Homeಮುಖಪುಟಪಕ್ಷದ ಪಾವಿತ್ರ್ಯ ಕಾಪಾಡಿಕೊಳ್ಳಲು, ಹರಿಯಾಣ ಬಿಜೆಪಿ ಅಧ್ಯಕ್ಷ ಬಡೋಲಿ ರಾಜೀನಾಮೆ ನೀಡಲಿ: ಸಚಿವ ಅನಿಲ್ ವಿಜ್

ಪಕ್ಷದ ಪಾವಿತ್ರ್ಯ ಕಾಪಾಡಿಕೊಳ್ಳಲು, ಹರಿಯಾಣ ಬಿಜೆಪಿ ಅಧ್ಯಕ್ಷ ಬಡೋಲಿ ರಾಜೀನಾಮೆ ನೀಡಲಿ: ಸಚಿವ ಅನಿಲ್ ವಿಜ್

- Advertisement -
- Advertisement -

ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ದಾಖಲಾಗಿರುವ ಮೋಹನ್ ಲಾಲ್ ಬಡೋಲಿ ಅವರು ನಿರಪರಾಧಿ ಎಂದು ಸಾಬೀತಾಗುವವರೆಗೆ ಪಕ್ಷದ “ಪಾವಿತ್ರ್ಯತೆ”ಯನ್ನು ಕಾಪಾಡಿಕೊಳ್ಳಲು ರಾಜ್ಯ ಬಿಜೆಪಿ ಅಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡಬೇಕು ಎಂದು ಹರಿಯಾಣ ಸಚಿವ ಅನಿಲ್ ವಿಜ್ ಶನಿವಾರ ಆಗ್ರಹಿಸಿದ್ದಾರೆ. ಜನವರಿ 15ರಂದು ಸಚಿವ ವಿಜ್ ಅವರು, ”ಬಡೋಲಿ ವಿರುದ್ಧದ ಸಾಮೂಹಿಕ ಅತ್ಯಾಚಾರದ ಆರೋಪ ವ್ಯಕ್ತವಾಗಿದ್ದು, ಇದು ತುಂಬಾ ಗಂಭೀರವಾಗಿದೆ ಮತ್ತು ಪಕ್ಷದ ಹೈಕಮಾಂಡ್ ಇದನ್ನು ಗಮನಿಸುತ್ತದೆ” ಎಂದು ಹೇಳಿದ್ದರು. ಪಕ್ಷದ ಪಾವಿತ್ರ್ಯ ಕಾಪಾಡಿಕೊಳ್ಳಲು

ಹಿಮಾಚಲ ಪ್ರದೇಶದ ಕಸೌಲಿಯ ಹೋಟೆಲ್‌ನಲ್ಲಿ ಹರಿಯಾಣ ಬಿಜೆಪಿ ಅಧ್ಯಕ್ಷ ಬಡೋಲಿ ಮತ್ತು ಗಾಯಕ ರಾಕಿ ಮಿತ್ತಲ್ ತನ್ನ ಮೇಲೆ ಅತ್ಯಾಚಾರ ನಡೆಸಿದ್ದಾರೆ ಎಂದು ಮಹಿಳೆಯೊಬ್ಬರು ಆರೋಪಿಸಿದ ನಂತರ ಅವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದರು. ಅದಾಗ್ಯೂ, ಈ ಆರೋಪವನ್ನು ಬಡೋಲಿ ಅವರು ನಿರಾಕರಿಸಿದ್ದು, ತಾನು ನಿರಪರಾಧಿ ಎಂದು ಹೇಳಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಹಿಮಾಚಲ ಪ್ರದೇಶ ಪೊಲೀಸ್ ತನಿಖೆಯಲ್ಲಿ ಅವರು ನಿರಪರಾಧಿ ಎಂದು ತನ್ನನ್ನು ತಾನು ಸಾಬೀತುಪಡಿಸುತ್ತಾರೆ ಎಂದು ನನಗೆ ವಿಶ್ವಾಸವಿದೆ. ಆದರೆ ಹಿಮಾಚಲ ಪೊಲೀಸರು ಅವರನ್ನು ನಿರಪರಾಧಿ ಎಂದು ಸಾಬೀತುಪಡಿಸುವವರೆಗೆ, ಪಕ್ಷದ ಪಾವಿತ್ರ್ಯತೆ ಕಾಪಾಡಿಕೊಳ್ಳಲು ಅವರು ಈ (ಹರಿಯಾಣ ಬಿಜೆಪಿ ಮುಖ್ಯಸ್ಥ) ಹುದ್ದೆಗೆ ರಾಜೀನಾಮೆ ನೀಡಬೇಕು” ಎಂದು ಸಚಿವ ವಿಜ್ ಅಂಬಾಲದಲ್ಲಿ ವರದಿಗಾರರೊಂದಿಗೆ ಮಾತನಾಡುತ್ತಾ ಹೇಳಿದ್ದಾರೆ. ಬಡೋಲಿ ಕಳೆದ ವರ್ಷ ಜುಲೈನಲ್ಲಿ ಹರಿಯಾಣ ಬಿಜೆಪಿ ಘಟಕದ ಅಧ್ಯಕ್ಷರಾಗಿ ಅಧಿಕಾರಕ್ಕೇರಿದ್ದರು. ಪಕ್ಷದ ಪಾವಿತ್ರ್ಯ ಕಾಪಾಡಿಕೊಳ್ಳಲು

