Homeಮುಖಪುಟಜೀವಾವಧಿ ಶಿಕ್ಷೆ ಪ್ರಶ್ನಿಸಿ ಸಂಜೀವ್ ಭಟ್ ಮೇಲ್ಮನವಿ : ಗುಜರಾತ್ ಸರ್ಕಾರಕ್ಕೆ ಸುಪ್ರೀಂ ನೋಟಿಸ್

ಜೀವಾವಧಿ ಶಿಕ್ಷೆ ಪ್ರಶ್ನಿಸಿ ಸಂಜೀವ್ ಭಟ್ ಮೇಲ್ಮನವಿ : ಗುಜರಾತ್ ಸರ್ಕಾರಕ್ಕೆ ಸುಪ್ರೀಂ ನೋಟಿಸ್

- Advertisement -
- Advertisement -

ಜೀವಾವಧಿ ಜೈಲು ಶಿಕ್ಷೆ ಪ್ರಶ್ನಿಸಿ ಮಾಜಿ ಐಪಿಎಸ್ ಅಧಿಕಾರಿ ಸಂಜೀವ್ ಭಟ್ ಸಲ್ಲಿಸಿರುವ ಮೇಲ್ಮನವಿ ಸಂಬಂಧ ಗುಜರಾತ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ ನೀಡಿದೆ.

1990ರ ಕಸ್ಟಡಿ ಚಿತ್ರಹಿಂಸೆ ಮತ್ತು ಸಾವಿನ ಪ್ರಕರಣದಲ್ಲಿ ಸಂಜೀವ್ ಭಟ್ ಅವರಿಗೆ ಜಾಮ್‌ನಗರ ನ್ಯಾಯಾಲಯ ಜೀವಾವಧಿ ಜೈಲು ಶಿಕ್ಷೆ ವಿಧಿಸಿದೆ. ಇದನ್ನು ಪ್ರಶ್ನಿಸಿ ಭಟ್ ಗುಜರಾತ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಹೈಕೋರ್ಟ್ ಅವರ ಅರ್ಜಿಯನ್ನು ವಜಾಗೊಳಿಸಿದೆ. ಹಾಗಾಗಿ, ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ.

ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಪ್ರಸನ್ನ ಭಾಲಚಂದ್ರ ವರಾಳೆ ಅವರ ಪೀಠವು ನೋಟಿಸ್ ನೀಡುವಾಗ, ಪ್ರಸ್ತುತ ಅರ್ಜಿಯನ್ನು ಮತ್ತು ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಉಳಿದಿರುವ ಇತರ ಅರ್ಜಿಗಳನ್ನು ಟ್ಯಾಗ್ ಮಾಡಿದೆ.

ಭಟ್ ಪರ ವಾದ ಮಂಡಿಸಿದ ಹಿರಿಯ ವಕೀಲರಾದ ಕಪಿಲ್ ಸಿಬಲ್ ಮತ್ತು ದೇವದತ್ ಕಾಮತ್, ಈ ಅರ್ಜಿಯ ವಿಚಾರಣೆಯ ಅಗತ್ಯವಿದೆ ಎಂದು ಒತ್ತಿ ಹೇಳಿದ್ದಾರೆ ಮತ್ತು ಈ ಅರ್ಜಿಯನ್ನು ನ್ಯಾಯಾಲದ ಮುಂದೆ ಬಾಕಿ ಉಳಿದಿರುವ ಇತರ ಅರ್ಜಿಗಳೊಂದಿಗೆ ಟ್ಯಾಗ್ ಮಾಡಬಹುದು ಎಂಬ ನ್ಯಾಯಾಲಯದ ಪ್ರತಿಪಾದನೆಯನ್ನು ಒಪ್ಪಿಕೊಂಡಿದ್ದಾರೆ. ಈ ಹಿನ್ನೆಲೆ, ವಕೀಲರ ಮನವಿ ಪುರಸ್ಕರಿಸಿದ ನ್ಯಾಯಾಲಯ ನಾಲ್ಕು ವಾರಗಳಲ್ಲಿ ಉತ್ತರಿಸುವಂತೆ ಆದೇಶಿಸಿ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ಭಟ್ ಪರ ಇನ್ನಿಬ್ಬರು ವಕೀಲರಾದ ರಾಜೇಶ್ ಜಿ.ಇನಾಮದಾರ್ ಮತ್ತು ಶಾಶ್ವತ್ ಆನಂದ್ ಕೂಡ ನ್ಯಾಯಾಲಯಕ್ಕೆ ಹಾಜರಾಗಿದ್ದರು.

