Homeಕರ್ನಾಟಕಸಂಡೂರು: ಜಿಂದಾಲ್ ಕಂಪೆನಿಯಿಂದ ದಲಿತರ ಭೂಮಿ ಕಬಳಿಕೆ ಆರೋಪ: ಪಿಟಿಸಿಎಲ್ ಕಾಯ್ದೆ ಭೂಮಿ ವಂಚಿತರ ಹೋರಾಟ...

ಸಂಡೂರು: ಜಿಂದಾಲ್ ಕಂಪೆನಿಯಿಂದ ದಲಿತರ ಭೂಮಿ ಕಬಳಿಕೆ ಆರೋಪ: ಪಿಟಿಸಿಎಲ್ ಕಾಯ್ದೆ ಭೂಮಿ ವಂಚಿತರ ಹೋರಾಟ ಸಮಿತಿಯಿಂದ ಜಿಲ್ಲಾಧಿಕಾರಿಗೆ ಮನವಿ

- Advertisement -
- Advertisement -

ಸಂಡೂರು: ತಾಲೂಕಿನ ತಾರನಗರ ಗ್ರಾಮದಲ್ಲಿ ದಲಿತರಿಗೆ ಮಂಜೂರಾದ ಜಮೀನಿನಲ್ಲಿ ಅಕ್ರಮವಾಗಿ ಗಣಿಗಾರಿಕೆ ತ್ಯಾಜ್ಯ ಸುರಿಯುತ್ತಿರುವ ಜಿಂದಾಲ್ ಮತ್ತು ಇತರ ಗಣಿ ಕಂಪನಿಗಳ ವಿರುದ್ಧ ದಲಿತರ ಪ್ರತಿಭಟನೆ ತೀವ್ರಗೊಂಡಿದೆ. ಪಿಟಿಸಿಎಲ್ ಕಾಯ್ದೆ ಭೂಮಿ ವಂಚಿತರ ಹೋರಾಟ ಸಮಿತಿಯ ರಾಜ್ಯಾಧ್ಯಕ್ಷ ಮಂಜುನಾಥ್ ಅವರ ನೇತೃತ್ವದಲ್ಲಿ ದಲಿತ ಸಮುದಾಯದ ಮುಖಂಡರು ಇಂದು (ಸೆ.8) ಬಳ್ಳಾರಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ, ಕೂಡಲೇ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಐದು ದಶಕಗಳ ಹಿಂದಿನ ಹಕ್ಕು ಕಬಳಿಕೆ

ತಾರನಗರದ ಸರ್ವೇ ನಂ. 94/ಎ ರಲ್ಲಿರುವ ಸುಮಾರು 4 ಎಕರೆಯ ಈ ಜಮೀನು 1981ರಲ್ಲಿಯೇ ಒಂದೇ ಕುಟುಂಬದ 20 ಸದಸ್ಯರನ್ನು ಹೊಂದಿರುವ ದಲಿತರಿಗೆ ಮಂಜೂರಾಗಿತ್ತು. 2018ರವರೆಗೂ ಈ ದಲಿತ ರೈತರು ಈ ಭೂಮಿಯನ್ನು ಉಳುಮೆ ಮಾಡಿಕೊಂಡು ಬಂದಿದ್ದರು. ಆದರೆ ಕೊರೊನಾ ಸಾಂಕ್ರಾಮಿಕದ ಲಾಕ್‌ಡೌನ್ ಸಂದರ್ಭವನ್ನು ದುರುಪಯೋಗಪಡಿಸಿಕೊಂಡ ಗಣಿ ಕಂಪನಿಗಳು ಅಕ್ರಮವಾಗಿ ಗಣಿಗಾರಿಕೆಯ ತ್ಯಾಜ್ಯವನ್ನು ಈ ಜಮೀನಿನ ಮೇಲೆ ಸುರಿಯಲು ಪ್ರಾರಂಭಿಸಿದವು. ಈಗ 50 ಅಡಿಗೂ ಹೆಚ್ಚು ಎತ್ತರಕ್ಕೆ ತ್ಯಾಜ್ಯ ಸುರಿದಿದ್ದು, ಭೂಮಿ ಸಂಪೂರ್ಣವಾಗಿ ಹಾಳಾಗಿದೆ ಎಂದು ಮಂಜುನಾಥ್ ಅವರು ತಿಳಿಸಿದರು.

