Homeಮುಖಪುಟಸಂಭಾಲ್ ಹಿಂಸಾಚಾರ ಪ್ರಕರಣ: ಸಮಾಜವಾದಿ ಸಂಸದ ಜಿಯಾ ಉರ್ ರೆಹಮಾನ್ ವಿರುದ್ಧ ಆರೋಪಪಟ್ಟಿ ಸಲ್ಲಿಕೆ

ಸಂಭಾಲ್ ಹಿಂಸಾಚಾರ ಪ್ರಕರಣ: ಸಮಾಜವಾದಿ ಸಂಸದ ಜಿಯಾ ಉರ್ ರೆಹಮಾನ್ ವಿರುದ್ಧ ಆರೋಪಪಟ್ಟಿ ಸಲ್ಲಿಕೆ

- Advertisement -
- Advertisement -

ನವೆಂಬರ್‌ನಲ್ಲಿ ಸಂಭಾಲ್ ಜಿಲ್ಲೆಯಲ್ಲಿ ಭುಗಿಲೆದ್ದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಪೊಲೀಸರು ಸಮಾಜವಾದಿ ಪಕ್ಷದ ಸಂಸದ ಜಿಯಾ ಉರ್ ರೆಹಮಾನ್ ಬಾರ್ಕ್ ಮತ್ತು ಇತರ 22 ಜನರ ವಿರುದ್ಧ ಆರೋಪಪಟ್ಟಿ ಸಲ್ಲಿಸಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ಶುಕ್ರವಾರ ವರದಿ ಮಾಡಿದೆ. ಸಂಭಾಲ್‌ನಲ್ಲಿ ಪ್ರಚೋದನಕಾರಿ ಭಾಷಣಗಳನ್ನು ನೀಡುವ ಮೂಲಕ ಜನಸಮೂಹವನ್ನು ಪ್ರಚೋದಿಸಿದ ಆರೋಪ ಸಂಸದ ಬಾರ್ಕ್ ಅವರ ಮೇಲಿದೆ ಎಂದು ಬುಧವಾರ ಸಂಭಾಲ್‌ನಲ್ಲಿ ಪೊಲೀಸರು ಬಿಡುಗಡೆ ಮಾಡಿದ ಹೇಳಿಕೆ ತಿಳಿಸಿದೆ. ಸಂಭಾಲ್ ಹಿಂಸಾಚಾರ ಪ್ರಕರಣ

ನವೆಂಬರ್ 24 ರಂದು ಶಾಹಿ ಜುಮಾ ಮಸೀದಿಯಲ್ಲಿ “ಕೆಲವು ಸಮಾಜ ವಿರೋಧಿ ಶಕ್ತಿಗಳು, ಅಪರಾಧಿಗಳು ಮತ್ತು ರಾಜಕೀಯವನ್ನು ಪ್ರತಿಪಾದಿಸುವ ಕೆಲವು ರಾಜಕೀಯ ವ್ಯಕ್ತಿಗಳು ಹಿಂಸಾಚಾರವನ್ನು ಪ್ರಚೋದಿಸಿದರು” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಆಪಾದಿತ ಪ್ರಚೋದನಕಾರಿ ಭಾಷಣಗಳು ಮತ್ತು ಹಿಂಸಾಚಾರಕ್ಕೆ ಈ ಪ್ರಚೋದನೆಯೆ ಕಾರಣವಾಯಿತು ಎಂದು ಪೊಲೀಸರು ಹೇಳಿಕೊಂಡಿದ್ದಾರೆ. ಪ್ರಚೋದನೆಯ ಕಾರಣದಿಂದಾಗಿ ಬೆಂಕಿ ಹಚ್ಚುವುದು, ಕಲ್ಲು ತೂರಾಟ ಮತ್ತು ಸಾರ್ವಜನಿಕ ಮತ್ತು ಖಾಸಗಿ ಆಸ್ತಿಗೆ ಹಾನಿಯಾಗಿದೆ ಎಂದು ಪೊಲೀಸರು ಹೇಳಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ನಾವು 92 ಜನರನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ್ದೇವೆ ಮತ್ತು ಸಾಕ್ಷ್ಯಗಳನ್ನು ಸಂಗ್ರಹಿಸುತ್ತಿದ್ದೇವೆ” ಎಂದು ಪತ್ರಿಕೆ ಹೇಳಿಕೆಯನ್ನು ಉಲ್ಲೇಖಿಸಲಾಗಿದೆ. “ತನಿಖೆ ಇನ್ನೂ ಮುಂದುವರೆದಿದೆ ಮತ್ತು ಶೀಘ್ರದಲ್ಲೇ, ಭಾಗಿಯಾಗಿರುವ ಇತರರನ್ನು ಬಂಧಿಸಲಾಗುವುದು.” ಎಂದು ಅದು ಹೇಳಿದೆ.

