Homeಮುಖಪುಟಸಂಜಯ್ ಸಿಂಗ್ ಬಂಧನ: ಬಿಜೆಪಿ ಕಚೇರಿ ಹೊರಗೆ ಎಎಪಿ ಪ್ರತಿಭಟನೆ; ಮೋದಿ ವಿರುದ್ಧ ಕೇಜ್ರಿವಾಲ್ ವಾಗ್ದಾಳಿ

ಸಂಜಯ್ ಸಿಂಗ್ ಬಂಧನ: ಬಿಜೆಪಿ ಕಚೇರಿ ಹೊರಗೆ ಎಎಪಿ ಪ್ರತಿಭಟನೆ; ಮೋದಿ ವಿರುದ್ಧ ಕೇಜ್ರಿವಾಲ್ ವಾಗ್ದಾಳಿ

- Advertisement -
- Advertisement -

ರಾಜ್ಯಸಭಾ ಸದಸ್ಯ ಸಂಜಯ್ ಸಿಂಗ್ ಅವರನ್ನು ಮದ್ಯದ ಹಗರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿರುವುದನ್ನು ವಿರೋಧಿಸಿ ಇಂದು ಆಮ್ ಆದ್ಮಿ ಪಕ್ಷ (ಎಎಪಿ)ದ ನಾಯಕರು ಹಾಗೂ ಕಾರ್ಯಕರ್ತರು ನವದೆಹಲಿಯ ಬಿಜೆಪಿ ಪ್ರಧಾನ ಕಚೇರಿಯ ಹೊರಗೆ ಪ್ರತಿಭಟನೆ ನಡೆಸಲಿದ್ದಾರೆ.

ದೆಹಲಿಯ ಅಬಕಾರಿ ನೀತಿಗೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ದೆಹಲಿ ನಿವಾಸದ ಮೇಲೆ ದಾಳಿ ನಡೆಸಿ ಗಂಟೆಗಳ ಕಾಲ ವಿಚಾರಣೆ ನಡೆಸಿದ ನಂತರ ಸಂಜಯ್ ಸಿಂಗ್ ಅವರನ್ನು ಬಂಧಿಸಲಾಯಿತು.

ಈ ಬಂಧನ ರಾಜಕೀಯ ಬಿರುಗಾಳಿ ಎಬ್ಬಿಸಿದ್ದು, ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು.

”ಇದು ಮೋದಿಯವರ ಆತಂಕವನ್ನು ತೋರಿಸುತ್ತದೆ. ಚುನಾವಣೆಗೂ ಮುನ್ನ ಅವರು ಇನ್ನೂ ಹಲವು ವಿರೋಧ ಪಕ್ಷದ ನಾಯಕರನ್ನು ಬಂಧಿಸಲಿದ್ದಾರೆ” ಎಂದು ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.

ಬುಧವಾರ ಸಂಜೆ ಸಿಂಗ್ ಅವರ ನಿವಾಸಕ್ಕೆ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕೇಜ್ರಿವಾಲ್, ಎಎಪಿ ‘ಹಾರ್ಡ್‌ಕೋರ್ ಪ್ರಾಮಾಣಿಕ ಪಕ್ಷ’ ಎಂದು ಪ್ರತಿಪಾದಿಸಿದರು.

”ಮೋದಿಜಿಯವರ ಭ್ರಷ್ಟಾಚಾರದ ವಿರುದ್ಧ ಪ್ರಬಲ ಧ್ವನಿಯಾಗಿದ್ದ ಸಂಜಯ್ ಸಿಂಗ್ ಅವರನ್ನು ಬಂಧಿಸಿದರು. ಅವರು (ಪ್ರಧಾನಿ ನರೇಂದ್ರ ಮೋದಿ) ಅಡಿಯಿಂದ ಮುಡಿವರೆಗೂ ಭ್ರಷ್ಟರಾಗಿದ್ದಾರೆ. ಅವರು ಸ್ವತಂತ್ರ ಭಾರತದಲ್ಲಿ ಅತ್ಯಂತ ಭ್ರಷ್ಟ ಪ್ರಧಾನಿ ಎಂದು ನಾನು ಭಾವಿಸುತ್ತೇನೆ” ಎಂದು ಕೇಜ್ರಿವಾಲ್ ಹೇಳಿದರು.

ಭ್ರಷ್ಟಾಚಾರ ಮುಕ್ತ ಭಾರತ ನಿರ್ಮಾಣಕ್ಕೆ ತೆಗೆದುಕೊಳ್ಳುತ್ತಿರುವ ಕ್ರಮಗಳ ಭಾಗವಾಗಿ ಈ ಬಂಧನವಾಗಿದೆ ಎಂದು ಬಿಜೆಪಿಯು ಎಎಪಿಗೆ ತಿರುಗೇಟು ನೀಡಿದೆ.

