Homeಮುಖಪುಟಸಂಭಾಲ್ ಹಿಂಸಾಚಾರ ಕುರಿತ ಚರ್ಚೆಗೆ ಸ್ಪೀಕರ್ ನಿರಾಕರಣೆ | ಹೊರನಡೆದ ವಿಪಕ್ಷಗಳು

ಸಂಭಾಲ್ ಹಿಂಸಾಚಾರ ಕುರಿತ ಚರ್ಚೆಗೆ ಸ್ಪೀಕರ್ ನಿರಾಕರಣೆ | ಹೊರನಡೆದ ವಿಪಕ್ಷಗಳು

- Advertisement -
- Advertisement -

ಉತ್ತರ ಪ್ರದೇಶದ ಸಂಭಾಲ್‌ನಲ್ಲಿ ಇತ್ತೀಚೆಗೆ ನಡೆದ ಹಿಂಸಾಚಾರದ ಬಗ್ಗೆ ಲೋಕಸಭೆಯಲ್ಲಿ ಚರ್ಚೆ ನಡೆಸುವಂತೆ ಆಗ್ರಹಿಸಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ಬಹುತೇಕ ಸಂಪೂರ್ಣ ಪ್ರತಿಪಕ್ಷಗಳು ಮಂಗಳವಾರ ಸದನದಿಂದ ಸಂಕ್ಷಿಪ್ತವಾಗಿ ಹೊರನಡೆದಿವೆ. ಸದನವು ಪ್ರಶ್ನೋತ್ತರ ಅವಧಿಯನ್ನು ಕೈಗೆತ್ತಿಕೊಳ್ಳಲು ಸಭೆ ಸೇರಿದ ತಕ್ಷಣ, ಸಮಾಜವಾದಿ ಪಕ್ಷದ (ಎಸ್‌ಪಿ) ಅಧ್ಯಕ್ಷ ಅಖಿಲೇಶ್ ಯಾದವ್ ಎದ್ದುನಿಂತು ವಿಷಯ ಪ್ರಸ್ತಾಪಿಸಿ, ವಿಷಯದ ಬಗ್ಗೆ ಮಾತನಾಡಲು ಸ್ಪೀಕರ್ ಓಂ ಬಿರ್ಲಾ ಅವರ ಅನುಮತಿ ಕೋರಿದರು. ಸಂಭಾಲ್ ಹಿಂಸಾಚಾರ

“ಇದು ತುಂಬಾ ಗಂಭೀರವಾದ ವಿಷಯ. ಐದು ಜನರು ಪ್ರಾಣ ಕಳೆದುಕೊಂಡಿದ್ದಾರೆ” ಎಂದು ಅಖಿಲೇಶ್ ಯಾದವ್ ಹೇಳಿದರು. ಆದರೆ, ಇದಕ್ಕೆ ಅನುಮತಿ ನೀಡದ ಸ್ಪೀಕರ್‌, ಶೂನ್ಯವೇಳೆಯಲ್ಲಿ ಸದಸ್ಯರು ಈ ವಿಷಯವನ್ನು ಪ್ರಸ್ತಾಪಿಸಬಹುದು ಎಂದು ಹೇಳಿದರು. ಇದನ್ನು ಪ್ರತಿಭಟಿಸಿದ ಅಖಿಲೇಶ್ ಯಾದವ್ ಮತ್ತು ಅವರ ಪಕ್ಷದ ಸಹೋದ್ಯೋಗಿಗಳು ಸದನದಿಂದ ಹೊರನಡೆಯಲು ಪ್ರಾರಂಭಿಸಿದರು. ಅದೇ ವೇಳೆ ಕೆಲ ಎಸ್ಪಿ ಸದಸ್ಯರು, ಘೋಷಣೆಗಳನ್ನು ಕೂಗುತ್ತಾ ಬಾವಿಯತ್ತ ಧಾವಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಎಸ್‌ಪಿ ಸದಸ್ಯರು ಬಾವಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದರೆ, ಡಿಎಂಕೆ ಸದಸ್ಯ ಎ. ರಾಜಾ ಅವರು ಕಾಂಗ್ರೆಸ್ ಸೇರಿದಂತೆ ಇತರ ಪ್ರತಿಪಕ್ಷಗಳ ಸದಸ್ಯರಿಗೆ ತಮ್ಮ ಸೀಟಿನಿಂದ ಎದ್ದು ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತೆ ಸೂಚಿಸಿದರು. ಈ ವೇಳೆ ಎನ್‌ಸಿಪಿ ಮತ್ತು ಶಿವಸೇನೆ-ಯುಬಿಟಿ ಸದಸ್ಯರು ಎಸ್‌ಪಿ ಸಂಸದರ ಬೆಂಬಲಕ್ಕೆ ನಿಂತರು. ಕೆಲ ಕಾಂಗ್ರೆಸ್‌ ಸದಸ್ಯರ ಜೊತೆಗೆ ರಾಹುಲ್ ಗಾಂಧಿ ಕೂಡಾ ಧರಣಿಗೆ ಸೇರಿದರು. ಸಂಭಾಲ್ ಹಿಂಸಾಚಾರ