ಈ ಪ್ರಕರಣವು ನವೆಂಬರ್ 1990ರಲ್ಲಿ ಸಂಭವಿಸಿದ ಪ್ರಭುದಾಸ್ ಮಾಧವ್‌ಜಿ ವೈಷ್ಣಾನಿಯವರ ಕಸ್ಟಡಿ ಸಾವಿಗೆ ಸಂಬಂಧಿಸಿದೆ. ಪೊಲೀಸ್ ಕಸ್ಟಡಿಯ ಚಿತ್ರಹಿಂಸೆಯಿಂದ ವೈಷ್ಣಾನಿ ಸಾವನ್ನಪ್ಪಿದ್ದಾರೆ ಎಂದು ಆರೋಪಿಸಲಾಗಿತ್ತು. ವೈಷ್ಣಾನಿ ಸಾವಿನ ಸಮಯದಲ್ಲಿ ಸಂಜೀವ್ ಭಟ್ ಅವರು ಜಾಮ್‌ನಗರದ ಸಹಾಯಕ ಪೊಲೀಸ್ ಅಧೀಕ್ಷಕರಾಗಿದ್ದರು. ಭಾರತ್ ಬಂದ್‌ ವೇಳೆ ಗಲಭೆ ನಡೆಸಿದ ಆರೋಪದ ಮೇಲೆ ವೈಷ್ಣಾನಿ ಸೇರಿದಂತೆ ಸುಮಾರು 133 ಜನರನ್ನು ಇತರ ಅಧಿಕಾರಿಗಳೊಂದಿಗೆ ಸಂಜೀವ್ ಭಟ್ ಕಸ್ಟಡಿಗೆ ತೆಗೆದುಕೊಂಡಿದ್ದರು. ಹಾಗಾಗಿ, ವೈಷ್ಣಾನಿ ಕಸ್ಟಡಿ ಸಾವಿನ ಆರೋಪ ಭಟ್ ಮತ್ತು ಇತರರ ಮೇಲೆ ಬಂದಿದೆ.

ಒಂಬತ್ತು ದಿನಗಳ ಕಾಲ ಪೊಲೀಸ್ ಬಂಧನದಲ್ಲಿದ್ದ ವೈಷ್ಣಾನಿ, ಜಾಮೀನಿನ ಮೇಲೆ ಬಿಡುಗಡೆಯಾದ ಹತ್ತು ದಿನಗಳ ನಂತರ ನಿಧನರಾಗಿದ್ದರು. ವೈದ್ಯಕೀಯ ದಾಖಲೆಗಳ ಪ್ರಕಾರ, ಅವರ ಸಾವಿಗೆ ಮೂತ್ರಪಿಂಡದ ವೈಫಲ್ಯ ಕಾರಣ ಎಂದು ಹೇಳಲಾಗಿತ್ತು.

ವೈಷ್ಣಾನಿ ಸಾವಿನ ನಂತರ, ಕಸ್ಟಡಿ ಚಿತ್ರಹಿಂಸೆ ಆರೋಪದ ಮೇಲೆ ಭಟ್ ಮತ್ತು ಇತರ ಕೆಲವು ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿತ್ತು. 1995ರಲ್ಲಿ ಪ್ರಕರಣದ ವಿಚಾರಣೆ ಆರಂಭಗೊಂಡಾಗ ಗುಜರಾತ್ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು. 2011 ರವರೆಗೆ ವಿಚಾರಣೆಗೆ ತಡೆ ನೀಡಲಾಗಿತ್ತು. ನಂತರ ತಡೆ ತೆರವುಗೊಂಡು ವಿಚಾರಣೆ ಮುಂದುವರೆದಿತ್ತು.

