Homeಕರ್ನಾಟಕಸಂತೋಷ್‌ ಸಾವು ಪ್ರಕರಣ: ಸಚಿವ ಈಶ್ವರಪ್ಪ ರಾಜೀನಾಮೆ ಘೋಷಣೆ

ಸಂತೋಷ್‌ ಸಾವು ಪ್ರಕರಣ: ಸಚಿವ ಈಶ್ವರಪ್ಪ ರಾಜೀನಾಮೆ ಘೋಷಣೆ

- Advertisement -
- Advertisement -

ಬಿಜೆಪಿ ಕಾರ್ಯಕರ್ತ, ಗುತ್ತಿಗೆದಾರ ಸಂತೋಷ್‌‌ ಪಾಟೀಲ್‌‌ ಆತ್ಮಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಶಿವಮೊಗ್ಗದಲ್ಲಿ ಗುರುವಾರ ಘೋಷಿಸಿದ್ದಾರೆ. “ಪ್ರಕರಣದಲ್ಲಿ ನನ್ನದೇನಾದರೂ ಒಂದು ಶೇಖಡ ತಪ್ಪಿದ್ದರೂ ನನ್ನ ಮನೆ ದೇವರು ನನಗೆ ಶಿಕ್ಷೆ ನೀಡಲಿ. ನಾಳೆ ಸಂಜೆ ಬೆಂಗಳೂರಿಗೆ ತೆರಳಿ ಮುಖ್ಯಮಂತ್ರಿಗೆ ರಾಜೀನಾಮೆ ಪತ್ರ ಸಲ್ಲಿಸುತ್ತೇನೆ” ಎಂದು ಅವರು ಹೇಳಿದ್ದಾರೆ.

ತಮ್ಮ ಕಾರ್ಯಕ್ಷೇತ್ರವಾದ ಶಿವಮೊಗ್ಗದಲ್ಲಿ ದಿಢೀರ್‌‌ ಸುದ್ದಿಗೋಷ್ಠಿ ಕರೆದು ಮಾತನಾಡಿರುವ ಈಶ್ವರಪ್ಪ, “ಪ್ರಕರಣದ ವಿಚಾರದಲ್ಲಿ ಪಕ್ಷದ ಹಿರಿಯರಿಗೆ, ಮುಖ್ಯಮಂತ್ರಿಗಳಿಗೆ, ರಾಷ್ಟ್ರೀಯ ನಾಯಕರುಗಳಿಗೆ ಇರುಸುಮುರುಸು ಆಗಬಾರದು. ಈ ಒಂದೇ ಕಾರಣಕ್ಕೆ ನಾನು ರಾಜೀನಾಮೆ ಕೊಡುತ್ತಿದ್ದೇನೆ. ಈ ವಿಷಯದ ಬಗ್ಗೆ ನಾನು ಮುಖ್ಯಮಂತ್ರಿಗೆ ಈಗಾಗಲೇ ಹೇಳಿದ್ದೇನೆ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನಾಳೆ ಸಂಜೆ ಬೆಂಗಳೂರಿಗೆ ಹೋಗಿ ಮುಖ್ಯಮಂತ್ರಿಗಳಿಗೆ ರಾಜೀನಾಮೆ ಪತ್ರವನ್ನು ಸಲ್ಲಿಸುತ್ತಾ ಇದ್ದೇನೆ. ಇಲ್ಲಿ ತನಕ ಸಹಕಾರ ಕೊಟ್ಟಂತಹ ಮುಖ್ಯಮಂತ್ರಿಗಳಿಗೆ ಹಾಗೂ ಎಲ್ಲಾ ಸ್ನೇಹಿತರಿಗೆ ಅಭಿನಂಧನೆ ಸಲ್ಲಿಸುತ್ತೇನೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:ಈಶ್ವರಪ್ಪ ರಾಜೀನಾಮೆಗೆ ಹೈಕಮಾಂಡ್‌ನಿಂದ ಒತ್ತಡವಿಲ್ಲ: ಸಿಎಂ ಬೊಮ್ಮಾಯಿ

