಿರಾಮಕ್ಕೆ ಒಪ್ಪಿಕೊಂಡಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ (ಭಾರತೀಯ ಕಾಲಮಾನ ಏ.8) ಹೇಳಿದ್ದಾರೆ. ಪಾಕಿಸ್ತಾನ...

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...