ನವೆಂಬರ್ 24 ರಂದು, ಚಂದೌಸಿ ಪಟ್ಟಣದ ಶಾಹಿ ಜುಮಾ ಮಸೀದಿಯಲ್ಲಿ ನ್ಯಾಯಾಲಯದ ಆದೇಶದ ಮೇರಗೆ ನಡೆಸಲಾಗುವ ಸಮೀಕ್ಷೆಗೆ ಮುಸ್ಲಿಮರ ಗುಂಪೊಂದು ಆಕ್ಷೇಪ ವ್ಯಕ್ತಪಡಿಸಿದ ನಂತರ ಸಂಭಾಲ್‌ನಲ್ಲಿ ಹಿಂಸಾಚಾರ ಭುಗಿಲೆದ್ದಿತು.

ಮೊಘಲ್ ದೊರೆ ಬಾಬರ್ 1526 ರಲ್ಲಿ ನಿರ್ಮಿಸಲಾದ ಶತಮಾನಗಳಷ್ಟು ಹಳೆಯದಾದ ಶಾಹಿ ಜುಮಾ ಮಸೀದಿಯನ್ನು ಶ್ರೀ ಹರಿಹರ ದೇವಾಲಯದ ಸ್ಥಳದಲ್ಲಿ ನಿರ್ಮಿಸಲಾಗಿರೆ ಎಂದು ಬಿಜೆಪಿ ಪರ ಬೆಂಬಲಿಗರು ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿದ್ದರು. ಈ ಹಿನ್ನಲೆಯಲ್ಲಿ ವಿಚಾರಣಾ ನ್ಯಾಯಾಲಯವು ಸಮೀಕ್ಷೆಗೆ ಆದೇಶಿಸಿತ್ತು. ಸಮೀಕ್ಷೆಯ ಸಮಯದಲ್ಲಿ ನಡೆದ ಹಿಂಸಾಚಾರದಲ್ಲಿ ಐದು ಜನರು ಸಾವನ್ನಪ್ಪಿದ್ದರು.

ಕೊತ್ವಾಲಿ ಸಂಭಾಲ್ ಪೊಲೀಸ್ ಠಾಣೆಯಲ್ಲಿ ಸಲ್ಲಿಸಲಾದ ಎಫ್‌ಐಆರ್‌ ಸಂಬಂಧಿಸಿದಂತೆ ಚಂದೌಸಿಯ ಸಂಭಾಲ್ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ಸಿವಿಲ್ ನ್ಯಾಯಾಧೀಶರ (ಹಿರಿಯ ವಿಭಾಗ) ವಿಶೇಷ ಸಂಸದ/ಶಾಸಕ ನ್ಯಾಯಾಲಯದಲ್ಲಿ ಆರೋಪಪಟ್ಟಿಯನ್ನು ಸಲ್ಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ಪತ್ರಿಕೆ ವರದಿ ಮಾಡಿದೆ.

