Homeಮುಖಪುಟಪೊಲೀಸ್ ಕ್ರೌರ್ಯ ಚಿತ್ರಿಸಿದ್ದಕ್ಕಾಗಿ ಅಂತಾರಾಷ್ಟ್ರೀಯ ಮೆಚ್ಚುಗೆ ಪಡೆದ ‘ಸಂತೋಷ್’ ಚಿತ್ರಕ್ಕೆ ಭಾರತದಲ್ಲಿ ನಿರ್ಬಂಧ

ಪೊಲೀಸ್ ಕ್ರೌರ್ಯ ಚಿತ್ರಿಸಿದ್ದಕ್ಕಾಗಿ ಅಂತಾರಾಷ್ಟ್ರೀಯ ಮೆಚ್ಚುಗೆ ಪಡೆದ ‘ಸಂತೋಷ್’ ಚಿತ್ರಕ್ಕೆ ಭಾರತದಲ್ಲಿ ನಿರ್ಬಂಧ

- Advertisement -
- Advertisement -

ಬ್ರಿಟನ್‌ನಿಂದ ಆಸ್ಕರ್‌ಗೆ ಅಧಿಕೃತ ಪ್ರವೇಶ ಪಡೆದಿದ್ದ’ಸಂತೋಷ್’ ಚಿತ್ರವನ್ನು ಭಾರತೀಯ ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡುವುದಕ್ಕೆ ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿ (ಸಿಬಿಎಫ್‌ಸಿ) ನಿರ್ಬಂಧ ವಿಧಿಸಿದೆ ಎಂದು ವರದಿಯಾಗಿದೆ.

ಸಂಧ್ಯಾ ಸೂರಿ ನಿರ್ದೇಶನದ ವಿಮರ್ಶಾತ್ಮಕವಾಗಿ ಮೆಚ್ಚುಗೆ ಪಡೆದ ಈ ಚಿತ್ರದಲ್ಲಿ ಶಹಾನಾ ಗೋಸ್ವಾಮಿ ಸಾಂಸ್ಥಿಕ ಭ್ರಷ್ಟಾಚಾರವನ್ನು ತೋರಿಸುವ ಪೊಲೀಸ್ ಅಧಿಕಾರಿಯಾಗಿ ನಟಿಸಿದ್ದಾರೆ.

ವಿವಿಧ ಸುದ್ದಿ ವರದಿಗಳ ಪ್ರಕಾರ, ಸಿಬಿಎಫ್‌ಸಿ ಭಾರತದಲ್ಲಿ ಚಿತ್ರಕ್ಕೆ ಬಿಡುಗಡೆ ಪ್ರಮಾಣಪತ್ರ ನೀಡುವ ಮೊದಲು ‘ಹಲವು ದೃಶ್ಯಗಳಿಗೆ ಕತ್ತರಿ ಹಾಕುವಂತೆ’ ಸೂಚಿಸಿದೆ. ಪೊಲೀಸ್ ದೌರ್ಜನ್ಯವನ್ನು ಚಿತ್ರಿಸುವ ದೃಶ್ಯಗಳನ್ನು ಚಿತ್ರದಿಂದ ತೆಗೆದುಹಾಕಬೇಕೆಂದು ಕೇಳಲಾದ ದೃಶ್ಯಗಳ ಪಟ್ಟಿಯಲ್ಲಿ ಸೇರಿಸಲಾಗಿದ್ದು, ಇದು ಚಲನಚಿತ್ರ ನಿರ್ಮಾಪಕರು ಮತ್ತು ಸೆನ್ಸಾರ್ ಮಂಡಳಿಯ ನಡುವೆ ಬಿಕ್ಕಟ್ಟಿಗೆ ಕಾರಣವಾಗಿದೆ.

ಸಿಬಿಎಫ್‌ಸಿಯ ಸೂಚನೆ ಅಥವಾ ಬೇಡಿಕೆ ಬಗ್ಗೆ ದಿ ಗಾರ್ಡಿಯನ್‌ಗೆ ನೀಡಿದ ಸಂದರ್ಶನದಲ್ಲಿ ಪ್ರತಿಕ್ರಿಯಿಸಿದ ಚಿತ್ರದ ನಿರ್ದೇಶಕಿ ಸಂಧ್ಯಾ ಸೂರಿ ತಮ್ಮ ನಿರಾಶೆಯನ್ನು ವ್ಯಕ್ತಪಡಿಸಿದ್ದು, ಈ ಪರಿಸ್ಥಿತಿಯನ್ನು ‘ಹೃದಯವಿದ್ರಾವಕ’ ಎಂದಿದ್ದಾರೆ.

