ಜನವರಿಯಲ್ಲಿ ಸಂಕ್ರಾಂತಿ ಹಬ್ಬದ ನಂತರ ಹಾಲಿನ ದರದಲ್ಲಿ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ಹಾಲು ಮಹಾಮಂಡಳಿ (ಕೆಎಂಎಫ್) ಅಧ್ಯಕ್ಷ ಭೀಮಾ ನಾಯ್ಕ ಗುರುವಾರ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾಲಿನ ಒಕ್ಕೂಟಗಳು ಇತ್ತೀಚೆಗೆ ಹಾಲಿನ ದರ ಪರಿಷ್ಕರಣೆ ಕೋರಿ ಮಂಡಳಿ ಮುಂದೆ ಪ್ರಸ್ತಾವನೆ ಸಲ್ಲಿಸಿವೆ ಎಂದು ಹೇಳಿದ್ದಾರೆ. ಸಂಕ್ರಾಂತಿ ನಂತರ
ಒಕ್ಕೂಟಗಳು ಪ್ರತಿ ಲೀಟರ್‌ಗೆ 5 ರೂಪಾಯಿ ಹೆಚ್ಚಳ ಮಾಡುವಂತೆ ಕೋರಿದ್ದಾರೆ. ಈ ನಿಟ್ಟಿನಲ್ಲಿ ಚರ್ಚೆಗಳು ನಡೆದಿವೆ. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಬಳಿಕವಷ್ಟೇ ಪ್ರಸ್ತಾವನೆ ಕುರಿತು ತೀರ್ಮಾನ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ಇತ್ತೀಚೆಗೆ ಮಾಗಡಿಯಲ್ಲಿ ನಡೆದ ಸಭೆಯಲ್ಲಿ ಹೈನುಗಾರರು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ ಪ್ರತಿ ಲೀಟರ್ ಹಾಲಿಗೆ 5 ರೂ. ಹಾಲಿನ ದರವನ್ನು ಹೆಚ್ಚಿಸುವಂತೆ ಮನವಿ ಮಾಡಿಕೊಂಡಿದ್ದಾರೆ. ಅವರು ಡಿಸೆಂಬರ್ 25 ರಂದು ನಂದಿನಿ ಇಡ್ಲಿ-ದೋಸೆ ಹಿಟ್ಟನ್ನು ಬಿಡುಗಡೆ ಮಾಡುವ ವೇಳೆ, ಕೆಎಂಎಫ್ ಸದಸ್ಯರು ಹೈನುಗಾರರು ಮತ್ತು ಹಾಲು ಒಕ್ಕೂಟಗಳ ಬೇಡಿಕೆಗಳ ಬಗ್ಗೆ ಅವರಿಗೆ ವಿವರಿಸಿದ್ದರು. ಸಂಕ್ರಾಂತಿ ನಂತರ
ಹಾಲಿನ ದರವನ್ನು ಕೊನೆಯದಾಗಿ ಆಗಸ್ಟ್ 1, 2023 ರಂದು 3 ರೂ.ಗಳಷ್ಟು ಹೆಚ್ಚಿಸಲಾಗಿತ್ತು. ಅದರಿಂದಾಗಿ ಹಾಲಿನ ದರ ಲೀಟರ್‌ಗೆ 39 ರೂ.ನಿಂದ 42 ರೂ.ಗೆ ಹೆಚ್ಚಾಗಿತ್ತು. “ಪ್ರತಿ ಪ್ಯಾಕೆಟ್‌ಗೆ 2 ರೂಪಾಯಿಗಳ ಹೆಚ್ಚಳವಾಗಿದ್ದು, ಹಾಲಿನ ದರದ ಹೆಚ್ಚಳವಲ್ಲ. ಯಾಕೆಂದರೆ ಜೂನ್ 2024 ರಲ್ಲಿ ಅರ್ಧ ಲೀಟರರ್ ಪ್ಯಾಕೆಟ್‌ನಲ್ಲಿರುವ ಹಾಲಿನ ಪ್ರಮಾಣವನ್ನು 50 ಮಿಲಿ ಹೆಚ್ಚಿಸಲಾಗಿದೆ” ಎಂದು ಕೆಎಂಎಫ್ ಅಧಿಕಾರಿಗಳು ತಿಳಿಸಿದ್ದಾರೆ.
ಇನ್ನೂ ಯಾವುದನ್ನೂ ಅಂತಿಮಗೊಳಿಸಿಲ್ಲ ಎಂದು ಫೆಡರೇಶನ್ ವ್ಯವಸ್ಥಾಪಕ ನಿರ್ದೇಶಕ ಶಿವಸ್ವಾಮಿ ತಿಳಿಸಿದ್ದಾರೆ. ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಿ ಹಾಲಿನ ದರ ಹೆಚ್ಚಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು. ಸಂಕ್ರಾಂತಿ ಹಬ್ಬದ ನಂತರ ಈ ಸಭೆ ನಡೆಯಲಿದೆ.
ಇದನ್ನೂ ಓದಿ: ಮನಮೋಹನ್ ಸಿಂಗ್ ನಿಧನ | ಬೆಳಗಾವಿ ಕಾಂಗ್ರೆಸ್ ಸಮಾವೇಶ ರದ್ದು ; ಅದೇ ವೇದಿಕೆಯಲ್ಲಿ ಶ್ರದ್ಧಾಂಜಲಿ ಸಭೆ
ಮನಮೋಹನ್ ಸಿಂಗ್ ನಿಧನ | ಬೆಳಗಾವಿ ಕಾಂಗ್ರೆಸ್ ಸಮಾವೇಶ ರದ್ದು ; ಅದೇ ವೇದಿಕೆಯಲ್ಲಿ ಶ್ರದ್ಧಾಂಜಲಿ ಸಭೆ


