Homeಕರ್ನಾಟಕಸಂತೋಷ್‌ ಸಾವು ಪ್ರಕರಣ; ಡೆತ್‌ನೋಟ್‌‌ ಕುರಿತು ಯಾವುದೆ ಮಾಹಿತಿ ಇಲ್ಲ ಎಂದ ಗೃಹ ಸಚಿವ ಆರಗ...

ಸಂತೋಷ್‌ ಸಾವು ಪ್ರಕರಣ; ಡೆತ್‌ನೋಟ್‌‌ ಕುರಿತು ಯಾವುದೆ ಮಾಹಿತಿ ಇಲ್ಲ ಎಂದ ಗೃಹ ಸಚಿವ ಆರಗ ಜ್ಞಾನೇಂದ್ರ

- Advertisement -
- Advertisement -

ಸಚಿವ ಈಶ್ವರಪ್ಪ ವಿರುದ್ದ ಲಂಚ ಆರೋಪ ಮಾಡಿದ್ದ ಬಿಜೆಪಿ ಕಾರ್ಯಕರ್ತ, ಗುತ್ತಿಗೆದಾರ ಸಂತೋಷ್‌ ಪಾಟೀಲ್ ಸಾವಿನ ಕುರಿತು ಪ್ರತಿಕ್ರಿಯಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ, “ಮೃತ ಸಂತೋಷ್ ಬರೆದಿರುವ ಡೆತ್‌ನೋಟ್‌ ಕುರಿತು ನನಗೆ ಯಾವುದೆ ಮಾಹಿತಿ ಇಲ್ಲ. ಬಹುಷಃ ಅದು ಡೆತ್‌ನೋಟ್‌ ಅಲ್ಲ ಎಂದೆನಿಸುತ್ತದೆ” ಎಂದು ಹೇಳಿದ್ದಾರೆ.

ಬೆಳಗಾವಿಯ ಬಿಜೆಪಿ ಕಾರ್ಯಕರ್ತ ಹಾಗೂ ಗುತ್ತಿಗೆದಾರ ಸಂತೋಷ ಪಾಟೀಲ್  ಅವರು ಸಚಿವ ಕೆ.ಎಸ್. ಈಶ್ವರಪ್ಪ ಅವರು 40% ಕಮೀಷನ್‌‌‌ಗೆ ಪೀಡಿಸುತ್ತಿದ್ದಾರೆ ಎಂದು ಆರೋಪಿಸಿ ಪ್ರಧಾನಿಗೆ ಇತ್ತೀಚೆಗೆ ಪತ್ರ ಬರೆದಿದ್ದರು. ಇದು ರಾಜ್ಯದ ರಾಜಕೀಯ ವಲಯದಲ್ಲಿ ಭಾರಿ ಸಂಚಲನ ಮೂಡಿಸಿತ್ತು. ಇದೀಗ ಸಂತೋಷ್‌ ಅವರು ಉಡುಪಿಯ ಲಾಡ್ಜ್‌ ಒಂದರಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಮಂಗಳವಾರ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕೆ ವ್ಯಕ್ತವಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನಿನ್ನೆ ತಡರಾತ್ರಿಯೆ ಅವರು ಆತ್ಮಹತ್ಯೆ ನೋಟ್ ಬರೆದು ಅದನ್ನು ಮಾಧ್ಯಮ ಪತ್ರಿನಿಧಿಗಳಿಗೆ ಕಳುಹಿಸಿದ್ದರು ಎಂದು ವರದಿಯಾಗಿದ್ದು, ಈ ಡೆತ್‌ ನೋ‌ಟ್‌ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಈ ಪತ್ರದಲ್ಲಿ ಅವರು ನೇರವಾಗಿಯೆ, “ನನ್ನ ಸಾವಿಗೆ ಈಶ್ವರಪ್ಪ ಕಾರಣ” ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: 40% ಕಮಿಷನ್‌: ಆತ್ಮಹತ್ಯೆ ಮಾಡಿಕೊಂಡ ಸಂತೋಷ್‌ ಯಾರೆಂದೇ ಗೊತ್ತಿಲ್ಲ- ಈಶ್ವರಪ್ಪ

ಇದರ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ, “ಡೆತ್ ನೋಟ್ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಡೆತ್‌ ನೋಟ್‌ ಇದೆಯೋ ಇಲ್ಲವೊ ಮಾಹಿತಿ ಪಡೆದುಕೊಳ್ಳುತ್ತೇನೆ. ಬಹುಶಃ ಅದು ಡೆತ್​ನೋಟ್ ಅಲ್ಲ ಎನ್ನಿಸುತ್ತದೆ” ಎಂದು ಹೇಳಿದ್ದಾರೆ.

