Homeಮುಖಪುಟಸಂಭಾಲ್ ಮಸೀದಿ ಸಮೀಕ್ಷೆ ಹಿಂಸಾಚಾರ: ಯುಪಿ ಸರ್ಕಾರದ ವಿರುದ್ಧ ರಾಹುಲ್-ಪ್ರಿಯಾಂಕಾ ವಾಗ್ದಾಳಿ

ಸಂಭಾಲ್ ಮಸೀದಿ ಸಮೀಕ್ಷೆ ಹಿಂಸಾಚಾರ: ಯುಪಿ ಸರ್ಕಾರದ ವಿರುದ್ಧ ರಾಹುಲ್-ಪ್ರಿಯಾಂಕಾ ವಾಗ್ದಾಳಿ

- Advertisement -
- Advertisement -

ಉತ್ತರ ಪ್ರದೇಶದ ಸಂಭಾಲ್ ಮಸೀದಿ ಸಮೀಕ್ಷೆ ಸಂದರ್ಭದಲ್ಲಿ ನಡೆದ ಹಿಂಸಾಚಾರದ ಬಳಿಕ ನಾಲ್ವರು ನಾಗರೀಕರು ಜೀವ ಕಳೆದುಕೊಂಡಿದ್ದು, ಹಿರಿಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಯೋಗಿ ಆದಿತ್ಯನಾಥ್ ಸರ್ಕಾರವನ್ನು ಪಕ್ಷಪಾತವೆಂದು ವಾಗ್ದಾಳಿ ನಡೆಸಿದ್ದಾರೆ. ಸಮೀಕ್ಷೆಯ ‘ತರಾತುರಿ’ ವಿಧಾನವು ದುರದೃಷ್ಟಕರವಾಗಿದೆ ಎಂದು ಹೇಳಿದರು.

ವಯನಾಡು ನೂತನ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ ರಾಜ್ಯ ಸರ್ಕಾರವನ್ನು ಟೀಕಿಸಿದ್ದು, ಸೂಕ್ಷ್ಮ ವಿಷಯವನ್ನು ಕೂಡಲೇ ಕೈಗೆತ್ತಿಕೊಳ್ಳುವಂತೆ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದರು.

ಮೊಘಲರ ಕಾಲದ ಜಾಮಾ ಮಸೀದಿಯನ್ನು ಬಾಬರ್ ಧ್ವಂಸ ಮಾಡುವ ಮೊದಲು ಹರಿಹರ ದೇವಸ್ಥಾನವಿತ್ತು ಎಂಬ ಅರ್ಜಿಯ ನಂತರ ಸ್ಥಳೀಯ ನ್ಯಾಯಾಲಯವು ಕಳೆದ ತಿಂಗಳು ಅದರ ಸಮೀಕ್ಷೆಗೆ ಆದೇಶಿಸಿತ್ತು. ನಂತರದ ಬೆಳವಣಿಗೆಯಲ್ಲಿ ಸಂಭಾಲ್ ಉದ್ವಿಗ್ನಗೊಂಡಿತು. ಮಂಗಳವಾರ ಒಂದು ಸುತ್ತಿನ ಸಮೀಕ್ಷೆ ನಡೆದಿದ್ದು, ಭಾನುವಾರ ಮತ್ತೊಂದು ಸುತ್ತಿನ ಸಮೀಕ್ಷೆ ನಡೆಸಲಾಗಿತ್ತು. ಆದರೆ, ನಿನ್ನೆ ಸಮೀಕ್ಷಾ ತಂಡ ಕೆಲಸ ಆರಂಭಿಸಿದಾಗ ಮಸೀದಿ ಬಳಿ ಗುಂಪು ಗುಂಪಾಗಿ ಜಮಾಯಿಸಿ ಘೋಷಣೆಗಳನ್ನು ಕೂಗಲು ಆರಂಭಿಸಿದರು. ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಪೂರ್ಣ ಪ್ರಮಾಣದ ಘರ್ಷಣೆಗೆ ಪರಿಸ್ಥಿತಿ ವಿಕೋಪಕ್ಕೆ ಹೋಗಿತ್ತು. ಪರಿಸ್ಥಿತಿಯನ್ನು ಹತೋಟಿಗೆ ತರಲು ಪೊಲೀಸರು ಬಲಪ್ರಯೋಗ ಮಾಡಬೇಕಾಯಿತು.

ಕೆಲವರು ಪೊಲೀಸರ ಮೇಲೆ ಕಲ್ಲು ತೂರಿದರು. ಆದರೆ, ಈಗ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ರಾಜೇಂದ್ರ ಪೆಸಿಯಾ ಹೇಳಿದರು. ಹಿಂಸಾಚಾರಕ್ಕೆ ಸಂಬಂಧಿಸಿದಂತೆ 400 ಜನರ ವಿರುದ್ಧ ಒಟ್ಟು ಏಳು ಪ್ರಕರಣಗಳನ್ನು ದಾಖಲಿಸಲಾಗಿದೆ.

ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ರಾಹುಲ್ ಗಾಂಧಿ, ಹಿಂಸಾಚಾರದಲ್ಲಿ ಸತ್ತವರಿಗೆ ಸಂತಾಪ ವ್ಯಕ್ತಪಡಿಸಿದ್ದಾರೆ. “ಆಡಳಿತವು ಎಲ್ಲ ಬದಿಗಳನ್ನು ಕೇಳಲಿಲ್ಲ, ಸಂವೇದನಾರಹಿತವಾಗಿ ವರ್ತಿಸಿತು. ಇದು ವಾತಾವರಣವನ್ನು ಹಾಳುಮಾಡಿತು ಮತ್ತು ಸಾವುಗಳಿಗೆ ಕಾರಣವಾಯಿತು. ಅವರಿಗೆ ಬಿಜೆಪಿ ಹೊಣೆಯಾಗಿದೆ” ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ಹೇಳಿದರು.

ಬಿಜೆಪಿಯು ಹಿಂದೂ ಮತ್ತು ಮುಸ್ಲಿಮರ ನಡುವೆ ಬಿರುಕು ಮೂಡಿಸುತ್ತಿದೆ ಎಂದು ಆರೋಪಿಸಿದ ರಾಹುಲ್, ಇದು ರಾಜ್ಯ ಅಥವಾ ದೇಶದ ಹಿತಾಸಕ್ತಿಯಲ್ಲ ಎಂದು ಹೇಳಿದರು. “ಈ ವಿಷಯದಲ್ಲಿ ಶೀಘ್ರವಾಗಿ ಮಧ್ಯಪ್ರವೇಶಿಸುವಂತೆ ನಾನು ಸುಪ್ರೀಂ ಕೋರ್ಟ್‌ಗೆ ಒತ್ತಾಯಿಸುತ್ತೇನೆ” ಎಂದು ಅವರು ಶಾಂತಿ ಮತ್ತು ಸೌಹಾರ್ದತೆಗೆ ಕರೆ ನೀಡಿದರು.

ಹೊಸದಾಗಿ ಚುನಾಯಿತ ಲೋಕಸಭಾ ಸಂಸದರಾದ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಸಂಭಾಲ್‌ನಲ್ಲಿನ ಉದ್ವಿಗ್ನತೆಗೆ ರಾಜ್ಯ ಸರ್ಕಾರವನ್ನು ದೂಷಿಸಿದರು. ಮಧ್ಯಪ್ರವೇಶಿಸುವಂತೆ ತನ್ನ ಸಹೋದರನ ಮನವಿಯನ್ನು ಸುಪ್ರೀಂ ಕೋರ್ಟ್‌ಗೆ ಪ್ರತಿಧ್ವನಿಸಿದರು. “ಶಾಂತಿ ಕಾಪಾಡಿಕೊಳ್ಳಲು ನಾನು ಜನರಿಗೆ ಮನವಿ ಮಾಡುತ್ತೇನೆ” ಎಂದು ಅವರು ಹೇಳಿದರು.

400 ಜನರ ವಿರುದ್ಧ ಏಳು ಪ್ರಕರಣ ದಾಖಲು

ಮಸೀದಿ ಸಮೀಕ್ಷೆಗೆ ಸಂಬಂಧಿಸಿದಂತೆ ಹಿಂಸಾಚಾರದಲ್ಲಿ ನಾಲ್ವರು ಸಾವನ್ನಪ್ಪಿದ ನಂತರ ಕನಿಷ್ಠ 25 ಜನರನ್ನು ಬಂಧಿಸಲಾಗಿದೆ. 400 ಜನರ ವಿರುದ್ಧ ಏಳು ಪ್ರಕರಣಗಳನ್ನು ದಾಖಲಿಸಲಾಗಿದೆ. ಸಂಭಾಲ್‌ನ ಸಮಾಜವಾದಿ ಪಕ್ಷದ ಸಂಸದ ಜಿಯಾವುರ್ ರೆಹಮಾನ್ ಬಾರ್ಕ್ ಮತ್ತು ಅವರ ಪಕ್ಷದ ಸಹೋದ್ಯೋಗಿ ಇಕ್ಬಾಲ್ ಮಹಮೂದ್ ಅವರ ಪುತ್ರ ನವಾಬ್ ಸುಹೇಲ್ ಇಕ್ಬಾಲ್ ಅವರ ವಿರುದ್ಧ ಆರೋಪ ಹೊರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೊಘಲರ ಕಾಲದ ಶಾಹಿ ಜಾಮಾ ಮಸೀದಿಯಲ್ಲಿ ಭಾನುವಾರ ಬೆಳಗ್ಗೆ ನ್ಯಾಯಾಲಯದ ಆದೇಶದ ಮೇರೆಗೆ ಸ್ಥಳೀಯರು ಮತ್ತು ಪೊಲೀಸರ ನಡುವೆ ಮಾರಣಾಂತಿಕ ಘರ್ಷಣೆಗೆ ಸಂಭಾಲ್ ಸಾಕ್ಷಿಯಾಗಿದೆ. ಮಸೀದಿಯನ್ನು ಹಿಂದೂ ದೇವಾಲಯದ ಸ್ಥಳದಲ್ಲಿ ನಿರ್ಮಿಸಲಾಗಿದೆ ಎಂಬ ವಿವಾದಾತ್ಮಕ ಕಾನೂನು ಹೋರಾಟದ ಕೇಂದ್ರವಾಗಿದೆ.

ಇದನ್ನೂ ಓದಿ; ಸಂಭಾಲ್‌ ಮಸೀದಿ ಸಮೀಕ್ಷೆ ಹಿಂಸಾಚಾರದಲ್ಲಿ ನಾಲ್ವರು ಸಾವು; ಇಂಟರ್ನೆಟ್ ಸ್ಥಗಿತ, ಶಾಲೆಗಳಿಗೆ ರಜೆ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...