- Advertisement -
- Advertisement -
ಕೃಷಿ ಕಾಯ್ದೆಗಳನ್ನು ವಿರೋಧಿಸಿ ನಡೆಯುತ್ತಿರುವ ರೈತ ಹೋರಾಟವನ್ನು ತೀವ್ರಗೊಳಿಸುವ ಸಲುವಾಗಿ ಫೆಬ್ರವರಿ 12 ರಿಂದ ರಾಜಸ್ಥಾನದ ಎಲ್ಲಾ ರಸ್ತೆ ಟೋಲ್ ಪ್ಲಾಜಾಗಳನ್ನು ಟೋಲ್ ಫ್ರೀ ಮಾಡಲಾಗುವುದು ಎಂದು ಸಂಯುಕ್ತ ಕಿಸಾನ್ ಮೋರ್ಚಾ ತೀರ್ಮಾನಿಸಿದೆ.
ಇಂದು ಮಹತ್ವದ ಸಭೆ ನಡೆಸಿದ ರೈತ ಮುಖಂಡರು ಫೆಬ್ರವರಿ 14 ರಂದು ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಸೈನಿಕರ ತ್ಯಾಗವನ್ನು ನೆನೆದು ದೇಶಾದ್ಯಂತ ಕ್ಯಾಂಡಲ್ ಮಾರ್ಚ್ ಮತ್ತು ಪಂಜಿನ ಮೆರವಣಿಗೆ ಮತ್ತು ಇತರ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದು ತಿಳಿಸಿದ್ದಾರೆ.
ಫೆಬ್ರವರಿ 16 ರಂದು ಮೆಸ್ಸೀಯ ಸೆರ್ ಚೋಟುರಾಮ್ ಅವರ ಜನ್ಮ ದಿನಾಚರಣೆಯನ್ನು ದೇಶಾದ್ಯಂತ ಆಚರಿಸುವ ಮೂಲಕ ರೈತರು ದೇಶಾದ್ಯಂತ ಒಗ್ಗಟ್ಟನ್ನು ಪ್ರದರ್ಶಿಸಬೇಕೆಂದು ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿದೆ.
ಫೆಬ್ರವರಿ 18 ರಂದು ದೇಶಾದ್ಯಂತ ಮಧ್ಯಾಹ್ನ 12 ರಿಂದ ಸಂಜೆ 4 ರವರೆಗೆ ದೇಶಾದ್ಯಂತ ರೈಲು ತಡೆ ನಡೆಸುವ ಮೂಲಕ ಹೋರಾಟ ತೀವ್ರಗೊಳಿಸುವುದಾಗಿ ಸಂಯುಕ್ತ ಕಿಸಾನ್ ಮೋರ್ಚಾದ ಡಾ. ದರ್ಶನ್ ಪಾಲ್ ತಿಳಿಸಿದ್ದಾರೆ.


