Homeಕರ್ನಾಟಕಸಂಘ ಪರಿವಾರ ಯಾವತ್ತೂ ಸ್ವಾತಂತ್ರ್ಯ ಹೋರಾಟಕ್ಕೆ ಬರಲೇ ಇಲ್ಲ, ಈಗ ದೇಶಭಕ್ತಿ ಬಗ್ಗೆ ಮಾತಾಡ್ತಾರೆ: ಸಿಎಂ...

ಸಂಘ ಪರಿವಾರ ಯಾವತ್ತೂ ಸ್ವಾತಂತ್ರ್ಯ ಹೋರಾಟಕ್ಕೆ ಬರಲೇ ಇಲ್ಲ, ಈಗ ದೇಶಭಕ್ತಿ ಬಗ್ಗೆ ಮಾತಾಡ್ತಾರೆ: ಸಿಎಂ ವ್ಯಂಗ್ಯ

- Advertisement -
- Advertisement -

ಸಂಘ ಪರಿವಾರ ಯಾವತ್ತೂ ಸ್ವಾತಂತ್ರ್ಯ ಹೋರಾಟಕ್ಕೆ ಬರಲೇ ಇಲ್ಲ. ಈಗ ದೇಶಭಕ್ತಿ ಬಗ್ಗೆ ಮಾತಾಡ್ತಾರೆ. ಸಾವರ್ಕರ್ ಮತ್ತು ಗೋಲ್ವಾಲ್ಕರ್ ಅಂಬೇಡ್ಕರ್ ಅವರ ಸಂವಿಧಾನದ ವಿರುದ್ಧ ಇದ್ದವರು ಎನ್ನುವ ಸ್ಪಷ್ಟ ತಿಳಿವಳಿಕೆ ಕಾರ್ಯಕರ್ತರಿಗೆ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಯುವ ಕಾಂಗ್ರೆಸ್ ಆಯೋಜಿಸಿದ್ದ ‘ಯುವ ಕ್ರಾಂತಿ’ ಕಾರ್ಯಕರ್ತರ ತರಬೇತಿ ಶಿಬಿರದಲ್ಲಿ ಅವರು ವಿಶೇಷ ಉಪನ್ಯಾಸ ನೀಡಿದರು.

ಸ್ವಾತಂತ್ರ್ಯ ಹೋರಾಟ ಮತ್ತು‌ ಆಧುನಿಕ ಭಾರತ ನಿರ್ಮಾಣದಲ್ಲಿ ಕಾಂಗ್ರೆಸ್ ನ ತ್ಯಾಗ-ಬಲಿದಾನ ಮಹತ್ವದ ಪಾತ್ರ ನಿರ್ವಹಿಸಿದೆ. ದೇಶಕ್ಕೆ ನಾಗರಿಕ ಹಕ್ಕು ಮತ್ತು ಸಾಮಾಜಿಕ ನ್ಯಾಯ ಒದಗಿಸಲು ಹುಟ್ಟಿದ ಪಕ್ಷ ಕಾಂಗ್ರೆಸ್. ಸಂಘ ಪರಿವಾರ ಯಾವತ್ತೂ ಸ್ವಾತಂತ್ರ್ಯ ಹೋರಾಟಕ್ಕೆ ಬರಲೇ ಇಲ್ಲ. ಈಗ ದೇಶಭಕ್ತಿ ಬಗ್ಗೆ ಮಾತಾಡ್ತಾರೆ ಎಂದು ಸಿಎಂ ವ್ಯಂಗ್ಯವಾಡಿದರು.‌

ಗಾಂಧಿಯವರು ಸ್ವಾತಂತ್ರ್ಯ ಹೋರಾಟದ ನೇತೃತ್ವ ವಹಿಸಿದಂತೆ, ಭಾರತದಲ್ಲಿ ಅಂಬೇಡ್ಕರ್ ಅವರ ಸಂವಿಧಾನಕ್ಕೆ ಭದ್ರ ಬುನಾದಿ ಹಾಕಿದವರು ನೆಹರು. ಬಹುತ್ವದ ಭಾರತದ ನೆಲದಲ್ಲಿ ಏಕತೆ ತಂದು ಸಹಿಷ್ಣುತೆಯನ್ನು ಆಚರಣೆಗೆ ತರಲು ನೆಹರೂ ಕೊಡುಗೆ ಅಪಾರ ಎಂದರು.