ಪ್ರತಿಭಟನೆ ನಡೆಯುತ್ತಿರುವಾಗಲೇ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಅಖಿಲೇಶ್ ಯಾದವ್ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ ಎಂದು ವರದಿಯಾಗಿದೆ. ಸ್ವಲ್ಪ ಸಮಯದ ನಂತರ, ಅಖಿಲೇಶ್ ಯಾದವ್ ಅವರು ತಮ್ಮ ಪಕ್ಷದ ಸಂಸದರೊಂದಿಗೆ ಸದನ ತೊರೆಯುವಂತೆ ಕೇಳಿಕೊಂಡಿದ್ದು, ರಾಹುಲ್ ಗಾಂಧಿ ಸೇರಿದಂತೆ ವಿರೋಧ ಪಕ್ಷದ ಸದಸ್ಯರು ಸಭಾತ್ಯಾಗ ಮಾಡಿದರು. ನಂತರ ನಡೆಯುತ್ತಿರುವ ಪ್ರಶ್ನೋತ್ತರ ವೇಳೆಯಲ್ಲಿ ಭಾಗವಹಿಸಲು ಸಂಸದರು ಮತ್ತೆ ಹಿಂತಿರುಗಿದರು.

ಪ್ರಶ್ನೋತ್ತರ ಅವಧಿಯ ಕೊನೆಯಲ್ಲಿ, ಪಿಎಂ-ಕಿಸಾನ್ ಯೋಜನೆ ಕುರಿತ ಪ್ರಶ್ನೆಗೆ ಉತ್ತರವಾಗಿ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಕುರಿತು ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ನೀಡಿದ ಉತ್ತರದ ಮೇಲೆ ಕೆಲವು ವಿರೋಧ ಪಕ್ಷದ ಸದಸ್ಯರು ಮತ್ತೆ ಸಭಾತ್ಯಾಗ ಮಾಡಿದರು.

ಇದನ್ನೂ ಓದಿ: ಅರೆಸ್ಸೆಸ್‌ನ “ಭಾರತಿಯ ಸಂಸ್ಕೃತಿ ಉತ್ಸವ’’ದಲ್ಲಿ ಕಾಂಗ್ರೆಸ್ ನಾಯಕರು ಭಾಗವಹಿಸಬಾರದು: ಸಾಹಿತಿ, ಪ್ರಗತಿಪರ ಚಿಂತಕರಿಂದ ಜಂಟಿ ಪತ್ರಿಕಾ ಹೇಳಿಕೆ

ಅರೆಸ್ಸೆಸ್‌ನ “ಭಾರತಿಯ ಸಂಸ್ಕೃತಿ ಉತ್ಸವ’’ದಲ್ಲಿ ಕಾಂಗ್ರೆಸ್ ನಾಯಕರು ಭಾಗವಹಿಸಬಾರದು: ಸಾಹಿತಿ, ಪ್ರಗತಿಪರ ಚಿಂತಕರಿಂದ ಜಂಟಿ ಪತ್ರಿಕಾ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...