Homeಮುಖಪುಟಬಡವರ ಅಕ್ಕಿಯನ್ನು ಶ್ರೀಮಂತರ ಕೈಗಳ ಸ್ವಚ್ಛತೆಗೆ ಬಳಸಲಾಗುತ್ತಿದೆ: ರಾಹುಲ್ ಗಾಂಧಿ ಆರೋಪ

ಬಡವರ ಅಕ್ಕಿಯನ್ನು ಶ್ರೀಮಂತರ ಕೈಗಳ ಸ್ವಚ್ಛತೆಗೆ ಬಳಸಲಾಗುತ್ತಿದೆ: ರಾಹುಲ್ ಗಾಂಧಿ ಆರೋಪ

- Advertisement -
- Advertisement -

ಬಡವರ ಅಕ್ಕಿಯನ್ನು ಶ್ರೀಮಂತರ ಕೈಗಳ ಸ್ವಚ್ಛತೆಗೆ ಬಳಸಲಾಗುತ್ತಿದೆ ಎಂದು ಕಾಂಗ್ರೆಸ್‌ ಮುಖಂಡ ರಾಹುಲ್ ಗಾಂಧಿ ಟೀಕಿಸಿದ್ದು, ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಗೋಡೌನ್‌ಗಳಲ್ಲಿ ಇರುವ ಹೆಚ್ಚುವರಿ ಅಕ್ಕಿಯನ್ನು ಹ್ಯಾಂಡ್ ಸ್ಯಾನಿಟೈಸರ್ ತಯಾರಿಸಲು ಎಥೆನಾಲ್ ಆಗಿ ಪರಿವರ್ತಿಸಲಾಗುವುದು ಮತ್ತು ವಾಯುಮಾಲಿನ್ಯವನ್ನು ಕಡಿಮೆ ಮಾಡಲು ಪೆಟ್ರೋಲ್‌ಗೆ ಸೇರಿಸಲಾಗುವುದು ಎಂದು ಈ ಹಿಂದೆ ಕೇಂದ್ರ ಸರ್ಕಾರ ಹೇಳಿತ್ತು. ಇದಕ್ಕೆ ಪ್ರತಿಯಾಗಿ ರಾಹುಲ್‌ ಗಾಂಧಿ ಟೀಕೆ ಕೇಳಿಬಂದಿದೆ.

ಕೊರೊನಾ ವೈರಸ್ ದೇಶದಾದ್ಯಂತ ತ್ವರಿತ ಗತಿಯಲ್ಲಿ ಹರಡದಂತೆ ಕಳೆದ ತಿಂಗಳು ದೇಶದಾದ್ಯಂತ ಲಾಕ್‌ಡೌನ್‌ ಗೋಷಿಸಿದ ನಂತರ ಲಕ್ಷಾಂತರ ಭಾರತೀಯ ಬಡವರು ಹಸಿವಿನಿಂದ ಬಳಲುತ್ತಿದ್ದಾರೆ ಎಂದು ವರದಿಯಾಗುತ್ತಿದೆ.

“ಭಾರತದ ಬಡವರು ಯಾವಾಗ ಎಚ್ಚರಗೊಳ್ಳುತ್ತಾರೆ? ನೀವು ಹಸಿವಿನಿಂದ ಸಾಯುತ್ತಿದ್ದೀರಿ, ಅವರು ನಿಮ್ಮ ಅಕ್ಕಿಯನ್ನು ಸ್ಯಾನಿಟೈಸರ್ ತಯಾರಿಸುವ ಮೂಲಕ ಶ್ರೀಮಂತರ ಕೈಗಳನ್ನು ಸ್ವಚ್ಛಗೊಳಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ” ಎಂದು ಗಾಂಧಿ ಟ್ವೀಟ್ ಮಾಡಿದ್ದಾರೆ.

ಹೆಚ್ಚುವರಿ ಆಹಾರ ಧಾನ್ಯವನ್ನು ಎಥೆನಾಲ್ ಆಗಿ ಪರಿವರ್ತಿಸಲು ಅನುವು ಮಾಡಿಕೊಡುವ ಜೈವಿಕ ಇಂಧನಗಳ ರಾಷ್ಟ್ರೀಯ ನೀತಿಯ ಉಲ್ಲೇಖದಂತೆ, ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಷ್ಟ್ರೀಯ ಜೈವಿಕ ಇಂಧನ ಸಮನ್ವಯ ಸಮಿತಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಕೇಂದ್ರ ಸರ್ಕಾರ ಸೋಮವಾರ ತಿಳಿಸಿದೆ.