ಮನುಸ್ಮೃತಿ ಪ್ರೇರಿತ ಜಾತಿ ವ್ಯವಸ್ಥೆ ಭಾರತ ಸಮಾಜವನ್ನು ಜಾತಿ ಆಧಾರದಲ್ಲಿ ಬಿರುಕು ಮೂಡಿಸಿತು. ಈ ಇತಿಹಾಸ ನಿಮಗೆ ಗೊತ್ತಿರಬೇಕು ಎಂದು ಸಿಎಂ ಹೇಳಿದರು.

ಯುವ ಕಾಂಗ್ರೆಸ್ ಅಂದರೆ ಭಾರತದ ಸಂವಿಧಾನ ಮತ್ತು ಬಹುತ್ವದ ರಕ್ಷಣೆಗೆ ನಿಂತ ಯುವ ಸೈನ್ಯ. ನಾವು ಏಕೆ ಕಾಂಗ್ರೆಸ್ ಕಟ್ಟುತ್ತಿದ್ದೇವೆ, ಆರ್ ಎಸ್‌ಎಸ್‌ ಮತ್ತು ಸಂಘ ಪರಿವಾರ ಹೇಗೆ ಭಾರತದ ಬಹುತ್ವ ಮತ್ತು ಸಂವಿಧಾನ ವಿರೋಧಿ ಎನ್ನುವ ಸ್ಪಷ್ಟತೆ ನಿಮಗೆ ಇರಬೇಕು. ಈ ಸ್ಪಷ್ಟತೆ ಇಲ್ಲದವರು ಬಹಳ ವರ್ಷ ಕಾಂಗ್ರೆಸ್‌ನಲ್ಲಿ ಉಳಿಯುತಾರೆ ಎನ್ನುವುದು ಅನುಮಾನ ಎಂದರು.

ಸ್ವಾತಂತ್ರ, ಸಮಾನತೆ, ಬ್ರಾತೃತ್ವ ಹಾಗೂ ಸಹಿಷ್ಣತೆ, ಸಹಬಾಳ್ವೆ ನಮ್ಮ ಸಂವಿಧಾನದ ಉಸಿರು. ಇದೇ ಭಾರತದ ಉಸಿರು ಕೂಡ ಆಗಿದೆ. ಅಧಿಕಾರ ಬಲಾಡ್ಯರ ಕೈಯಲ್ಲಿ ಇರಬಾರದು. ಜನ ಸಾಮಾನ್ಯರ ಕೈಯಲ್ಲಿ ಇರಬೇಕು ಎಂದು ಅಂಬೇಡ್ಕರ್ ಹೇಳಿದ್ದರು. ಕಾಂಗ್ರೆಸ್ ಜನರ ಕೈಗೆ ಅಧಿಕಾರ ಮತ್ತು ಅವಕಾಶಗಳನ್ನು ನೀಡುತ್ತಿದೆ. ಬಿಜೆಪಿ ಬಲಾಡ್ಯರಿಗೆ ಅಧಿಕಾರ ಮತ್ತು ಅವಕಾಶ ನೀಡುತ್ತಿದೆ. ಇದು ಸಂವಿಧಾನ ವಿರೋಧಿ. ಹೀಗಾಗಿ ಬಿಜೆಪಿ ಸಂವಿಧಾನವನ್ನೇ ವಿರೋಧಿಸುತ್ತದೆ ಎಂದು ಹೇಳಿದರು.

ನಾನು ಎರಡು ಬಾರಿ ಮುಖ್ಯಮಂತ್ರಿಯಾಗಿ ಅಸಮಾನತೆಯನ್ನು ಕಡಿಮೆ ಮಾಡುವ ಕಾರ್ಯಕ್ರಮಗಳನ್ನು ರೂಪಿಸಿ ಜಾರಿ ಮಾಡಿದ್ದೇನೆ. ಸ್ವಾತಂತ್ರ್ಯ ಸಾರ್ಥಕತೆ ಆಗಬೇಕಾದರೆ ಪ್ರತಿಯೊಬ್ಬರೂ ಆರ್ಥಿಕ ಮತ್ತು ಸಾಮಾಜಿಕ ಸಬಲತೆ ಪಡೆದುಕೊಳ್ಳಬೇಕು. ಕಟ್ಟ ಕಡೆಯ ಮನುಷ್ಯನಿಗೆ ಶಕ್ತಿ ಕೊಡುವುದೇ ಸರ್ವೋದಯದ ಆಶಯ ಎಂದರು.

