Homeಚಳವಳಿರಾಯಣ್ಣ ಪ್ರತಿಮೆ ಭಗ್ನ: ಬೆಂಗಳೂರಿನಲ್ಲಿ ಕನ್ನಡಿಗರ ಪ್ರತಿಭಟನೆ

ರಾಯಣ್ಣ ಪ್ರತಿಮೆ ಭಗ್ನ: ಬೆಂಗಳೂರಿನಲ್ಲಿ ಕನ್ನಡಿಗರ ಪ್ರತಿಭಟನೆ

- Advertisement -
- Advertisement -

ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣನವರ ಪ್ರತಿಮೆ ಭಗ್ನಗೊಳಿಸಿದ ಎಂಇಎಸ್ ಸಂಘಟನೆಯನ್ನು ನಿಷೇಧಿಸಬೇಕು ಅದೇ ಸ್ಥಳದಲ್ಲಿ ಸಂಗೊಳ್ಳಿ ರಾಯಣ್ಣರ ಪ್ರತಿಮೆಯನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸಿ ಇಂದು ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ಕನ್ನಡಪರ ಸಂಘಟನೆಗಳ ಮುಖಂಡರಿಂದ ಪ್ರತಿಭಟನೆ ನಡೆಯಿತು.

ಎಂಇಎಸ್ ಸಂಘಟನೆ ವಿರುದ್ಧ ಧಿಕ್ಕಾರ ಕೂಗಿದ ಪ್ರತಿಭಟನಾಕಾರರು ಬೆಳಗಾವಿ ಪೊಲೀಸರ ಮೇಲೆ ಹಲ್ಲೆ ಮಾಡಿದವರನ್ನು ಬಂಧಿಸಬೇಕು ಎಂದು ಆಗ್ರಹಿಸಿದರು. ಕರ್ನಾಟಕ ರಣಧೀರ ಪಡೆಯ ಅಧ್ಯಕ್ಷರಾದ ಹರೀಶ್ ಕುಮಾರ್‌ರವರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ಬೆಳಗಾವಿಯ ಅನಗೋಳದ ಕನಕದಾಸ ಕಾಲೋನಿಯಲ್ಲಿರುವ ಸಂಗೊಳ್ಳಿ ರಾಯಣ್ಣನ ಪುತ್ಥಳಿಯನ್ನು ದುಷ್ಕರ್ಮಿಗಳು ಭಗ್ನಗೊಳಿಸಿ, ಖಡ್ಗ, ಗುರಾಣಿ ಕಿತ್ತುಹಾಕಿರುವ ಘಟನೆ ಶನಿವಾರ ಮುಂಜಾನೆ ಸಂಭವಿಸಿದೆ. ಬೆಳಗಾವಿಯಲ್ಲಿ ಪರಿಸ್ಥಿತಿ ಉಲ್ಬಣಗೊಂಡ ಹಿನ್ನೆಲೆಯಲ್ಲಿ ಪೊಲೀಸರು 144 ಸೆಕ್ಷನ್ ಜಾರಿಗೊಳಿಸಿದ್ದಾರೆ.

ಬೆಳಗಾವಿಯ ಅಧಿವೇಶನವನ್ನು ವಿರೋಧಿಸಿ ಎಂಇಎಸ್ ಸಂಘಟನೆಯ ಕಾರ್ಯಕರ್ತರು ಮಹಾಮೇಳವ್ ಎಂಬ ಉತ್ಸವ ಸಂಘಟಿಸಿದ್ದರು. ಇದನ್ನು ವಿರೋಧಿಸಿ ಕನ್ನಡಪರ ಕಾರ್ಯಕರ್ತರು ಉತ್ಸವ ವೇಳೆ ಎಂಇಎಸ್ ನಾಯಕರಿಗೆ ಮಸಿ ಬಳಿದಿದ್ದರು. ಈ ಸಂಬಂಧ ಸಂಪತ್ ಮತ್ತು ಇತರರನ್ನು ಪೊಲೀಸರು ಬಂಧಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯೆಯಾಗಿ ಎಂಇಎಸ್ ಕಾರ್ಯಕರ್ತರು ಕನ್ನಡ ಬಾವುಟಕ್ಕೆ ಬೆಂಕಿ ಇಟ್ಟು ಉದ್ಧಟತನ ಮೆರೆದಿದ್ದರು. ಇದರಿಂದ ಕ್ರೋಧಗೊಂಡ ಕೆಲ ಕನ್ನಡ ಕಾರ್ಯಕರ್ತರು ಬೆಂಗಳೂರಿನಲ್ಲಿರುವ ಶಿವಾಜಿ ಪ್ರತಿಮೆಗೆ ಮಸಿ ಬಳಿದಿದ್ದರು. ಇದಕ್ಕೆ ಪ್ರತಿಕ್ರಿಯೆಯಾಗಿ ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣನವರ ಪ್ರತಿಮೆ ಭಗ್ನಗೊಳಿಸಲಾಗಿದೆ ಮತ್ತು ಕಲ್ಲು ತೂರಾಟ ಮಾಡಿ ಗಲಭೆಗೆ ಪ್ರಚೋದಿಸಲಾಗಿದೆ ಎನ್ನಲಾಗಿದೆ.

ರೈಲ್ವೆ ನಿಲ್ದಾಣದ ಬಳಿ ಪ್ರತಿಭಟನೆ

ಬೆಳಗಾವಿಯ ಅನಿಗೊಳದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಪ್ರತಿಮೆಯನ್ನು ಭಗ್ನಗೊಳಿಸಿದ ಭಯೋತ್ಪಾದಕ ಶಕ್ತಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಟಿ.ಎ.ನಾರಾಯಣಗೌಡರ ನೇತೃತ್ವದಲ್ಲಿ ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣ ಬಳಿಯ ಸಂಗೊಳ್ಳಿ ರಾಯಣ್ಣ ಪ್ರತಿಮೆ ಬಳಿ ಇಂದು ಮಧ್ಯಾಹ್ನ 12-30ಕ್ಕೆ ಪ್ರತಿಭಟನೆ ಏರ್ಪಡಿಸಲಾಗಿದೆ ಕರವೇ ಪ್ರಧಾನ ಕಾರ್ಯದರ್ಶಿ ಬಿ.ಸಣ್ಣೀರಪ್ಪ ತಿಳಿಸಿದ್ದಾರೆ.


ಇದನ್ನೂ ಓದಿ: ಬೆಳಗಾವಿ: ದುಷ್ಕರ್ಮಿಗಳಿಂದ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಭಗ್ನ- 144 ಸೆಕ್ಷನ್ ಜಾರಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಹಾಸನ ಪೆನ್‌ಡ್ರೈವ್ ಪ್ರಕರಣ: ಎಸ್‌ಐಟಿ ರಚಿಸಲು ಕೋರಿ ಮಹಿಳಾ ಆಯೋಗದಿಂದ ಸಿಎಂಗೆ ಪತ್ರ

0
ಹಾಸನ ಜಿಲ್ಲೆಯಲ್ಲಿ ಹರಿದಾಡುತ್ತಿರುವ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ವಿಶೇಷ ತಂಡ ರಚನೆ ಮಾಡುವಂತೆ ಕೋರಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ ಅವರು ಸಿಎಂ ಸಿದ್ದರಾಮಯ್ಯ, ಗೃಹ ಸಚಿವ...