Homeಮುಖಪುಟಸಂಭಾಲ್ ಸಂಸದ ಮತ್ತು ತಂದೆಗೆ ಮನೆಗೆ ನುಗ್ಗಿ ಕೊಲೆ ಬೆದರಿಕೆ: ಇದು ಪೊಲೀಸರ ಕರ್ತವ್ಯ ಸಡಿಲತೆಯ...

ಸಂಭಾಲ್ ಸಂಸದ ಮತ್ತು ತಂದೆಗೆ ಮನೆಗೆ ನುಗ್ಗಿ ಕೊಲೆ ಬೆದರಿಕೆ: ಇದು ಪೊಲೀಸರ ಕರ್ತವ್ಯ ಸಡಿಲತೆಯ ಫಲ ಎಂದ ಜನತೆ

- Advertisement -
- Advertisement -

ಸಂಭಾಲ್: ಶಾಹಿ ಜಾಮಾ ಮಸೀದಿಗೆ ಪ್ರವೇಶಿಸಲು ಯತ್ನಿಸಿದ ಯುವಕನೊಬ್ಬ ಬಂಧನಕ್ಕೊಳಗಾಗಿ ನಂತರ ಜಾಮೀನಿನ ಮೇಲೆ ಹೊರಬಂದು ಉತ್ತರ ಪ್ರದೇಶದ ಸಂಭಾಲ್‌ನ ಸಮಾಜವಾದಿ ಪಕ್ಷದ ಲೋಕಸಭಾ ಸದಸ್ಯ ಜಿಯಾವುರ್ ರೆಹಮಾನ್ ಬಾರ್ಕ್ ಮತ್ತು ಅವರ ತಂದೆ ಮೌಲಾನಾ ಮಮ್ಲೌಕ್-ಉರ್-ರೆಹಮಾನ್ ಬಾರ್ಕ್ ಅವರಿಗೆ  ಜೀವ ಬೆದರಿಕೆ ಹಾಕಿರುವ ಘಟನೆ ವರದಿಯಾಗಿದೆ.

ಡಿಸೆಂಬರ್ 26ರಂದು ನಖಾಸಾ ಪೊಲೀಸ್ ಠಾಣೆ ವ್ಯಾಪ್ತಿಯ ಮೊಹಲ್ಲಾ ದೀಪಾ ಸರಾಯ್‌ನಲ್ಲಿರುವ ಸಂಸದರ ನಿವಾಸದಲ್ಲಿ ಈ ಬೆದರಿಕೆಯ ಘಟನೆ ನಡೆದಿರುವುದು ವರದಿಯಾಗಿದೆ.

ಈ ಸಂಬಂಧ ಸಂಸದರ ನಿವಾಸದ ಉಸ್ತುವಾರಿ ಕಾಮಿಲ್ ದೂರು ದಾಖಲಿಸಿದ್ದಾರೆ. ದೂರಿನ ಪ್ರಕಾರ ಯುವಕ ಮನೆಗೆ ನುಗ್ಗಿ ಸಂಸದ ಮತ್ತು ಅವರ ತಂದೆ ಇಬ್ಬರಿಗೂ ಕೊಲೆ ಬೆದರಿಕೆ ಹಾಕಿದ್ದಾನೆ. ಆರೋಪಿಯು ಸಂಸದರ ಕುಟುಂಬಕ್ಕೆ ಬೆದರಿಕೆ ಹಾಕಲು ಪ್ರಯತ್ನಿಸುತ್ತಿದ್ದಾಗ ಪರಿಸ್ಥಿತಿ ವಿಕೋಪಕ್ಕೆ ತಿರುಗಿತು. ಆದರೆ ಜನರು ಜಮಾಯಿಸುತ್ತಿದ್ದಂತೆ ಆತ ಸ್ಥಳದಿಂದ ಪರಾರಿಯಾಗಿದ್ದಾನೆ ಎನ್ನಲಾಗಿದೆ.

