Homeಕರ್ನಾಟಕಶಂಕರ, ಸಂಕರ ಪದ ಬಳಕೆ: ಚಕ್ರತೀರ್ಥ ಸಮಿತಿ ವಿರುದ್ಧ ಸ್ಮಾರ್ತ ಬ್ರಾಹ್ಮಣರ ಆಕ್ರೋಶ

ಶಂಕರ, ಸಂಕರ ಪದ ಬಳಕೆ: ಚಕ್ರತೀರ್ಥ ಸಮಿತಿ ವಿರುದ್ಧ ಸ್ಮಾರ್ತ ಬ್ರಾಹ್ಮಣರ ಆಕ್ರೋಶ

“ಮೂವರು ಪ್ರಮುಖ ಮತಾಚಾರ್ಯರಲ್ಲಿ ಮೊದಲನೆಯವರ ಹೆಸರು ಶಂಕರ. ಆದರೆ ಸಂಕರ ಎಂದರೆ ಬೆರಕೆ, ಕಲಬೆರಕೆ, ಒಪ್ಪತಕ್ಕದ್ದಲ್ಲದ ಮಿಶ್ರಣ ಎಂಬ ಅರ್ಥವೂ ಹೊಮ್ಮುತ್ತದೆ...”

- Advertisement -
- Advertisement -

ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಪರಿಶೀಲನಾ ಸಮಿತಿಯಲ್ಲಿ ರೂಪಿಸಲಾಗಿರುವ ಪಠ್ಯಪುಸ್ತಕಗಳಲ್ಲಿ ಮಾಡಿರುವ ತಪ್ಪುಗಳು ಒಂದೊಂದಾಗಿ ಹೊರಬರುತ್ತಿತ್ತು, ಈಗ ಸ್ಮಾರ್ತ ಬ್ರಾಹ್ಮಣರು, ಸಮಿತಿಯ ಎಡವಟ್ಟಿನ ವಿರುದ್ಧ ಬೇಸರ ವ್ಯಕ್ತಪಡಿಸುತ್ತಿದ್ದಾರೆ.

ರಾಘವಾಂಕ ರಚಿತ ಕಾವ್ಯ ಭಾಗವನ್ನು ಒಂಬತ್ತನೇ ತರಗತಿಯ ಪ್ರಥಮ ಭಾಷೆ ಕನ್ನಡ ಪಠ್ಯಪುಸ್ತಕದಲ್ಲಿ  ನೀಡಲಾಗಿದೆ. “ನಿನ್ನ ಮುತ್ತಿನ ಸತ್ತಿಗೆಯನಿತ್ತು ಸಲಹು” ಪದ್ಯದ ಕುರಿತ ಅಭ್ಯಾಸ ಭಾಗದಲ್ಲಿ ಶಂಕರಾಚಾರ್ಯರಿಗೆ ಅವಮಾನ ಮಾಡಲಾಗಿದೆ ಎಂದು ಸ್ಮಾರ್ತ ಬ್ರಾಹ್ಮಣರು ಬೇಸರ ವ್ಯಕ್ತಪಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


‘ಭಾಷೆಯ ಸೊಬಗು’
ಎಂಬ ಅಭ್ಯಾಸ ಭಾಗವನ್ನು ಚಕ್ರತೀರ್ಥ ಸಮಿತಿ ಸೇರಿಸಿದ್ದು ಅಲ್ಲಿನ ಸಾಲುಗಳು ವಿವಾದಕ್ಕೆ ಎಡೆ ಮಾಡಿಕೊಟ್ಟಿವೆ.

“ಕನ್ನಡದಲ್ಲಿರುವ ಶ, ಷ, ಸ ವರ್ಣಗಳಿಗೆ ಉಚ್ಚಾರದಲ್ಲಿ ವ್ಯತ್ಯಾಸಗಳಿವೆ ಎಂಬುದನ್ನು ಗಮನಿಸಿ. ಈ ಮೂರು ವರ್ಣ (ಅಥವಾ ಅಕ್ಷರ)ಗಳನ್ನು ಬಳಸುವಾಗ ನಾವು ಅರ್ಥ ವ್ಯತ್ಯಾಸವಾಗದಂತೆ ಎಚ್ಚರ ವಹಿಸಬೇಕು. ಉದಾಹರಣೆಗೆ ಶಕಲ- ಒಂದು ಸಣ್ಣ ತುಂಡು ಅಥವಾ ಸಣ್ಣ ಭಾಗ ಎಂದು ಅರ್ಥ. ಆದರೆ ಸಕಲ ಎಂದಾಗ ಇಡಿಯಾದ, ಪೂರ್ಣವಾದ, ಎಲ್ಲ- ಎಂಬ ಅರ್ಥಗಳು ಬರುತ್ತವೆ. ಎರಡೂ ಪರಸ್ಪರ ವಿರುದ್ಧಾರ್ಥಗಳನ್ನು ಕೊಡುವ ಪದಗಳು!

