Homeಮುಖಪುಟಸಂಭಾಲ್ ಹಿಂಸಾಚಾರ | ಆರೋಪಿಗಳ ಪೋಸ್ಟರ್‌ ಪ್ರದರ್ಶನಕ್ಕೆ ಸಜ್ಜಾದ ಜಿಲ್ಲಾಡಳಿತ

ಸಂಭಾಲ್ ಹಿಂಸಾಚಾರ | ಆರೋಪಿಗಳ ಪೋಸ್ಟರ್‌ ಪ್ರದರ್ಶನಕ್ಕೆ ಸಜ್ಜಾದ ಜಿಲ್ಲಾಡಳಿತ

- Advertisement -
- Advertisement -

ಸಂಭಾಲ್‌ನ ಮಸೀದಿಯ ಸಮೀಕ್ಷೆಯ ಮೇಲೆ ಭುಗಿಲೆದ್ದ ಹಿಂಸಾಚಾರದಲ್ಲಿ ಭಾಗಿಯಾಗಿರುವವರ ಪೋಸ್ಟರ್‌ಗಳನ್ನು ಸಾರ್ವಜನಿಕ ಗೋಡೆಗಳ ಮೇಲೆ ಹಾಕಲಾಗುವುದು ಎಂದು ಸಂಭಾಲ್ ಜಿಲ್ಲಾ ಮ್ಯಾಜಿಸ್ಟ್ರೇಟ್ ರಾಜೇಂದರ್ ಪೆನ್ಸಿಯಾ ಗುರುವಾರ ಹೇಳಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. “ಹಿಂಸಾಚಾರದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ 400 ಕ್ಕೂ ಹೆಚ್ಚು ವ್ಯಕ್ತಿಗಳನ್ನು ಅಧಿಕಾರಿಗಳು ಗುರುತಿಸಿದ್ದಾರೆ ಮತ್ತು 32 ಮಂದಿಯನ್ನು ಬಂಧಿಸಲಾಗಿದೆ. ಅವರ ಪೋಸ್ಟರ್‌ಗಳನ್ನು ವಿನ್ಯಾಸಗೊಳಿಸಲಾಗುತ್ತಿದೆ ಮತ್ತು ಶೀಘ್ರದಲ್ಲೇ ಹಾಕಲಾಗುವುದು” ಎಂದು ಪೆನ್ಸಿಯಾ ಹೇಳಿದ್ದಾರೆ. ಸಂಭಾಲ್ ಹಿಂಸಾಚಾರ

ನವೆಂಬರ್ 24 ರಂದು, ಉತ್ತರ ಪ್ರದೇಶದ ಸಂಭಾಲ್‌ನಲ್ಲಿ ಮುಸ್ಲಿಮರ ಗುಂಪು ಚಂದೌಸಿ ಪಟ್ಟಣದ ಶಾಹಿ ಜಾಮಾ ಮಸೀದಿಯ ಸಮೀಕ್ಷೆಯನ್ನು ವಿರೋಧಿಸಿದ ನಂತರ ಹಿಂಸಾಚಾರ ಭುಗಿಲೆದ್ದಿತ್ತು. 1526 ರ ಮೊಘಲ್ ಕಾಲದ ಮಸೀದಿಯನ್ನು ದೇವಾಲಯದ ಮೇಲೆ ಕಟ್ಟಲಾಗಿದೆ ಎಂದು ಬಿಜೆಪಿ ಪರ ಸಂಘಟನೆಗಳು ಅರೋಪಿಸಿ ಕೋರ್ಟ್‌ನಲ್ಲಿ ಅರ್ಜಿ ದಾಖಲಿಸಿತ್ತು. ಇದನ್ನು ಪರಿಗಣಿಸಿದ ನ್ಯಾಯಾಲಯ ಮಸೀದಿಯ ಸಮೀಕ್ಷೆಗೆ ಆದೇಶ ನೀಡಿತ್ತು. ಸಮೀಕ್ಷೆ ವೇಳೆ ನಡೆದ ಹಿಂಸಾಚಾರದಲ್ಲಿ ಐವರು ಸಾವನ್ನಪ್ಪಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ನವೆಂಬರ್ 27 ರಂದು ಉತ್ತರ ಪ್ರದೇಶ ಸರ್ಕಾರವು, ಹಿಂಸಾಚಾರ ನಡೆಸಿದ ವ್ಯಕ್ತಿಗಳು ಸಾರ್ವಜನಿಕ ಆಸ್ತಿಯ ಹಾನಿಯನ್ನು ಪಾವತಿಸುವಂತೆ ಮತ್ತು ಸಾರ್ವಜನಿಕ ಗೋಡೆಗಳ ಮೇಲೆ ಅವರ ಚಿತ್ರಗಳನ್ನು ಪ್ರದರ್ಶಿಸುವಂತೆ ಮಾಡುವುದಾಗಿ ಹೇಳಿತ್ತು. ಇದನ್ನು ಮುಖ್ಯಮಂತ್ರಿ ಆದಿತ್ಯನಾಥ್ ಅವರು ಬುಧವಾರ ಪುನರುಚ್ಚರಿಸಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಸಂಭಾಲ್ ಹಿಂಸಾಚಾರ

