Homeಮುಖಪುಟಸಲಿಂಗ ವಿವಾಹ ಕಾನೂನುಬದ್ಧಗೊಳಿಸುವ ವಿಚಾರ: ಸಿಪಿಐ(ಎಂ), ಕಾಂಗ್ರೆಸ್‌ ಮುಖಂಡರಿಂದ ಬೆಂಬಲ

ಸಲಿಂಗ ವಿವಾಹ ಕಾನೂನುಬದ್ಧಗೊಳಿಸುವ ವಿಚಾರ: ಸಿಪಿಐ(ಎಂ), ಕಾಂಗ್ರೆಸ್‌ ಮುಖಂಡರಿಂದ ಬೆಂಬಲ

- Advertisement -
- Advertisement -

ಸಲಿಂಗ ವಿವಾಹವನ್ನು ಕಾನೂನುಬದ್ಧಗೊಳಿಸುವ ವಿಷಯದ ಬಗ್ಗೆ ಸುಪ್ರೀಂ ಕೋರ್ಟ್‌ನಲ್ಲಿ ವಿರೋಧ ಪಕ್ಷಗಳು ಎಚ್ಚರಿಕೆಯ ಮೌನವನ್ನು ಅನುಸರಿಸುತ್ತಿವೆ. ಆದರೆ ಸಿಪಿಐ(ಎಂ) ಹಾಗೂ ಕಾಂಗ್ರೆಸ್‌ ಇಬ್ಬರು ನಾಯಕರು ಬಹಿರಂಗವಾಗಿಯೇ ಸಲಿಂಗ ವಿವಾಹವನ್ನು ಕಾನೂನುಬದ್ಧಗೊಳಿಸಬೇಕು ಎಂದು ಹೇಳಿದ್ದಾರೆ.

ಕೇಂದ್ರವು ಸಲಿಂಗ ವಿವಾಹವನ್ನು ವಿರೋಧಿಸಿತು ಮತ್ತು ಈ ಬಗ್ಗೆ ಸಂಸತ್ತಿನಲ್ಲಿ ನಿರ್ಧಾರ ತಗೆದುಕೊಳ್ಳಲು ಬಿಡಬೇಕು ಎಂದು ಹೇಳಿತು. ಆದರೆ ಸುಪ್ರೀಂ ಕೋರ್ಟ್, ಈ ಸಮಸ್ಯೆಯನ್ನು ಐದು ನ್ಯಾಯಾಧೀಶರ ಸಾಂವಿಧಾನಿಕ ಪೀಠಕ್ಕೆ ಸೋಮವಾರ ವರ್ಗಾಯಿಸಿದೆ.

ವೈಯಕ್ತಿಕ ಅಭಿಪ್ರಾಯಗಳನ್ನು ಹೊರತುಪಡಿಸಿ, ಹೆಚ್ಚಿನ ಪಕ್ಷಗಳ ನಾಯಕರು, ಆಫ್ ದಿ ರೆಕಾರ್ಡ್ ಮಾತನಾಡುತ್ತಾ, ಐಪಿಸಿ ಸೆಕ್ಷನ್ 377ರ ಪ್ರಕರಣದಲ್ಲಿ ಮಾಡಿದಂತೆ ಸರ್ವೋಚ್ಚ ನ್ಯಾಯಾಲಯವು ಸಲಿಂಗ ವಿವಾಹದ ಪರವಾಗಿ ಅಥವಾ ವಿರುದ್ಧವಾಗಿ ತನ್ನ ತೀರ್ಪನ್ನು ಘೋಷಿಸದರೆ ಅದರಂತೆ ತಮ್ಮ ನಿಲುವು ತಾಳಲು ಸಿದ್ದರಾಗಿದ್ದಾರೆ ಎಂದು ಹೇಳಿದರು. ಸಲಿಂಗಕಾಮವನ್ನು ಅಪರಾಧವೆಂದು ಪರಿಗಣಿಸುವ ಸೆಕ್ಷನ್‌ಅನ್ನು 2018ರಲ್ಲಿ ಸುಪ್ರೀಂ ಕೋರ್ಟ್ ರದ್ದುಗೊಳಿಸಿತ್ತು ಎಂದು ಪ್ರತಿಪಕ್ಷದ ನಾಯಕರು ಸರ್ಕಾರದ ಕಾಲೆಳೆದಿದ್ದಾರೆ.

2018ರ ಸುಪ್ರೀಂ ಕೋರ್ಟ್ ತೀರ್ಪನ್ನು ಸ್ವಾಗತಿಸಿದ ಕಾಂಗ್ರೆಸ್, ಸಲಿಂಗ ವಿವಾಹದ ಬಗ್ಗೆ ಎಚ್ಚರದಿಂದಿತ್ತು. ಈ ಬಗ್ಗೆ ಪಕ್ಷದ ನಿಲುವು ಏನು ಎಂದು ಕೇಳಿದಾಗ, “ಇದು ಈಗ ಯೋಚಿಸುವ ವಿಷಯವಲ್ಲ” ಎಂದು ಹಿರಿಯ ನಾಯಕರೊಬ್ಬರು ಹೇಳಿದರು.