ಹಾಗೆಯೇ, ಶಂಕರ ಎಂದರೆ ಮಂಗಳವನ್ನುಂಟುಮಾಡುವವನು, ಶಿವ ಎಂದು ಅರ್ಥ. ಮೂವರು ಪ್ರಮುಖ ಮತಾಚಾರ್ಯರಲ್ಲಿ ಮೊದಲನೆಯವರ ಹೆಸರು ಶಂಕರ. ಆದರೆ ಸಂಕರ ಎಂದರೆ ಬೆರಕೆ, ಕಲಬೆರಕೆ, ಒಪ್ಪತಕ್ಕದ್ದಲ್ಲದ ಮಿಶ್ರಣ ಎಂಬ ಅರ್ಥವೂ ಹೊಮ್ಮುತ್ತದೆ.

ಶರ್ವ ಎಂಬುದು ಶಿವ ಮತ್ತು ವಿಷ್ಣು ದೇವರುಗಳಿಗೆ ಇರುವ ಒಂದು ಹೆಸರು ಸರ್ವ ಎಂದರೆ ಎಲ್ಲ ಅಥವಾ ಸಮಗ್ರ ಎಂದು ಅರ್ಥವಾಗುತ್ತದೆ. ದೋಷ ಎಂದರೆ ತಪ್ಪು ಎಂಬರ್ಥವೂ ಹೊಮ್ಮಿದರೆ ದೋಸ ಎಂಬುದು ದೋಸೆಯ ಅಪಭ್ರಂಶವಾಗಿ ಇಂದು ಬಳಕೆಯಲ್ಲಿರುವ ಪದವಾಗಿದೆ. ಹಾಗೆಯೇ ಶರ ಎಂದರೆ ಬಾಣ ಎಂಬ ಅರ್ಥವಾದರೆ ಸರ ಎಂಬುದು ಕೊರಳಮಾಲೆ ಎಂಬ ಅರ್ಥವನ್ನು ಕೊಡುತ್ತದೆ. ಹೀಗೆ ಅಕ್ಷರಗಳ ವ್ಯತ್ಯಾಸವಾದಾಗ ಅರ್ಥವ್ಯತ್ಯಾಸವಾಗುವ ಶಬ್ದಗಳನ್ನು ಪಟ್ಟಿ ಮಾಡಿ.

 

 ಹೀಗೆ ಅಭ್ಯಾಸ ಪಠ್ಯವನ್ನು ರೂಪಿಸಲಾಗಿದೆ.

ಮಾಧ್ವರು ಹಾಗೂ ಸ್ಮಾರ್ತ ಬ್ರಾಹ್ಮಣರ ನಡುವಿನ ವಿವಾದ ಇಂದು ಮೊನ್ನೆಯದ್ದಲ್ಲ. ಆದರೆ ವಿವಾದಕ್ಕೆ ಪಠ್ಯಪುಸ್ತಕವೂ ಉಪ್ಪು ಸುರಿದಿದೆ. ಫೇಸ್‌ಬುಕ್‌ನಲ್ಲಿರುವ “ಶ್ರೀಶ್ರೀ ಶಂಕರಾಚಾರ್ಯರ “ನಿಂದಾ ನಿರ್ಮೂಲನ ಅಭಿಯಾನ” ಎಂಬ ಗ್ರೂಪ್‌ನಲ್ಲಿ ಈ ವಿಷಯ ಪ್ರಸ್ತಾಪವಾಗಿದೆ.

