Homeಮುಖಪುಟಸಂಭಾಲ್ ಹಿಂಸಾಚಾರ | ಬಂಧನದಿಂದ ರಕ್ಷಣೆ ಕೋರಿ ಹೈಕೋರ್ಟ್‌ ಮೆಟ್ಟಿಲೇರಿದ ಎಸ್ಪಿ ಸಂಸದ

ಸಂಭಾಲ್ ಹಿಂಸಾಚಾರ | ಬಂಧನದಿಂದ ರಕ್ಷಣೆ ಕೋರಿ ಹೈಕೋರ್ಟ್‌ ಮೆಟ್ಟಿಲೇರಿದ ಎಸ್ಪಿ ಸಂಸದ

- Advertisement -
- Advertisement -

ಸಂಭಾಲ್‌ ಹಿಂಸಾಚಾರದಲ್ಲಿ ದಾಖಲಾಗಿರುವ ಪ್ರಕರಣದ ಬಂಧನದಿಂದ ರಕ್ಷಣೆ ಕೋರಿ ಸಮಾಜವಾದಿ ನಾಯಕ ಮತ್ತು ಸಂಭಾಲ್ ಸಂಸದ ಜಿಯಾ-ಉರ್-ರೆಹಮಾನ್ ಬಾರ್ಕ್ ಅವರು ಅಲಹಾಬಾದ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ನವೆಂಬರ್ 24 ರಂದು ಶಾಹಿ ಜಾಮಾ ಮಸೀದಿಯ ಸಮೀಕ್ಷೆ ವೇಳೆ ಸಂಭಾಲ್‌ನಲ್ಲಿ ಭುಗಿಲೆದ್ದ ಹಿಂಸಾಚಾರಕ್ಕಾಗಿ ಅವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಹಿಂಸಾಚಾರದಲ್ಲಿ ಐದು ಮುಸ್ಲಿಮರು ಪ್ರಾಣ ಕಳೆದುಕೊಂಡಿದ್ದರು ಮತ್ತು ಅನೇಕ ಪೊಲೀಸರು ಗಾಯಗೊಂಡಿದ್ದರು. ಸಂಭಾಲ್ ಹಿಂಸಾಚಾರ

ಬಂಧನದಿಂದ ರಕ್ಷಣೆ ಕೋರಿ ಮಾಡಿದ ಮನವಿಯ ಜೊತೆಗೆ, ಹಿಂಸಾಚಾರಕ್ಕೆ ಸಂಬಂಧಿಸಿದಂತೆ ತನ್ನ ವಿರುದ್ಧ ದಾಖಲಾಗಿರುವ ಎಫ್‌ಐಆರ್ ಅನ್ನು ರದ್ದುಗೊಳಿಸುವಂತೆ ಜಿಯಾ ಅವರು ಒತ್ತಾಯಿಸಿದ್ದಾರೆ. ಸಂಭಾಲ್ ಹಿಂಸಾಚಾರ ಪ್ರಕರಣದಲ್ಲಿ, ಶಾಹಿ ಜಾಮಾ ಮಸೀದಿಯಲ್ಲಿ ಸಮೀಕ್ಷೆ ವೇಳೆ ಹಿಂಸಾಚಾರಕ್ಕೆ ಅವರ ಪ್ರಚೋದನಕಾರಿ ಭಾಷಣವೇ ಕಾರಣ ಎಂದು ಆರೋಪಿಸಿ ಅವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ತನ್ನ ವಿರುದ್ಧದ ಆರೋಪಗಳು ರಾಜಕೀಯ ಪ್ರೇರಿತ ಎಂದು ಬಾರ್ಕ್ ತನ್ನ ಅರ್ಜಿಯಲ್ಲಿ ವಾದಿಸಿದ್ದಾರೆ. ಹಿಂಸಾಚಾರದಲ್ಲಿ ತನ್ನ ಪಾತ್ರವನ್ನು ನಿರಾಕರಿಸಿರುವ ಅವರು, ಆಡಳಿತಾರೂಢ ಬಿಜೆಪಿ ತನ್ನ ವಿರುದ್ಧ “ಸೇಡು ತೀರಿಸಿಕೊಳ್ಳುತ್ತಿದೆ” ಎಂದು ಆರೋಪಿಸಿದ್ದು, ಸುಳ್ಳು ಆರೋಪಗಳ ಮೂಲಕ ಕಿರುಕುಳ ಮತ್ತು ಬೆದರಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಹಿಂಸಾಚಾರ ಪ್ರಕರಣದಲ್ಲಿ, ಜಿಯಾ ಅವರನ್ನು ಹೊರತುಪಡಿಸಿ, ಯುಪಿ ಪೊಲೀಸರು ಸ್ಥಳೀಯ ಶಾಸಕ ಇಕ್ಬಾಲ್ ಮೆಹಮೂದ್ ಅವರ ಪುತ್ರ ಸೊಹೈಲ್ ಇಕ್ಬಾಲ್ ಅವರನ್ನು ಹೆಸರಿಸಿದ್ದಾರೆ. ಹಿಂಸಾಚಾರಕ್ಕೆ ಕೆಲವೇ ದಿನಗಳ ಮೊದಲು ಶಾಹಿ ಜಾಮಾ ಮಸೀದಿಗೆ ಭೇಟಿ ನೀಡಿದ್ದ ಜಿಯಾ ಅವರು, ಅಲ್ಲಿ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಪೊಲೀಸರು ಆರೋಪಿಸಿದ್ದಾರೆ. ಈ ಹೇಳಿಕೆಯನ್ನು ನಿರಾಕರಿಸಿರುವ ಸಂಸದ ಜಿಯಾ ಅವರು ಘಟನೆ ಮತ್ತು ಸಮೀಕ್ಷೆಯ ವೇಳೆ ತಾನು ಬೆಂಗಳೂರಿನಲ್ಲಿದ್ದೆ ಎಂದು ಹೇಳಿದ್ದಾರೆ. ಸಂಭಾಲ್ ಹಿಂಸಾಚಾರ

