Homeಕರ್ನಾಟಕಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

- Advertisement -
- Advertisement -

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು ರಾಜ್ಯ ಸರ್ಕಾರ ವಾಪಸ್ ಪಡೆಯಬೇಕು ಮತ್ತು ಯೋಜನೆಗಾಗಿ ಸುಮಾರು 9,640 ಎಕರೆ ಭೂ ಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ರದ್ದುಪಡಿಸಬೇಕು ಎಂದು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹಿಸಿದೆ.

ಸೋಮವಾರ (ಮೇ.18) ಬೆಂಗಳೂರಿನ ಗಾಂಧಿ ಭವನದಲ್ಲಿ ಸಂಯುಕ್ತ ಹೋರಾಟ ಕರ್ನಾಟಕದ ಪದಾಧಿಕಾರಿಗಳಾದ ಬಡಗಲಪುರ ನಾಗೇಂದ್ರ, ಸಿದ್ದನಗೌಡ ಪಾಟೀಲ, ನೂರ್ ಶ್ರೀಧರ್, ಟಿ.ಯಶವಂತ, ಪಿ.ಪಿ ಅಪ್ಪಣ್ಣ, ಪ್ರಕಾಶ್ ಸೇರಿದಂತೆ ರೈತರು ಜಂಟಿ ಪತ್ರಿಕಾಗೋಷ್ಠಿ ನಡೆಸಿದರು.

ರಾಮನಗರ ಜಿಲ್ಲೆ ಬಿಡದಿ ಹೋಬಳಿ ಬೈರಮಂಗಲ ಹಾಗೂ ಕಂಚುಗಾರನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ 25 ಗ್ರಾಮಗಳ ಸುಮಾರು 9,640 ಎಕರೆ ಕೃಷಿ ಭೂಮಿ ನೀರಾವರಿ ಹೊಂದಿರುವ ತೆಂಗು, ಅಡಿಕೆ, ಬಾಳೆ, ಮಾವು ಸೇರಿದಂತೆ ವಿವಿಧ ರೀತಿಯ ತೋಟಗಾರಿಕೆ ಬೆಳೆಗಳನ್ನು ಬೆಳೆಯುತ್ತಿರುವ ಸಮೃದ್ಧ ಹಸಿರು ಪ್ರದೇಶವಾಗಿದೆ ಎಂದರು.

ಈ ಪ್ರದೇಶವು ಜಿಬಿಎ ಗಡಿಗೆ ಹೊಂದಿಕೊಂಡಂತೆ ಇದ್ದು, ಬೆಂಗಳೂರು ಮಹಾನಗರಕ್ಕೆ ಹಾಲು, ಹಣ್ಣು, ತರಕಾರಿ ಮುಂತಾದ ದಿನನಿತ್ಯದ ಅಗತ್ಯಗಳನ್ನು ಪೂರೈಸುವ ಅಮೂಲ್ಯ ಆಹಾರದ ಕಣಜವಾಗಿದೆ. ಇಲ್ಲಿನ ಎಲ್ಲ ಕೃಷಿ ಕುಟುಂಬಗಳು ತಮ್ಮ ಸಣ್ಣ ಹಿಡುವಳಿಯಲ್ಲೇ ಮಿಶ್ರ ಬೆಳೆ ಪದ್ದತಿಯನ್ನು ಅಳವಡಿಸಿಕೊಂಡು ಅಡಿಕೆ ತಟ್ಟೆ ತಯಾರಿಕೆ ಮುಂತಾದ ಕೃಷಿ ಆಧಾರಿತ ಸಣ್ಣ ಉದ್ದಿಮೆಗಳನ್ನು ಕಟ್ಟಿಕೊಂಡು ಉತ್ತಮ ಮಾರುಕಟ್ಟೆಯನ್ನು ಕಂಡುಕೊಂಡಿದ್ದಾರೆ. ಇಂತಹ ಸುಸ್ಥಿರ ಬದುಕಿನ ಮೇಲೆ ಬಲವಂತ ಹಾಗೂ ಅನ್ಯಾಯದ ಭೂ ಸ್ವಾಧೀನವನ್ನು ಯಾವುದೇ ಕಾರಣಕ್ಕೂ ಒಪ್ಪಲು ಸಾಧ್ಯವಿಲ್ಲ ಎಂದು ಹೋರಾಟಗಾರರು ತಿಳಿಸಿದರು.

