Homeಮುಖಪುಟಸಂಭಾಲ್ ಹಿಂಸಾಚಾರ ಹಿನ್ನಲೆ - ಎಸ್‌ಪಿ ಸಂಸದರ ಕಟ್ಟಡ 'ಅನಧಿಕೃತ' ಎಂದು ಶೋಕಾಸ್ ನೋಟಿಸ್

ಸಂಭಾಲ್ ಹಿಂಸಾಚಾರ ಹಿನ್ನಲೆ – ಎಸ್‌ಪಿ ಸಂಸದರ ಕಟ್ಟಡ ‘ಅನಧಿಕೃತ’ ಎಂದು ಶೋಕಾಸ್ ನೋಟಿಸ್

- Advertisement -
- Advertisement -

ಸಂಭಾಲ್‌ನಲ್ಲಿರುವ ಶಾಹಿ ಜಾಮಾ ಮಸೀದಿಯ ಸಮೀಕ್ಷೆಯ ವೇಳೆ ಹಿಂಸಾಚಾರವನ್ನು ಪ್ರಚೋದಿಸಿದ್ದಾರೆ ಎಂದು ಆರೋಪಿಸಿ ಉತ್ತರ ಪ್ರದೇಶದ ಪೊಲೀಸರು ಸಮಾಜವಾದಿ ಪಕ್ಷದ (ಎಸ್‌ಪಿ) ಸಂಸದ ಜಿಯಾ ಉರ್ ರೆಹಮಾನ್ ಬಾರ್ಕ್‌ ವಿರುದ್ಧ ಎಫ್‌ಐಆರ್‌ ದಾಖಲಿಸಿದ್ದರು. ಇದಾಗಿ ಒಂದು ವಾರದ ನಂತರ, ಕಟ್ಟಡ ನಕ್ಷೆ ಮಂಜೂರಾತಿ ಪಡೆಯದೆ ಮನೆ ನಿರ್ಮಿಸಿದ ಆರೋಪದ ಮೇಲೆ ಅವರಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ. ಸಂಭಾಲ್ ಹಿಂಸಾಚಾರ ಹಿನ್ನಲೆ

ಗುರುವಾರ ಮುಂಜಾನೆ ಉತ್ತರ ಪ್ರದೇಶದ ವಿದ್ಯುತ್ ಇಲಾಖೆಯು ಈ ಪ್ರದೇಶದಲ್ಲಿ ಹಲವಾರು ಮನೆಗಳನ್ನು ನೆಲಸಮಗೊಳಿಸಿದ ನಂತರ ಈ ಸೂಚನೆ ನೀಡಲಾಗಿದೆ. ಅತಿಕ್ರಮಣ ಭೂಮಿಯಲ್ಲಿ ಮನೆಗಳನ್ನು ನಿರ್ಮಿಸಲಾಗಿದೆ ಎಂದು ಆರೋಪಿಸಿ ಮನೆಗಳನ್ನು ಕೆಡವಲಾಗಿದೆ. ಸಂಭಾಲ್ ಹಿಂಸಾಚಾರ ಹಿನ್ನಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಉತ್ತರ ಪ್ರದೇಶ (ಕಟ್ಟಡ ಕಾರ್ಯಾಚರಣೆಗಳ ನಿಯಂತ್ರಣ) ಕಾಯಿದೆ, 1958 ರ ಅಡಿಯಲ್ಲಿ ಡಿಸೆಂಬರ್ 5 ರಂದು ಸಂಭಾಲ್‌ನ ಉಪವಿಭಾಗೀಯ ಮ್ಯಾಜಿಸ್ಟ್ರೇಟ್ ಹೊರಡಿಸಿದ ನೋಟೀಸ್‌ನಲ್ಲಿ, ಸ್ಥಳೀಯ ಕಟ್ಟಡ ನಿಯಮಗಳ ಉಲ್ಲಂಘನೆಯನ್ನು ಎತ್ತಿ ತೋರಿಸಿತ್ತು. ಸಂಸರಿಗೆ ನೋಟಿಸ್ ಜಾರಿ ಮಾಡಿರುವುದನ್ನು ಜಿಲ್ಲಾಧಿಕಾರಿ ರಾಜೇಂದ್ರ ಪೆಸಿಯಾ ಖಚಿತಪಡಿಸಿದ್ದಾರೆ.