ಅತ್ಯಾಚಾರ ಸಂತ್ರಸ್ತೆಯು, ಬಡೋಲಿ ಮತ್ತು ಮಿತ್ತಲ್ ಈ ಕೃತ್ಯದ ವಿಡಿಯೋಗಳನ್ನು ಮಾಡಿ, ಘಟನೆಯನ್ನು ಯಾರಿಗಾದರೂ ಬಹಿರಂಗಪಡಿಸಿದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಪೊಲೀಸರಿಗೆ ದೂರಿದ್ದಾರೆ. ಡಿಸೆಂಬರ್ 13, 2024 ರಂದು ಸೋಲನ್ ಜಿಲ್ಲೆಯ ಕಸೌಲಿಯಲ್ಲಿ ದಾಖಲಾಗಿರುವ ಎಫ್‌ಐಆರ್‌ನಲ್ಲಿ ಬಡೋಲಿ ಮತ್ತು ಜೈ ಭಗವಾನ್ ಅಲಿಯಾಸ್ ರಾಕಿ ಎಂದು ಹೆಸರಿಸಲಾಗಿದೆ.

ಎಫ್‌ಐಆರ್ ಪ್ರಕಾರ, ಮಹಿಳೆ ತನ್ನ ಬಾಸ್ ಮತ್ತು ಸ್ನೇಹಿತನೊಂದಿಗೆ ಕಸೌಲಿಯ ಹೋಟೆಲ್‌ನಲ್ಲಿ ತಂಗಿದ್ದರು. ಅವರು ಜುಲೈ 3, 2023 ರಂದು ಈ ಇಬ್ಬರನ್ನು ಭೇಟಿಯಾದರು. ಬಡೋಲಿ ತನ್ನನ್ನು ರಾಜಕೀಯ ನಾಯಕ ಎಂದು ಪರಿಚಯಿಸಿಕೊಂಡರೆ, ರಾಕಿ ತನ್ನನ್ನು ಗಾಯಕ ಎಂದು ಪರಿಚಯಿಸಿಕೊಂಡರು. ನಂತರ, ಮಹಿಳೆ ಮತ್ತು ಆಕೆಯ ಸ್ನೇಹಿತ ಇಬ್ಬರೊಂದಿಗೆ ಕೋಣೆಗೆ ಹೋದರು, ಅವರು ಸರ್ಕಾರಿ ಕೆಲಸ ಮತ್ತು ಸಂಗೀತ ವೀಡಿಯೊದಲ್ಲಿ ಕಾಣಿಸಿಕೊಳ್ಳಲು ಅವಕಾಶವನ್ನು ಪಡೆಯಲು ಸಹಾಯ ಮಾಡುವುದಾಗಿ ಭರವಸೆ ನೀಡಿದ್ದರು ಎಂದು ಎಫ್‌ಐಆರ್‌ನಲ್ಲಿ ತಿಳಿಸಲಾಗಿದೆ.

ಇದೇ ವೇಳೆ ಇಬ್ಬರು ಆರೋಪಿಗಳು ಮಹಿಳೆಗೆ ಮದ್ಯ ಕುಡಿಯುವಂತೆ ಒತ್ತಾಯಿಸಿದ್ದಾರೆ ಎಂದು ಆರೋಪಿಸಲಾಗಿದೆ. ಆದರೆ, ಮಹಿಳೆಯು ಅದಕ್ಕೆ ನಿರಾಕರಿಸಿದಾಗ, ಅವರ ಮೇಲೆ ಅತ್ಯಾಚಾರ ಮಾಡಿದ್ದಾರೆ ಎಂದು ಅವರು ತಮ್ಮ ದೂರಿನಲ್ಲಿ ಆರೋಪಿಸಿದ್ದಾರೆ.

ಮಹಿಳೆಯ ದೂರಿನ ಆಧಾರದ ಮೇಲೆ, ಬಡೋಲಿ ಮತ್ತು ರಾಕಿ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 376 ಡಿ (ಸಾಮೂಹಿಕ ಅತ್ಯಾಚಾರ) ಮತ್ತು 506 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂಓದಿ:  ಇಡಿಯಿಂದ ಮುಡಾ ಸ್ಥಿರಾಸ್ತಿ ಮುಟ್ಟುಗೋಲು – ಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ ಆಗ್ರಹ

ಇಡಿಯಿಂದ ಮುಡಾ ಸ್ಥಿರಾಸ್ತಿ ಮುಟ್ಟುಗೋಲು – ಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...