ಜಿಬಿಎ ಅನುಷ್ಠಾನಗೊಳಿಸುತ್ತಿರುವ ಬಿಡದಿ ಸಮಗ್ರ ಉಪ ನಗರ ಯೋಜನೆಗಾಗಿ ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರ ಕಾಯ್ದೆ 1987ರ ಕಲಂ 17(1)ರ ಅಡಿಯಲ್ಲಿ 2025ರ ಮಾ.13 ರಂದು ಪ್ರಾಥಮಿಕ ಅಧಿಸೂಚನೆ ಹೊರಡಿಸಿದ ತಕ್ಷಣವೇ, ಸುಮಾರು 3,500ಕ್ಕೂ ಹೆಚ್ಚು ಸಣ್ಣ ಮತ್ತು ಅತಿ ಸಣ್ಣ ರೈತರು ಈ ಭೂ ಸ್ವಾಧೀನಕ್ಕೆ ಒಪ್ಪಿಗೆ ಇಲ್ಲ ಎಂದು ಲಿಖಿತವಾಗಿ ಆಕ್ಷೇಪಣೆಗಳನ್ನು ಸಲ್ಲಿಸಿದ್ದಾರೆ. ಇದುವರೆಗೂ ಈ ಯಾವ ರೈತರ ಆಕ್ಷೇಪಣೆಗಳನ್ನು ಸರ್ಕಾರ ಆಲಿಸಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಒಂದೂವರೆ ವರ್ಷದಿಂದ ವಿವಿಧ ಮಾದರಿಯಲ್ಲಿ ತಮ್ಮ ಬಲವಾದ ವಿರೋಧವನ್ನು ಇಲ್ಲಿನ ರೈತರು ದಾಖಲಿಸಿದ್ದು, 428ಕ್ಕೂ ಹೆಚ್ಚು ದಿನಗಳಿಂದ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಾ ಬಂದಿದ್ದರೂ, ಭಾದಿತ ರೈತರ ಜೊತೆ ಯಾವುದೇ ಸಮಾಲೋಚನೆ ನಡೆಸದೇ ಸಂಪುಟ ಅನುಮೋದನೆ ನೀಡಿರುವುದು ರೈತರ ಪ್ರಜಾಪ್ರಭುತ್ವ ಹಕ್ಕುಗಳ ನಗ್ನ ಉಲ್ಲಂಘನೆ ಹಾಗೂ ಸರ್ವಾಧಿಕಾರಿ ಕ್ರಮ. ಕೂಡಲೇ ಸಿದ್ದರಾಮಯ್ಯ ಸರ್ಕಾರ ಈ ಭೂ ಸ್ವಾಧೀನ ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಎಂದು ಹೋರಾಟಗಾರರು ಆಗ್ರಹಿಸಿದರು.

