Homeಕರ್ನಾಟಕಮುಸ್ಲಿಮರ ವಿರುದ್ದ ಹಿಂಸಾಚಾರಕ್ಕೆ ಕರೆ ನೀಡಿದ ಸಂಘಪರಿವಾರದ ನಾಯಕ ಶರಣ್ ಪಂಪ್‌ವೆಲ್

ಮುಸ್ಲಿಮರ ವಿರುದ್ದ ಹಿಂಸಾಚಾರಕ್ಕೆ ಕರೆ ನೀಡಿದ ಸಂಘಪರಿವಾರದ ನಾಯಕ ಶರಣ್ ಪಂಪ್‌ವೆಲ್

ಸಿಎಂ ಬಸವರಾಜ್‌ ಬೊಮ್ಮಾಯಿಯವರು ಈ ಹಿಂದೆ ಗೃಹಮಂತ್ರಿಯಾಗಿದ್ದಾಗ ಶರಣ್ ಪಂಪ್‌ವೆಲ್ ಮೇಲಿನ ಎಲ್ಲಾ ಕೇಸುಗಳನ್ನು ತೆಗೆಯುವುದಾಗಿ ಭರವಸೆ ನೀಡಿದ ವಿಡಿಯೋ ವಿವಾದಕ್ಕೆ ಕಾರಣವಾಗಿತ್ತು.

- Advertisement -
- Advertisement -

ಮಂಗಳೂರಿನ ಸಂಘಪರಿವಾರದ ನಾಯಕ ಶರಣ್ ಪಂಪ್‌ವೆಲ್‌‌‌‌‌ ಪತ್ರಿಕಾಗೋಷ್ಠಿಯಲ್ಲಿ ಮುಸ್ಲಿಮರ ವಿರುದ್ದ ಬಹಿರಂಗವಾಗಿ ಹಿಂಸೆಗೆ ಕರೆ ನೀಡಿದ್ದು ಇದೀಗ ವಿವಾದಕ್ಕೆ ಕಾರಣವಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಅವರ ವಿರುದ್ದ ಆಕ್ರೋಶ ವ್ಯಕ್ತವಾಗಿದ್ದು ಶರಣ್ ವಿರುದ್ದ ತಕ್ಷಣವೆ ಎಫ್‌ಐಆರ್‌ ದಾಖಲಿಸಬೇಕು ಎಂದು ಮುಖ್ಯಮಂತ್ರಿ ಮತ್ತು ರಾಜ್ಯದ ಡಿಜಿಪಿಯವರನ್ನು ಒತ್ತಾಯಿಸಲಾಗಿದೆ.

ಸೋಮವಾರದಂದು ನಡೆದ ಪತ್ರಿಕಾಗೋಷ್ಠಿಯೊಂದರಲ್ಲಿ ಮಾತನಾಡುತ್ತಿದ್ದ ಶರಣ್ ಪಂಪ್‌ವೆಲ್, “ಮುಸ್ಲಿಂ ಸಮುದಾಯದ ನಾಯಕರಿಗೆ ಎಚ್ಚರಿಕೆ ಕೊಡುತ್ತಿದ್ದೇನೆ. ಮುಸ್ಲಿಂ ಯುವಕರಿಗೆ ಬುದ್ದಿ ಹೇಳಬೇಕು, ಲವ್‌ ಜಿಹಾದ್ ಪ್ರಕರಣ ಮುಂದುವರೆದರೆ ಬೀದಿಗಿಳಿದು ನೇರವಾಗಿ ಅವರ ವಿರುದ್ದ ಹೋರಾಟ ಮಾಡುತ್ತೇವೆ’’ ಎಂದು ಹಿಂಸಾಚಾರಕ್ಕೆ ಕರೆ ನೀಡಿದ್ದಾರೆ. ಅಲ್ಲದೆ “ಕರಾವಳಿಯಲ್ಲಿ ಶಾಂತಿಯಿರಬೇಕಾದರೆ ಮುಸ್ಲಿಂ ನಾಯಕರು ತಮ್ಮ ಯುವಕರಿಗೆ ಎಚ್ಚರಿಕೆ ಕೊಡುವಂತಹ ಕೆಲಸ ಮಾಡಬೇಕು. ಹಿಂದೂ ಯುವತಿಯರನ್ನು ಸೆಕ್ಸ್‌ ದಂಧೆ ಮತ್ತು ಡ್ರಗ್ಸ್‌ ದಂಧೆಗೆ ಬಳಸಿಕೊಳ್ಳುತ್ತಿದ್ದೀರಿ. ಇಡೀ ಮುಸ್ಲಿಂ ಸಮುದಾಯ ಭಯೋತ್ಪಾದನೆಗೆ ಬೆಂಬಲ ಕೊಡುತ್ತಿದ್ದೀರ ಎಂಬ ಸಂಶಯವಿದೆ” ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ವಿವಾದಾತ್ಮಕ ವಿಡಿಯೋ: ಗಲಭೆಗಳಲ್ಲಿ ಭಾಗಿಯಾದ ಆರೋಪಿಗೆ ʼಎಲ್ಲಾ ಕೇಸು ತೆಗೆದು ಹಾಕುತ್ತೇವೆʼ ಎಂದ ಗೃಹ ಸಚಿವ!

