Homeಮುಖಪುಟಸಂಭಾಲ್ ಹಿಂಸಾಚಾರ ಪ್ರಕರಣ : ಹಿರಿಯ ಅಧಿಕಾರಿಗಳು ಸೇರಿ 12 ಪೊಲೀಸ್ ಸಿಬ್ಬಂದಿ ವಿರುದ್ಧ ಎಫ್‌ಐಆರ್...

ಸಂಭಾಲ್ ಹಿಂಸಾಚಾರ ಪ್ರಕರಣ : ಹಿರಿಯ ಅಧಿಕಾರಿಗಳು ಸೇರಿ 12 ಪೊಲೀಸ್ ಸಿಬ್ಬಂದಿ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

- Advertisement -
- Advertisement -

2024ರ ನವೆಂಬರ್‌ನಲ್ಲಿ ಶಾಹಿ ಜಾಮಾ ಮಸೀದಿ ಬಳಿ ನಡೆದ ಹಿಂಸಾಚಾರದ ಸಂದರ್ಭದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಪಾತ್ರವಿದೆ ಎಂಬ ಆರೋಪದ ಮೇಲೆ ಹಿರಿಯ ಅಧಿಕಾರಿಗಳು ಸೇರಿದಂತೆ 12 ಪೊಲೀಸ್ ಸಿಬ್ಬಂದಿಯ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಉತ್ತರ ಪ್ರದೇಶದ ಸಂಭಾಲ್ ಜಿಲ್ಲಾ ನ್ಯಾಯಾಲಯ ಆದೇಶಿಸಿದೆ.

ಸಂಭಾಲ್‌ನ ಸರ್ಕಲ್ ಆಫೀಸರ್ ಆಗಿದ್ದ ಮತ್ತು ಪ್ರಸ್ತುತ ಫಿರೋಝಾಬಾದ್‌ನಲ್ಲಿ ಹೆಚ್ಚುವರಿ ಪೊಲೀಸ್ ಸೂಪರಿಂಟೆಂಡೆಂಟ್ (ಗ್ರಾಮೀಣ) ಆಗಿ ನೇಮಕಗೊಂಡಿರುವ ಅನುಜ್ ಚೌಧರಿ ಮತ್ತು ಸಂಭಾಲ್ ಕೊತ್ವಾಲಿ ಚಂದೌಸಿಯ ಆಗಿನ ಸ್ಟೇಷನ್ ಹೌಸ್ ಆಫೀಸರ್ ಅನುಜ್ ತೋಮರ್ ಆರೋಪಿತರಲ್ಲಿ ಸೇರಿದ್ದಾರೆ. ಹಲವಾರು ಗುರುತಿಸಲಾಗದ ಪೊಲೀಸ್ ಸಿಬ್ಬಂದಿಗಳ ವಿರುದ್ಧವೂ ಪ್ರಕರಣಗಳನ್ನು ದಾಖಲಿಸಲು ನ್ಯಾಯಾಲಯ ನಿರ್ದೇಶಿಸಿದೆ.

ಹಿಂದುತ್ವ ಗುಂಪುಗಳ ವಲಯದಲ್ಲಿ ಪ್ರಸಿದ್ಧ ಪೊಲೀಸ್ ಅಧಿಕಾರಿಯಾಗಿದ್ದ ಅನುಜ್ ಚೌಧರಿ, ಹಿಂಸಾಚಾರದ ನಂತರ ಹೋಳಿ ಆಚರಣೆಗೆ ಸಂಬಂಧಿಸಿದಂತೆ ಮುಸ್ಲಿಂ ವಿರೋಧಿ ಹೇಳಿಕೆಗಳನ್ನು ನೀಡಿ ಸುದ್ದಿಯಾಗಿದ್ದರು.

ಖಗ್ಗು ಸರೈ ಅಂಜುಮಾನ್ ಪ್ರದೇಶದ ನಿವಾಸಿ ಯಾಮೀನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ವಿಭಾಂಶು ಸುಧೀರ್ ಈ ಆದೇಶ ಹೊರಡಿಸಿದ್ದಾರೆ.