ಡಿಸೆಂಬರ್ 20ರಂದು, ಅದೇ ವ್ಯಕ್ತಿ, ಹಣೆಗೆ ತಿಲಕ ಮತ್ತು ಕುತ್ತಿಗೆಯಲ್ಲಿ ಕುಂಕುಮದ ಟವಲ್ ಧರಿಸಿ, ಬಿಗಿ ಭದ್ರತೆಯ ನಡುವೆ ಶುಕ್ರವಾರದ ಪ್ರಾರ್ಥನೆಯ ಸಮಯದಲ್ಲಿ ಜಾಮಾ ಮಸೀದಿಗೆ ಪ್ರವೇಶಿಸಲು ಪ್ರಯತ್ನಿಸಿದನು. ಆತನ ನಡವಳಿಕೆಗಳು ಉದ್ವಿಗ್ನತೆಯನ್ನು ಹೆಚ್ಚಿಸಿತು ಮತ್ತು ಜಾಮೀನಿನ ಮೇಲೆ ಬಿಡುಗಡೆ ಮಾಡುವ ಮೊದಲು ಶಾಂತಿಯನ್ನು ಉಲ್ಲಂಘಿಸಿದ್ದಕ್ಕಾಗಿ ಆತನನ್ನು ಬಂಧಿಸಲಾಗಿತ್ತು.

ಕಾಮಿಲ್ ನೀಡಿದ ದೂರಿನ ಮೇರೆಗೆ ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಎಸ್‌ಪಿ ಕೃಷ್ಣ ಕುಮಾರ್ ಬಿಷ್ಣೋಯ್ ಪ್ರತಿಕ್ರಿಯಿಸಿ, “ನಾವು ಜೀವ ಬೆದರಿಕೆಗೆ ಸಂಬಂಧಿಸಿದಂತೆ ಪ್ರಕರಣವನ್ನು ದಾಖಲಿಸಿಕೊಂಡಿದ್ದೇವೆ ಮತ್ತು ವಿಷಯವನ್ನು ಕೂಲಂಕಷವಾಗಿ ತನಿಖೆ ನಡೆಸುತ್ತಿದ್ದೇವೆ. ಫಲಿತಾಂಶದ ಆಧಾರದ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು” ಎಂದಿದ್ದಾರೆ.

ಕುತೂಹಲಕಾರಿ ಎಂದರೆ, ಆರೋಪಿಯನ್ನು ಈ ಹಿಂದೆ ಪೊಲೀಸ್ ಅಧಿಕಾರಿಗಳು “ಮಾನಸಿಕ ಅಸ್ವಸ್ಥ” ಎಂದು ಹೇಳಿದ್ದರು. ಆದಾಗ್ಯೂ, ಈ ಸಮರ್ಥನೆಯು ವಿವಿಧ ವಲಯಗಳಿಂದ ಭಾರೀ ಟೀಕೆಗೆ ಒಳಗಾಗಿದೆ. ಅನೇಕರು ಇಂತಹ ಘಟನೆಗಳ ನಿರ್ವಹಣೆಯನ್ನು ಪ್ರಶ್ನಿಸಿದ್ದಾರೆ.

ಈ ಘಟನೆಯು ಸ್ಥಳೀಯ ಸಮುದಾಯಕ್ಕೆ ಆಘಾತದ ಅಲೆಯನ್ನು ಎಬ್ಬಿಸಿದೆ. ವಿಶೇಷವಾಗಿ ಮುಸ್ಲಿಂ ಜನಸಂಖ್ಯೆಯಲ್ಲಿ ಈ ಕೃತ್ಯ ದೊಡ್ಡ ಮಾದರಿಯ ಬೆದರಿಕೆಯ ಭಾಗವಾಗಿ ಕಂಡಿದೆ ಎಂದು ನಿವಾಸಿಯೊಬ್ಬರು ತಮ್ಮ ಕಳವಳವನ್ನು ವ್ಯಕ್ತಪಡಿಸುತ್ತಾ, “ಇಂತಹ ಕ್ರಮಗಳು ಪ್ರತ್ಯೇಕವಾಗಿಲ್ಲ. ಅವರು ನಮ್ಮ ಸಮುದಾಯದ ಸದಸ್ಯರನ್ನು ಗುರಿಯಾಗಿಸಿದ್ದಾರೆ ಮತ್ತು ಅಪರಾಧಿಗಳಿಗೆ ಗಂಭೀರ ಕ್ರಮದ ಪರಿಣಾಮಗಳಿಲ್ಲದ  ಕಾರಣ ಇಂತಹ ಬೆದರಿಕೆ ಹಾಕುವಂತೆ ಪ್ರೇರೇಪಿಸುತ್ತಿದೆ” ಎಂದಿದ್ದಾರೆ.

