Homeಕರ್ನಾಟಕಸನಾತನ ಧರ್ಮದ ವಿವಾದ: ಬಸವಣ್ಣನ ವಚನದ ಮೂಲಕ ಬಿಎಲ್ ಸಂತೋಷ್‌ಗೆ ಪ್ರಿಯಾಂಕ್ ಖರ್ಗೆ ತಿರುಗೇಟು

ಸನಾತನ ಧರ್ಮದ ವಿವಾದ: ಬಸವಣ್ಣನ ವಚನದ ಮೂಲಕ ಬಿಎಲ್ ಸಂತೋಷ್‌ಗೆ ಪ್ರಿಯಾಂಕ್ ಖರ್ಗೆ ತಿರುಗೇಟು

- Advertisement -
- Advertisement -

‘ಸನಾತನ ಧರ್ಮ ಕೊನೆಗಾಣಿಸುವ’ ಡಿಎಂಕೆ ಮುಖಂಡ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಯನ್ನು ಪ್ರಿಯಾಂಕ್ ಖರ್ಗೆ ಬೆಂಬಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿದ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್‌ ಸಂತೋಷ್ ಅವರು ”ಯಾರಿಗಾದರೂ ಹೊಟ್ಟೆಯಲ್ಲಿ ಸೋಂಕಿದ್ದರೆ,  ಅವರ ತಲೆ ಕತ್ತರಿಸುತ್ತೀರಾ?” ಎಂದು ಕೇಳಿದ್ದಾರೆ.

ಸಂತೋಷ್ ಟ್ರೇಟ್‌ಗೆ ಪ್ರತಿಕ್ರಿಯೆ ನೀಡಿರುವ ಪ್ರಿಯಾಂಕ್ ಖರ್ಗೆ, ”ದಯವಿಲ್ಲದ ಧರ್ಮವಾವುದಯ್ಯಾ ? ದಯವೇ ಬೇಕು ಸಕಲ ಪ್ರಾಣಿಗಳಲ್ಲಿಯೂ ದಯವೇ ಧರ್ಮದ ಮೂಲವಯ್ಯಾ ಕೂಡಲಸಂಗಯ್ಯನಂತಲ್ಲದೊಲ್ಲನಯ್ಯಾ” ಎಂಬ ಬಸವಣ್ಣನವರ ವಚನವನ್ನು ಉಲ್ಲೇಖಿಸಿದ್ದಾರೆ.

”ಬಿ.ಎಲ್.ಸಂತೋಷ್ ಅವರೇ, ಸೋಂಕಿಗೆ ಚಿಕಿತ್ಸೆ ಬೇಕು ಎಂಬ ನಿಮ್ಮ ವಾದವನ್ನು ನಾನು ಒಪ್ಪುತ್ತೇನೆ, ಆದರೆ ಸಾವಿರಾರು ವರ್ಷಗಳಿಂದ ಬಹಳಷ್ಟು ಸೋಂಕುಗಳು ಈ ಸಮಾಜವನ್ನು ಕಾಡುತ್ತಿವೆ. ಆ ಸೋಂಕುಗಳು ಈಗಲೂ ಮುಂದುವರಿದಿದ್ದು, ಮನುಷ್ಯರ ನಡುವೆ ತಾರತಮ್ಯ ಸೃಷ್ಟಿಸಿವೆ. ಮನುಷ್ಯರು ಎಂಬ ಘನತೆಯನ್ನು ನೀಡಲು ಕೆಲವರಿಗೆ ನಿರಾಕರಿಸಿವೆ” ಎಂದಿದ್ದಾರೆ.