ಕೆಲವು ನಾಯಕರು ಖಾಸಗಿಯಾಗಿ ಮಾತನಾಡುವ ವೇಳೆ, ಸಲಿಂಗ ವಿವಾಹವು ಅನ್ಯಲೋಕದ ಪರಿಕಲ್ಪನೆಯಾಗಿದೆ ಎಂದು ವಾದಿಸಿದರು ಮತ್ತು ಈ ರೀತಿಯ ಸಮಸ್ಯೆಗಳು ತಮ್ಮ ಪಕ್ಷಗಳ ಅಜೆಂಡಾಗಳಲ್ಲಿ ಕಂಡುಬರುವುದಿಲ್ಲ ಎಂದು ಹೇಳಿದರು.

ಇದನ್ನೂ ಓದಿ: ಸಲಿಂಗ ವಿವಾಹ ಮಾನ್ಯತೆಗಾಗಿ ಸುಪ್ರೀಂಕೋರ್ಟ್‌ಗೆ ಪತ್ರ; ಕೇಂದ್ರದ ನಿಲುವಿಗೆ ವಿರೋಧ

ಸಲಿಂಗ ವಿವಾಹವನ್ನು ಸಿಪಿಐ(ಎಂ) ಬಹಿರಂಗವಾಗಿ ಬೆಂಬಲಿಸಿದೆ. ಈ ಬಗ್ಗೆ ಹಿರಿಯ ಸಿಪಿಐ(ಎಂ) ನಾಯಕಿ ಬೃಂದಾ ಕಾರಟ್ ಇಂಡಿಯನ್ ಎಕ್ಸ್‌ಪ್ರೆಸ್‌ ಜೊತೆ ಮಾತನಾಡಿದ್ದು, ”ಸಲಿಂಗ ಪಾಲುದಾರರ ಮದುವೆಯಾಗಲು ಕಾನೂನು ಮಾನ್ಯತೆ ಪಡೆಯುವ ಅವರ ಹಕ್ಕುಗಳನ್ನು ನಾವು ಬೆಂಬಲಿಸುತ್ತೇವೆ. ಪ್ರಸ್ತುತ ಸರ್ಕಾರವು ಅಂತಹ ಹಕ್ಕನ್ನು ಬೆಂಬಲಿಸುವುದಿಲ್ಲ ಎಂದು ಸ್ಪಷ್ಟಪಡಿಸಿರುವುದರಿಂದ ನ್ಯಾಯಾಲಯವು ಮಧ್ಯಪ್ರವೇಶಿಸಬೇಕು ಎಂದು ಅವರು ತಿಳಿಸಿದರು.

ಈ ಹಿಂದೆಯೂ ಸಹ 2009ರಲ್ಲಿ ದೆಹಲಿ ಹೈಕೋರ್ಟ್, ”ಇಬ್ಬರು ವಯಸ್ಕರ ನಡುವಿನ ಸಮ್ಮತಿಯ ಸಂಭೋಗವು ಕಾನೂನುಬಾಹಿರವಲ್ಲ” ಎಂದು  ಮೊದಲ ಬಾರಿಗೆ ತೀರ್ಪು ನೀಡಿದಾಗ, ಸಲಿಂಗ ಸಂಬಂಧಗಳ ಅನೈತಿಕೀಕರಣವನ್ನು ಬೆಂಬಲಿಸುವ ಸ್ಪಷ್ಟ ನಿಲುವನ್ನು ಸಿಪಿಐ(ಎಂ) ಮತ್ತು ಸಿಪಿಐ ಮಾತ್ರ ತೆಗೆದುಕೊಂಡಿದ್ದವು.

ಈ ಬಗ್ಗೆ ಕಾಂಗ್ರೆಸ್ ಲೋಕಸಭಾ ಸಂಸದ ಶಶಿ ತರೂರ್ ಅವರ ಅಭಿಪ್ರಾಯಗಳನ್ನು ಕೇಳಿದಾಗ, ”ತಮ್ಮ ಪಕ್ಷದ ಪರವಾಗಿ ಮಾತನಾಡಲು ಸಾಧ್ಯವಿಲ್ಲ ಆದರೆ ಸಲಿಂಗ ವಿವಾಹವನ್ನು ನಾನು ಖಂಡಿತವಾಗಿಯೂ ಬೆಂಬಲಿಸುತ್ತೇನೆ” ಎಂದು ಹೇಳಿದರು.

”ಸಲಿಂಗ ಪಾಲುದಾರರಿಗೆ ಮದುವೆಯ ಕಾನೂನು ಹಕ್ಕುಗಳನ್ನು ನೀಡುವ ಒಪ್ಪಂದದ ವ್ಯವಸ್ಥೆ ಭಾರತೀಯ ಸಮಾಜದಲ್ಲಿ ಹೇಗೆ ಕಾರ್ಯನಿರ್ವಹಿಸುತ್ತದೆ ಎಂಬುದನ್ನು ನೋಡಬೇಕು. ಅದರಿಂದ ಅವರ ಹಕ್ಕುಗಳಿಗೆ ಮಾನ್ಯತೆ ನೀಡಿದಂತಾಗುತ್ತದೆ ಹಾಗಾಗಿ ಸಲಿಂಗ ವಿವಾಹವನ್ನು ಅನುಮತಿಸಬೇಕು” ಎಂದು ಅವರು ಹೇಳಿದರು.