ರಾಜಕೀಯ ಮುಖಂಡರು ಘಟನೆಯನ್ನು ಖಂಡಿಸಿದ್ದು, ಪೊಲೀಸರು ತನಿಖೆಯನ್ನು ಚುರುಕುಗೊಳಿಸಿ ನ್ಯಾಯ ಒದಗಿಸಬೇಕೆಂದು ಒತ್ತಾಯಿಸಿದ್ದಾರೆ. ಸಮಾಜವಾದಿ ಪಕ್ಷದ ಸದಸ್ಯರೊಬ್ಬರು, “ಇದು ಕೇವಲ ಒಬ್ಬ ವ್ಯಕ್ತಿ ಅಥವಾ ಅವನ ಕುಟುಂಬದ ಮೇಲಿನ ದಾಳಿಯಲ್ಲ; ಇದು ಪ್ರಜಾಪ್ರಭುತ್ವದ ಮೇಲಿನ ದಾಳಿಯಾಗಿದೆ. ಚುನಾಯಿತ ಪ್ರತಿನಿಧಿಗೆ ಬೆದರಿಕೆ ಹಾಕುವುದು ಗಂಭೀರ ಅಪರಾಧವಾಗಿದೆ ಮತ್ತು ಅಂತಹ ಕೃತ್ಯಗಳನ್ನು ಕ್ಷುಲ್ಲಕಗೊಳಿಸಬಾರದು ಎಂದಿದ್ದಾರೆ.

ಡಿಸೆಂಬರ್ 20ರಂದು ಜಮಾ ಮಸೀದಿಯನ್ನು ಪ್ರವೇಶಿಸಲು ಪ್ರಯತ್ನಿಸಿದ ಆರೋಪಿಯ ಹಿಂದಿನ ಪ್ರಯತ್ನವು ಎಲ್ಲರನ್ನು ಹುಬ್ಬೇರಿಸಿದೆ. ಏಕೆಂದರೆ ಅದು ಶುಕ್ರವಾರದ ಪ್ರಾರ್ಥನೆಯ ದಿನವಾಗಿದೆ. ಇದು ಮುಸ್ಲಿಂ ಸಮುದಾಯಕ್ಕೆ ಸೂಕ್ಷ್ಮ ಸಮಯವಾಗಿದೆ. ಕಟ್ಟುನಿಟ್ಟಿನ ಭದ್ರತಾ ಕ್ರಮಗಳ ಹೊರತಾಗಿಯೂ, ಇಂತಹ ನಡೆಗಳು ಆತಂಕವನ್ನು ಉಂಟುಮಾಡಿವೆ. ಸ್ಥಳೀಯ ಧರ್ಮಗುರುವೊಬ್ಬರು, “ನಮ್ಮ ಧಾರ್ಮಿಕ ಕೂಟಗಳ ಸಾಮರಸ್ಯವನ್ನು ಕೆರಳಿಸುವ ಮತ್ತು ಭಂಗಗೊಳಿಸುವ ಉದ್ದೇಶಪೂರ್ವಕ ಪ್ರಯತ್ನ ನಡೆಯುತ್ತಿರುವಂತೆ ತೋರುತ್ತಿದೆ. ಈ ಕೃತ್ಯಗಳಿಗೆ ಪೊಲೀಸ್ ಅಧಿಕಾರಿಗಳು ಕಡಿವಾಣ ಹಾಕುವ ನಿಟ್ಟಿನಲ್ಲಿ ಹೆಜ್ಜೆಹಾಕಬೇಕು” ಎಂದು ಹೇಳಿದ್ದಾರೆ.

ಹಿಂದಿನ ಘಟನೆಯ ನಂತರ ಆರೋಪಿ ಜಾಮೀನಿನ ಮೇಲೆ ಬಿಡುಗಡೆಯಾದ ಬಗ್ಗೆಯೂ ಪರಿಶೀಲನೆ ನಡೆಸಲಾಗಿದೆ. ಇಂತಹ ಸಂದರ್ಭಗಳಲ್ಲಿ ಮೃದುತ್ವ ನೀತಿಯು ತಮ್ಮ ಕ್ರಿಯೆಗಳನ್ನು ಪುನರಾವರ್ತಿಸಲು ವ್ಯಕ್ತಿಗಳಿಗೆ ಧೈರ್ಯವನ್ನು ನೀಡುತ್ತದೆ ಎಂದು ಅವರು ವಾದಿಸಿದ್ದಾರೆ.