ಬುಧವಾರ ಬೆಳಗ್ಗೆಯಿಂದಲೇ ಸಂಸದ  ಸಂಜಯ್ ಸಿಂಗ್ ಅವರ ದೆಹಲಿ ನಿವಾಸದಲ್ಲಿ ಶೋಧ ಕಾರ್ಯ ನಡೆದಿದೆ. ಇದು ಪ್ರಕರಣಕ್ಕೆ ಸಂಬಂಧಿಸಿ ನಡೆದ ಮೂರನೇ ಬಂಧನವಾಗಿದೆ.

ಸಂಜಯ್ ಸಿಂಗ್ ಅವರನ್ನು ಜಾರಿ ನಿರ್ದೇಶನಾಲಯ ಕಚೇರಿಗೆ ಕರೆದೊಯ್ದು, ಅಲ್ಲಿ ಅವರ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿದೆ. ಗುರುವಾರ ಮಧ್ಯಾಹ್ನ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆಯಿದೆ ಮತ್ತು ಸಂಸ್ಥೆಯು ಅವರನ್ನು ಕಸ್ಟಡಿಗೆ ಕೋರುವ ನಿರೀಕ್ಷೆಯಿದೆ.

ಕಳೆದ ವರ್ಷ ಮೇ ತಿಂಗಳಲ್ಲಿ ನಾಲ್ಕು ಕಂಪನಿಗಳ ಮೂಲಕ ಅಕ್ರಮವಾಗಿ ಹಣ ವರ್ಗಾವಣೆ ಮಾಡಿದ ಆರೋಪದ ಮೇಲೆ ದೆಹಲಿಯ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರನ್ನು ಬಂಧಿಸಲಾಗಿತ್ತು.

ಈ ವರ್ಷದ ಫೆಬ್ರವರಿಯಲ್ಲಿ ದೆಹಲಿ ಉಪ ಮುಖ್ಯಮಂತ್ರಿಯಾಗಿದ್ದ ಮತ್ತು ಕೇಜ್ರಿವಾಲ್‌ ಅವರ ಆಪ್ತ ಮನೀಶ್ ಸಿಸೋಡಿಯಾ ಅವರನ್ನು ಮದ್ಯ ನೀತಿ ಹಗರಣದಲ್ಲಿ ಸಿಬಿಐ ಬಂಧಿಸಿತ್ತು.

ಈ ಪ್ರಕರಣದ ಆರೋಪಿ ಉದ್ಯಮಿ ದಿನೇಶ್ ಅರೋರಾ ಅವರು ಸಿಂಗ್ ಅವರ ಹೆಸರನ್ನು ಹೇಳಿದ ನಂತರ ಸಿಂಗ್ ಅವರ ನಿವಾಸದ ಮೇಲೆ ದಾಳಿ ನಡೆದಿದೆ ಹಾಗೂ ಇದೀಗ ಬಂಧನವಾಗಿದೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಬಿಜೆಪಿ ಜೊತೆ ಕೈಜೋಡಿಸುವ ಪ್ರಶ್ನೆಯೇ ಇಲ್ಲ: ಶರದ್ ಪವಾರ್ ಸ್ಪಷ್ಟನೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬ್ರಿಜ್ ಭೂಷಣ್ ಪುತ್ರನಿಗೆ ಬಿಜೆಪಿ ಟಿಕೆಟ್: ಎನ್‌ಡಿಎ ಮೈತ್ರಿ ಪಕ್ಷದ ನಾಯಕ ರಾಜೀನಾಮೆ

0
ಕುಸ್ತಿಪಟುಗಳಿಗೆ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಬಿಜೆಪಿಯ ಬ್ರಿಜ್ ಭೂಷಣ್ ಶರಣ್‌ ಸಿಂಗ್‌ ಅವರ ಪುತ್ರನಿಗೆ ಟಿಕೆಟ್ ನೀಡಿದ ಬೆನ್ನಲ್ಲಿ ಅಸಮಾಧಾನವನ್ನು ವ್ಯಕ್ತಪಡಿಸಿ ಎನ್‌ಡಿಎ ಮೈತ್ರಿ ಪಕ್ಷ ಆರ್‌ಎಲ್‌ಡಿಯ ರಾಷ್ಟ್ರೀಯ ವಕ್ತಾರ ರೋಹಿತ್...