ಹೆಚ್ಚುವರಿ ಆಹಾರ ಧಾನ್ಯಗಳ ಸಂಗ್ರಹದ ಸಣ್ಣ ಭಾಗವನ್ನು ಎಥೆನಾಲ್ ಆಗಿ ಪರಿವರ್ತಿಸಲು ಸಮಿತಿ ಅನುಮತಿ ನೀಡಿದೆ ಎಂದು ಪ್ರಧಾನ್ ಹೇಳಿದ್ದರು.

ಕೊರೊನಾ ವೈರಸ್ ಲಾಕ್‌ಡೌನ್ ಘೋಷಣೆಯಾದಾಗಿನಿಂದ, ಭಾರತದ ಆಹಾರ ನಿಗಮದ ಗೋಡೌನ್‌ಗಳು ತುಂಬಿದ್ದರೂ ಸಹ, ಲಾಕ್‌ಡೌನ್‌ನಿಂದಾಗಿ ಭಾರತದ ಅನೇಕ ಬಡವರು ಹಸಿವಿನಿಂದ ಬಳಲುತ್ತಿದ್ದಾರೆ ಎಂಬ ವರದಿಗಳ ಬಗ್ಗೆ ದೊಡ್ಡ ವಿವಾದಗಳಿವೆ.

ಲಾಕ್‌ಡೌನ್‌ನಿಂದಾಗಿ ಮನೆಯಿಲ್ಲದೆ ನಿರುದ್ಯೋಗಿಗಳಾಗಿ ನಗರಗಳಲ್ಲಿ ಸಿಲುಕಿಕೊಂಡಿದ್ದ ಹಲವಾರು ವಲಸೆ ಕಾರ್ಮಿಕರು ಹಸಿವಿನಿಂದ ಸಾಯುವ ಹಂತದಲ್ಲಿದ್ದಾರೆ ಎಂದು ಹಲವಾರು ವರದಿಗಳು ಉಲ್ಲೇಖಿಸಿವೆ. ಬಡವರ ಬಗ್ಗೆ ಸರ್ಕಾರಕ್ಕೆ ಕಾಳಜಿಯಿಲ್ಲ ಎಂಬ ಟೀಕೆಗಳು ಜೋರಾಗಿವೆ.


ಇದನ್ನೂ ಓದಿ: ಲಾಕ್‌ಡೌನ್‌ನಿಂದ ತೊಂದರೆಗೊಳಗಾದ ವಲಸೆ ಕಾರ್ಮಿಕರಿಗೆ ಸಹಾಯ ಮಾಡಿ: ರಾಹುಲ್ ಗಾಂಧಿ


 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

2 COMMENTS

  1. ಆಹಾರದಾನ್ಯವನ್ನು ಈ ರೀತಿಯಲ್ಲಿ ಕೇಂದ್ರ ಸರ್ಕಾರವು ದುರ್ಬಳಕೆ ಮಾಡುತ್ತಿರುವುದು ಕಂಡನಾರ್ಹ.

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ರೇವಣ್ಣ ಸಹಚರ ಸತೀಶ್ ಬಾಬಣ್ಣಗೆ ನ್ಯಾಯಾಂಗ ಬಂಧನ

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣ ಬಯಲಾದ ಬೆನ್ನಲ್ಲಿ ಮೈಸೂರಿನಲ್ಲಿ ಮಹಿಳೆಯನ್ನು ಅಪಹರಿಸಿದ ಪ್ರಕರಣಕ್ಕೆ ಸಂಬಂಧಿಸಿ ಪ್ರಕರಣದ ಎರಡನೇ ಆರೋಪಿ ಸತೀಶ್ ಬಾಬಣ್ಣ ಬಂಧನವಾಗಿದ್ದು, ಅವರನ್ನು ನ್ಯಾಯಾಲಯ 14...