2024ರ ನವೆಂಬರ್ 24 ರಂದು ಶಾಹಿ ಜಾಮಾ ಮಸೀದಿ ಪ್ರದೇಶದಲ್ಲಿ ನಡೆದ ಗಲಭೆಯ ಸಂದರ್ಭದಲ್ಲಿ ನನ್ನ ಮಗ ಆಲಂ ಮೇಲೆ ಪೊಲೀಸರು ಗುಂಡು ಹಾರಿಸಿದ್ದರು ಎಂದು ಯಾಮೀನ್ ಆರೋಪಿಸಿದ್ದರು. ಅರ್ಜಿಯ ಪ್ರಕಾರ, ಆಲಂ ರಸ್ಕ್ ಮತ್ತು ಬಿಸ್ಕತ್ತುಗಳನ್ನು ಮಾರಾಟ ಮಾಡಲು ತೆರಳಿದ್ದಾಗ ಗಲಭೆಯ ನಡುವೆ ಸಿಲುಕಿದ್ದರು. ಪೊಲೀಸರು ಅವರ ಮೇಲೆ ಗುಂಡು ಹಾರಿಸಿದ್ದರು.

ಪ್ರತ್ಯಕ್ಷದರ್ಶಿಗಳು ಮತ್ತು ಕುಟುಂಬಸ್ಥರ ಪ್ರಕಾರ, ಹಿಂಸಾಚಾರದಲ್ಲಿ ಕನಿಷ್ಠ ಐವರು ಮುಸ್ಲಿಮರು ಸಾವನ್ನಪ್ಪಿದ್ದು, ಅವರಲ್ಲಿ ಹೆಚ್ಚಿನವರು ಪೊಲೀಸರ ಗುಂಡಿಗೆ ಬಲಿಯಾಗಿದ್ದಾರೆ.

ಭಯದಿಂದ ನನ್ನ ಮಗ ತಲೆಮರೆಸಿಕೊಂಡು ವೈದ್ಯಕೀಯ ಚಿಕಿತ್ಸೆ ಪಡೆದಿದ್ದಾನೆ. ನಂತರ ಗುಂಡಿನ ದಾಳಿಯಲ್ಲಿ ಭಾಗಿಯಾಗಿರುವ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಕೋರಿದ್ದಾನೆ ಎಂದು ಯಾಮೀನ್ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಜನವರಿ 9ರಂದು ನಡೆದ ವಿಚಾರಣೆಯ ನಂತರ, ನ್ಯಾಯಾಲಯವು ಎಲ್ಲಾ ಹೆಸರಿಸಲಾದ ಮತ್ತು ಹೆಸರಿಸದ ಅಧಿಕಾರಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸುವಂತೆ ನಿರ್ದೇಶಿಸಿದೆ.

ಮಂಗಳವಾರ ಸಂಜೆ ನ್ಯಾಯಾಲಯದ ನಿರ್ಧಾರದ ಬಗ್ಗೆ ಕುಟುಂಬಕ್ಕೆ ತಿಳಿಸಲಾಗಿದೆ. ತಡವಾಗಿ ಆದೇಶ ಹೊರಡಿಸಿದ್ದರಿಂದ ಅದರ ಲಿಖಿತ ಪ್ರತಿ ಇನ್ನೂ ಬಂದಿಲ್ಲ ಎಂದು ಯಾಮೀನ್ ಅವರ ವಕೀಲ ಚೌಧರಿ ಅಖ್ತರ್ ಹುಸೇನ್ ತಿಳಿಸಿರುವುದಾಗಿ ಮಕ್ತೂಬ್‌ ಮೀಡಿಯಾ ವರದಿ ಮಾಡಿದೆ.

ಶಾಹಿ ಜಾಮಾ ಮಸೀದಿ ಮೂಲತಃ ದೇವಸ್ಥಾನವಾಗಿತ್ತು ಎಂಬ ಸಿವಿಲ್ ಮೊಕದ್ದಮೆಯ ನಂತರ, ನ್ಯಾಯಾಲಯದ ಆದೇಶದ ಮೇರೆಗೆ ಶಾಹಿ ಜಾಮಾ ಮಸೀದಿಯ ಸಮೀಕ್ಷೆಯ ಸಮಯದಲ್ಲಿ ಸಂಭಾಲ್‌ನಲ್ಲಿ ಹಿಂಸಾಚಾರ ಭುಗಿಲೆದ್ದಿತ್ತು. 2024ರ ನವೆಂಬರ್ 19 ಮತ್ತು ನವೆಂಬರ್ 24 ರಂದು ಎರಡು ಹಂತಗಳಲ್ಲಿ ಮಸೀದಿ ಸಂಕೀರ್ಣದಲ್ಲಿ ಸಮೀಕ್ಷೆಯನ್ನು ನಡೆಸಲಾಗಿತ್ತು. ಈ ಸಮಯದಲ್ಲಿ ದೊಡ್ಡ ಜನಸಮೂಹ ಜಮಾಯಿಸಿತ್ತು. ಹಿಂಸಾತ್ಮಕ ಪ್ರತಿಭಟನೆ ನಡೆದಿತ್ತು.

ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಸಂಭಾಲ್ ಕೊತ್ವಾಲಿ ಮತ್ತು ನಖಾಸಾ ಪೊಲೀಸ್ ಠಾಣೆಗಳಲ್ಲಿ ಪೊಲೀಸರು 12 ಪ್ರಕರಣಗಳನ್ನು ದಾಖಲಿಸಿದ್ದು, ಸಮಾಜವಾದಿ ಪಕ್ಷದ ಶಾಸಕ ಝಿಜಿಯಾವುರ್ ರೆಹಮಾನ್ ಬಾರ್ಕ್ ಮತ್ತು ಅದೇ ಪಕ್ಷದ ಶಾಸಕ ಇಕ್ಬಾಲ್ ಮಹಮೂದ್ ಅವರ ಪುತ್ರ ಸುಹೈಲ್ ಇಕ್ಬಾಲ್ ಸೇರಿದಂತೆ ಹಲವಾರು ವ್ಯಕ್ತಿಗಳ ವಿರುದ್ಧ ಪ್ರಕರಣಗಳು ದಾಖಲಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇಲ್ಲಿಯವರೆಗೆ, ಶಾಹಿ ಜಾಮಾ ಮಸೀದಿ ಅಧ್ಯಕ್ಷ ಮತ್ತು ವಕೀಲ ಜಾಫರ್ ಅಲಿ ಸೇರಿದಂತೆ 134 ಆರೋಪಿಗಳನ್ನು ಪೊಲೀಸರು ಜೈಲಿಗೆ ಕಳುಹಿಸಿದ್ದಾರೆ. ಬಂಧಿತರಲ್ಲಿ ಮೂವರು ಮಹಿಳೆಯರು ಕೂಡ ಸೇರಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿರುವ ಗ್ಯಾಂಗ್‌ಸ್ಟರ್ ಶಾರಿಕ್ ಸಾಥಾ ಅವರ ಮೂವರು ಸಹಚರರಾದ ಮುಲ್ಲಾ ಅಫ್ರೋಝ್, ವಾರಿಸ್ ಮತ್ತು ಗುಲಾಮ್ ಅವರನ್ನೂ ಪೊಲೀಸರು ಜೈಲಿಗೆ ತಳ್ಳಿದ್ದಾರೆ.

ಅಲಹಾಬಾದ್ ಹೈಕೋರ್ಟ್ ಜಾಮೀನು ನೀಡಿದ ನಂತರ ಜಾಫರ್ ಅಲಿಯನ್ನು ಆಗಸ್ಟ್ 2024ರಲ್ಲಿ ಮೊರಾದಾಬಾದ್ ಜೈಲಿನಿಂದ ಬಿಡುಗಡೆ ಮಾಡಲಾಗಿದೆ.

ಗಲಭೆಯ ಸಮಯದಲ್ಲಿ ಪೊಲೀಸರಿಂದ ನಡೆದ ಹತ್ಯೆಗಳಲ್ಲಿ ನ್ಯಾಯ ದೊರಕಿಸುವ ಸಲುವಾಗಿ ಕಾನೂನು ಹೋರಾಟ ನಡೆಸಲು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್‌) ಸಹಾಯ ಮಾಡಿದೆ. ಎಪಿಸಿಆರ್‌ನ ನದೀಮ್ ಖಾನ್ ನ್ಯಾಯಾಲಯದ ಆದೇಶವನ್ನು ಸ್ವಾಗತಿಸಿದ್ದಾರೆ. ಹೆಚ್ಚಿನ ಕುಟುಂಬಗಳು ಪೊಲೀಸ್ ಹಿಂಸಾಚಾರದ ಬಗ್ಗೆ ಹೇಳಿಕೊಳ್ಳುವ ಸಲುವಾಗಿ ಮುಂದೆ ಬರಲು ಈ ಆದೇಶ ಅನುಕೂಲ ಮಾಡಿಕೊಡಲಿದೆ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...