ಸಂಸದ ಬಾರ್ಕ್ ಅವರು ರಾಜಕೀಯ ಲಾಭಕ್ಕಾಗಿ ಜನಸಮೂಹವನ್ನು ಪ್ರಚೋದಿಸಿದ್ದು, ಇದು ಹಿಂಸಾತ್ಮಕ ಘರ್ಷಣೆಗೆ ಕಾರಣವಾಯಿತು ಎಂದು ಉತ್ತರ ಪ್ರದೇಶ ಪೊಲೀಸರು ಆರೋಪಿಸಿದ್ದಾರೆ. ಘಟನೆಗೆ ಕೆಲವು ದಿನಗಳ ಮೊದಲು ಬಾರ್ಕ್ ಶಾಹಿ ಜಾಮಾ ಮಸೀದಿಗೆ ಅನುಮತಿಯಿಲ್ಲದೆ ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸಿದರು ಮತ್ತು ಪ್ರಚೋದನಕಾರಿ ಭಾಷಣಗಳನ್ನು ಮಾಡಿದ್ದಾರೆ ಎಂದು ಅವರು ಎಫ್‌ಐಆರ್‌ನಲ್ಲಿ ಆರೋಪಿಸಿದ್ದಾರೆ.

ಹಿಂಸಾಚಾರದ ನಂತರ ಹನ್ನೆರಡು ಎಫ್‌ಐಆರ್‌ಗಳನ್ನು ದಾಖಲಿಸಲಾಯಿತು ಮತ್ತು ಈ ವಿಷಯವನ್ನು ಪರಿಶೀಲಿಸಲು ವಿಶೇಷ ತನಿಖಾ ತಂಡವನ್ನು ರಚಿಸಲಾಯಿತು. ಘರ್ಷಣೆಯ ಸಮಯದಲ್ಲಿ ತಾನು ಬೆಂಗಳೂರಿನಲ್ಲಿದ್ದೆ ಎಂದು ಬಾರ್ಕ್ ಹೇಳಿದ್ದು, ಪೊಲೀಸರ ಆರೋಪಗಳನ್ನು ನಿರಾಕರಿಸಿದ್ದಾರೆ. “ಈ ವೇಳೆ ನಾನು ಸಂಭಾಲ್‌ನಲ್ಲಿಯೂ ಇರಲಿಲ್ಲ, ರಾಜ್ಯದಲ್ಲಿಯೂ ಇರಲಿಲ್ಲ. ಇದು ಪೊಲೀಸರು ಮತ್ತು ಆಡಳಿತದ ಪಿತೂರಿ.” ಎಂದು ಅವರು ಹಿಂಸಾಚಾರದ ನಂತರ ಹೇಳಿದ್ದರು.

ಮಸೀದಿ ಒಂದು ಐತಿಹಾಸಿಕ ಸ್ಥಳ ಎಂದು ಹೇಳುವ ಮೂಲಕ ಅವರು ನ್ಯಾಯಾಲಯದ ಆದೇಶದ ಸಮೀಕ್ಷೆಯನ್ನು ಟೀಕಿಸಿದ್ದರು. “1947 ರಲ್ಲಿ ಅಸ್ತಿತ್ವದಲ್ಲಿದ್ದ ಧಾರ್ಮಿಕ ಸ್ಥಳಗಳು ಪೂಜಾ ಸ್ಥಳಗಳ ಕಾಯ್ದೆ ಪ್ರಕಾರ ಮಸೀದಿಯು ಹಾಗೆಯೆ ಉಳಿಯಬೇಕು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿತ್ತು” ಎಂದು ಅವರು ಹೇಳಿದ್ದರು.

ಮಾರ್ಚ್ 25 ರಂದು, ಸಂಭಾಲ್ ಪೊಲೀಸರು ಈ ಗಲಭೆಯಲ್ಲಿ ಬಾರ್ಕ್ ಅವರ ಭಾಗಿಯಾಗಿದ್ದಾರೆ ಎಂಬ ಆರೋಪದ ಮೇಲೆ ನೋಟಿಸ್ ನೀಡಿದ್ದರು. ಅದರ ನಂತರ ಏಪ್ರಿಲ್‌ನಲ್ಲಿ ಅವರನ್ನು ಎಸ್‌ಐಟಿ ಸುಮಾರು ನಾಲ್ಕು ಗಂಟೆಗಳ ಕಾಲ ವಿಚಾರಣೆ ನಡೆಸಿತ್ತಿ.