”ನಾನು ನಿಮ್ಮನ್ನು ಬುದ್ಧವಂತನಲ್ಲ. ನೀವು ದಯವಿಟ್ಟು ನನಗೂ ಮಾರ್ಗದರ್ಶನ ಮಾಡಿ. ಇಂಥ ಸಮಾಜವನ್ನು ಸೃಷ್ಟಿಸಿದವರು ಯಾರು? ಒಬ್ಬರು ಮತ್ತೊಬ್ಬರಿಗಿಂತ ನೀತಿವಂತರು ಎಂದು ಮಾಡಿದವರು ಯಾರು? ಜಾತಿ ಆಧಾರದಲ್ಲಿ ಸಮಾಜವನ್ನು ವಿಭಜಿಸಿದವರು ಯಾರು? ಒಂದಷ್ಟು ಜನ ಮತ್ತಷ್ಟು ಜನರಿಗೆ ಏಕೆ ಆಸ್ಪೃಶ್ಯರು? ಈಗಲೂ ಕೆಲ ದೇವಾಲಯಗಳಿಗೆ ಕೆಲವರಿಗೆ ಏಕೆ ಪ್ರವೇಶವಿಲ್ಲ? ಮಹಿಳೆಯರು ಕೀಳುಭಾವದಲ್ಲೇ ಬದುಕುವಂತೆ ಪದ್ಧತಿಯನ್ನು ಜಾರಿಗೆ ತಂದವರು ಯಾರು? ಅಸಮಾನತೆ ಹಾಗೂ ದಬ್ಬಾಳಿಕೆಯ ಇರುವ ಜಾತಿ ಆಧಾರಿತ ಸಾಮಾಜಿಕ ರಚನೆಯನ್ನು ತಂದವರು ಯಾರು” ಎಂದು ಸಾಲು ಸಾಲು ಪ್ರಶ್ನೆಗಳನ್ನು ಖರ್ಗೆ ಕೇಳಿದ್ದಾರೆ.

”ಯಾರೂ ಯಾರ ತಲೆಯನ್ನೇ ಕಡಿಯಬೇಕು ಎಂಬ ಉದ್ದೇಶ ಹೊಂದಿಲ್ಲ. ಆದರೆ ಸಮಾನ ಹಕ್ಕು ಮತ್ತು ಘನತೆಯ ಬದುಕನ್ನು ಪ್ರತಿಯೊಬ್ಬ ಮನುಷ್ಕರಿಗೂ ನೀಡುವ ಮೂಲಕ ಸೋಂಕನ್ನು ಗುಣಪಡಿಸಬೇಕಿದೆ. ಇವೆಲ್ಲದಕ್ಕೂ ಔಷದ ನಮ್ಮ ಸಂವಿಧಾನದಲ್ಲಿದೆ. ಆದರೆ ನೀವುಗಳು ಅದನ್ನು ವಿರೋಧಿಸುತ್ತಿದ್ದೀರಿ. ನೀವೂ ಕರ್ನಾಟಕದವರೇ, ಬಸವಣ್ಣನವರು ಸಾರಿದ ಮಾನವತೆಯ ಸಾರವನ್ನು ಎಲ್ಲೆಡೆ ಹರಡಿ. ಅದರಿಂದ ಸಮ ಸಮಾಜದ ನಿರ್ಮಾಣ ಸಾಧ್ಯವಾಗಲಿದೆ” ಎಂದು ಖರ್ಗೆ ಹೇಳಿದ್ದಾರೆ.

ಕೊನೆಯದಾಗಿ, ”ಇವನಾರವ ಇವನಾರವ ಇವನಾರವ ನೆಂದೆನಿಸದಿರಯ್ಯಾ, ಇವ ನಮ್ಮವ, ಇವ ನಮ್ಮವ, ಇವ ನಮ್ಮವ ನಂದೆನಿಸಯ್ಯಾ ಕೂಡಲ ಸಂಗಮದೇವ ನಿಮ್ಮ ಮಹಾ ಮನೆಯ ಮಗನೆಂದೆನಿಸಯ್ಯಾ” ಎಂಬ ಬಸವಣ್ಣನವರ ವಚನದ ಸಾಲುಗಳೊದಿಗೆ ಟೈಟ್ ಮುಗಿಸಿದ್ದಾರೆ.

ಇದನ್ನೂ ಓದಿ: ಅಯೋಧ್ಯೆ ಸ್ವಾಮೀಜಿಯ ಜೀವ ಬೆದರಿಕೆಗೆ ನಾನು ಹೆದರಲ್ಲ: ಉದಯ್‌ ನಿಧಿ ಸ್ಟಾಲಿನ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...