“ಸಿಬಿಎಫ್‌ಸಿಯ ಬೇಡಿಕೆ ನಮಗೆ ಆಶ್ಚರ್ಯ ತಂದಿದೆ. ಆದರೆ, ಇದು ಭಾರತೀಯ ಚಿತ್ರಗಳಿಗೆ ಹೊಸತಲ್ಲ ಅಥವಾ ಇದುವರೆಗೆ ಯಾವುದೇ ಸಿನಿಮಾಗಳನ್ನು ಈ ರೀತಿಯ ಪರಿಸ್ಥಿತಿ ಎದುರಿಸಿಲ್ಲ ಎಂದು ನನಗೆ ಅನಿಸಿಲ್ಲ. ಸಿಬಿಎಫ್‌ಸಿ, ಚಿತ್ರದಲ್ಲಿ ಪೊಲೀಸ್ ದೌರ್ಜನ್ಯ ಮತ್ತು ಸಾಮಾಜಿಕ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲಿದ ಹಲವಾರು ದೃಶ್ಯಗಳಿಗೆ ಕತ್ತರಿ ಹಾಕುವಂತೆ ನಮಗೆ ಸೂಚಿಸಿದೆ” ಎಂದು ಹೇಳಿದ್ದಾರೆ.

ಸಿಬಿಎಫ್‌ಸಿಯ ಬೇಡಿಕೆಗಳನ್ನು ಈಡೇರಿಸುವ ಬದಲು ಕಾನೂನು ಮಾರ್ಗದ ಮೂಲಕ ಹೋಗಿ ನ್ಯಾಯಾಲಯದಲ್ಲಿ ನಿರ್ಧಾರವನ್ನು ಪ್ರಶ್ನಿಸಲು ಸಿದ್ಧಳಿದ್ದೇನೆ ಎಂದು ಅವರು ತಿಳಿಸಿದ್ದಾರೆ.

ಚಿತ್ರದ ನಟಿ ಶಹಾನಾ ಗೋಸ್ವಾಮಿ ತಮ್ಮ ನಿರ್ದೇಶಕರು ಮತ್ತು ಚಿತ್ರ ತಂಡದ ನಿರ್ಧಾರವನ್ನು ಬೆಂಬಲಿಸಿದ್ದು, ಇಂಡಿಯಾ ಟುಡೇಗೆ ನೀಡಿದ ಹೇಳಿಕೆಯಲ್ಲಿ, “ನಾವು ಒಂದು ತಂಡವಾಗಿ ಸಿಬಿಎಫ್‌ಸಿ ಸೂಚಿಸಿದ ದೃಶ್ಯಗಳ ಕಡಿತ ಒಪ್ಪುವುದಿಲ್ಲ. ಏಕೆಂದರೆ ಅವು ಚಿತ್ರವನ್ನು ತುಂಬಾ ಬದಲಾಯಿಸುತ್ತವೆ. ಆದ್ದರಿಂದ ಭಾರತದಲ್ಲಿ ಚಿತ್ರಮಂದಿರಗಳಲ್ಲಿ ನಮ್ಮ ಚಿತ್ರ ಬಿಡುಗಡೆಯಾಗದಿರುವ ಬಿಕ್ಕಟ್ಟಿನಲ್ಲಿದೆ” ಎಂದು ಹೇಳಿದ್ದಾರೆ.

“ಸೆನ್ಸಾರ್ ಮಟ್ಟದಲ್ಲಿ ಅನುಮೋದನೆ ಪಡೆದಿರುವ ಚಿತ್ರವನ್ನು ಭಾರತದಲ್ಲಿ ಬಿಡುಗಡೆ ಮಾಡಲು ಇಷ್ಟೊಂದು ಕಡಿತ ಮತ್ತು ಬದಲಾವಣೆಗಳ ಅಗತ್ಯವಿರುವುದು ದುಃಖಕರ” ಎಂದು ಅವರು ತಮ್ಮ ಹತಾಶೆಯನ್ನು ವ್ಯಕ್ತಪಡಿಸಿದ್ದಾರೆ.

ಕಳೆದ ವರ್ಷ, ದೇವ್ ಪಟೇಲ್ ಅವರ ಚಿತ್ರ ‘ಮಂಕಿ ಮ್ಯಾನ್’ ಕೂಡ ಸಿಬಿಎಫ್‌ಸಿಯಿಂದ ಇದೇ ರೀತಿಯ ನಿರ್ಬಂಧಗಳನ್ನು ಎದುರಿಸಿತ್ತು. ಹಾಗಾಗಿ, ಅವರು ಕೂಡ ಭಾರತದಲ್ಲಿ ಥಿಯೇಟ್ರಿಕಲ್ ಬಿಡುಗಡೆಯ ಅವಕಾಶ ಪಡೆದಿರಲಿಲ್ಲ.

ಬ್ರಿಟಿಷ್-ಭಾರತೀಯ ನಿರ್ಮಾಪಕಿ ಸಂಧ್ಯಾ ಸೂರಿ ಅವರ ಕಥೆ ಮತ್ತು ನಿರ್ದೇಶನವನ್ನು ಹೊಂದಿರುವ ‘ಸಂತೋಷ್’ ಚಿತ್ರ ಉತ್ತರ ಭಾರತದ ಹಿನ್ನೆಲೆಯನ್ನು ಹೊಂದಿದ್ದು, ಪೋಲಿಸ್ ಪಡೆಗೆ ಸೇರ್ಪಡೆಗೊಂಡು ದಲಿತ ಯುವತಿಯ ಕೊಲೆ ಪ್ರಕರಣದ ತನಿಖೆ ನಡೆಸುವ ