Homeಮುಖಪುಟಜೆಎನ್‌ಯುಗೆ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಮೊದಲ ಮಹಿಳಾ ಉಪಕುಲಪತಿ, ಪರ ವಿರೋಧ ಚರ್ಚೆ

ಜೆಎನ್‌ಯುಗೆ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಮೊದಲ ಮಹಿಳಾ ಉಪಕುಲಪತಿ, ಪರ ವಿರೋಧ ಚರ್ಚೆ

- Advertisement -
- Advertisement -

ದೇಶದ ಪ್ರತಿಷ್ಠಿತ ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದ ಮೊದಲ ಮಹಿಳಾ ಉಪಕುಲಪತಿಯಾಗಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ನೇಮಕವಾಗಿದ್ದಾರೆ. ಶಿಕ್ಷಣ ಸಚಿವಾಲಯ ಈ ಹುದ್ದೆಗೆ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರನ್ನು ನೇಮಿಸಿ ಆದೇಶಿಸಿದೆ. ಇವರ ನೇಮಕದ ಬಗ್ಗೆ ಪರ ವಿರೋಧ ಚರ್ಚೆ ಆರಂಭವಾಗಿದೆ.

ಪ್ರಸ್ತುತ ಮಹಾರಾಷ್ಟ್ರದ ಸಾವಿತ್ರಿಬಾಯಿ ಫುಲೆ ವಿಶ್ವವಿದ್ಯಾಲಯದ ಉಪಕುಲಪತಿಯಾಗಿರುವ 59 ವರ್ಷ ವಯಸ್ಸಿನ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು ಜೆಎನ್‌ಯುನ ಹಳೆಯ ವಿದ್ಯಾರ್ಥಿಯಾಗಿದ್ದಾರೆ. ಇಲ್ಲಿಯೇ ಅವರು ತಮ್ಮ ಎಂಫಿಲ್ ಮತ್ತು ಪಿಎಚ್‌ಡಿ ಮುಗಿಸಿದ್ದಾರೆ.

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರನ್ನು ಜೆಎನ್‌ಯು ಉಪಕುಲಪತಿಯಾಗಿ ನೇಮಕ ಮಾಡಲು ಅನುಮೋದಿಸಿದ್ದಾರೆ. ಅವರ ನೇಮಕವು ಐದು ವರ್ಷಗಳ ಅವಧಿಗೆ ಇರುತ್ತದೆ ಎಂದು ಶಿಕ್ಷಣ ಸಚಿವಾಲಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: ಕುಂದಾಪುರ: ಹಿಜಾಬ್ ಧರಿಸಿ ಬಂದ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಕೊಠಡಿ, ಪಾಠವಿಲ್ಲ

ಶಾಂತಿಶ್ರೀ ಧೂಳಿಪುಡಿ ಪಂಡಿತ್ 1988 ರಲ್ಲಿ ಗೋವಾ ವಿಶ್ವವಿದ್ಯಾನಿಲಯದಲ್ಲಿ ಮೊದಲು ತಮ್ಮ ಬೋಧನಾ ವೃತ್ತಿಯನ್ನು ಪ್ರಾರಂಭಿಸಿದರು. ಬಳಿಕ 1993 ರಲ್ಲಿ ಪುಣೆ ವಿಶ್ವವಿದ್ಯಾಲಯದಲ್ಲಿ ಕಾರ್ಯ ನಿರ್ವಹಿಸಿದ್ದಾರೆ. ಶಾಂತಿಶ್ರೀ ಧೂಳಿಪುಡಿ ಪಂಡಿತ್ ತಮ್ಮ ವೃತ್ತಿಜೀವನದಲ್ಲಿ ಅವರು 29 ಪಿಎಚ್‌ಡಿ ಅಭ್ಯರ್ಥಿಗಳಿಗೆ ಮಾರ್ಗದರ್ಶನ ನೀಡಿದ್ದಾರೆ.