ಅಧಿಕಾರಿಗಳೇ ಶಾಮೀಲು; ದಲಿತರಿಗೆ ಅನ್ಯಾಯ

ಈ ಸಮಸ್ಯೆ ಕಳೆದ ಐದು ವರ್ಷಗಳಿಂದ ತಾರನಗರದಲ್ಲಿ ಮುಂದುವರಿದಿದೆ. ಜಮೀನು ಕಬಳಿಕೆ ಬಗ್ಗೆ ಸ್ಥಳೀಯ ಅಧಿಕಾರಿಗಳನ್ನು ಪ್ರಶ್ನಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಮಂಜುನಾಥ್ ಆರೋಪಿಸಿದ್ದಾರೆ. ಸ್ಥಳೀಯ ಅಧಿಕಾರಿಗಳು, ಸರ್ವೇ ಇಲಾಖೆ, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ಗಣಿ ಕಂಪನಿಗಳೊಂದಿಗೆ ಶಾಮೀಲಾಗಿರುವುದರಿಂದ ನ್ಯಾಯ ಸಿಗುತ್ತಿಲ್ಲ ಎಂದು ಅವರು ಹೇಳಿದರು.

“ಹಲವು ಬಾರಿ ಮನವಿ ಸಲ್ಲಿಸಿದ್ದರೂ, ಅಧಿಕಾರಿಗಳು ಸ್ಪಂದಿಸಿಲ್ಲ. ತಹಶೀಲ್ದಾರ್ ಅವರು ಕೇವಲ ಐದು ನಿಮಿಷ ಸ್ಥಳಕ್ಕೆ ಬಂದು ದಾಖಲೆಗಳನ್ನು ಪರಿಶೀಲಿಸುವುದಾಗಿ ಹೇಳಿ ಹೋಗುತ್ತಾರೆ. ಯಾವುದೇ ಭರವಸೆಯನ್ನು ಕೊಡುವುದಿಲ್ಲ. ಗಣಿ ಇಲಾಖೆಯ ನೌಕರರು ಕಂಪನಿಗಳ ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಸಿ ಹೋಗುತ್ತಿದ್ದಾರೆ” ಎಂದು ಮಂಜುನಾಥ್ ಅಸಹಾಯಕತೆ ವ್ಯಕ್ತಪಡಿಸಿದರು.

ನ್ಯಾಯ ಸಿಗುವವರೆಗೂ ಹೋರಾಟ ಮುಂದುವರಿಕೆ

ಈ ಅಕ್ರಮದ ವಿರುದ್ಧ ಜಿಲ್ಲಾಧಿಕಾರಿಗಳು ತಕ್ಷಣವೇ ಕಾನೂನು ಕ್ರಮ ಕೈಗೊಳ್ಳದಿದ್ದರೆ, ತಾವು ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸುವುದಾಗಿ ಮಂಜುನಾಥ್ ಎಚ್ಚರಿಕೆ ನೀಡಿದರು.

“ಇದು ಕೇವಲ ಒಂದು ಜಮೀನಿನ ಸಮಸ್ಯೆಯಲ್ಲ, ಬದಲಿಗೆ ಬಡ ದಲಿತರ ಭೂಮಿ ಹಕ್ಕುಗಳನ್ನು ಕಬಳಿಸುವ ದೊಡ್ಡ ಭೂ ಮಾಫಿಯಾ. ದಲಿತರ ಭೂಮಿಯನ್ನು ರಕ್ಷಿಸಲು ಅಗತ್ಯವಾದ ಎಲ್ಲ ಕಾನೂನು ಹೋರಾಟಗಳನ್ನು ಮತ್ತು ಪ್ರತಿಭಟನೆಗಳನ್ನು ನಾವು ಮುಂದುವರಿಸುತ್ತೇವೆ” ಎಂದು ಅವರು ಸ್ಪಷ್ಟಪಡಿಸಿದರು. ದಲಿತರ ಜಮೀನಿನಿಂದ ತ್ಯಾಜ್ಯ ತೆರವುಗೊಳಿಸಿ, ಮೂಲ ಹಕ್ಕುದಾರರಿಗೆ ಅದನ್ನು ಮರಳಿಸಬೇಕು ಎಂದು ಅವರು ಮನವಿಯಲ್ಲಿ ಒತ್ತಾಯಿಸಿದ್ದಾರೆ.

ಜಮೀನಿನ ವಿವರ ಮತ್ತು ಹೋರಾಟದ ಹಿನ್ನೆಲೆ

ಸಂಡೂರು ತಾಲೂಕಿನ ತಾರನಗರ ಗ್ರಾಮದ ಸರ್ವೇ ನಂ. 94/ಎ ರಲ್ಲಿರುವ ಸುಮಾರು 4.13 ಎಕರೆ ಜಮೀನು, 1981ರಲ್ಲಿ ಹರಿಜನ ದೊಡ್ಡ ಸಕ್ರಪ್ಪ ಎಂಬುವವರಿಗೆ ಸರ್ಕಾರದಿಂದ ಮಂಜೂರಾಗಿತ್ತು. ನಂತರ 1982ರ ಫೆಬ್ರವರಿ 20ರಂದು ಸಂಡೂರು ತಹಶೀಲ್ದಾರ್ ಅವರು ಸಾಗುವಳಿ ಚೀಟಿ ನೀಡಿದ್ದರು. ಈ ಜಮೀನನ್ನು ಹರಿಜನ ದೊಡ್ಡ ಸಕ್ರಪ್ಪ ಅವರ ಕುಟುಂಬ ಸುಮಾರು ನಾಲ್ಕು ದಶಕಗಳಿಂದ ಬೇಸಾಯ ಮಾಡಿಕೊಂಡು ಬಂದಿದೆ.

