Homeಮುಖಪುಟಮಹಿಳೆಯರ ಸಮಸ್ಯೆಗಳ ಕುರಿತು ಪ್ರಸ್ತಾಪ : ಕೇರಳ ನಿರ್ಮಾಪಕರ ಸಂಘದಿಂದ ಸಾಂಡ್ರಾ ಥಾಮಸ್ ಉಚ್ಚಾಟನೆ

ಮಹಿಳೆಯರ ಸಮಸ್ಯೆಗಳ ಕುರಿತು ಪ್ರಸ್ತಾಪ : ಕೇರಳ ನಿರ್ಮಾಪಕರ ಸಂಘದಿಂದ ಸಾಂಡ್ರಾ ಥಾಮಸ್ ಉಚ್ಚಾಟನೆ

- Advertisement -
- Advertisement -

ಸಿನಿಮಾ ರಂಗದಲ್ಲಿ (ವಿಶೇಷವಾಗಿ ಮಲಯಾಳಂ) ಮಹಿಳೆಯರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಮಾತನಾಡಿದ್ದ ಮಲಯಾಳಂ ಚಿತ್ರ ನಿರ್ಮಾಪಕಿ ಸಾಂಡ್ರಾ ಥಾಮಸ್ ಅವರನ್ನು ಕೇರಳ ಚಲನಚಿತ್ರ ನಿರ್ಮಾಪಕರ ಸಂಘ (ಕೆಎಫ್‌ಪಿಎ) ದಿಂದ ಉಚ್ಚಾಟಿಸಲಾಗಿದೆ.

ಈ ಸಂಬಂಧ ಅಕ್ಟೋಬರ್ 28ರಂದು ಸಾಂಡ್ರಾ ಅವರಿಗೆ ಪತ್ರ ಬರೆದಿರುವ ಕೆಎಫ್‌ಪಿಎ, ‘ಅಶಿಸ್ತಿನ’ ಕಾರಣಕ್ಕೆ ಸಂಘದ ಸದಸ್ಯತ್ವವನ್ನು ರದ್ದುಪಡಿಸಲಾಗಿದೆ ಎಂದು ಹೇಳಿದೆ. ಅಲ್ಲದೆ, ಸಂಘದ ಸದಸ್ಯರ ನಡುವೆ ಹರಿದಾಡಿದ ಮತ್ತೊಂದು ಪತ್ರದಲ್ಲಿ ಸಂಘವು, ಸಾಂಡ್ರಾ ಅವರು ಕೆಎಫ್‌ಪಿಎ ಕುರಿತು ಸಾರ್ವಜನಿಕವಾಗಿ ನೀಡುತ್ತಿರುವ ಅವಹೇಳನಕಾರಿ ಹೇಳಿಕೆಗಳ ಬಗ್ಗೆ ವಿಷಾದ ವ್ಯಕ್ತಪಡಿಸಿದೆ ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ಮಲಯಾಳಂ ಸಿನಿಮಾ ರಂಗದಲ್ಲಿ ಮಹಿಳೆಯರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಹೇಮಾ ಸಮಿತಿ ವರದಿ ನೀಡಿದ ಬಳಿಕ, ಅನೇಕ ಮಹಿಳೆಯರು ನಟರು, ನಿರ್ಮಾಪಕರು ಮತ್ತು ನಿರ್ದೇಶಕರು ಸೇರಿದಂತೆ ಘಟಾನುಘಟಿಗಳ ವಿರುದ್ದ ಲೈಂಗಿಕ ದೌರ್ಜನ್ಯದ ಆರೋಪಗಳನ್ನು ಮಾಡಿದ್ದಾರೆ. ಹಲವರು ದೂರು ದಾಖಲಿಸಿದ್ದಾರೆ. ಈ ಸಂಬಂಧ ಕೆಲವರ ಬಂಧನವೂ ಆಗಿದೆ.

ಸಾಂಡ್ರಾ ಅವರು ಮಹಿಳಾ ನಿರ್ಮಾಪಕರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಮಾತನಾಡಿದ್ದರು. ಹೇಮಾ ಸಮಿತಿಯಲ್ಲಿ ವಿವರಿಸಲಾದ ಅಂಶಗಳ ಬಗ್ಗೆ ನಿರ್ಲಕ್ಷ್ಯ ಮತ್ತು ನೀರಸ ಭಾವನೆ ವ್ಯಕ್ತಪಡಿಸುತ್ತಿರುವ ಹಿನ್ನೆಲೆ, ಕೆಎಫ್‌ಪಿಎಗೆ ಪತ್ರ ಬರೆದು ಸಮಸ್ಯೆಗಳ ಬಗ್ಗೆ ಧ್ವನಿ ಎತ್ತಿದ್ದರು ಎಂದು ವರದಿ ವಿವರಿಸಿದೆ.