ಅಷ್ಟೇ ಅಲ್ಲದೆ ಅದೇ ದಿನ ಮಾಧ್ಯಮಗಳಿಗೆ ನೀಡಿದ ಚುಟುಕು ಸಂದರ್ಶನಲ್ಲಿ, “ಮುಂದಿನ ದಿನಗಳಲ್ಲಿ ಹೋರಾಟವು ಆಗಬಹುದು ಅಥವಾ ಹೊಡೆದಾಟವು ಆಗಬಹುದು” ಎಂದು ಹಿಂಸಾಚಾರ ನಡೆಯುತ್ತದೆ ಎಂದು ಎಚ್ಚರಿಕೆಯನ್ನೂ ನೀಡಿದ್ದರು.

ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಆಕ್ರೋಶಗಳೆದ್ದಿದ್ದು, ಶರಣ್‌ ಪಂಪ್‌ವೆಲ್ ವಿರುದ್ದ ಕ್ರಮಕೈಗೊಳ್ಳಬೇಕು ಎಂದು ಆಗ್ರಹಗಳು ಕೇಳಿ ಬರುತ್ತಿದೆ. ‘ಹೇಟ್‌ ಸ್ಪೀಚ್‌ ಬೇಡ’ ಅಭಿಯಾನವು, “ಮಾನ್ಯರೆ, ಈ ರಾಜ್ಯದ ಪ್ರಜೆಗಳಾದ ನಮಗೆ ಶಿಕ್ಷಣ, ಆಹಾರ, ಮಹಿಳೆಯರ ಸುರಕ್ಷತೆ, ಸಾರ್ವಜನಿಕ ಸಾರಿಗೆ, ಆರೋಗ್ಯ ಬೇಕು. ನಾವು ಈ ಕೋಮುವಾದಿ ರಾಜಕೀಯವನ್ನು ತಿರಸ್ಕರಿಸುತ್ತೇವೆ. ಶರಣ್ ಪಂಪ್‌ವೆಲ್ ವಿರುದ್ಧ ನೀವು ತುರ್ತಾಗಿ ಕ್ರಮ ಕೈಗೊಳ್ಳಬೇಕೆಂದು ನಾವು ಬಯಸುತ್ತೇವೆ” ಎಂದು ಮುಖ್ಯಮಂತ್ರಿ ಮತ್ತು ರಾಜ್ಯದ ಡಿಜಿಪಿಗೆ ಆಗ್ರಹಿಸಿದೆ.

ಪರ್ಯಾಯ ಕಾನೂನು ವೇದಿಕೆಯ ಸಂಚಾಲಕರಾದ ವಿನಯ್‌ ಶ್ರೀನಿವಾಸ್ ಅವರು, “ಮುಖ್ಯಮಂತ್ರಿ ಬೊಮ್ಮಾಯಿ ಮತ್ತು ಕರ್ನಾಟಕದ ಡಿಜಿಪಿ ಅವರೇ, ಶರಣ್ ಪಂಪ್‌ವೆಲ್‌ ಸತ್ಯವನ್ನು ತಿರುಚುತ್ತಿದ್ದಾರೆ. ಅಲ್ಲದೆ ಮುಸ್ಲಿಮರ ವಿರುದ್ದ ಬಹಿರಂಗವಾಗಿ ಹಿಂಸೆಗೆ ಕರೆ ನೀಡುತ್ತಿದ್ದಾರೆ. ದಯವಿಟ್ಟು ಅವರ ವಿರುದ್ದ 153A, 295A, 505 (2) ಅಡಿಯಲ್ಲಿ ತಕ್ಷಣವೆ ಎಫ್ಐಆರ್ ಅನ್ನು ದಾಖಲಿಸಿರುವುದನ್ನು ಖಚಿತ ಪಡಿಸಿ” ಎಂದು ಕೇಳಿದ್ದಾರೆ.

