Homeಕರೋನಾ ತಲ್ಲಣಮುಟ್ಟಿನ ಸಮಯದಲ್ಲಿ ಪಿಪಿಇ ಜೊತೆಗೆ ಸ್ಯಾನಿಟರಿ ಪ್ಯಾಡ್ ಹಾಗೂ ಡೈಪರ್‌ ಕೂಡಾ ಧರಿಸಬೇಕು: ಮಹಿಳಾ ವೈದ್ಯೆಯರ...

ಮುಟ್ಟಿನ ಸಮಯದಲ್ಲಿ ಪಿಪಿಇ ಜೊತೆಗೆ ಸ್ಯಾನಿಟರಿ ಪ್ಯಾಡ್ ಹಾಗೂ ಡೈಪರ್‌ ಕೂಡಾ ಧರಿಸಬೇಕು: ಮಹಿಳಾ ವೈದ್ಯೆಯರ ಸಂಕಷ್ಟ

ಸತತ ಎಂಟು ಗಂಟೆಗಳ ಕಾಲ ಪಿಪಿಇ ಕಿಟ್ ಧರಿಸಬೇಕಾಗಿರುವುದರಿಂದ ಮುಟ್ಟಾದ ದಿನಗಳಲ್ಲಿ ಬಹಳಷ್ಟು ಕಷ್ಟಕರವಾಗುತ್ತದೆ. ಸ್ಯಾನಿಟರಿ ಪ್ಯಾಡ್ ಧರಿಸಿ ನಂತರ ಡಯಾಪರ್ ಧರಿಸಬೇಕಾಗುತ್ತದೆ.

- Advertisement -
- Advertisement -

ಕೊರೊನಾ ಸಾಂಕ್ರಾಮಿಕದ ವಿರುದ್ದ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಮಹಿಳಾ ವೈದ್ಯರ ಸಮಸ್ಯೆಗಳನ್ನು ದಿ ಇಂಡಿಯನ್ ಎಕ್ಸ್‌‌ಪ್ರೆಸ್ ಬಿಚ್ಚಿಟ್ಟಿದೆ. ಅವರು ಒಮ್ಮೆ ಪಿಪಿಇ (ವೈಯಕ್ತಿಕ ರಕ್ಷಣಾ ಸಾಧನಗಳು) ಧರಿಸಿದ ನಂತರ ಅದನ್ನು ಎಂಟುಗಂಟೆಗಳ ಕಾಲ ಧರಿಸಿಯೆ ಇರಬೇಕಾಗುತ್ತದೆ. ಅದರ ಜೊತೆಗೆ ಮೂತ್ರ ವಿಸರ್ಜನೆಗೆ ಡೈಪರ್‌ಗಳನ್ನು ಕೂಡಾ ಧರಿಸಬೇಕಾಗುತ್ತದೆ ಎಂದು ಅಳಲು ತೋಡಿಕೊಂಡಿದ್ದಾರೆ. ಈ ಸಮಸ್ಯೆ ಮುಟ್ಟಿನ ಸಮಯದಲ್ಲಿ ಇನ್ನೂ ಹೆಚ್ಚಾಗುತ್ತದೆ ಎಂದು ಮಹಿಳಾ ವೈದ್ಯರು ಹೇಳುತ್ತಾರೆ.

ಆರೋಗ್ಯ ಕೇಂದ್ರದಲ್ಲಿ ಸೋಂಕಿನ ಸಾಮಾನ್ಯ ಅಪಾಯಗಳ ಮಧ್ಯೆ ಕೊರೊನಾ ವಾರ್ಡ್‌ಗಳಲ್ಲಿ ಕೆಲಸ ಮಾಡುವ ಮಹಿಳಾ ವೈದ್ಯರು ಮತ್ತು ದಾದಿಯರಿಗೆ ಕಡ್ಡಾಯವಾಗಿರುವ ಪಿಪಿಇ ಅವರ ಸಮಸ್ಯೆಗಳನ್ನು ಇನ್ನೂ ಹೆಚ್ಚಿಸುತ್ತದೆ.