ಹೆಚ್ಚುತ್ತಿರುವ ಕೋಮು ಉದ್ವಿಗ್ನತೆಯ ನಡುವೆ, ನಾಯಕರು ಮತ್ತು ಕಾರ್ಯಕರ್ತರು ಶೀಘ್ರ ನ್ಯಾಯಕ್ಕಾಗಿ ಮತ್ತು ಅಪರಾಧಿಯ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ. ರಾಜಕೀಯ ವಿಶ್ಲೇಷಕರೊಬ್ಬರು, “ಇಂತಹ ಘಟನೆಗಳು ಅನಿಯಂತ್ರಿತವಾಗಿ ಹೋದರೆ, ಅವು ಕಾನೂನಿನ ನಿಯಮವನ್ನು ದುರ್ಬಲಗೊಳಿಸುವ ಮತ್ತು ನ್ಯಾಯ ವ್ಯವಸ್ಥೆಯಲ್ಲಿ ಸಾರ್ವಜನಿಕ ನಂಬಿಕೆಯನ್ನು ಕುಗ್ಗಿಸುವ ಅಪಾಯವನ್ನುಂಟುಮಾಡುತ್ತವೆ. ಅಧಿಕಾರಿಗಳು ನಿರ್ಣಾಯಕವಾಗಿ ಕಾರ್ಯನಿರ್ವಹಿಸಬೇಕು ಎಂದಿದ್ದಾರೆ.

ಸಂಸದ ಬಾರ್ಕ್ ಮತ್ತು ಅವರ ತಂದೆಯ ವಿರುದ್ಧದ ಬೆದರಿಕೆಯು ಪ್ರಸ್ತುತ ಸಾಮಾಜಿಕ-ರಾಜಕೀಯ ವಾತಾವರಣದಲ್ಲಿ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ಸವಾಲುಗಳನ್ನು ಒತ್ತಿಹೇಳುತ್ತದೆ. ಈ ಘಟನೆಯು ಜಾಗರೂಕತೆ, ನಿಷ್ಪಕ್ಷಪಾತ ಕಾನೂನು ಜಾರಿ ಮತ್ತು ಎಲ್ಲಾ ನಾಗರಿಕರ ಹಕ್ಕುಗಳು ಮತ್ತು ಘನತೆಯನ್ನು ಎತ್ತಿಹಿಡಿಯುವ ಬದ್ಧತೆಯ ಅಗತ್ಯತೆಯನ್ನು ಒತ್ತಿ ಹೇಳುತ್ತದೆ ಎಂದು ತಿಳಿಸಿದ್ದಾರೆ.

ತನಿಖೆಗಳು ಮುಂದುವರಿದಂತೆ ನ್ಯಾಯವನ್ನು ಒದಗಿಸುವುದನ್ನು ಖಚಿತಪಡಿಸಿಕೊಳ್ಳಲು ಅಧಿಕಾರಿಗಳ ಮೇಲೆ ಜವಾಬ್ದಾರಿ ಉಳಿದಿದೆ ಮತ್ತು ಇಂತಹ ಬೆದರಿಕೆಗಳನ್ನು ಲಘುವಾಗಿ ತೆಗೆದುಕೊಳ್ಳಬಾರದು. ಅವರು ಸಮುದಾಯವನ್ನು ಲೆಕ್ಕಿಸದೆ ಎಲ್ಲಾ ವ್ಯಕ್ತಿಗಳ ಸುರಕ್ಷತೆ ಮತ್ತು ಭದ್ರತೆಯನ್ನು ಖಾತ್ರಿಪಡಿಸಬೇಕು ಎಂದು ಅವರು ಹೇಳಿದ್ದಾರೆ.

ಮಹಾರಾಷ್ಟ್ರ: ಶುಕ್ರವಾರದ ಪ್ರಾರ್ಥನೆಗೆ ಮುಸ್ಲಿಮರಿಗೆ ಗ್ರಾಮ ಪ್ರವೇಶಿಸಲು ನಿಷೇಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಕ್ಕಳು ಸೇರಿದಂತೆ ಪ್ರತಿಯೊಬ್ಬರಿಗೂ ಇಂಟರ್‌ನೆಟ್ ಬಳಕೆ ಮೂಲಭೂತ ಹಕ್ಕು : ಸುಪ್ರೀಂ ಕೋರ್ಟ್

ಮಹತ್ವದ ತೀರ್ಪಿನಲ್ಲಿ, ಸಂವಿಧಾನದ 21 ಮತ್ತು 19(1)(ಎ) ವಿಧಿಗಳ ಅಡಿಯಲ್ಲಿ ಇಂಟರ್‌ನೆಟ್ ಪಡೆಯುವ ಮತ್ತು ಬಳಸುವ ಹಕ್ಕನ್ನು ಸುಪ್ರೀಂ ಕೋರ್ಟ್ 'ಮೂಲಭೂತ ಹಕ್ಕು' ಎಂದು ಘೋಷಿಸಿದೆ. ಮಕ್ಕಳು ಸೇರಿದಂತೆ ಪ್ರತಿಯೊಬ್ಬ ವ್ಯಕ್ತಿಗೂ ಈ...