ಆದರೆ, ಕಳೆದ ಐದು ವರ್ಷಗಳಿಂದ, ಮುಖ್ಯವಾಗಿ ಕೊರೊನಾ ಲಾಕ್‌ಡೌನ್ ಸಮಯದಲ್ಲಿ, ಜಿಂದಾಲ್, JSW, ಪೇಜ್ ಹೆಚ್, ತುಂಗಾ & ಭದ್ರಾ ಮೈನ್ಸ್‌ ಸೇರಿದಂತೆ ಕೆಲವು ಗಣಿ ಕಂಪನಿಗಳು ಈ ಜಮೀನಿನ ಮೇಲೆ ಅಕ್ರಮವಾಗಿ ಗಣಿಗಾರಿಕೆಯ ತ್ಯಾಜ್ಯ ಸುರಿಯುತ್ತಿವೆ. ಇದರಿಂದ ಜಮೀನು ಸಂಪೂರ್ಣವಾಗಿ ಹಾಳಾಗಿದ್ದು, ನ್ಯಾಯಕ್ಕಾಗಿ ಕುಟುಂಬಸ್ಥರು ನಿರಂತರವಾಗಿ ಹೋರಾಟ ಮಾಡುತ್ತಿದ್ದಾರೆ.

ಕಾನೂನು ಹೋರಾಟ ಮತ್ತು ಬೇಡಿಕೆಗಳು

ದಲಿತರ ಜಮೀನಿನ ಹಕ್ಕನ್ನು ರಕ್ಷಿಸಲು ಈ ಕೆಳಗಿನ ಕ್ರಮಗಳನ್ನು ತಕ್ಷಣವೇ ಕೈಗೊಳ್ಳುವಂತೆ ಮಂಜುನಾಥ್ ಅವರು ಜಿಲ್ಲಾಧಿಕಾರಿಗಳನ್ನು ಒತ್ತಾಯಿಸಿದ್ದಾರೆ:

  • ಜಮೀನಿನಲ್ಲಿ ಅಕ್ರಮವಾಗಿ ಹಾಕಿರುವ ತ್ಯಾಜ್ಯವನ್ನು ಕೂಡಲೇ ತೆರವುಗೊಳಿಸಬೇಕು.
  • ಜಮೀನು ಕಬಳಿಸಿದ ಗಣಿ ಕಂಪನಿಗಳ ವಿರುದ್ಧ ಮತ್ತು ಕರ್ತವ್ಯ ಲೋಪ ಎಸಗಿರುವ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು.
  • ಪಿಟಿಸಿಎಲ್ (PTCL) ಕಾಯ್ದೆಯ ಕಲಂ 8ರ ಪ್ರಕಾರ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯ್ದೆ 1989ರ ಅಡಿಯಲ್ಲಿ ಪ್ರಕರಣ ದಾಖಲಿಸಬೇಕು.
  • ಸಂವಿಧಾನದ ಆಶಯದಂತೆ ಬಡ ಮತ್ತು ಶೋಷಿತ ಸಮುದಾಯಗಳಿಗೆ ನ್ಯಾಯ ಒದಗಿಸಬೇಕು.

ನ್ಯಾಯ ಸಿಗುವವರೆಗೂ ಈ ಹೋರಾಟವನ್ನು ಮುಂದುವರಿಸುವುದಾಗಿ ಮತ್ತು ಜಿಲ್ಲಾಧಿಕಾರಿ ಕಚೇರಿ ಮುಂದೆ ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸುವುದಾಗಿ ಮಂಜುನಾಥ್ ಎಚ್ಚರಿಕೆ ನೀಡಿದ್ದಾರೆ.

ಮದ್ದೂರು ತಮಿಳು ಕಾಲೋನಿ ನಿವಾಸಿಗಳಿಂದ ಭೂಕಬಳಿಕೆ ವಿರೋಧಿಸಿ ಅಹೋರಾತ್ರಿ ಪ್ರತಿಭಟನೆ: ಅಧಿಕಾರಿಗಳಿಗೆ ಚಾಟಿ ಬೀಸಿದ ಜಿಲ್ಲಾಧಿಕಾರಿ ಡಾ. ಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...