ಸರ್ಕಾರದ ರೈತ ವಿರೋಧಿ ನಡೆಯಿಂದಾಗಿ ಬಿಡದಿ ಮತ್ತೊಂದು ದೇವನಹಳ್ಳಿ ಹೋರಾಟ ಆಗಲಿಕ್ಕೆ ಹೊರಟಿದೆ. ಎರಡು ದಿನಗಳಾದರೆ ಸಿದ್ದರಾಮಯ್ಯ ಸರ್ಕಾರಕ್ಕೆ ಮೂರು ವರ್ಷ ತುಂಬಲಿದೆ. ಬಿಡದಿ ಟೌನ್‌ಶಿಪ್ ಯೋಜನೆಗೆ ರೈತರು ಯಾವುದೇ ಕಾರಣಕ್ಕೂ ಭೂಮಿ ಬಿಡುವುದಿಲ್ಲ. ಸರ್ಕಾರ ರಾಜಧಾನಿಯನ್ನು ಬಂಡವಾಳಿಗರ ಬೆಂಗಳೂರು ಮಾಡಲಿಕ್ಕೆ ಹೊರಟಿದೆ. ಇದರ ವಿರುದ್ಧ ದೊಡ್ಡ ಹೋರಾಟ ನಡೆಯಬೇಕಾಗುತ್ತದೆ. ಬಂಡವಾಳಿಗರ ಪರ ಆಡಳಿತ ನಡೆಸಿದ್ದೇ ಆದಲ್ಲಿ, ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಖಂಡಿತವಾಗಿಯೂ ಅಧಿಕಾರ ಕಳೆದುಕೊಳ್ಳುತ್ತದೆ. ಎಚ್ಚರಿಕೆಯಿಂದ ಈ ಬಿಡದಿ ಟೌನ್‌ಶಿಪ್ ಯೋಜನೆಯನ್ನು ಕೂಡಲೇ ಕೈ ಬಿಡಬೇಕು- ನೂರ್ ಶ್ರೀಧರ್, ಪದಾಧಿಕಾರಿ ಸಂಯುಕ್ತ ಹೋರಾಟ ಕರ್ನಾಟಕ
ಕೃಷಿ ಪ್ರದೇಶವನ್ನು ನಾಶ ಮಾಡಿ ನಿರ್ಮಾಣಗೊಂಡ ಲೇಔಟ್ ಹಾಗೂ ಬಡಾವಣೆಗಳು ಅಗತ್ಯ ಮೂಲಭೂತ ಸೌಕರ್ಯಗಳು ಇಲ್ಲದೇ ಬೆಂಗಳೂರು ಮಹಾನಗರದ ಭೂ ತಾಪಮಾನವನ್ನು ಗಣನೀಯವಾಗಿ ಹೆಚ್ಚಿಸಿ ರಿಯಲ್ ಎಸ್ಟೇಟ್ ಕಾಂಕ್ರೀಟ್ ಕಾಡಾನ್ನಾಗಿಸಿದೆ. ಲಕ್ಷಾಂತರ ನಿವೇಶನಗಳು, ನೂರಾರು ಅಪಾರ್ಟ್‌ಮೆಂಟ್‌ಗಳು ಹತ್ತಾರು ವರ್ಷಗಳಿಂದ ಖಾಲಿ ಬಿದ್ದಿವೆ. ಇಂತಹ ದುಸ್ಥಿತಿಯನ್ನು ವಿಸ್ತರಿಸಿ ಮಹಾನಗರದ ಜನ ಜೀವನವನ್ನು ಮತ್ತಷ್ಟು ಕಷ್ಟಕ್ಕೆ ಸಿಲುಕಿಸುವ ಬಿಡದಿ ಟೌನ್‌ಶಿಪ್ ನಂತಹ ಪರಿಸರ ವಿರೋಧಿ ಯೋಜನೆಗಳನ್ನು ಪರಿಸರವಾದಿಗಳು, ಸಾಹಿತಿಗಳು, ನೀತಿ ನಿರೂಪಕರು ಸೇರಿದಂತೆ ಎಲ್ಲ ಕಾಳಜಿಯುಳ್ಳ ನಾಗರಿಕರು ವಿರೋಧಿಸಬೇಕು- ಬಡಗಲಪುರ ನಾಗೇಂದ್ರ, ಪದಾಧಿಕಾರಿ ಸಂಯುಕ್ತ ಹೋರಾಟ ಕರ್ನಾಟಕ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...