Homeಮುಖಪುಟಮೊಟ್ಟೆ ಎಸೆದವ ಆರ್‌ಎಸ್‌ಎಸ್ಸೋ/ಬಿಜೆಪಿಯೋ, ಕಾಂಗ್ರೆಸ್ಸೋ, ಜೆಡಿಎಸ್ಸೋ?

ಮೊಟ್ಟೆ ಎಸೆದವ ಆರ್‌ಎಸ್‌ಎಸ್ಸೋ/ಬಿಜೆಪಿಯೋ, ಕಾಂಗ್ರೆಸ್ಸೋ, ಜೆಡಿಎಸ್ಸೋ?

- Advertisement -
- Advertisement -

ವಿಧಾನಸಭೆ ವಿರೋಧ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೊಡಗಿಗೆ ಆಗಮಿಸಿದ್ದ ವೇಳೆ ಅವರ ಕಾರಿನ ಮೇಲೆ  ಮೊಟ್ಟೆ ಎಸೆದು ಸಿಕ್ಕಿಬಿದ್ದಿರುವ ಆರೋಪಿ ಸಂಪತ್, ಯಾವ ಪಕ್ಷದವನು ಎಂಬ ಚರ್ಚೆ ಮುನ್ನೆಲೆಗೆ ಬಂದಿದೆ.

ಆತ ಬಿಜೆಪಿ ಕಾರ್ಯಕರ್ತ ಎಂಬ ಆರೋಪಗಳಿವೆ. ಆದರೆ ಆರೋಪಿ ನೀಡುತ್ತಿರುವ ಹೇಳಿಕೆಗಳು ಗೊಂದಲಕಾರಿಯಾಗಿವೆ. ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿರುವ ಆತನ ಫೋಟೋಗಳು ಸಂಶಯಗಳಿಗೆ ಎಡೆಮಾಡಿಕೊಟ್ಟಿವೆ.

ಆರೋಪಿ ಸಂಪತ್‌ ಆರ್‌ಎಸ್‌ಎಸ್‌/ಬಿಜೆಪಿಯವನೋ, ಕಾಂಗ್ರೆಸ್‌ ಪಕ್ಷದವನೋ ಅಥವಾ ಜೆಡಿಎಸ್‌ಗೆ ಸೇರಿದವನೋ ಎಂಬುದು ಈಗ ಚರ್ಚೆಗೆ ಗ್ರಾಸವಾಗಿದೆ.

throwing eggs at Siddaramaiahs car arrested man which party rsk mrq

“ನಾನು ಕೂಡ ಕಾಂಗ್ರೆಸ್ ಕಾರ್ಯಕರ್ತ” ಎಂದು ಸಂಪತ್‌ ಹೇಳಿದ ಬಳಿಕ ಆತನ ಹಳೆಯ ಫೋಟೋಗಳು ಹರಿದಾಡಿದವು. ಬಿಜೆಪಿ ಶಾಸಕ ಅಪ್ಪಚ್ಚು ರಂಜನ್‌ ಅವರ ಜೊತೆ ಕೇಸರಿ ಶಾಲು ಧರಿಸಿ ಆತ ನಿಂತಿರುವ ಫೋಟೋವನ್ನು ಸ್ವತಃ ಸಿದ್ದರಾಮಯ್ಯನವರೇ ಹಂಚಿಕೊಂಡರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಮೊಟ್ಟೆ ಎಸೆದ ವ್ಯಕ್ತಿ ಕಾಂಗ್ರೆಸ್ ಕಾರ್ಯಕರ್ತನಾಗಿದ್ದರೆ BJP Karnataka ಶಾಸಕ ಅಪ್ಪಚ್ಚು ರಂಜನ್ ರಾತೋರಾತ್ರಿ ಪೊಲೀಸ್ ಠಾಣೆಗೆ ಹೋಗಿ ಬಿಡಿಸಿಕೊಂಡು ಬಂದಿದ್ದು ಯಾಕೆ? ಕಾಂಗ್ರೆಸ್‌ನವನೆಂದು ಹೇಳಿಕೊಂಡರೆ ಮಾತ್ರ ಪೊಲೀಸರಿಂದ ಬಿಡಿಸ್ತೇನೆ ಎಂದು ಷರತ್ತು ಹಾಕಿ ಬಿಡುಗಡೆ ಮಾಡಿದಿರಾ?” ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

