Homeಮುಖಪುಟಸಂಭಾಲ್ ಹಿಂಸಾಚಾರ : ಸಾರ್ವಜನಿಕ ಸ್ಥಳಗಳಲ್ಲಿ 'ಕಲ್ಲು ತೂರಾಟಗಾರರ' ಪೋಸ್ಟರ್‌ ಪ್ರದರ್ಶನಕ್ಕೆ ಯುಪಿ ಸರ್ಕಾರ ಸಿದ್ಧತೆ

ಸಂಭಾಲ್ ಹಿಂಸಾಚಾರ : ಸಾರ್ವಜನಿಕ ಸ್ಥಳಗಳಲ್ಲಿ ‘ಕಲ್ಲು ತೂರಾಟಗಾರರ’ ಪೋಸ್ಟರ್‌ ಪ್ರದರ್ಶನಕ್ಕೆ ಯುಪಿ ಸರ್ಕಾರ ಸಿದ್ಧತೆ

- Advertisement -
- Advertisement -

ಉತ್ತರ ಪ್ರದೇಶ ಸರ್ಕಾರವು ಸಂಭಾಲ್ ಹಿಂಸಾಚಾರದಲ್ಲಿ ಭಾಗಿಯಾಗಿರುವ ಪ್ರತಿಭಟನಾಕಾರರಿಂದ ಸಾರ್ವಜನಿಕ ಆಸ್ತಿಗೆ ಆಗಿರುವ ಹಾನಿಯ ವೆಚ್ಚವನ್ನು ಸಂಗ್ರಹಿಸಲು ಮತ್ತು ಪ್ರಮುಖ ಸಾರ್ವಜನಿಕ ಸ್ಥಳಗಳಲ್ಲಿ ‘ಕಲ್ಲು ತೂರಾಟಗಾರರ’ ಪೋಸ್ಟರ್‌ಗಳನ್ನು ಪ್ರದರ್ಶಿಸಿಲು ಯೋಜಿಸುತ್ತಿದೆ ಎಂದು ವರದಿಯಾಗಿದೆ.

ಭಾನುವಾರ (ನ24) ಸಂಭಾಲ್‌ನ ಕೋಟ್ ಗಾರ್ವಿ ಪ್ರದೇಶದ ಶಾಹಿ ಜಾಮಾ ಮಸೀದಿಯ ಸಮೀಕ್ಷೆ ವೇಳೆ ನಡೆದ ಘರ್ಷಣೆಯಲ್ಲಿ ನಾಲ್ವರು ಸಾವನ್ನಪ್ಪಿದ್ದು, ಪೊಲೀಸ್ ಸಿಬ್ಬಂದಿ ಸೇರಿದಂತೆ ಹಲವರಿಗೆ ಗಾಯಗಳಾಗಿವೆ. ಮಸೀದಿಯ ಸ್ಥಳದಲ್ಲಿ ಈ ಹಿಂದೆ ಹರಿಹರ ದೇವಾಲಯ ಇತ್ತು ಎಂಬ ಅರ್ಜಿಯ ನಂತರ ಸಮೀಕ್ಷೆ ನಡೆಸಲು ನ್ಯಾಯಾಲಯ ಆದೇಶಿಸಿತ್ತು.