ಸಿಜೆಐ ಸೂರ್ಯಕಾಂತ್ ವಿರುದ್ಧದ ಪೋಸ್ಟ್: ಕೇರಳ ಕಾಂಗ್ರೆಸ್ ಅಧ್ಯಕ್ಷರಿಗೆ ಎಸ್‌ಸಿಬಿಎ ಜಂಟಿ ಕಾರ್ಯದರ್ಶಿಯಿಂದ ಲೀಗಲ್ ನೋಟಿಸ್!

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯಕಾಂತ್ ಅವರನ್ನು ಗುರಿಯಾಗಿಸಿ ಕೇರಳ ಕಾಂಗ್ರೆಸ್‌ನ ಅಧಿಕೃತ ಎಕ್ಸ್ (X) ಖಾತೆಯಿಂದ ಮಾಡಲಾಗಿತ್ತು ಎನ್ನಲಾದ ಪೋಸ್ಟ್‌ಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್‌ನ (SCBA) ಜಂಟಿ...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ನೇಹಾ ಬೋರಾ ಬಿಡುಗಡೆ : ಅಭಿಜಿತ್ ದೀಪ್ಕೆಯನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಿರುವ ಪೊಲೀಸರು

ಶುಕ್ರವಾರ (ಅಕ್ಟೋಬರ್ 16) ಬಂಧಿತರಾಗಿದ್ದ ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ (ಎಐಎಸ್‌ಎ) ಅಧ್ಯಕ್ಷೆ ನೇಹಾ ಬೋರಾ ಅವರನ್ನು ಶನಿವಾರ (ಅ.17) ಮುಂಜಾನೆ ಬಿಡುಗಡೆ ಮಾಡಲಾಗಿದ್ದು, ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜಿತ್...

ಬೆಂಗಳೂರಿನಲ್ಲಿ ತಿರಂಗ ಯಾತ್ರೆಗೆ ಪೊಲೀಸರ ಷರತ್ತುಬದ್ಧ ಅನುಮತಿ: ಪ್ರತಿಭಟನೆ, ಘೋಷಣೆಗಳಿಗೆ ನಿರ್ಬಂಧ

ಬೆಂಗಳೂರು: ದೆಹಲಿಯಲ್ಲಿ ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆ ವಿಚಾರವಾಗಿ ರಾಜಕೀಯ ಸಂಘರ್ಷ ತೀವ್ರಗೊಂಡಿರುವ ಬೆನ್ನಲ್ಲೇ, ಬೆಂಗಳೂರಿನಲ್ಲಿ ಅಕ್ಟೋಬರ್ 16ರಂದು ಟೌನ್ ಹಾಲ್‌ನಿಂದ ಬನ್ನಪ್ಪ ಪಾರ್ಕ್‌ನಲ್ಲಿರುವ ಕ್ವಿಟ್ ಇಂಡಿಯಾ ಸ್ಮಾರಕದವರೆಗೆ ಹಮ್ಮಿಕೊಂಡಿರುವ ತಿರಂಗ...

ಸುಪ್ರೀಂ ವಿಚಾರಣೆಗೆ ಸಜ್ಜಾಗುತ್ತಿದ್ದಂತೆ ಸಿಜೆಪಿಯ ತಿರಂಗಾ ಮೆರವಣಿಗೆ ಆರಂಭ; ಪೊಲೀಸರ ನೋಟಿಸ್ ಧಿಕ್ಕರಿಸಿ ತೆರಳುತ್ತಿದ್ದ ಅಭಿಜೀತ್ ದೀಪ್ಕೆ ವಶಕ್ಕೆ

ನವದೆಹಲಿ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವ ಹಕ್ಕಿನ ಕುರಿತ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಜ್ಜಾಗುತ್ತಿದ್ದ ಬೆನ್ನಲ್ಲೇ, ದೆಹಲಿ ಪೊಲೀಸರ ಸೂಚನೆಯನ್ನು ಧಿಕ್ಕರಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ‘ಲೆಹ್ರಾ ದೋ ತಿರಂಗಾ’...