ಗುರುವಾರದಂದು ಪೊಲೀಸ್ ವರಿಷ್ಠಾಧಿಕಾರಿ ಕ್ರಿಶನ್ ಕುಮಾರ್ ವಿಷ್ಣೋಯ್ ಬಾರ್ಕ್ ವಿರುದ್ಧ ಪ್ರಕರಣದಲ್ಲಿ ಆರೋಪ ಹೊರಿಸಲಾಗಿದೆ ಎಂದು ದೃಢಪಡಿಸಿದರು ಎಂದು ದಿ ಹಿಂದೂ ವರದಿ ಮಾಡಿದೆ.

“ಶಾಹಿ ಜುಮಾ ಮಸೀದಿಯ ಅಧ್ಯಕ್ಷ ಜಾಫರ್ ಅಲಿ ಮತ್ತು ಬಾರ್ಕ್ ನಡುವೆ ತಡರಾತ್ರಿ ಸಂಭಾಷಣೆ ನಡೆದಿದೆ ಎಂದು ಆರೋಪಪಟ್ಟಿಯಲ್ಲಿ ವಿವರಿಸಲಾಗಿದೆ. ವ್ಯಾಪಕ ಹಿಂಸಾಚಾರಕ್ಕೆ ಎರಡು ದಿನಗಳ ಮೊದಲು ನವೆಂಬರ್ 22 ರಂದು ಜನಸಮೂಹವನ್ನು ಒಟ್ಟುಗೂಡಿಸುವ ಜವಾಬ್ದಾರಿ ಅವರ ಮೇಲಿತ್ತು.” ಎಂದು ಅವರು ಹೇಳಿದ್ದಾರೆ.

ತನಿಖೆಯ ಸಮಯದಲ್ಲಿ ಸಂಗ್ರಹಿಸಿದ “ವ್ಯಾಪಕ ಸಾಕ್ಷ್ಯಗಳ” ಆಧಾರದ ಮೇಲೆ ಆರೋಪಪಟ್ಟಿ ರಚಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಜನವರಿ 3 ರಂದು, ಅಲಹಾಬಾದ್ ಹೈಕೋರ್ಟ್ ಬಾರ್ಕ್ ಬಂಧನವನ್ನು ತಡೆಹಿಡಿಯಿತು, ಆದರೆ ಕೊತ್ವಾಲಿ ಪೊಲೀಸ್ ಠಾಣೆಯಲ್ಲಿ ಅವರ ಮತ್ತು ಇತರರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ ಅನ್ನು ರದ್ದುಗೊಳಿಸಲು ನಿರಾಕರಿಸಿತು. ತನಿಖೆ ಮುಂದುವರಿಯುತ್ತದೆ ಎಂದು ನ್ಯಾಯಾಲಯ ತೀರ್ಪು ನೀಡಿತು ಮತ್ತು ಬಾರ್ಕ್ ಅಧಿಕಾರಿಗಳೊಂದಿಗೆ ಸಹಕರಿಸುವಂತೆ ಆದೇಶಿಸಿತು. ಸಂಭಾಲ್ ಹಿಂಸಾಚಾರ ಪ್ರಕರಣ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಕೀಲಡಿ ವರದಿ ಪ್ರಕಟಿಸದ ಕೇಂದ್ರ ಸರ್ಕಾರ | ತಮಿಳು ಸಂಸ್ಕೃತಿಯ ಮೇಲಿನ ದಾಳಿಗೆ ಸಮ ಎಂದ ಸಿಎಂ ಸ್ಟಾಲಿನ್

ಕೀಲಡಿ ವರದಿ ಪ್ರಕಟಿಸದ ಕೇಂದ್ರ ಸರ್ಕಾರ | ತಮಿಳು ಸಂಸ್ಕೃತಿಯ ಮೇಲಿನ ದಾಳಿಗೆ ಸಮ ಎಂದ ಸಿಎಂ ಸ್ಟಾಲಿನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...