ಅವರ ಪಕ್ಷದ ಸಹೋದ್ಯೋಗಿ ಮತ್ತು ಲೋಕಸಭಾ ಸಂಸದ ಮನೀಶ್ ತಿವಾರಿ ಅವರು ತಮ್ಮ ವೈಯಕ್ತಿಕ ಅಭಿಪ್ರಾಯದಲ್ಲಿ ಸಲಿಂಗ ವಿವಾಹವನ್ನು ಬೆಂಬಲಿಸಿದ್ದಾರೆ ಎಂದು ತರೂರ್ ಹೇಳಿದರು. ”ನಾನು ಈ ವಿಚಾರದಲ್ಲಿ ಕಾಂಗ್ರೆಸ್ ಪರವಾಗಿ ಮಾತನಾಡುವುತ್ತಿಲ್ಲ, ಸಂಸದನಾಗಿ ನನ್ನ ವೈಯಕ್ತಿಕ ಅಭಿಪ್ರಾಯವೆಂದರೆ, ಸುಪ್ರೀಂ ಕೋರ್ಟ್‌ನ ಐದು ನ್ಯಾಯಾಧೀಶರ ಸಂವಿಧಾನ ಪೀಠವು ಐಪಿಸಿಯ ಸೆಕ್ಷನ್ 377ಅನ್ನು ಸರ್ವಾನುಮತದಿಂದ ಓದಿದ ನಂತರ … ಒಂದೇ ಲೈಂಗಿಕತೆಯ ಜನರು ಸಹಬಾಳ್ವೆ ಮಾಡಿದರೆ ಯಾವುದೇ ಅಪರಾಧವಿಲ್ಲ. ಅಂತಹ ಸಂದರ್ಭಗಳಲ್ಲಿ, ಆ ಸಂಬಂಧವನ್ನು ಕಾನೂನುಬದ್ಧಗೊಳಿಸುವ ಕಾನೂನು ಸಹಜವಾದ ಫಲಿತಾಂಶವಾಗಿರಬೇಕು” ಎಂದು ಅವರು ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದರು.

ಮೂಲಗಳ ಪ್ರಕಾರ, ಈ ವಿಷಯಕ್ಕೆ ವೈಯಕ್ತಿಕ ಬೆಂಬಲವನ್ನು ನೀಡಬಹುದಾದ ಒಬ್ಬ ನಾಯಕನೆಂದರೆ ಅದು ಹಿರಿಯ ತೃಣಮೂಲ ಕಾಂಗ್ರೆಸ್ ನಾಯಕ ಮತ್ತು ರಾಜ್ಯಸಭೆಯಲ್ಲಿ ಅದರ ನಾಯಕ ಡೆರೆಕ್ ಒ’ಬ್ರಿಯಾನ್ ಅವರು. ಸಲಿಂಗ ವಿವಾಹವನ್ನು ಕಾನೂನುಬದ್ಧಗೊಳಿಸುವಂತೆ ಕೋರಿ ಖಾಸಗಿ ಸದಸ್ಯರ ಮಸೂದೆಯನ್ನು ಮಂಡಿಸಲು ಅವರು ನೋಟಿಸ್ ನೀಡಿದ್ದಾರೆ ಎಂದು ಹೇಳಲಾಗುತ್ತದೆ. ಆದರೂ ಈ ವಿಚಾರದಲ್ಲಿ ತೃಣಮೂಲ ಕಾಂಗ್ರೆಸ್‌ನ ದೃಷ್ಟಿಕೋನವು ಸ್ಪಷ್ಟವಾಗಿಲ್ಲ.

ಜೆಡಿಯು ಪಕ್ಷದ ನಿಲುವಿನ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಕೆ ಸಿ ತ್ಯಾಗಿ, ”ನಾನು ಈ ವಿಷಯದಲ್ಲಿ ಅಷ್ಟು ಪಕ್ವತೆ ಹೊಂದಿಲ್ಲ ಹಾಗಾಗಿ ನಾನು ಇಷ್ಟು ಬೇಗ ಪ್ರತಿಕ್ರಿಯಿಸಲಾರೆ. ಈ ಬಗ್ಗೆ ಯೋಚಿಸುತ್ತೇನೆ ಎಂದು ಹೇಳಿದರು.

ಭಾರತ್ ರಾಷ್ಟ್ರ ಸಮಿತಿಯ ರಾಜ್ಯಸಭಾ ಸಂಸದ ಕೆ.ಕೇಶವ ರಾವ್ ಅವರು ಆಮ್ ಆದ್ಮಿ ಪಕ್ಷ ಮತ್ತು ಶಿವಸೇನೆಯ ನಾಯಕರು ಪ್ರತಿಕ್ರಿಯಿಸಲು ನಿರಾಕರಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...