“ನಾನು ದೇವರನ್ನು ನಂಬುವವನು, ಪ್ರಕರಣದ ಬಗ್ಗೆ ನನಗೆ ಪೂರ್ಣ ವಿಶ್ವಾವಿದೆ.  ಈ ಇಡೀ ಎಪಿಸೋಡಲ್ಲಿ ಒಂದೇ ಒಂದು ಪರ್ಸೆಂಟ್ ನನ್ನದೇನಾದರೂ ತಪ್ಪಿದ್ದರೆ, ಆ ಭಗವಂತ ನನಗೆ ಶಿಕ್ಷೆ ಕೊಡಲಿ ಎಂದು ನಾನು ಕೇಳಿಕೊಳ್ಳುತ್ತೇನೆ. ಪ್ರಕರಣದಲ್ಲಿ ನಾನು ಮುಕ್ತವಾಗಿ ಹೊರಬರುತ್ತೇನೆ ಎಂದು ನನಗೆ ಪೂರ್ಣ ನಂಬಿಕೆ ಇದೆ. ಈ ಬಗ್ಗೆ ತನಿಖೆ ನಡೆಸಬೇಕು ಎಂದು ನಾನು ಮುಖ್ಯಮಂತ್ರಿಗೆ ಹೇಳಿದಾಗ ಅವರು ಕೂಡಾ ಸಂತೋಷದಿಂದ ತನಿಖೆ ಮಾಡುತ್ತೇನೆ ಎಂದು ಅವರು ಒಪ್ಪಿಕೊಂಡಿದ್ದಾರೆ. ನನ್ನ ಮನೆ ದೇವರಾದ ಚೌಡೇಶ್ವರಿ ನಾನು ತಪ್ಪಿತಸ್ಥ ಅಲ್ಲ ಎಂದು ನಿರ್ದೋಷಿಯಾಗಿ ನನ್ನನ್ನು ಹೊರ ತರುತ್ತಾಳೆ” ಎಂದು ಈಶ್ವರಪ್ಪ ಹೇಳಿದ್ದಾರೆ.

“ನನಗೆ ಸಹಕಾರ ಕೊಟ್ಟ ಎಲ್ಲಾ ಕಾರ್ಯಕರ್ತರಿಗೆ ಅಭಿನಂಧನೆ ಅರ್ಪಿಸುತ್ತೇನೆ. ಗ್ರಾಮೀಣಾಭಿವೃದ್ದಿ ಇಲಾಖೆ ಸಿಕ್ಕಿದ್ದು ನನ್ನ ಸೌಭಾಗ್ಯ. ಇಲಾಖೆಯಲ್ಲಿ ನಾನು ಸಾಕಷ್ಟು ಕೆಲಸ ಮಾಡಿದ್ದೇನೆ. ಪ್ರಕರಣದಲ್ಲಿ ಯಾರಿಗೂ ಇರಿಸುಮುರಿಸು ಮಾಡಲು ಇಷ್ಟವಿಲ್ಲ. ಎಲ್ಲವನ್ನೂ ಎದುರಿಸಿ ಮುಕ್ತವಾಗಿ ಹೊರಬರುತ್ತೇನೆ. ಒಂದೇ ಒಂದು ಪರ್ಸೆಂಟ್ ತಪ್ಪಿದ್ದರೆ ಸಾಬೀತಾಗಲಿ” ಎಂದು ಹೇಳಿದ್ದಾರೆ.

ಈಶ್ವರಪ್ಪ ನಿರ್ಧಾರದ ಬಗ್ಗೆ ಪ್ರತಿಕ್ರಿಯಿಸಿರುವ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್‌‌, “ಸುಳ್ಳು ಕಂಪೆನಿಯ ಚೇರ್ಮನ್ ಆಗಿರುವ ಈಶ್ವರಪ್ಪ ರಾಜೀನಾಮೆ ನೀಡಿದರೆ ಸಾಲದು. ಸಂತೋಷ್ ಸಾವು ಪ್ರಕರಣದಲ್ಲಿ ಅವರನ್ನು ಬಂಧಿಸಿ ಭ್ರಷ್ಟಾಚಾರ ಪ್ರಕರಣ ದಾಖಲಿಸಬೇಕು” ಎಂದು ಹೇಳಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆಗೆ ಸಿದ್ದರಾಮಯ್ಯ ಜೊತೆಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಸಂತೋಷ್ 40% ಕಮಿಷನ್ ಆರೋಪ ಮಾಡಿದ ದಿನದಿಂದ ಆತ ಯಾರು ಎಂದೇ ನನಗೆ ಗೊತ್ತಿಲ್ಲ ಎಂದು ಈಶ್ವರಪ್ಪ ಸುಳ್ಳು ಹೇಳುತ್ತಲೇ ಇದ್ದರು. ಇಂದು ತಮ್ಮ ವಿರುದ್ಧ ಪ್ರತಿಭಟನೆ ಚುರುಕಾಗಿದೆ ಎಂಬುದು ತಿಳಿದ ಕೂಡಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ನೀಡಿದರೆ ಸಾಲದು ಅವರನ್ನು ಕೂಡಲೇ ಬಂಧಿಸಿ ಭ್ರಷ್ಟಾಚಾರ ಪ್ರಕರಣ ದಾಖಲಿಸಬೇಕು” ಎಂದು ಆಗ್ರಹಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ: ಈಶ್ವರಪ್ಪ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ: ಸಿದ್ದರಾಮಯ್ಯ, ಡಿ.ಕೆ.ಶಿ, ಸುರ್ಜೇವಾಲರನ್ನು ವಶಕ್ಕೆ ಪಡೆದ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...