ವಿವಿಧ ಶೈಕ್ಷಣಿಕ ಸಂಸ್ಥೆಗಳಲ್ಲಿ ಆಡಳಿತಾತ್ಮಕ ಸ್ಥಾನವನ್ನು ಪಡೆದು ಕೆಲಸ ನಿರ್ವಹಿಸಿರುವ ಇವರು,  ವಿಶ್ವವಿದ್ಯಾನಿಲಯ ಧನಸಹಾಯ ಆಯೋಗ (UGC), ಭಾರತೀಯ ಸಮಾಜ ವಿಜ್ಞಾನ ಸಂಶೋಧನಾ ಮಂಡಳಿ (ICSSR) ಮತ್ತು ಕೇಂದ್ರೀಯ ವಿಶ್ವವಿದ್ಯಾಲಯಗಳಿಗೆ ಸಂದರ್ಶಕರ ನಾಮನಿರ್ದೇಶಿತ ಸದಸ್ಯರಾಗಿದ್ದಾರೆ.

ಕಳೆದ ವರ್ಷ ಐದು ವರ್ಷಗಳ ಅವಧಿ ಮುಗಿದ ನಂತರ ಜೆಎನ್‌ಯುನಲ್ಲಿ ಹಂಗಾಮಿ ವಿಸಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಎಂ ಜಗದೇಶ್ ಕುಮಾರ್ ಅವರನ್ನು ಕಳೆದ ವಾರ ಯುಜಿಸಿ ಅಧ್ಯಕ್ಷರನ್ನಾಗಿ ನೇಮಿಸಲಾಗಿತ್ತು.

ಇದನ್ನೂ ಓದಿ: ಲತಾ ಮಂಗೇಶ್ಕರ್‌‌ ಮೇಲೆ ಶಾರುಖ್‌ ಉಗುಳಿದರೆಂದು ಸುಳ್ಳು ಹಬ್ಬಿಸಿದ ಬಿಜೆಪಿ ನಾಯಕರು!

ಇತ್ತ, ಶಾಂತಿಶ್ರೀ ಧೂಳಿಪುಡಿ ಪಂಡಿತ್ ನೇಮಕಕ್ಕೆ ಪರ ವಿರೋಧ ಚರ್ಚೆಗಳು ಆರಂಭವಾಗಿವೆ. ಗೋಡ್ಸೆ ಪರವಾಗಿ, ಐತಿಹಾಸಿಕ ರೈತ ಹೋರಾಟದ ಸಂದರ್ಭದಲ್ಲಿ ರೈತರನ್ನು ದಲ್ಲಾಳಿಗಳೆಂದು ಅವರು ಮಾಡಿದ್ದ ಹಳೆಯ ಟ್ವೀಟ್‌ಗಳನ್ನು ಕೆದಕಿರುವ ಹಲವು ಮಂದಿ, ಜೆಎನ್‌ಯುನಲ್ಲಿ ಗೋಡ್ಸೆ ಕುರಿತ ಹೊಸ ಕೋರ್ಸ್ ಆರಂಭವಾಗದಿದ್ದರೆ ಸಾಕು ಎಂದಿದ್ದಾರೆ.

ನೂತನ ಉಪಕುಲಪತಿ ಕೃಷಿ ಕಾನೂನುಗಳನ್ನು ರದ್ದುಗೊಳಿಸಬೇಕೆಂದು ನಡೆಯುತ್ತಿದ್ದ ರೈತ ಹೋರಾಟದ ಸಂದರ್ಭದಲ್ಲಿ  ರೈತರನ್ನು ದಲ್ಲಾಳಿಗಳು ಎಂದು ಕರೆದು ಅವಮಾನಿಸಿದ್ದ ಟ್ವೀಟ್‌ ಅನ್ನು ನೆಟ್ಟಿಗರು ಹಂಚಿಕೊಂಡಿದ್ದಾರೆ.


ಇದನ್ನೂ ಓದಿ: ಹಿಜಾಬ್‌ ಬೆಂಬಲಿಸಿ ‘ನೀಲಿ ಶಾಲು’ ಧರಿಸಿದ ವಿದ್ಯಾರ್ಥಿಗಳು; ಮೊಳಗಿದ ‘ಜೈ ಭೀಮ್‌’ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...