“ತೊಂದರೆ ಉಂಟುಮಾಡುವವರಿಂದ ಉಂಟಾದ ಸಾರ್ವಜನಿಕ ಆಸ್ತಿ ಹಾನಿಯನ್ನು ಸರಿಪಡಿಸುವ ವೆಚ್ಚವನ್ನು ಅವರಿಂದ ವಸೂಲಿ ಮಾಡಬೇಕು. ಅಶಾಂತಿ ಸೃಷ್ಟಿಸಲು ಕಾರಣರಾದವರನ್ನು ಗುರುತಿಸಿ, ಅವರ ಪೋಸ್ಟರ್‌ಗಳನ್ನು ಹಾಕಿ. ಸಾರ್ವಜನಿಕ ಬೆಂಬಲವನ್ನು ಪಡೆದು ವ್ಯಾಪಕ ಶೋಧ ಕಾರ್ಯಾಚರಣೆಗಳನ್ನು ನಡೆಸಿ. ಯಾವುದೇ ಅಪರಾಧಿ ತಪ್ಪಿಸಿಕೊಳ್ಳಬಾರದು” ಎಂದು ” ಎಂದು ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಆದಿತ್ಯನಾಥ್ ಹೇಳಿದ್ದಾರೆ.

ಗುರುವಾರ ಅಯೋಧ್ಯೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಮುಖ್ಯಮಂತ್ರಿ, “ಅಯೋಧ್ಯೆ, ಸಂಭಾಲ್ ಮತ್ತು ಬಾಂಗ್ಲಾದೇಶದ ಹಿಂಸಾಚಾರದ ನಡುವೆ ಸಾಮ್ಯತೆಯಿದೆ. ಮೂವರ ಸ್ವಭಾವ ಮತ್ತು ಡಿಎನ್‌ಎ ಒಂದೇ ಆಗಿದೆ” ಎಂದು ಆದಿತ್ಯನಾಥ್ ಹೇಳಿರುವುದಾಗಿ ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

2020 ರಲ್ಲಿ ಕೂಡಾ ಉತ್ತರ ಪ್ರದೇಶ ಸರ್ಕಾರವು ವಿವಾದಾಸ್ಪದ ನಾಗರಿಕ ತಿದ್ದುಪಡಿ ಕಾಯ್ದೆಯ ವಿರುದ್ಧದ ಪ್ರತಿಭಟನೆಯ ಸಮಯದಲ್ಲಿ ಹಿಂಸಾಚಾರ ನಡೆಸಿದ ಆರೋಪಿಗಳ  ಪೋಸ್ಟರ್‌ಗಳನ್ನು ಸಾರ್ವಜನಿಕವಾಗಿ ಪ್ರದರ್ಶಿಸಿತ್ತು. ಆದರೆ, ನಂತರ ಅಲಹಾಬಾದ್ ಹೈಕೋರ್ಟ್ ಅದನ್ನು ತೆಗೆದುಹಾಕುವಂತೆ ನಿರ್ದೇಶನ ನೀಡಿತ್ತು.

ಇದನ್ನೂ ಓದಿ: ಮುಡಾ ಪ್ರಕರಣ | ವಿಚಾರಣೆ ಮುಂದೂಡಿದ ಹೈಕೋರ್ಟ್ : ರಾಜ್ಯಪಾಲರು ಸೇರಿದಂತೆ ಪ್ರತಿವಾದಿಗಳಿಗೆ ನೋಟಿಸ್

ಮುಡಾ ಪ್ರಕರಣ | ವಿಚಾರಣೆ ಮುಂದೂಡಿದ ಹೈಕೋರ್ಟ್ : ರಾಜ್ಯಪಾಲರು ಸೇರಿದಂತೆ ಪ್ರತಿವಾದಿಗಳಿಗೆ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...