ಶ್ರಿನಾಥ್‌ ಋಗ್ವೇದಿ ಎಂಬವರು ಪೋಸ್ಟ್ ಮಾಡಿದ್ದು, “ನೂತನವಾಗಿ ಪಠ್ಯಪುಸ್ತಕಗಳನ್ನು ಪರಿಷ್ಕರಿಸಿದ ರೋಹಿತ್ ಚಕ್ರತೀರ್ಥರಿಗೆ ಅಭಿನಂದನೆಗಳು. ಪಠ್ಯ ಪುಸ್ತಕದಲ್ಲಿ ಡಾ.ಕೇಶವ ಬಲಿರಾಮ್ ಹೆಡ್ಗೆವಾರ್‌ರ ಮತ್ತು ಚಕ್ರವರ್ತಿ ಸೂಲಿಬೆಲೆಗಳ ಪಾಠ ಪುಸ್ತಕಕ್ಕೆ ತೂಕ ತಂದಿದೆ. ದೇಶಿಯ ವಿಚಾರಗಳನ್ನು ಅಳವಡಿಸಿರುವುದು ಪ್ರಶಂಸನೀಯ. ಆದರೆ 9ನೇ ತರಗತಿಯ ಮಕ್ಕಳಿಗೆ ಉದಾಹರಣೆ ಕೊಡುವಾಗ ಭಾರತದ ಪ್ರಪಥಮ ಆಚಾರ್ಯರಾದ ಜಗದ್ಗುರು ಶಂಕರಾಚಾರ್ಯರ ಹೆಸರನ್ನು ಸಂಕರ ಎಂದರೆ ಕಲಬೆರಿಕೆ ಎಂದು ಹಾಕಿರುವುದು ಖಂಡನೀಯ. ಉಚ್ಚರಣೆಯ ದೋಷಗಳನ್ನು ತಿಳಿಸಿಕೊಡಬೇಕಾದರೆ ಬೇರೆ ಉದಾಹರಣೆ ಸಿಗಲಿಲ್ವಾ ನಿಮಗೆ. ಅದನ್ನು ಹಾಕುವ ಅವಶ್ಯವಾದರೂ ಏನಿತ್ತು?” ಎಂದು ಪ್ರಶ್ನಿಸಿದ್ದಾರೆ.

ಇದಕ್ಕೆ ಹಲವು ಜನರು ಪ್ರತಿಕ್ರಿಯೆ ನೀಡಿದ್ದಾರೆ. “ಬ್ರಾಹ್ಮಣರ ಒಗ್ಗಟ್ಟು ಒಗ್ಗಟ್ಟು ಅಂತಿದ್ದವರು ಈಗ ಬಾಯಿ ಬೊಡ್ಕೊಳ್ಳಿ. ಹುಟ್ಟ ಗುಣ ಸುಟ್ಟರೂ ಹೋಗೋಲ್ಲ ಅಂತ ಗಾದೇನೆ ಇದೆ. ಹಿಂಗಿದ್ದಾಗ ಹೋಗಿ ಹೋಗಿ ಅವನ ಕೈಯಲ್ಲಿ ಪುಸ್ತಕ ಪರಿಷ್ಕರಣೆ ಮಾಡೋಕ್ಕೆ ಬಿಟ್ಟರೆ ಅವರ ಬುದ್ದಿ ತೋರಿಸದೆ ಇರ್ತಾರಾ? ತೋರಿಸಿಯೇ ಬಿಟ್ಟರು ಮಾಧ್ವರು” ಎಂದು ಶ್ರೀಕಾಂತ್‌ ಋಗ್ವೇದಿ ಎಂಬವರು ಕಮೆಂಟ್ ಮಾಡಿದ್ದಾರೆ. ಮುಂದುವರಿದು, “ಬೇರೆ ವಿಷ್ಯಕ್ಕೆ ಎದ್ದನೋ ಬಿದ್ದನೋ ಅಂತ ಮಧ್ಯದಲ್ಲಿ ಬರುತ್ತಿದ್ದ ತ್ರೈಮತಸ್ಥ ಬ್ರಾಹ್ಮಣ ಸಂಘಗಳು ಎಲ್ಲಿ ಹೊದ್ರಿ ಸ್ವಾಮಿ?” ಎಂದು ಪ್ರಶ್ನಿಸಿದ್ದಾರೆ.

ಶಂಕರಾಚಾರ್ಯರನ್ನು ನಿಂದನೆ ಮಾಡಿದವರ ವಿರುದ್ಧ ಕ್ರಮ ಜರುಗಿಸುವಂತೆ ಆಗ್ರಹಿಸಿರುವ ಹಲವು ಪೋಸ್ಟ್‌ಗಳು ಈ ಗ್ರೂಪ್‌ನಲ್ಲಿ ಕಾಣಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...