Homeಮುಖಪುಟಸಂದೇಶಖಾಲಿ ಪ್ರಕರಣ: ಬಿಜೆಪಿ ಗುರಿಯಾಗಿಸಿಕೊಂಡಿರುವ ಟಿಎಂಸಿ ನಾಯಕ ಶೇಖ್ ಷಹಜಹಾನ್ ಯಾರು?

ಸಂದೇಶಖಾಲಿ ಪ್ರಕರಣ: ಬಿಜೆಪಿ ಗುರಿಯಾಗಿಸಿಕೊಂಡಿರುವ ಟಿಎಂಸಿ ನಾಯಕ ಶೇಖ್ ಷಹಜಹಾನ್ ಯಾರು?

- Advertisement -
- Advertisement -

ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ವಿಧಾನಸಭಾ ಕ್ಷೇತ್ರವಾದ ಸಂದೇಶಖಾಲಿಯಲ್ಲಿ ಸ್ಥಳೀಯ ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕರಿಂದ ಕಿರುಕುಳ ಮತ್ತು ಶೋಷಣೆಯ ಆರೋಪದ ಮೇಲೆ ಉದ್ವಿಗ್ನತೆ ಮುಂದುವರಿದಿದೆ. ನಿಷೇಧಾಜ್ಞೆ ನಡುವೆಯೂ ಹಲವು ಬಿಜೆಪಿ ನಾಯಕರು ಇಲ್ಲಿಗೆ ಭೇಟಿ ನೀಡುತ್ತಿದ್ದಾರೆ.

ಸಾರ್ವಜನಿಕ ವಿತರಣಾ ವ್ಯವಸ್ಥೆಯ ಹಗರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ಟಿಎಂಸಿ ನಾಯಕ ಶೇಖ್ ಷಹಜಹಾನ್ ಅವರ ಮನೆ ಮೇಲೆ ದಾಳಿ ಮಾಡಲು ಆಗಮಿಸಿದ ಜಾರಿ ನಿರ್ದೇಶನಾಲಯ (ಇಡಿ) ತಂಡದ ಮೇಲೆ ಜನವರಿ 7ರಂದು ಸ್ಥಳೀಯ ದಾಳಿ ನಡೆಸಿದ್ದರು.

ಶೇಖ್ ಷಹಜಹಾನ್ ಬಂಧನವನ್ನು ತಪ್ಪಿಸಿದ್ದರೂ ಸಹ, ಫೆಬ್ರವರಿ 7 ರಿಂದ, ಸ್ಥಳೀಯ ಮಹಿಳೆಯರ ನೇತೃತ್ವದಲ್ಲಿ ಗ್ರಾಮಸ್ಥರು ಸ್ಥಳೀಯ ಟಿಎಂಸಿ ನಾಯಕರ ಕಿರುಕುಳ ಮತ್ತು ಶೋಷಣೆಯ ವಿರುದ್ಧ ಹಿಂಸಾತ್ಮಕ ಪ್ರತಿಭಟನೆಗಳನ್ನು ನಡೆಸುತ್ತಿದ್ದಾರೆ.

ಷಹಜಹಾನ್ ಮೇಲೆ ಹಣ ವರ್ಗಾವಣೆಯಿಂದ ಹಿಡಿದು ಕಿರುಕುಳದವರೆಗೆ ಹಲವಾರು ಅಪರಾಧಗಳ ಆರೋಪವಿದ್ದು, ಪ್ರಸ್ತುತ ಆತ ತಲೆಮರೆಸಿಕೊಂಡಿದ್ದಾನೆ. ಪಕ್ಷದಿಂದ ಆತನನ್ನು ಉಚ್ಛಾಟಿಸಲಾಗಿದೆ.

ಆಡಳಿತಾರೂಢ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಉದ್ವಿಗ್ನತೆಗೆ ಕಾರಣವೆಂದು ಆರೋಪಿಸಿದರೆ, ಬಿಜೆಪಿ ಮತ್ತು ಕಾಂಗ್ರೆಸ್ ಟಿಎಂಸಿ ಮುಖ್ಯಸ್ಥರು ಲೈಂಗಿಕ ಶೋಷಣೆಯ ಆರೋಪಿಗಳನ್ನು ರಕ್ಷಿಸುತ್ತಿದ್ದಾರೆ ಎಂದು ಪ್ರತ್ಯಾರೋಪ ಮಾಡಿದ್ದಾರೆ.

