Homeಮುಖಪುಟಸಂಯುಕ್ತ ಕಿಸಾನ್ ಮೋರ್ಚಾ ಸಭೆ- ಪತ್ರಿಕಾಗೋಷ್ಟಿಯ ಮುಖ್ಯಾಂಶಗಳು

ಸಂಯುಕ್ತ ಕಿಸಾನ್ ಮೋರ್ಚಾ ಸಭೆ- ಪತ್ರಿಕಾಗೋಷ್ಟಿಯ ಮುಖ್ಯಾಂಶಗಳು

- Advertisement -
- Advertisement -

ದೆಹಲಿ ಗಡಿಗಳಲ್ಲಿ ನಡೆಯುತ್ತಿರುವ ಐತಿಹಾಸಿಕ ರೈತ ಹೋರಾಟದ ನಾಯಕತ್ವ ವಹಿಸಿರುವ ಸಂಯುಕ್ತ ಕಿಸಾನ್ ಮೋರ್ಚಾದ ಸಭೆ ಇಂದು ಸಿಂಘು ಗಡಿಯಲ್ಲಿ ನಡೆಯಿತು. ಸಭೆಯ ನಿರ್ಣಯಗಳನ್ನು ಪತ್ರಿಕಾಗೋಷ್ಠಿಯಲ್ಲಿ ಘೋಷಿಸಲಾಗಿದೆ. ಅದರ ಮುಖ್ಯಾಂಶಗಳು ಇಂತಿವೆ.

  1. ಸರ್ಕಾರವು ಇಂದು ಮಧ್ಯಾಹ್ನ ಲಿಖಿತವಾಗಿ ಪ್ರಸ್ತಾಪವನ್ನು ಎಸ್‌ಕೆಎಂಗೆ ಕಳಿಸಿದೆ. ಅದನ್ನು ಪರಿಗಣಿಸಲಾಗಿದೆ, ವಿಸ್ತೃತ ಚರ್ಚೆ ನಡೆಸುತ್ತದೆ ಮತ್ತು ಎಸ್‌ಕೆಎಂ ತನ್ನ ಉತ್ತರವನ್ನು ಸರ್ಕಾರಕ್ಕೆ ಕಳುಹಿಸುತ್ತದೆ.
  1. ನಾಳೆಯೊಳಗೆ ಸರ್ಕಾರವು ಪ್ರತಿಕ್ರಿಯೆ ನೀಡಿದರೆ ನಂತರ ಹೋರಾಟ ಅಂತ್ಯಗೊಳಿಸುವ ಕುರಿತು ಮುಂದಿನ ನಿರ್ಧಾರವನ್ನು ತೆಗೆದುಕೊಳ್ಳುತ್ತೇವೆ ಎಂದು ಎಸ್‌ಕೆಂ ಭಾವಿಸುತ್ತೇವೆ.
  2. ಎಂಎಸ್‌ಪಿ ಸಮಿತಿ ಬಗ್ಗೆ ಎಸ್‌ಕೆಎಂ ಸ್ಪಷ್ಟೀಕರಣವನ್ನು ಬಯಸುತ್ತದೆ. ಆ ಸಮಿತಿಯಲ್ಲಿ ಕೃಷಿ ಕಾನೂನುಗಳನ್ನು ಬೆಂಬಲಿಸಿದ ರೈತ ಸಂಘಟನೆಗಳನ್ನು ಒಳಗೊಳ್ಳಬಾರದು. ಡಬ್ಲುಟಿಓ ಪರವಾಗಿರುವರು ಸಹ ಇರಬಾರದು. ಕೇವಲ ಎಸ್‌ಕೆಎಂ ಪ್ರತಿನಿಧಿಗಳಿರಬೇಕು.
  3. ಕೃಷಿ ಕಾಯ್ದೆ ವಿರುದ್ಧದ ಹೋರಾಟದಲ್ಲಿ ದೇಶಾದ್ಯಂತ ರೈತರ ಮೇಲೆ ಪ್ರಕರಣಗಳು ದಾಖಲಾಗಿವೆ. ಪ್ರತಿಭಟನೆ ಅಂತ್ಯಗೊಳಿಸಿದ ನಂತರ ಅವರ ಮೇಲಿನ ಪ್ರಕರಣಗಳನ್ನು ವಾಪಸ್ ಪಡೆಯುವುದಾಗಿ ಸರ್ಕಾರ ಹೇಳುತ್ತಿದೆ. ಇದನ್ನು ಎಸ್‌ಕೆಎಂ ಒಪ್ಪುವುದಿಲ್ಲ. ಪ್ರಕರಣಗಳನ್ನು ವಾಪಸ್ ತೆಗೆದುಕೊಂಡ ನಂತರವೇ ಪ್ರತಿಭಟನೆ ಅಂತ್ಯವಾಗಲಿದೆ. ರೈತರೊಂದಿಗೆ ಕಲಾವಿದರು, ಚಿತ್ರನಟರು, ಸಾಮಾಜಿಕ ಕಾರ್ಯಕರ್ತರು ಮತ್ತು ವಿದೇಶಿ ವ್ಯಕ್ತಿಗಳ ಮೇಲಿನ ಪ್ರಕರಣಗಳನ್ನು ಹಿಂತೆಗೆದುಕೊಳ್ಳಬೇಕು.
  4. ವಿದ್ಯುತ್ ತಿದ್ದುಪಡಿ ಮಸೂದೆ ಸಂಸತ್ತಿನಲ್ಲಿ ಮಂಡನೆಯಾಗಬಾರದು.
  5. ಕೃಷಿ ತ್ಯಾಜ್ಯ ಸುಟ್ಟ ಪ್ರಕರಣಗಳನ್ನು ಎದುರಿಸುತ್ತಿರುವವರಿಗೆ ಹಣಕಾಸಿನ ದಂಡದ ಶಿಕ್ಷೆ ನೀಡಬಾರದು
  6. ಪಂಜಾಬ್ ಸರ್ಕಾರದ ಮಾದರಿಯಲ್ಲಿ ರೈತ ಹೋರಾಟದಲ್ಲಿ ಮೃತಪಟ್ಟ ರೈತ ಕುಟುಂಬಕ್ಕೆ ಪರಿಹಾರ ನೀಡಬೇಕು. ಪ್ರತಿ ಕುಟುಂಬಕ್ಕೆ 5 ಲಕ್ಷ ಪರಿಹಾರ ಮತ್ತು ಸರ್ಕಾರಿ ಉದ್ಯೋಗ ನೀಡಬೇಕು.

ಇದನ್ನೂ ಓದಿ: ಅಧಿಕಾರಕ್ಕೆ ಸತ್ಯ ನುಡಿದ ಚಿಂತಕರಿಗೆ ಸೆನ್ಸಾರ್ – ಅವರ ಚಿಂತನೆಗಳನ್ನು ಹುರುಪಿನಿಂದ ಪ್ರಚಾರ ಮಾಡುವುದೇ ದಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...