“’ಆಪರೇಷನ್ ಕಮಲ’ ಎಂದರೆ ಶಾಸಕರಿಗೆ ಮಾತ್ರ ಎಂದು ತಿಳಿದುಕೊಂಡಿದ್ದೆವು. ಈಗ ಬೀದಿ ಪುಂಡರ ‘ಆಪರೇಷನ್ ಕಮಲ’ ಕೂಡಾ ಬಿಜೆಪಿ ನಡೆಸುತ್ತದೆ ಎಂದು‌ ಮಡಿಕೇರಿಯಲ್ಲಿ ಸಾಬೀತಾಗಿದೆ. ಬಿಜೆಪಿಯ ಇಂತಹ ನಾಟಕಗಳೆಲ್ಲ ಹಳತಾಗಿದೆ. ಮೊಟ್ಟೆ ಎಸೆದವ ಕಾಂಗ್ರೆಸ್ ಪಕ್ಷದವನಾಗಿದ್ದರೆ ಅವನನ್ನು ಮೊದಲು ಜೈಲಿಗೆ ಕಳಿಸಿ. ನಿಮಗ್ಯಾಕೆ ಅವನ ಹಿತರಕ್ಷಣೆಯ ಉಸಾಬರಿ?” ಎಂದು ಕೇಳಿದರು.

ಮೊಟ್ಟೆ ಹೊಡೆದಿರುವ ವಿಡಿಯೋ ವೈರಲ್ ಆಗುತ್ತಿದ್ದಂತೆ ಮೊಟ್ಟೆ ಹೊಡೆದ ಕಿಡಿಗೇಡಿ ಕಾಂಗ್ರೆಸ್ ಕಾರ್ಯಕರ್ತ ಎಂದು ಬಿಜೆಪಿಯ ಹಲವರು ಪ್ರತಿಪಾದಿಸಿದರು. ಆರೋಪಿ ಸಂಪತ್ ಕಾಂಗ್ರೆಸ್ ಬಾವುಟ ಹಿಡಿದಿರುವ ಫೋಟೋ ಬಿಡುಗಡೆ ಮಾಡಿದರು. ಆದರೆ ಶನಿವಾರ ಬೆಳಿಗ್ಗೆ ಮಡಿಕೇರಿಯ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಜಿಲ್ಲಾ ಯೂತ್ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ಗೌಡ, “ಮೊಟ್ಟೆ ಹೊಡೆದ ಕಿಡಿಗೇಡಿ ಬಿಜೆಪಿ ಪಕ್ಷದ ಕಾರ್ಯಕರ್ತ” ಎಂದು ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್ ಅವರೊಂದಿಗೆ ಸಂಪತ್ ಇರುವ ಫೋಟೋಗಳನ್ನು ಬಿಡುಗಡೆ ಮಾಡಿದರು.

throwing eggs at Siddaramaiahs car arrested man which party rsk mrq

ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ಶಾಸಕ ಅಪ್ಪಚ್ಚು ರಂಜನ್, “ಈತ ಯಾರು ಎನ್ನುವುದೇ ಗೊತ್ತಿಲ್ಲ, ಆತನ ಪರಿಚಯವೂ ಇಲ್ಲ. ಆದರೆ ಕಾರ್ಯಕರ್ತರನ್ನು ವಿಚಾರಿಸಿದಾಗ ಅವನು ರಾಮನವಮಿಯಲ್ಲಿ ನಿಮ್ಮೊಂದಿಗೆ ಕೇಸರಿ ಶಲ್ಯ ಹಾಕಿಕೊಂಡು ಫೋಟೋ ತೆಗೆಸಿಕೊಂಡಿದ್ದ ಎಂದು ತಿಳಿದುಬಂದಿತು” ಎಂದಿದ್ದಾರೆ.