“ಸಂಭಾಲ್‌ನಲ್ಲಿ ಹಿಂಸಾಚಾರದಲ್ಲಿ ಭಾಗಿಯಾದ ವ್ಯಕ್ತಿಗಳ ವಿರುದ್ಧ ಉತ್ತರ ಪ್ರದೇಶ ಸರ್ಕಾರವು ದೃಢವಾದ ನಿಲುವನ್ನು ತೆಗೆದುಕೊಳ್ಳುತ್ತಿದೆ. ಕಲ್ಲು ತೂರಾಟಗಾರರು ಮತ್ತು ದುಷ್ಕರ್ಮಿಗಳ ಪೋಸ್ಟರ್‌ಗಳನ್ನು ಸಾರ್ವಜನಿಕವಾಗಿ ಪ್ರದರ್ಶಿಸಲಾಗುತ್ತದೆ. ಅವರಿಂದಲೇ ಹಾನಿಯ ಪಾವತಿಗೆ ಪ್ರಯತ್ನಿಸಲಾಗುತ್ತದೆ. ಆರೋಪಿಗಳ ಬಂಧನಕ್ಕೆ ಕಾರಣವಾಗುವ ಮಾಹಿತಿ ನೀಡುವವರಿಗೆ ಬಹುಮಾನವನ್ನೂ ನೀಡಲಾಗುತ್ತದೆ” ಎಂದು ಸರ್ಕಾರಿ ಅಧಿಕಾರಿಯೊಬ್ಬರು ಹೇಳಿದ್ದಾಗಿ ವರದಿಯಾಗಿದೆ.

ಈ ಹಿಂದೆ 2020ರಲ್ಲಿ ಸಿಎಎ ವಿರೋಧಿ ಪ್ರತಿಭಟನೆ ನಡೆದಾಗ, ರಾಜ್ಯ ರಾಜಧಾನಿ ಸೇರಿದಂತೆ ಹಲವೆಡೆಗಳಲ್ಲಿ ಪ್ರತಿಭಟನಾಕಾರರ ಪೋಸ್ಟರ್‌ಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಹಾಕಲಾಗಿತ್ತು. ನಂತರ ನ್ಯಾಯಾಲಯದ ಆದೇಶದ ಹಿನ್ನೆಲೆ ಅವುಗಳನ್ನು ತೆರವುಗೊಳಿಸಲಾಗಿತ್ತು.

ಸಂಭಾಲ್ ಹಿಂಸಾಚಾರಕ್ಕೆ ಸಂಬಂಧಿಸಿದಂತೆ, ಇದುವರೆಗೆ ಪೊಲೀಸರು 25 ಮಂದಿಯನ್ನು ಬಂಧಿಸಿದ್ದು, ಏಳು ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ. ಸಂಭಾಲ್‌ನ ಸಮಾಜವಾದಿ ಪಕ್ಷದ ಸಂಸದ ಝಿಯಾ-ಉರ್-ರೆಹಮಾನ್ ಬಾರ್ಕ್, ಪಕ್ಷದ ಸ್ಥಳೀಯ ಶಾಸಕ ಇಕ್ಬಾಲ್ ಮೆಹಮೂದ್ ಅವರ ಪುತ್ರ ಸೊಹೇಲ್ ಇಕ್ಬಾಲ್ ಸೇರಿದಂತೆ 2,750 ಕ್ಕೂ ಹೆಚ್ಚು ಅಪರಿಚಿತ ಶಂಕಿತರನ್ನು ಆರೋಪಿಗಳನ್ನಾಗಿ ಮಾಡಲಾಗಿದೆ.

ಮ್ಯಾಜಿಸ್ಟ್ರೇಟ್ ವಿಚಾರಣೆ ನಡೆಯುತ್ತಿದೆ ಮತ್ತು ಪರಿಸ್ಥಿತಿ ಈಗ ನಿಯಂತ್ರಣದಲ್ಲಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಕೃಷ್ಣ ಕುಮಾರ್ ವಿಷ್ಣೋಯ್ ಸೋಮವಾರ ಹೇಳಿದ್ದಾರೆ. “ಅಶಾಂತಿಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು” ಎಂದಿದ್ದಾರೆ.

ಇದನ್ನೂ ಓದಿ : ಲಖಿಂಪುರ ಖೇರಿ ಹಿಂಸಾಚಾರದ ಸಾಕ್ಷಿಗಳಿಗೆ ಬೆದರಿಕೆ | ಪ್ರತಿಕ್ರಿಯೆ ನೀಡುವಂತೆ ಆಶಿಶ್ ಮಿಶ್ರಾಗೆ ಸುಪ್ರೀಂ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...