ಜೂನ್ 2019ರಲ್ಲಿ, ಜಾಮ್‌ನಗರ ಜಿಲ್ಲೆಯ ಸೆಷನ್ಸ್ ನ್ಯಾಯಾಲಯವು ಪ್ರಕರಣದಲ್ಲಿ ಸಂಜೀವ್ ಭಟ್ ಮತ್ತು ಪೊಲೀಸ್ ಪೇದೆ ಪ್ರವೀಣ್‌ಸಿನ್ಹ ಝಲಾ ಅವರಿಗೆ ಐಪಿಸಿ ಸೆಕ್ಷನ್ 302 (ಕೊಲೆ), 323 (ಸ್ವಯಂಪ್ರೇರಿತವಾಗಿ ನೋವುಂಟುಮಾಡುವ ಶಿಕ್ಷೆ) ಮತ್ತು 506 (11) (ಕ್ರಿಮಿನಲ್ ಬೆದರಿಕೆಯ ಅಪರಾಧಕ್ಕೆ ಶಿಕ್ಷೆ) ಅಡಿಯಲ್ಲಿ ಜೀವಾವಧಿ ಶಿಕ್ಷೆ ವಿಧಿಸಿದೆ.

ಸಂಜೀವ್ ಭಟ್ ಜೊತೆ ಪೊಲೀಸ್ ಪೇದೆಗಳಾದ ಪ್ರವಿನ್‌ಸಿನ್ಹ ಜಡೇಜಾ, ಅನೋಪ್‌ಸಿನ್ಹ ಜೇತ್ವಾ, ಕೇಸುಭ ಡೊಲುಭಾ ಜಡೇಜಾ ಮತ್ತು ಪೊಲೀಸ್ ಸಬ್‌ಇನ್‌ಸ್ಪೆಕ್ಟರ್‌ಗಳಾದ ಶೈಲೇಶ್ ಪಾಂಡ್ಯ, ದೀಪಕ್‌ಕುಮಾರ್ ಭಗವಾನದಾಸ್ ಷಾ ಕೂಡ ಕಸ್ಟಡಿ ಚಿತ್ರಹಿಂಸೆ ಪ್ರಕರಣದಲ್ಲಿ ತಪ್ಪಿತಸ್ಥರೆಂದು ಸಾಬೀತಾಗಿದೆ. ಅವರಿಗೆ ಐಪಿಸಿಯ ಸೆಕ್ಷನ್ 323 ಮತ್ತು 506 ಅಡಿಯಲ್ಲಿ ಶಿಕ್ಷೆ ವಿಧಿಸಲಾಗಿದೆ.

ತಮ್ಮ ಶಿಕ್ಷೆಯನ್ನು ಪ್ರಶ್ನಿಸಿ, ಝಲಾ, ಭಟ್, ಶಾ ಮತ್ತು ಪಾಂಡ್ಯ ಅವರು 2019 ರಲ್ಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಅವರ ಕ್ರಿಮಿನಲ್ ಮೇಲ್ಮನವಿಯನ್ನು ವಜಾಗೊಳಿಸಿದ ನ್ಯಾಯಮೂರ್ತಿ ಅಶುತೋಷ್ ಶಾಸ್ತ್ರಿ ಮತ್ತು ನ್ಯಾಯಮೂರ್ತಿ ಸಂದೀಪ್ ಎನ್.ಭಟ್ ಅವರ ಪೀಠವು, ಜಾಮ್‌ನಗರ ನ್ಯಾಯಾಲಯ ನೀಡಿದ ತೀರ್ಪು ಸರಿಯಾಗಿದೆ. ಆದ್ದರಿಂದ ಶಿಕ್ಷೆಯ ಆದೇಶದಲ್ಲಿ ಮಧ್ಯಪ್ರವೇಶಿಸಲು ಯಾವುದೇ ಕಾರಣವಿಲ್ಲ ಎಂದು ಹೇಳಿತ್ತು.

ಇದನ್ನೂ ಓದಿ : ‘ಅಮ್ಮ’ ಅಧ್ಯಕ್ಷ ಸ್ಥಾನಕ್ಕೆ ಮೋಹನ್ ಲಾಲ್ ರಾಜೀನಾಮೆ : ಸಂಪೂರ್ಣ ಸಮಿತಿ ವಿಸರ್ಜನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...