ಶೇಖ್ ಷಹಜಹಾನ್ ಮತ್ತು ಅವರ ತಂಡ ‘ಭಯೋತ್ಪಾದನೆಯ ಆಳ್ವಿಕೆ’ ಸ್ಥಾಪಿಸಿದರು, ಅಲ್ಲಿ ಎಸ್‌ಸಿ ಮತ್ತು ಎಸ್‌ಟಿ ಸಮುದಾಯಗಳ ಮಹಿಳೆಯರ ಘನತೆ ಮತ್ತು ಮರ್ಯಾದೆ ಪದೇ ಪದೇ ಉಲ್ಲಂಘನೆಯಾಗಿದೆ” ಎಂದು ಪಶ್ಚಿಮ ಬಂಗಾಳದ ವಿರೋಧ ಪಕ್ಷದ ನಾಯಕ, ಬಿಜೆಪಿ ನಂದಿಗ್ರಾಮ್ ಶಾಸಕ ಸುವೆಂದು ಅಧೀಕಾರಿ ಫೆಬ್ರವರಿ 11 ರಂದು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು ಮಮತಾ ಬ್ಯಾನರ್ಜಿ ಅವರನ್ನು ಟೀಕಿಸಿ, ಸಂದೇಖ್‌ಖಾಲಿಯಲ್ಲಿ ಯುವ ಹಿಂದೂ ವಿವಾಹಿತ ಮಹಿಳೆಯರನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಶುಕ್ರವಾರ, ಬಿಜೆಪಿ ಮತ್ತು ಕಾಂಗ್ರೆಸ್‌ನ ಹಿರಿಯ ನಾಯಕರನ್ನು ಶುಕ್ರವಾರ ಸಂದೇಶಖಾಲಿಗೆ ಭೇಟಿ ಮಾಡದಂತೆ ಪೊಲೀಸರು ತಡೆದರು, ಇದು ರಾಜ್ಯದಲ್ಲಿ ರಾಜಕೀಯ ಉದ್ವಿಗ್ನತೆಯನ್ನು ಹೆಚ್ಚಿಸಿದೆ.

ಶೇಖ್ ಷಹಜಹಾನ್ ಯಾರು?

ಟಿಎಂಸಿ ನಾಯಕರಾಗಿರುವ 42 ವರ್ಷದ ಷಹಜಹಾನ್ ಶೇಖ್ ಅವರು, ಸ್ಥಳೀಯವಾಗಿ ‘ಭಾಯ್’ ಎಂದು ಜನಪ್ರಿಯರಾಗಿದ್ದಾರೆ. ಅವರು ಬಾಂಗ್ಲಾದೇಶದ ಗಡಿಯ ಸಮೀಪವಿರುವ ಉತ್ತರ 24 ಪರಗಣಗಳಲ್ಲಿ ಸಂದೇಶಖಾಲಿ ಬ್ಲಾಕ್‌ನ ಮೀನುಗಾರಿಕೆಯಲ್ಲಿ ಕೆಲಸಗಾರರಾಗಿ ವೃತ್ತಿ ಪ್ರಾರಂಭಿಸಿದರು.

ಶೇಖ್ ಅವರು ಸಂದೇಶಖಾಲಿಯಲ್ಲಿ ಮೀನುಗಾರಿಕೆ ಮತ್ತು ಇಟ್ಟಿಗೆ ಗೂಡುಗಳಲ್ಲಿ ಕೆಲಸಗಾರರಾಗಿ ಕೆಲಸ ಪ್ರಾರಂಭಿಸಿದ್ದು, ನಾಲ್ಕು  ಜನಒಡಹುಟ್ಟಿದವರಲ್ಲಿ ಇವರು ಹಿರಿಯರು. ಶೇಖ್ 2004ರಲ್ಲಿ ಇಟ್ಟಿಗೆ ಭಟ್ಟಿಯಲ್ಲಿ ಒಕ್ಕೂಟದ ನಾಯಕರಾಗಿ ರಾಜಕೀಯ ಪ್ರವೇಶಿಸಿದ್ದರು. ನಂತರ ಅವರು ಸ್ಥಳೀಯ ಸಿಪಿಐ(ಎಂ) ಘಟಕಕ್ಕೆ ಸೇರಿದರು, ಪಶ್ಚಿಮ ಬಂಗಾಳದಲ್ಲಿ ಬದಲಾಗುತ್ತಿರುವ ರಾಜಕೀಯ ಸನ್ನಿವೇಶಗಳ ಹೊರತಾಗಿಯೂ ತಮ್ಮ ರಾಜಕೀಯ ಅಸ್ತಿತ್ವವನ್ನು ಉಳಿಸಿಕೊಂಡರು.

ಉರಿಯುವ ಭಾಷಣಗಳು ಮತ್ತು ಸಂಘಟನಾ ಕೌಶಲ್ಯಗಳಿಗೆ ಹೆಸರುವಾಸಿಯಾದ ಶೇಖ್ 2012 ರಲ್ಲಿ ತೃಣಮೂಲ ಕಾಂಗ್ರೆಸ್ ನಾಯಕತ್ವದ ಗಮನ ಸೆಳೆದರು. 42 ವರ್ಷದ ಅವರು ಆಗಿನ ಟಿಎಂಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮುಕುಲ್ ರಾಯ್ ಮತ್ತು ಉತ್ತರ 24 ಪರಗಣಗಳ ಟಿಎಂಸಿ ಜಿಲ್ಲಾಧ್ಯಕ್ಷ ಜ್ಯೋತಿಪ್ರಿಯೊ ಮುಲ್ಲಿಕ್ ಅವರ ನೇತೃತ್ವದಲ್ಲಿ ಕೆಲಸ ಮಾಡಿದರು. ಅವರು ಶೀಘ್ರವಾಗಿ ಅಧಿಕಾರಕ್ಕೆ ಏರಿದರು, ಮಲ್ಲಿಕ್ ಅವರ ನಿಕಟ ಸಹವರ್ತಿಯಾದರು.