ಒಮ್ಮ ಪಿಪಿಇ ಕಿಟ್ ಧರಿಸಿದರೆ ಅದನ್ನು ಸಾಮಾನ್ಯವಾಗಿ 8 ಗಂಟೆಗಳ ಕಾಲ ಧರಿಸಿಯೆ ಇರಬೇಕಾಗುತ್ತದೆ. ಈ ಸಮಯದಲ್ಲಿ ವೈದ್ಯರು ಏನನ್ನು ಕುಡಿಯಲೋ ಹಾಗೂ ತಿನ್ನಲು ಸಾಧ್ಯವಿಲ್ಲ. ತಮ್ಮ ಸಮಸ್ಯೆಗಳನ್ನು ಬಿಚ್ಚಿಡುವ ಪಂಚಕುಲ ಪ್ಯಾರಾಸ್ ಆಸ್ಪತ್ರೆಯ ವೈದ್ಯರಾದ ಡಾ. ಜಸ್ಲೋವ್ಲಿನ್ ಕೌರ್‌ “ನಾವು ಸಾಮಾನ್ಯವಾಗಿ ಮೂತ್ರ ವಿಸರ್ಜಿಸಲು ಡಯಾಪರ್ ಧರಿಸುತ್ತೇವೆ” ಎನ್ನುತ್ತಾರೆ.

ಸತತ ಎಂಟು ಗಂಟೆಗಳ ಕಾಲ ಪಿಪಿಇ ಕಿಟ್ ಧರಿಸಬೇಕಾಗಿರುವುದರಿಂದ ಮುಟ್ಟಾದ ದಿನಗಳಲ್ಲಿ ಬಹಳಷ್ಟು ಕಷ್ಟಕರವಾಗುತ್ತದೆ. ಸ್ಯಾನಿಟರಿ ಪ್ಯಾಡ್ ಧರಿಸಿ ನಂತರ ಡಯಾಪರ್ ಧರಿಸಬೇಕಾಗುತ್ತದೆ. ಇಲ್ಲಿಯ ತನಕ ಟ್ಯಾಂಪನ್‍ ಗಳನ್ನು ಬಳಸದ ನಾನು ಈಗ ಅವುಗಳನ್ನು ಧರಿಸಬೇಕಾಗುತ್ತದೆ ಎಂದು ಅವರು ವಿವರಿಸುತ್ತಾರೆ.

ಅಧಿಕ ರಕ್ತಸ್ರಾವವಾಗುವವರು ತಮ್ಮ ಪಿಪಿಇ ಯಲ್ಲಿದ್ದಾಗ ಎರಡು ಅಥವಾ ಹೆಚ್ಚು ಪ್ಯಾಡ್‌ಗಳನ್ನು ಸಹ ಬಳಸುತ್ತಾರೆ ಎಂದು ನೋಯ್ಡಾದ ಮದರ್‌ಹುಡ್ ಆಸ್ಪತ್ರೆಯ ಪ್ರಸೂತಿ ಮತ್ತು ಸ್ತ್ರೀರೋಗತಜ್ಞೆ ಡಾ. ಸಂದೀಪ್ ಚಾಧಾ ಹೇಳುತ್ತಾರೆ.

ಧೀರ್ಘ ಕಾಲದವರೆಗೆ ಸ್ಯಾನಿಟರಿ ಪ್ಯಾಡ್ ಧರಿಸುವುದರಿಂದ ಆರೋಗ್ಯದ ಅಪಾಯಗಳು ಕೂಡಾ ಹೆಚ್ಚಿರುತ್ತವೆ ಎನ್ನುವ ಡಾ. ರೀಚಾ ಸರೀನ್, “ಪಿಪಿಇ ಧರಿಸಿದಾಗ ದೇಹವು ತುಂಬಾ ಬಿಸಿ ಮತ್ತು ಆರ್ದ್ರವಾಗಿರುತ್ತದೆ. ಆರರಿಂದ ಎಂಟು ಗಂಟೆಗಳ ಕಾಲ ಪ್ಯಾಡ್ ಬದಲಾಯಿಸದ ಕಾರಣ, ತೇವಾಂಶ ಮತ್ತು ಉಷ್ಣತೆಯು ಜನನಾಂಗದ ಪ್ರದೇಶದಲ್ಲಿ ಸೋಂಕಿಗೆ ಕಾರಣವಾಗಬಹುದು” ಎಂದು ಅವರು ವಿವರಿಸುತ್ತಾರೆ.

ಒಮ್ಮೆ ಪಿಪಿಇ ಕಳಚಿಟ್ಟರೆ ಅದನ್ನು ಮರುಬಳಕೆ ಮಾಡುವುದಿಲ್ಲ, ಹೊಸದನ್ನು ಧರಿಸಬೇಕಾಗುತ್ತದೆ. ನನ್ನ ಕೆಲವು ಸಹೋದ್ಯೋಗಿಗಳಿಗೆ ಪಿಪಿಇ ಧರಿಸಿರುವಾಗಲೆ ಮುಟ್ಟು ಪ್ರಾರಂಭವಾದ ಉದಾಹರಣೆಗಳಿವೆ. ಈ ಸಮಯದಲ್ಲಿ ಹೊಸದಾದ ಪಿಪಿಇಯನ್ನೆ ಧರಿಸಬೇಕಾಗುತ್ತದೆ ಎಂದು ಅವರು ಸಮಸ್ಯೆಯನ್ನು ಎತ್ತಿತೋರಿಸಿದ್ದಾರೆ.