ಇಷ್ಟರ ನಡುವೆ ಕಾಂಗ್ರೆಸ್‌ ಪಕ್ಷದ ಅಧಿಕೃತ ಟ್ವಿಟರ್‌ ಖಾತೆಯಲ್ಲಿ ಮತ್ತೊಂದು ಟ್ವೀಟ್ ಮಾಡಲಾಗಿದ್ದು, ಆರ್‌ಎಸ್‌ಎಸ್‌ ಜೊತೆಗೆ ಸಂಪತ್‌ನ ಸಂಪರ್ಕ ಇತ್ತೆಂದು ಪ್ರತಿಪಾದಿಸಲಾಗಿದೆ. “ಆರ್‌ಎಸ್‌ಎಸ್‌ ಶಿಬಿರದಲ್ಲಿ ಸಂತೋಷ್ ಪಾಲ್ಗೊಂಡಿದ್ದಾನೆ” ಎಂದು ಕಾಂಗ್ರೆಸ್ ಹೇಳಿದೆ.

“ಬಿಜೆಪಿ ಮತ್ತು ಆರ್‌ಎಸ್‌ಎಸ್‌ ತನ್ನ ಅಜೆಂಡಾ ಸ್ಥಾಪಿಸಲು ತಮ್ಮಲ್ಲಿನ ಮುಗ್ದ ಕಾರ್ಯಕರ್ತರಿಗೆ ಯಾವ ವೇಷವನ್ನು ಬೇಕಿದ್ದರೂ ಹಾಕಿ ಕಳಿಸುತ್ತವೆ. ಯಾವ ಕೃತ್ಯಗಳನ್ನು ಬೇಕಿದ್ದರೂ ಮಾಡಿಸುತ್ತವೆ, ಅವರನ್ನೇ ಕೊಂದು ಚಿತೆಯಲ್ಲಿ ಚಳಿ ಕಾಯಿಸಿಕೊಳ್ಳುತ್ತವೆ. ಆರ್‌ಎಸ್‌ಎಸ್‌ ‘ಪ್ಯಾಂಟು’ ತೊಟ್ಟವನಿಗೆ ಕಾಂಗ್ರೆಸ್ ವೇಷ ತೋಡಿಸಿದ ಮಾತ್ರಕ್ಕೆ ಕಾಗೆ ನವಿಲಾಗುತ್ತದೆಯೇ?” ಎಂದು ಕಾಂಗ್ರೆಸ್ ಕುಟುಕಿದೆ.

ಇಷ್ಟೆಲ್ಲದರ ನಡುವೆ ಸಂತೋಷ್‌ ಮೂಲತಃ ಜೆಡಿಎಸ್‌ನವನು ಎಂದು ಹೇಳಲಾಗುತ್ತಿದೆ.

ಟಿ.ವಿ.9 ಕನ್ನಡ ಸುದ್ದಿವಾಹಿನಿಯ ಜೊತೆ ಮಾತನಾಡಿರುವ ಆರೋಪಿ ಸಂತೋಷ್‌, “ನನಗೆ ಹೆದರಿಕೆಯೇನೂ ಆಗುತ್ತಿಲ್ಲ. ಆದರೆ ಈಗ ಬೆದರಿಕೆ ಕರೆಗಳು ಬರುತ್ತಿವೆ. ನನ್ನ ಮನೆಗೆ ಬೆಂಕಿ ಇಡುವುದಾಗಿ, ಬಸ್‌ಸ್ಟ್ಯಾಂಡ್‌ನಲ್ಲಿ ನಿಲ್ಲಿಸಿ ಮೊಟ್ಟೆ ಸ್ನಾನ ಮಾಡಿಸುವುದಾಗಿ ಹೇಳುತ್ತಿದ್ದಾರೆ” ಎಂದು ಆರೋಪಿಸಿದ್ದಾನೆ.