2018 ರಲ್ಲಿ, ಶೇಖ್ ಸರ್ಬೇರಿಯಾ ಅಗರಹಟಿ ಗ್ರಾಮ ಪಂಚಾಯತ್‌ನ ಉಪ ಮುಖ್ಯಸ್ಥರಾಗಿ ಪ್ರಾಮುಖ್ಯತೆಯನ್ನು ಪಡೆದರು. ಅವರ ಕಿರಿಯ ಸಹೋದರರೂ ಸಕ್ರಿಯ ಟಿಎಂಸಿ ಕಾರ್ಯಕರ್ತರಾಗಿದ್ದು, ಅವರು ಭೂ ವ್ಯವಹಾರ ಸೇರಿದಂತೆ ಅವರ ವ್ಯವಹಾರವನ್ನು ಸಹ ನಿರ್ವಹಿಸುತ್ತಾರೆ. ಶೇಖ್ ಅವರು ಈ ಪ್ರದೇಶದಲ್ಲಿ ಸಂಘರ್ಷ ಪರಿಹಾರ, ಕೌಟುಂಬಿಕ ವಿವಾದಗಳು ಮತ್ತು ಭೂಮಿ ಭಿನ್ನಾಭಿಪ್ರಾಯಗಳನ್ನು ಮಧ್ಯಸ್ಥಿಕೆ ವಹಿಸುವ ವ್ಯಕ್ತಿಯಾಗಿದ್ದಾರೆ.

ಸ್ಥಳೀಯ ಟಿಎಂಸಿ ನಾಯಕರ ಪ್ರಕಾರ, ಶೇಖ್ ಅವರು ಈ ಪ್ರದೇಶದಲ್ಲಿ ಗೌರವ ಮತ್ತು ಭಯವನ್ನು ಹೊಂದಿದ್ದಾರೆ. ‘ಕೆಲವು ವಿರೋಧಿಗಳಿಗೆ ಅವರು ಭಯೋತ್ಪಾದಕರಾದರೆ. ಇನ್ನೂ ಕೆಲವರಿಗೆ ಆತನ ರಾಬಿನ್ ಹುಡ್ ರೀತಿ’ ಎಂದು ಹೇಳಿದ್ದಾರೆ.

ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿದ್ದರೂ, ಮಕ್ಕಳ ಕಳ್ಳಸಾಗಣೆ ತಡೆಯುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದಾರೆ. 2019 ರಲ್ಲಿ ಸರ್ಬೇರಿಯಾ ಅಗರಹಟಿ ಗ್ರಾಮ ಪಂಚಾಯಿತಿಯನ್ನು ‘ಮಕ್ಕಳ ಸ್ನೇಹಿ ಗ್ರಾಮ ಪಂಚಾಯತ್’ ಮಾಡುವಲ್ಲಿ ಅವರು ಮಾಡಿದ ಪ್ರಯತ್ನಗಳಿಗೆ ಮನ್ನಣೆ ಗಳಿಸಿದ್ದಾರೆ ಎಂದು ಸುದ್ದಿಯಾಗಿದೆ.

ಜೂನ್ 2019ರಲ್ಲಿ ಸಂದೇಶಖಾಲಿ ನಂತರದ ಲೋಕಸಭೆ ಚುನಾವಣೆಗಳಲ್ಲಿ ಬಿಜೆಪಿ ಮತ್ತು ಟಿಎಂಸಿ ಕಾರ್ಯಕರ್ತರ ನಡುವಿನ ಹಿಂಸಾತ್ಮಕ ಘರ್ಷಣೆಯ ನಂತರ, ಎರಡೂ ಕಡೆಗಳಲ್ಲಿ ಸಾವು ಸಂಭವಿಸಿದ ನಂತರ, ಘಟನೆಗೆ ಸಂಬಂಧಿಸಿದಂತೆ ದಾಖಲಾದ ಕೊಲೆ ಎಫ್‌ಐಆರ್‌ನಲ್ಲಿ ಶೇಖ್ ಅವರು ಹೆಸರಿದೆ.

ಇದನ್ನೂ ಓದಿ; ದೆಹಲಿ ಅಬಕಾರಿ ನೀತಿ ಹಗರಣ: ವಿಶ್ವಾಸ ಮತಕ್ಕೂ ಮುನ್ನ ನ್ಯಾಯಾಲಯದ ಮುಂದೆ ಹಾಜರಾದ ಕೇಜ್ರಿವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...