“ಆರೋಪ ಮಾಡೋದು, ಸಾಬೀತು ಮಾಡೋದು, ಎಲ್ಲದಕ್ಕೂ ವಿಧಾನಗಳಿವೆ. ಆತ್ಮಹತ್ಯೆಗೆ ಕಾರಣವೇನು ಎನ್ನುವ ವಿವರ ಮೊದಲು ಪಡೆದುಕೊಳ್ಳುತ್ತೇನೆ. ಎಲ್ಲ ಆಯಾಮಗಳಲ್ಲೂ ತನಿಖೆ ನಡೆಯುತ್ತದೆ” ಎಂದು ಆರಗ ಅವರು ಹೇಳಿದ್ದಾರೆ.

ಸಂತೋಷ್‌ ಪಾಟಿಲ್‌‌ ಅವರು ಬರೆದಿದ್ದಾರೆ ಎಂದು ಎನ್ನಲಾಗಿರುವ ಪತ್ರದಲ್ಲಿ, “ನನ್ನ ಸಾವಿಗೆ ನೇರ ಕಾರಣ ಸಚಿವ ಕೆ.ಎಸ್. ಈಶ್ವರಪ್ಪ. ಅವರಿಗೆ ತಕ್ಕ ಶಿಕ್ಷೆ ಆಗಬೇಕು. ನನ್ನೆಲ್ಲಾ ಆಸೆಗಳನ್ನು ಬದಿಗೊತ್ತಿ ಈ ನಿರ್ಧಾರ ಮಾಡಿರುತ್ತೇನೆ” ಎಂದು ಬರೆಯಲಾಗಿದೆ.

“ನನ್ನ ಹೆಂಡತಿ ಮಗುವಿಗೆ ಸರ್ಕಾರ ಅಂದರೆ ಮಾನ್ಯ ಪ್ರಧಾನಮಂತ್ರಿಗಳು ಹಾಗೂ ಮಾನ್ಯ ಮುಖ್ಯಮಂತ್ರಿಗಳು ಹಾಗೂ ನಮ್ಮ ಹಿರಿಯ ಲಿಂಗಾಯತ ನಾಯಕರಾದ ಬಿ.ಎಸ್. ಯಡಿಯೂರಪ್ಪನವರು ಹಾಗೆ ಅವರಿವರಿಂದನೆ ಎಲ್ಲರು ಸಹಾಯ ಹಸ್ತ ನೀಡಬೇಕೆಂದು ಕೈ ಮುಗಿದು ಕೇಳಿಕೊಳ್ಳುತ್ತೇನೆ. ಮಾಧ್ಯಮ ಮಿತ್ರರಿಗೆ ಕೋಟಿ ಕೋಟಿ ಧನ್ಯವಾದಗಳು” ಎಂದು ಬರೆದಿದ್ದಾರೆ.

ಪತ್ರದಲ್ಲಿ ಅವರು “ನನ್ನ ಜೊತೆ ಬಂದ ನನ್ನ ಗೆಳಯರಾದ ಸಂತೋಷ ಮತ್ತು ಪ್ರಶಾಂತ್‌ಗೆ ನಾನು ಪ್ರವಾಸ ಹೋಗೋಣ ಎಂದು ನನ್ನ ಜೊತೆಗೆ ಕಳೆದುಕೊಂಡ ಬಂದಿರುತ್ತೆನೆ ಅಷ್ಟೆ. ಅವರಿಗೆ ನನ್ನ ಸಾವಿನ ಬಗ್ಗೆ ಯಾವುದೆ ಸಂಬಂಧ ಇರುವುದಿಲ್ಲ” ಎಂದು ಪತ್ರವನ್ನು ಕೊನೆಗೊಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ: ಸಚಿವ ಈಶ್ವರಪ್ಪ ವಿರುದ್ಧ 40% ಕಮೀಷನ್‌ ಆರೋಪ ಮಾಡಿದ್ದ ಬಿಜೆಪಿ ಕಾರ್ಯಕರ್ತ ಉಡುಪಿ ಲಾಡ್ಜ್‌‌ನಲ್ಲಿ ಶವವಾಗಿ ಪತ್ತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....