ತನ್ನ ಉಚ್ಚಾಟನೆಯ ಕುರಿತು ಮಾತನಾಡಿರುವ ಸಾಂಡ್ರಾ ಅವರು, “ನನ್ನನ್ನು ಉಚ್ಚಾಟಿಸುವ ಮೂಲಕ ಹೇಮಾ ಸಮಿತಿಯ ವರದಿಯ ಬಳಿಕ ತಮ್ಮ ಮೇಲಿನ ದೌರ್ಜನ್ಯಗಳ ಕುರಿತು ಧ್ವನಿ ಎತ್ತುತ್ತಿರುವ ಮಹಿಳಾ ಕಲಾವಿದರಿಗೆ ಅವರು (ಕೆಎಫ್‌ಪಿಎ) ಎಚ್ಚರಿಕೆ ನೀಡಿರಬಹುದು. ಅವರು ಮಹಿಳೆಯರ ಧ್ವನಿಯನ್ನು ಅಡಗಿಸಲು ಬಯಸಿದ್ದಾರೆ. ನಿರ್ಮಾಪಕಿಯಾಗಿ ಬೇರೆಯವರಿಗೆ ಕೆಲಸ ನೀಡಬಲ್ಲ ನನ್ನ ಪರಿಸ್ಥಿತಿಯೇ ಈ ರೀತಿಯಾದರೆ, ಸಿನಿಮಾ ರಂಗದಲ್ಲಿ ಇತರ ಸಣ್ಣಪುಟ್ಟ ಕೆಲಸ ಮಾಡುವ ಮಹಿಳೆಯರ ಗತಿಯೇನು?” ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ನ್ಯೂಸ್‌ ಮಿನಿಟ್‌ನ ಸಂದರ್ಶನದಲ್ಲಿ ಮಾತನಾಡಿರುವ ಸಾಂಡ್ರಾ ಅವರು, “ಮಲಯಾಳಂ ಸಿನಿಮಾ ರಂಗದಲ್ಲಿ ನಟರು, ನಿರ್ಮಾಪಕರು, ನಿರ್ದೇಶಕರು ಮತ್ತು ಮಾಧ್ಯಮದವರ ‘ಕಾಕಸ್’ ಪವರ್ ಗ್ರೂಪ್ ಇದೆ. ಈ ಬಗ್ಗೆ ಹೇಮಾ ಸಮಿತಿಯ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಈ ಪವರ್ ಗ್ರೂಪ್ ಯಾರಿಗೆ ಕೆಲಸ ಕೊಡಬೇಕು, ಯಾರಿಗೆ ಕೊಡಬಾರದು ಎಂದು ನಿರ್ಧರಿಸುತ್ತದೆ. ಇದರ ಬಗ್ಗೆ ಮಾತನಾಡಿದರೆ ಪರಿಣಾಮ ಎದುರಿಸಬೇಕಾಗುತ್ತದೆ. ಈಗ ನನಗೆ ಅನ್ಯಾಯವಾಗಿದೆ ಪ್ರಶ್ನಿಸೋಣ ಎಂದರೆ ನಿರ್ಮಾಪಕರ ಸಂಘದಲ್ಲಿ ಪಾಶ್ (POSH)ಕಾಯ್ದೆಯ ಪ್ರಕಾರ ಆಂತರಿಕ ಪರಿಹಾರ ಸಮಿತಿಯೂ ಇಲ್ಲ” ಎಂದಿದ್ದಾರೆ.

ಸಾಂಡ್ರಾ ಮತ್ತು ಅವರ ನಿರ್ಮಾಣ ಕಂಪನಿ ಸಾಂಡ್ರಾ ಥಾಮಸ್ ಪ್ರೊಡಕ್ಷನ್ಸ್ ಅನ್ನು ನಿರ್ಮಾಪಕದ ಸಂಘದಿಂದ ಹೊರಗಿಡುವ ಮುನ್ನ ವಿವರಣೆ ಕೋರಿ ಸಾಂಡ್ರಾ ಅವರಿಗೆ ಪತ್ರ ಬರೆಯಲಾಗಿತ್ತು. ಅದಕ್ಕೆ ಅವರು ನೀಡಿರುವ ಉತ್ತರ ತೃಪ್ತಿಕರವಾಗಿಲ್ಲ ಎಂದು ನಿರ್ಮಾಪಕರ ಸಂಘ ಸಮರ್ಥಿಸಿಕೊಂಡಿದೆ.

ಇದನ್ನೂ ಓದಿ : ಖಾಸಗಿ ಸ್ವತ್ತು ತೀರ್ಪು : ಅಯ್ಯರ್ ಕುರಿತ ಸಿಜೆಐ ಹೇಳಿಕೆಗೆ ನ್ಯಾ. ನಾಗರತ್ನ, ಧುಲಿಯಾ ಆಕ್ಷೇಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...