ಮೌಢ್ಯ, ಕಂದಾಚಾರ, ಕರ್ಮ ಸಿದ್ಧಾಂತವನ್ನು ಕೃತಕವಾಗಿ ಸೃಷ್ಟಿಸಿ ನೀರು ಗೊಬ್ಬರ ಹಾಕಿ ಗಟ್ಟಿ ಮಾಡಿಟ್ಟಿದ್ದಾರೆ. ದೇವರು ಒಬ್ಬರಿಗೊಂದು ಮತ್ತೊಬ್ಬರಿಗೊಂದು ಮಾಡುವುದಿಲ್ಲ. ದೇವರ ಹೆಸರಲ್ಲಿ ಮೌಢ್ಯಗಳನ್ನು ಬಿತ್ತುವವರ ಬಗ್ಗೆ ಎಚ್ಚರ ವಿರಲಿ ಎಂದು ಹೇಳಿದರು.

ಶರಣ ಬಸವಣ್ಣ ಹೇಳಿದ ರೀತಿಯಲ್ಲಿ ದೇವರು ಇದ್ದಾನೆ. ಬಸವಣ್ಣರ ರೀತಿಯಲ್ಲಿ ದೇವರನ್ನು ಕಾಣಬೇಕು. ಮಾಡಬಾರದ ಪಾಪಗಳನ್ನೆಲ್ಲಾ ಮಾಡಿ ದೇವರಿಗೆ ಕೈ ಮುಗಿದರೆ ಪಾಪ ಹೋಗುವುದಿಲ್ಲ. ಬಿಜೆಪಿ ದೇವರು, ಧರ್ಮದ ಹೆಸರಲ್ಲಿ ಬರೀ ಸುಳ್ಳು ಹರಡುತ್ತದೆ. ಈ ಬಗ್ಗೆ ದೇಶದ ಜನರ ತಿಳಿವಳಿಕೆ ಹೆಚ್ಚಿಸುವ ಕೆಲಸ ಆಗಬೇಕಿದೆ ಎಂದರು.

ತನ್ನನ್ನು ಚುನಾವಣೆಯಲ್ಲಿ ಸೋಲಿಸಿದ್ದು ಸಾವರ್ಕರ್ ಮತ್ತು ಢಾಂಗೆ ಎಂದು ಅಂಬೇಡ್ಕರ್ ಅವರೇ ಸ್ಪಷ್ಟವಾಗಿ ಬರೆದಿದ್ದಾರೆ. ನಿಮಗೆ ಸ್ಪಷ್ಟತೆ ಮತ್ತು ಬದ್ಧತೆ ಇದ್ದರೆ ಯಾರು ಏನೇ ಮಾಡಿದರೂ ನೀವು ಬದಲಾಗಲ್ಲ ಎಂದು ತಿಳಿಸಿದರು.

ರಾಜೀವ್ ಗಾಂಧಿ ಅವರು ಕೊಟ್ಟ ಮೀಸಲಾತಿಯನ್ನು ವಿರೋಧಿಸಿ ನ್ಯಾಯಾಲಯದ ಮೆಟ್ಟಿಲೇರಿದ್ದು ಬಿಜೆಪಿಯ ರಾಮಾ ಜೋಯಿಸ್. ಆದರೆ, ನ್ಯಾಯಾಲಯ ರಾಜೀವ್ ಗಾಂಧಿ ಅವರು ತಂದ ತಿದ್ದುಪಡಿಯನ್ನು ಸಂವಿಧಾನ ಬದ್ದ ಎಂದು ಎತ್ತಿ ಹಿಡಿಯಿತು. ಮೀಸಲಾತಿಯನ್ನು ವಿರೋಧಿಸಿದ್ದ ಬಿಜೆಪಿ ಮಂಡಲ್ ವರದಿಯನ್ನೂ ವಿರೋಧಿಸಿತು. ಹೀಗಾಗಿ ಇತಿಹಾಸ ಮತ್ತು ಸಿದ್ಧಾಂತದ ಬಗ್ಗೆ ನಿಮಗೆ ಸ್ಪಷ್ಟತೆ ಇದ್ದರೆ ಮುಂದೆ ಉತ್ತಮ‌ ನಾಯಕರಾಗಿ ಬೆಳೆಯುತ್ತೀರಿ ಎಂದು ಕರೆ ನೀಡಿದರು.

ಸಂವಿಧಾನ ಸಂರಕ್ಷಕರ ಸಮಾವೇಶ-ದಾವಣಗೆರೆ | ನಗರದ ಪ್ರಮುಖ ರಸ್ತೆಗಳಲ್ಲಿ ಪರೇಡ್ ಮೂಲಕ ಅದ್ದೂರಿ ಚಾಲನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...