ಸಮುದಾಯದ ಸದಸ್ಯರನ್ನು ಸಮಾಧಾನಪಡಿಸಲು ಸಂಭಾಲ್‌ಗೆ ಮರಳಲು ಉದ್ದೇಶಿಸಿದ್ದೆ. ಆದರೆ ತನ್ನ ವಿರುದ್ಧದ ಎಫ್‌ಐಆರ್ ಬಗ್ಗೆ ತಿಳಿದ ನಂತರ ದೆಹಲಿಯಲ್ಲಿ ಉಳಿಯಲು ನಿರ್ಧರಿಸಿದೆ ಎಂದು ಅವರು ಹೇಳಿದ್ದಾರೆ. ಆದಾಗ್ಯೂ, ಜಿಯಾ ಅವೆರು ತಾನು ಫೋನ್ ಮೂಲಕ ಜನರನ್ನು ಸಂಪರ್ಕಿಸಲು ಪ್ರಯತ್ನಿಸಿದ್ದೆ ಎಂದು ಹೇಳಿದ್ದಾರೆ.

ನವೆಂಬರ್ 19 ರಂದು, ಸಂಭಾಲ್‌ನ ಸಿವಿಲ್ ನ್ಯಾಯಾಲಯವು ಶಾಹಿ ಜಾಮಾ ಮಸೀದಿಯ ಸಮೀಕ್ಷೆಗೆ ಅವಕಾಶ ನೀಡಿತ್ತು. ಮಸೀದಿಯು ಹರಿಹರ ದೇವಾಲಯವಾಗಿತ್ತು ಎಂದು ಪ್ರತಿಪಾದಿಸಿ ವಕೀಲ ಹರಿಶಂಕರ್ ಜೈನ್ ಮತ್ತು ಇತರ ಏಳು ಮಂದಿ ಸಲ್ಲಿಸಿದ ಅರ್ಜಿಗೆ ಪ್ರತಿಕ್ರಿಯೆಯಾಗಿ ನ್ಯಾಯಾಲಯ ಈ ಆದೇಶ ನೀಡಿತ್ತು. ಅದಾಗಿ, ನವೆಂಬರ್ 24 ರಂದು ಮಸೀದಿಯ ಸಮೀಕ್ಷೆಯನ್ನು ವಿರೋಧಿಸಿ ಜನರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ಹಿಂಸಾಚಾರ ನಡೆದಿತ್ತು.

ಕಲ್ಲು ತೂರಾಟ, ವಿಧ್ವಂಸಕ ಕೃತ್ಯಗಳು ಮತ್ತು ಬೆಂಕಿ ಹಚ್ಚುವಿಕೆಯ ನಡುವೆ ನಾಲ್ವರು ಸಾವನ್ನಪ್ಪಿದ್ದರು ಎಂದು ವರದಿಯಾಗಿತ್ತು. ಐದನೇ ವ್ಯಕ್ತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ವೇಳೆ ಸಾವನ್ನಪ್ಪಿದ್ದಾರೆ. ಗಲಭೆಯಲ್ಲಿ ನಾಲ್ವರು ವ್ಯಕ್ತಿಗಳ ಸಾವಿಗೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿಗಳು ಮತ್ತು ಜಿಲ್ಲಾ ಮ್ಯಾಜಿಸ್ಟ್ರೇಟ್ (ಡಿಎಂ) ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಕೋರಿ ಸಲ್ಲಿಕೆಯಾಗಿರುವ ಅರ್ಜಿ ಹೈಕೋರ್ಟ್‌ನಲ್ಲಿ ಬಾಕಿ ಉಳಿದಿದೆ.

ಇದನ್ನೂ ಓದಿ: ಅಂಬೇಡ್ಕರ್ ಕುರಿತು ಅವಮಾನಕರ ಹೇಳಿಕೆ : ಅಮಿತ್ ಶಾ ರಾಜೀನಾಮೆಗೆ ಕಾಂಗ್ರೆಸ್ ಆಗ್ರಹ

ಅಂಬೇಡ್ಕರ್ ಕುರಿತು ಅವಮಾನಕರ ಹೇಳಿಕೆ : ಅಮಿತ್ ಶಾ ರಾಜೀನಾಮೆಗೆ ಕಾಂಗ್ರೆಸ್ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...