ರಕ್ತ ಹೋಗುತ್ತಿರುವಾಗ ಮತ್ತು ಮುಟ್ಟಿನ ಸಮಯದ ನೋವನ್ನು ಸಹಿಸಿ ದೈಹಿಕ ಶಕ್ತಿಯನ್ನು ಉಳಿಸಿಕೊಳ್ಳಲು ತಜ್ಞರು ಈ ಅವಧಿಗಳಲ್ಲಿ ಸಾಕಷ್ಟು ಪೋಷಕಾಂಶಗಳು ಮತ್ತು ನೀರು ಸೇವಿಸಲು ಒತ್ತಿಹೇಳುತ್ತಾರೆ. ಆದರೆ ಪ್ರಸ್ತುತ ಕೊರೊನಾ ಬಿಕ್ಕಟ್ಟಿನಲ್ಲಿ ಈ ಆರೋಗ್ಯ ಕಾರ್ಯಕರ್ತರು ಗಂಟೆಗಟ್ಟಲೆ ಆಹಾರ ಮತ್ತು ನೀರಿಲ್ಲದೆ ತಮ್ಮ ಕರ್ತವ್ಯವನ್ನು ನಿರ್ವಹಿಸುವುದು ಅವರ ಕರ್ತವ್ಯ ನಿಷ್ಟೆಗೆ ಹಿಡಿದ ಕೈಗನ್ನಡಿಯಾಗಿದೆ.

ಮುಟ್ಟು, ಶೌಚ ವಿಷಯಗಳನ್ನು ಭಾರತದಲ್ಲಿ ಮಡಿ ಎಂದು ನೋಡಲಾಗುತ್ತದೆ. ಆದರೆ ಅವು ನೈಸರ್ಗಿಕ ಕ್ರಿಯೆಗಳಷ್ಟೆ. ಅವುಗಳನ್ನು ಅರ್ಥ ಮಾಡಿಕೊಂಡಾಗ ಮಾತ್ರ ಮಹಿಳೆಯರನ್ನು ಗೌರವಿಸಲು ಸಾಧ್ಯ. ಈ ಸಾಂಕ್ರಾಮಿಕ ಕಾಲದಲ್ಲಿ ಮಹಿಳಾ ವೈದ್ಯರು, ದಾದಿಯುರು ಅವುಗಳನ್ನೆಲ್ಲ ಮೆಟ್ಟಿ ನಿಂತು ಕೆಲಸ ಮಾಡುತ್ತಿರುವುದು ನಿಜಕ್ಕೂ ಶ್ಲಾಘನೀಯ ಕೆಲಸ.

ಇಂತಹ ವೈದ್ಯರನ್ನು ಸ್ಮರಿಸುವುದು, ಅವರ ಕರ್ತವ್ಯಕ್ಕೆ ಗೌರವ ಸೂಚಿಸುವುದು ಎಲ್ಲರ ಜವಾಬ್ದಾರಿಯಾಗಿದೆ. ಅದೇ ರೀತಿ ಸರ್ಕಾರಗಳು ಸಹ ಕೇವಲ ಭಾಷಣ ಮಾತ್ರವಲ್ಲದೇ ಈ ಮಹಿಲಾ ವೈದ್ಯರು ಮತ್ತು ದಾದಿಯರಿಗೆ ಸಮರ್ಪಕ ಸಂಬಳ, ಭತ್ಯೆಗಳನ್ನು ನೀಡಬೇಕು. ಅವರಿಗೆ ಅಗತ್ಯವಿರುವ ಪಿಪಿಇ ಮತ್ತು ಇತರ ವೈದ್ಯಕೀಯ ಸಾಮಗ್ರಿಗಳನ್ನು ಸಾಕಷ್ಟು ಸಂಖ್ಯೆಯಲ್ಲಿ ಒದಗಿಸಬೇಕು.


ಓದಿ: ಕರ್ತವ್ಯನಿಷ್ಠ, ಪ್ರಾಮಾಣಿಕ ಪ್ರತಿಭಾನ್ವಿತ ವೈದ್ಯ ಹೋರಾಟಗಾರ ಡಾ. ಕಫೀಲ್‌ಖಾನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...