ಉತ್ತರ ಪ್ರದೇಶದ ಸಂಭಾಲ್‌ನ ಶಾಹಿ ಜಾಮಿಯ ಮಸೀದಿಯಲ್ಲಿ ಹವನ ಮತ್ತು ಪೂಜೆ ಸೇರಿದಂತೆ ಹಿಂದೂ ಆಚರಣೆಗಳನ್ನು ಮಾಡಲು ಯತ್ನಿಸಿದ ಆರೋಪದ ಮೇಲೆ ದೆಹಲಿ ಮೂಲದ ಮೂವರು ದುಷ್ಕರ್ಮಿಗಳನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶುಕ್ರವಾರದ ಪ್ರಾರ್ಥನೆಯ ಕಾರಣಕ್ಕೆ ಮಸೀದಿಯಲ್ಲಿ ಈಗಾಗಲೇ ಭಾರೀ ಭದ್ರತೆಯನ್ನು ನಿಯೋಜಿಸಲಾಗಿತ್ತು. ಸಂಭಾಲ್
ಪೊಲೀಸ್ ವರಿಷ್ಠಾಧಿಕಾರಿ ಕೃಷ್ಣ ಕುಮಾರ್ ಬಿಷ್ಣೋಯ್ ಬಂಧನಗಳನ್ನು ದೃಢಪಡಿಸಿದ್ದು, ಮಸೀದಿ ಬಳಿ ಕಾರಿನಲ್ಲಿ ಬಂದ ಮೂವರು ದುಷ್ಕರ್ಮಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಅವರು ಹೇಳಿದ್ದಾರೆ. ಬಂಧಿತ ದುಷ್ಕರ್ಮಿಗಳಲ್ಲಿ ಸನಾತನ್ ಸಿಂಗ್, ವೀರ್ ಸಿಂಗ್ ಯಾದವ್ ಮತ್ತು ಅನಿಲ್ ಸಿಂಗ್ ಎಂದು ಗುರುತಿಸಲಾಗಿದೆ.
ದುಷ್ಕರ್ಮಿಗಳನ್ನು ಪೊಲೀಸ್ ಠಾಣೆಗೆ ಕಳುಹಿಸಿದ್ದು, ಸಾರ್ವಜನಿಕ ಸುವ್ಯವಸ್ಥೆಗೆ ಭಂಗ ತಂದಿದ್ದಕ್ಕಾಗಿ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ. “ಭವಿಷ್ಯದಲ್ಲಿ ಸಂಭಾಲ್‌ಗೆ ಪ್ರವೇಶಿಸದಂತೆ ಅವರಿಗೆ ಎಚ್ಚರಿಕೆ ನೀಡಲಾಗುವುದು” ಎಂದು ತಿಳಿಸಿದ್ದಾರೆ. ಕೋಮು ಸಾಮರಸ್ಯವನ್ನು ಭಂಗಗೊಳಿಸುವ ಯಾವುದೇ ಪ್ರಯತ್ನವನ್ನು ಕಟ್ಟುನಿಟ್ಟಾಗಿ ಎದುರಿಸಲಾಗುವುದು ಎಂದು ಅಧಿಕಾರಿ ಒತ್ತಿ ಹೇಳಿದ್ದಾರೆ.
ಶಾಹಿ ಜಾಮಿಯ ಮಸೀದಿಯಲ್ಲಿ ನಡೆದ ಸಮೀಕ್ಷೆಯನ್ನು ವಿರೋಧಿಸಿ ಕಳೆದ ವರ್ಷ ನವೆಂಬರ್ 24 ರಂದು ಸ್ಥಳೀಯರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ಭುಗಿಲೆದ್ದ ಹಿಂಸಾಚಾರದಲ್ಲಿ ನಾಲ್ವರು ಸಾವನ್ನಪ್ಪಿದ್ದರು. ಪ್ರಸ್ತುತ ಮಸೀದಿಯು ಕೆಡವಲ್ಪಟ್ಟ ಹಿಂದೂ ದೇವಸ್ಥಾನದ ಸ್ಥಳದಲ್ಲಿದೆ ಎಂದು ಪ್ರತಿಪಾದಿಸಿ ಬಿಜೆಪಿ ಪರ ಬೆಂಬಲಿಗರು ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಾಲಯವು ಸಮೀಕ್ಷೆಗೆ ಆದೇಶಿಸಿತ್ತು.
ಭದ್ರತಾ ಸಿಬ್ಬಂದಿ ಸೇರಿದಂತೆ ಹಲವಾರು ಜನರಿಗೆ ಗಾಯಗಳಾಗಿದ್ದರಿಂದ ನಡೆದ ಹಿಂಸಾಚಾರವು ಸಂಭಾಲ್ ಅನ್ನು ಕೋಮು ಉದ್ವಿಗ್ನತೆಗೆ ತಳ್ಳಿದೆ. ಸಂಭಾಲ್
ಇಲ್ಲಿ ಕ್ಲಿಕ್ ಮಾಡಿ
ಇದನ್ನೂಓದಿ: ವಕ್ಫ್ ಮಸೂದೆ ವಿರುದ್ಧ ವಿಜಯ್ ನೇತೃತ್ವದ ಟಿವಿಕೆ ಪ್ರತಿಭಟನೆ; ಕಾನೂನು ಸಮರದ ಎಚ್ಚರಿಕೆ
ವಕ್ಫ್ ಮಸೂದೆ ವಿರುದ್ಧ ವಿಜಯ್ ನೇತೃತ್ವದ ಟಿವಿಕೆ ಪ್ರತಿಭಟನೆ; ಕಾನೂನು ಸಮರದ ಎಚ್ಚರಿಕೆ