‘ದಿಮಾಗಿ ನಕ್ಸಲ್’, ‘ದೇಶದ್ರೋಹಿ’ ಎಂದು ಪಟ್ಟ ಕಟ್ಟುವುದು ಅಧಿಕಾರ ಕಳೆದುಕೊಳ್ಳುವ ಭೀತಿಯ ಸಂಕೇತ”: ಮೋದಿ-ಅಮಿತ್ ಶಾ ವಿರುದ್ಧ ಪವನ್ ಖೇರಾ ವಾಗ್ದಾಳಿ!

ನವದೆಹಲಿ: ಕೇಂದ್ರದ ಬಿಜೆಪಿ ಸರ್ಕಾರವು ತನ್ನ ನೀತಿಗಳು ಮತ್ತು ನಡೆಯನ್ನು ಪ್ರಶ್ನಿಸುವ ನಾಗರಿಕರಿಗೆ ‘ರಾಷ್ಟ್ರವಿರೋಧಿ’, ‘ಎಡಪಂಥೀಯ’ ಹಾಗೂ ‘ದಿಮಾಗಿ ನಕ್ಸಲ್’ ಎಂದು ಪಟ್ಟ ಕಟ್ಟುತ್ತಿರುವುದು ಅದರ ಅಧಿಕಾರ ಕಳೆದುಕೊಳ್ಳುವ ಭೀತಿಯನ್ನು ತೋರಿಸುತ್ತದೆ ಎಂದು...

ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆಗೆ ಹೆಚ್ಚಿದ ನಿರ್ಬಂಧ: 25 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ, ಸೆಂಟ್ರಲ್ ಪಾರ್ಕ್ ಬಂದ್

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)...

ಸಿಜೆಪಿಯ ತಿರಂಗಾ ಮೆರವಣಿಗೆ: ಸೆಂಟ್ರಲ್ ಪಾರ್ಕ್ ಮುಚ್ಚುವಿಕೆ ಪ್ರಶ್ನಿಸಿದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ದೆಹಲಿಯ ಕನ್ನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್ ಮುಚ್ಚುವ ನವದೆಹಲಿ ಮುನ್ಸಿಪಲ್ ಕೌನ್ಸಿಲ್ (ಎನ್‌ಡಿಎಂಸಿ) ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಕಾಕ್ರೋಚ್ ಜನತಾ ಪಾರ್ಟಿ...

ದೆಹಲಿ ಬಿಟ್ಟು ರಿಲಯನ್ಸ್ ರಿಫೈನರಿ ಇರುವ ಜಾಮ್‌ನಗರಕ್ಕೆ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಭೇಟಿ: ಮೋದಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ!

ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೋ ರುಬಿಯೋ ಅವರ ಮುಂಬರುವ ಭಾರತ ಭೇಟಿ ಹಾಗೂ ವಿದೇಶಾಂಗ ಸಚಿವಾಲಯದ ನಿರ್ಧಾರಗಳ ಕುರಿತು ವಿಪಕ್ಷ ನಾಯಕ ರಾಹುಲ್ ಗಾಂಧಿ ವಿಮರ್ಶಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ...

ದೆಹಲಿ ಪ್ರತಿಭಟನೆ: ‘ತಿರಂಗ ಹಾರಿಸಿದ್ದಕ್ಕೆ ಜೈಲಿಗೆ ಹೋಗಲೂ ಸಿದ್ಧ’: ಮೋದಿ ಸರ್ಕಾರದ ವಿರುದ್ಧ ಅಭಿಜೀತ್ ದೀಪ್ಕೆ ತೀವ್ರ ವಾಗ್ದಾಳಿ

ನವದೆಹಲಿ: ರಾಷ್ಟ್ರಧ್ವಜ ಹಾರಿಸುವುದನ್ನೇ ಅಪರಾಧವೆಂದು ಪರಿಗಣಿಸುವ ಪರಿಸ್ಥಿತಿ ದೇಶದಲ್ಲಿ ನಿರ್ಮಾಣವಾಗಿದೆಯೇ ಎಂದು ಪ್ರಶ್ನಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ತಿರಂಗ ಹಾರಿಸಿದ್ದಕ್ಕಾಗಿ ಜೈಲಿಗೆ ಹೋಗಬೇಕಾದರೂ ಸಿದ್ಧ ಎಂದು ಘೋಷಿಸಿದ್ದಾರೆ....