ಕಾರ್ಮಿಕರ ಹೋರಾಟಕ್ಕೆ ಬಹುದೊಡ್ಡ ಜಯ : ‘ಸ್ಯಾಮ್‌ಸಂಗ್ ಇಂಡಿಯಾ ವರ್ಕರ್ಸ್ ಯೂನಿಯನ್’ ನೋಂದಾಯಿಸಿದ ಸರ್ಕಾರ

ಸ್ಯಾಮ್‌ಸಂಗ್ ಇಂಡಿಯಾದ ಶ್ರೀಪೆರಂಬದೂರ್ ಘಟಕದ ಕಾರ್ಮಿಕರ ಸುದೀರ್ಘ ಹೋರಾಟಕ್ಕೆ ಮಣಿದ ತಮಿಳುನಾಡು ಕಾರ್ಮಿಕ ಇಲಾಖೆಯು ಜನವರಿ 27, ಸೋಮವಾರದಂದು ‘ಸ್ಯಾಮ್‌ಸಂಗ್ ಇಂಡಿಯಾ ವರ್ಕರ್ಸ್ ಯೂನಿಯನ್’ (ಎಸ್‌ಐಡಬ್ಲ್ಯೂಯು) ಅನ್ನು ಅಧಿಕೃತವಾಗಿ ನೋಂದಾಯಿಸಿದೆ. ಈ ಮೂಲಕ ಕಾರ್ಮಿಕರ ಹೋರಾಟಕ್ಕೆ ಬಹುದೊಡ್ಡ ಜಯ ಸಿಕ್ಕಂತಾಗಿದೆ. ಕೆಲಸದ ಸ್ಥಳದ ವಾತಾವರಣ ಸುಧಾರಿಸಬೇಕು, ವೇತನ ಪರಿಷ್ಕರಣೆ ಮತ್ತು ಕಾರ್ಮಿಕ ಒಕ್ಕೂಟದ ನೋಂದಣಿಗೆ ಆಗ್ರಹಿಸಿ ಸೆಪ್ಟೆಂಬರ್ 9, 2024ರಿಂದ ಅಕ್ಟೋಬರ್ 15, 2024ರವರೆಗೆ ‘ಸ್ಯಾಮ್‌ಸಂಗ್ ಇಂಡಿಯಾ ವರ್ಕರ್ಸ್ ಯೂನಿಯನ್'(ಎಸ್‌ಐಡಬ್ಲ್ಯೂಯು) ಬ್ಯಾನರ್ ಅಡಿಯಲ್ಲಿ ಕಾರ್ಮಿಕರು ಪ್ರತಿಭಟನೆ ನಡೆಸಿದ್ದರು. … Continue reading ಕಾರ್ಮಿಕರ ಹೋರಾಟಕ್ಕೆ ಬಹುದೊಡ್ಡ ಜಯ : ‘ಸ್ಯಾಮ್‌ಸಂಗ್ ಇಂಡಿಯಾ ವರ್ಕರ್ಸ್ ಯೂನಿಯನ್’ ನೋಂದಾಯಿಸಿದ ಸರ್ಕಾರ