ನಿಯಮಾವಳಿಗಳ ಪ್ರಕಾರ, ಯಾರಾದರೂ ನಿಯಂತ್ರಿತ ಪ್ರದೇಶದಲ್ಲಿ ಮನೆ ನಿರ್ಮಿಸಿದರೆ ಕಟ್ಟಡದ ನಕ್ಷೆಯನ್ನು ಅಧಿಕಾರಿಗಳು ಅನುಮೋದಿಸಬೇಕಾಗುತ್ತದೆ. ಈ ಪ್ರದೇಶದಲ್ಲಿ ಇತರರಿಗೆ ಇದೇ ರೀತಿಯ ನೋಟಿಸ್‌ಗಳನ್ನು ನೀಡಲಾಗಿದೆ ಮತ್ತು “ಅಗತ್ಯವಿರುವ ಕಾರ್ಯವಿಧಾನಗಳನ್ನು ಅನುಸರಿಸದ ಕಾರಣ” ಸಂಸದ ಬಾರ್ಕ್‌ ಅವರಿಗೆ ಕೂಡಾ ನೋಟಿಸ್ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.

ಒಂದು ವೇಳೆ ಉಲ್ಲಂಘನೆಯಾಗದಿದ್ದಲ್ಲಿ ಮುಂದಿನ ಕ್ರಮ ಜರುಗಿಸಲಾಗುವುದು ಎಂದು ಅಧಿಕಾರಿಗಳು ಸೂಚಿಸಿದ್ದಾರೆ.

ನವೆಂಬರ್ 24ರ ಬೆಳಿಗ್ಗೆ ಸಂಭಾಲ್‌ನ ಶಾಹಿ ಜಾಮಾ ಮಸೀದಿಯ ಸಮೀಕ್ಷೆಯನ್ನು ವಿರೋಧಿಸಿ ಪ್ರತಿಭಟಿಸಿದ ಜನರ ಮೇಲೆ ಯುಪಿ ಪೊಲೀಸರು ಗುಂಡು ಹಾರಿಸಿದ್ದರು. ಈ ವೇಳೆ ಅಪ್ರಾಪ್ತ ವಯಸ್ಕರೊಬ್ಬರು ಸೇರಿದಂತೆ ಕನಿಷ್ಠ ಐದು ಮುಸ್ಲಿಂ ಯುವಕರು ಸಾವನ್ನಪ್ಪಿದ್ದಾರೆ. ಆದರೆ ಪ್ರತಿಭಟನಾಕಾರರ ಮೇಲೆ ಗುಂಡು ಹಾರಿಸಿದ ಆರೋಪವನ್ನು ಪೊಲೀಸರು ನಿರಾಕರಿಸಿದ್ದು, ಸ್ಥಳೀಯರು ಸೇರಿದಂತೆ ಜನಸಂದಣಿಯ ಮೇಲೆ ಗುಂಡು ಹಾರಿಸಲು ಪೊಲೀಸರು ನಾಡ ಪಿಸ್ತೂಲ್‌ಗಳನ್ನು ಬಳಸಿದ್ದಾರೆ ಎಂದು ಮಸೀದಿ ಸಮಿತಿ ಅಧ್ಯಕ್ಷರು ಆರೋಪಿಸಿದ್ದಾರೆ.

ಇದನ್ನೂ ಓದಿ: ‘ವೈಕಂ ಪ್ರಶಸ್ತಿ’ ಸ್ವೀಕರಿಸಿದ ದೇವನೂರ ಮಹಾದೇವ; ಕನ್ನಡದ ಸಾಹಿತಿಗೆ ಗೌರವ ಸೂಚಿಸಿದ ಪಿಣರಾಯಿ-ಸ್ಟಾಲಿನ್

‘ವೈಕಂ ಪ್ರಶಸ್ತಿ’ ಸ್ವೀಕರಿಸಿದ ದೇವನೂರ ಮಹಾದೇವ; ಕನ್ನಡದ ಸಾಹಿತಿಗೆ ಗೌರವ ಸೂಚಿಸಿದ ಪಿಣರಾಯಿ-ಸ್ಟಾಲಿನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...