Homeಕರ್ನಾಟಕಸಂಕ್ರಾಂತಿ ನಂತರ ಹಾಲಿನ ದರ ಏರಿಕೆ ಸಾಧ್ಯತೆ - ವರದಿ

ಸಂಕ್ರಾಂತಿ ನಂತರ ಹಾಲಿನ ದರ ಏರಿಕೆ ಸಾಧ್ಯತೆ – ವರದಿ

- Advertisement -
- Advertisement -

ಜನವರಿಯಲ್ಲಿ ಸಂಕ್ರಾಂತಿ ಹಬ್ಬದ ನಂತರ ಹಾಲಿನ ದರದಲ್ಲಿ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ಹಾಲು ಮಹಾಮಂಡಳಿ (ಕೆಎಂಎಫ್) ಅಧ್ಯಕ್ಷ ಭೀಮಾ ನಾಯ್ಕ ಗುರುವಾರ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾಲಿನ ಒಕ್ಕೂಟಗಳು ಇತ್ತೀಚೆಗೆ ಹಾಲಿನ ದರ ಪರಿಷ್ಕರಣೆ ಕೋರಿ ಮಂಡಳಿ ಮುಂದೆ ಪ್ರಸ್ತಾವನೆ ಸಲ್ಲಿಸಿವೆ ಎಂದು ಹೇಳಿದ್ದಾರೆ. ಸಂಕ್ರಾಂತಿ ನಂತರ

ಒಕ್ಕೂಟಗಳು ಪ್ರತಿ ಲೀಟರ್‌ಗೆ 5 ರೂಪಾಯಿ ಹೆಚ್ಚಳ ಮಾಡುವಂತೆ ಕೋರಿದ್ದಾರೆ. ಈ ನಿಟ್ಟಿನಲ್ಲಿ ಚರ್ಚೆಗಳು ನಡೆದಿವೆ. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಬಳಿಕವಷ್ಟೇ ಪ್ರಸ್ತಾವನೆ ಕುರಿತು ತೀರ್ಮಾನ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಇತ್ತೀಚೆಗೆ ಮಾಗಡಿಯಲ್ಲಿ ನಡೆದ ಸಭೆಯಲ್ಲಿ ಹೈನುಗಾರರು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ ಪ್ರತಿ ಲೀಟರ್ ಹಾಲಿಗೆ 5 ರೂ. ಹಾಲಿನ ದರವನ್ನು ಹೆಚ್ಚಿಸುವಂತೆ ಮನವಿ ಮಾಡಿಕೊಂಡಿದ್ದಾರೆ. ಅವರು ಡಿಸೆಂಬರ್ 25 ರಂದು ನಂದಿನಿ ಇಡ್ಲಿ-ದೋಸೆ ಹಿಟ್ಟನ್ನು ಬಿಡುಗಡೆ ಮಾಡುವ ವೇಳೆ, ಕೆಎಂಎಫ್ ಸದಸ್ಯರು ಹೈನುಗಾರರು ಮತ್ತು ಹಾಲು ಒಕ್ಕೂಟಗಳ ಬೇಡಿಕೆಗಳ ಬಗ್ಗೆ ಅವರಿಗೆ ವಿವರಿಸಿದ್ದರು. ಸಂಕ್ರಾಂತಿ ನಂತರ

ಹಾಲಿನ ದರವನ್ನು ಕೊನೆಯದಾಗಿ ಆಗಸ್ಟ್ 1, 2023 ರಂದು 3 ರೂ.ಗಳಷ್ಟು ಹೆಚ್ಚಿಸಲಾಗಿತ್ತು. ಅದರಿಂದಾಗಿ ಹಾಲಿನ ದರ ಲೀಟರ್‌ಗೆ 39 ರೂ.ನಿಂದ 42 ರೂ.ಗೆ ಹೆಚ್ಚಾಗಿತ್ತು. “ಪ್ರತಿ ಪ್ಯಾಕೆಟ್‌ಗೆ 2 ರೂಪಾಯಿಗಳ ಹೆಚ್ಚಳವಾಗಿದ್ದು, ಹಾಲಿನ ದರದ ಹೆಚ್ಚಳವಲ್ಲ. ಯಾಕೆಂದರೆ ಜೂನ್ 2024 ರಲ್ಲಿ ಅರ್ಧ ಲೀಟರರ್ ಪ್ಯಾಕೆಟ್‌ನಲ್ಲಿರುವ ಹಾಲಿನ ಪ್ರಮಾಣವನ್ನು 50 ಮಿಲಿ ಹೆಚ್ಚಿಸಲಾಗಿದೆ” ಎಂದು ಕೆಎಂಎಫ್ ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನೂ ಯಾವುದನ್ನೂ ಅಂತಿಮಗೊಳಿಸಿಲ್ಲ ಎಂದು ಫೆಡರೇಶನ್ ವ್ಯವಸ್ಥಾಪಕ ನಿರ್ದೇಶಕ ಶಿವಸ್ವಾಮಿ ತಿಳಿಸಿದ್ದಾರೆ. ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಿ ಹಾಲಿನ ದರ ಹೆಚ್ಚಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು. ಸಂಕ್ರಾಂತಿ ಹಬ್ಬದ ನಂತರ ಈ ಸಭೆ ನಡೆಯಲಿದೆ.

ಇದನ್ನೂ ಓದಿ: ಮನಮೋಹನ್ ಸಿಂಗ್ ನಿಧನ | ಬೆಳಗಾವಿ ಕಾಂಗ್ರೆಸ್ ಸಮಾವೇಶ ರದ್ದು ; ಅದೇ ವೇದಿಕೆಯಲ್ಲಿ ಶ್ರದ್ಧಾಂಜಲಿ ಸಭೆ

ಮನಮೋಹನ್ ಸಿಂಗ್ ನಿಧನ | ಬೆಳಗಾವಿ ಕಾಂಗ್ರೆಸ್ ಸಮಾವೇಶ ರದ್ದು ; ಅದೇ ವೇದಿಕೆಯಲ್ಲಿ ಶ್ರದ್ಧಾಂಜಲಿ ಸಭೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...