ಇದನ್ನೂ ಓದಿ: ನಾನುಗೌರಿ ಬಯಲಿಗೆಳೆದ ಗೃಹಸಚಿವರ ವಿವಾದಾತ್ಮಕ ವೀಡಿಯೊ ಟ್ವೀಟ್‌ ಡಿಲಿಟ್‌ ಮಾಡಿದ ವಿಎಚ್‌ಪಿ ಮುಖಂಡ

ಶರಣ್ ಪಂಪ್‌ವೆಲ್ ಹಲವಾರು ಪಕ್ರರಣಗಳ ಆರೋಪಿಯಾಗಿದ್ದು, ಸದಾ ವಿವಾದಾತ್ಮಕವಾದ ಹೇಳಿಕೆಯನ್ನು ನೀಡುತ್ತಲೇ ಬಂದಿದ್ದಾರೆ. ಈಗಿನ ಸಿಎಂ ಬಸವರಾಜ್‌ ಬೊಮ್ಮಾಯಿ ಅವರು ಯಡಿಯೂರಪ್ಪರ ಸಂಪುಟದಲ್ಲಿ ಗೃಹಮಂತ್ರಿಯಾಗಿದ್ದಾಗ ಶರಣ್ ಪಂಪ್‌ವೆಲ್ ಮೇಲಿನ ಎಲ್ಲಾ ಕೇಸುಗಳನ್ನು ತೆಗೆಯುವುದಾಗಿ ಭರವಸೆ ನೀಡಿದ್ದು ವಿಡಿಯೊದಲ್ಲಿ ದಾಖಲಾಗಿತ್ತು. ಇದು ವಿವಾದಕ್ಕೂ ಕಾರಣವಾಗಿತ್ತು.

ಇದೀಗ ಬೊಮ್ಮಾಯಿ ಅವರೇ ರಾಜ್ಯದ ಮುಖ್ಯಮಂತ್ರಿಯಾಗಿದ್ದಾರೆ. ಅಷ್ಟೇ ಅಲ್ಲದೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಸೋಮವಾರದಂದು ಪ್ರಸ್ತುತ ರಾಜ್ಯದ ಗೃಹಮಂತ್ರಿಯಾಗಿರುವ ಅರಗ ಜ್ಞಾನೇಂದ್ರ ಅವರನ್ನು ಭೇಟಿಯಾಗಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಬಿಜೆಪಿ ಮತ್ತು ಸಂಘಪರಿವಾರದ ಕಾರ್ಯಕರ್ತರ ವಿರುದ್ದ ಇರುವ ಪ್ರಕರಣಗಳನ್ನು ರದ್ದುಪಡಿಸುವಂತೆ ಕೇಳಿಕೊಂಡಿದ್ದಾರೆ.

ಬಿಜೆಪಿಯ ಹೊಸ ಸಂಪುಟ ರಚನೆಯಾಗುತ್ತಿದ್ದಂತೆ ಸಂಘಪರಿವಾರ ಮತ್ತು ಬಿಜೆಪಿಯ ಕಾರ್ಯಕರ್ತರ ವಿರುದ್ದದ ಪ್ರಕರಣಗಳನ್ನು ರದ್ದು ಪಡಿಸುವಂತೆ ಸಚಿವರೊಬ್ಬರೇ ಖುದ್ದಾಗಿ ಗೃಹ ಸಚಿವರಿಗೆ ಮನವಿ ಮಾಡುತ್ತಿದ್ದಾರೆ. ಇದರ ಜೊತೆಗೆ ಹಲವು ಪ್ರಕರಣಗಳ ಆರೋಪಿಯಾಗಿರುವ ಶರಣ್ ಪಂ‌ಪ್‌ವೆಲ್‌ ಬಹಿರಂಗವಾಗಿ ಗಲಭೆಗೆ ಪ್ರಚೋದನೆ ನೀಡುತ್ತಿದ್ದಾರೆ, ಇದು ಏನನ್ನು ಪ್ರತಿಬಿಂಬಿಸುತ್ತದೆ? ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಇದೆಯೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗಿದೆ.

ಇದನ್ನೂ ಓದಿ: Fact check: ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯ ಹರಡಿದ 16 ಸುಳ್ಳು ಸುದ್ದಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...