“ನೀವು ನಿಜವಾಗಿಯೂ ಯಾವ ಪಕ್ಷದವರು? ಜೆಡಿಎಸ್‌ನಲ್ಲಿದ್ದ ಜೀವಿಜಯ ಅವರ ಅನುಯಾಯಿ ಎಂದೂ ನೀವು ಹೇಳಿಕೊಂಡಿದ್ದೀರಿ? ನೀವು ನಿಜಕ್ಕೂ ಯಾವ ಪಕ್ಷದವರು?” ಎಂದು ಟಿ.ವಿ.9 ಪ್ರತಿನಿಧಿ ಕೇಳಿದಾಗ, “ನಾನು ಜೆಡಿಎಸ್‌. ಮೂಲತಃ ನಾನು ಮೊದಲು ಜೆಡಿಎಸ್‌ನಲ್ಲಿದ್ದೆ. ಲೋಕಸಭಾ ಚುನಾವಣೆಯಲ್ಲಿ ಎರಡೂ ಪಕ್ಷಗಳು ಜೊತೆಯಾಗಿ ಸ್ಪರ್ಧೆ ಮಾಡಿದವು. ಕಾಂಗ್ರೆಸ್‌ ಪಕ್ಷಕ್ಕಾಗಿ ಕೆಲಸ ಮಾಡಲು ಹೇಳಿದರು. ಆಗ ನಾನು ಕಾಂಗ್ರೆಸ್‌ಗೆ ಕೆಲಸ ಮಾಡಿದ್ದೇನೆ. ನಂತರ ಪಟ್ಟಣ ಪಂಚಾಯಿತಿ ಚುನಾವಣೆ ಬಂತು. ಹನ್ನೊಂದು ವಾರ್ಡ್‌ಗಳಲ್ಲಿ ಐದು ವಾರ್ಡ್ ಜೆಡಿಎಸ್‌ಗೆ ಮೀಸಲಾದವು. ನನ್ನ ವಾರ್ಡ್ ಕಾಂಗ್ರೆಸ್‌ಗೆ ಸೀಮಿತವಾಯ್ತು. ಕಾಂಗ್ರೆಸ್‌ಗಾಗಿ ಕೆಲಸ ಮಾಡಿದ್ದೇನೆ. ಯಾರೂ ಇರಲಿಲ್ಲ. ಕಾಂಗ್ರೆಸ್‌ನವರು ಒಬ್ಬರೇ ಒಬ್ಬರು ಬಂದಿಲ್ಲ” ಎಂದಿದ್ದಾನೆ.

ಇದನ್ನೂ ಓದಿರಿ: ಸಕಲೇಶಪುರ: ದನ ಸಾಗಿಸುತ್ತಿದ್ದಾನೆಂದು ದಲಿತ ಮುಖಂಡನ ಮೇಲೆ ಬಜರಂಗದಳದ ದುಷ್ಕರ್ಮಿಗಳಿಂದ ಹಲ್ಲೆ

ಕೇಸರಿ ವಸ್ತ್ರ ಧರಿಸಿ ಹಲವು ಕಾರ್ಯಕ್ರಮಗಳಲ್ಲಿ ಆತ ಭಾಗಿಯಾಗಿದ್ದಾನೆಂದು ಪ್ರತಿಪಾದಿಸಿದ ಹಲವಾರು ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿವೆ. ಹಿರಿಯ ಪತ್ರಕರ್ತರಾದ ದಿನೇಶ್ ಅಮೀನ್‌ ಮಟ್ಟು ಅವರು ಫೇಸ್‌ಬುಕ್‌ನಲ್ಲಿ, “ಈ ಮೊಟ್ಟೆಯ ಸಂಪತ್‌, ರಂಜನ್‌ ಅವರನ್ನು ಅಪ್ಪಚ್ಚಿ ಮಾಡಿಬಿಟ್ಟಿದ್ದಾನೆ” ಎಂಬ ಶೀರ್ಷಿಕೆಯೊಂದಿಗೆ ಹಲವು ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಹೀಗೆ ಆರೋಪಿ ಸಂಪತ್ ಸುತ್ತ ಹಲವು ಸುದ್ದಿಗಳು ಹುಟ್ಟಿಕೊಂಡಿವೆ. ಆತ ಮೂಲತಃ ಆರ್‌ಎಸ್‌ಎಸ್ಸೋ/ಬಿಜೆಪಿಯೋ, ಕಾಂಗ್ರೆಸ್ಸೋ, ಜೆಡಿಎಸ್ಸೋ ಎಂಬ ಗೊಂದಲಗಳು ಹುಟ್ಟಿಕೊಂಡಿವೆ. ಆದರೆ ದುಷ್ಕೃತ್ಯ ನಡೆಸಿ ಆತ ಪೇಚಿಗೆ ಸಿಲುಕಿರುವುದಂತೂ ಮೇಲು ನೋಟಕ್ಕೆ ಸ್ಪಷ್ಟವಾಗುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...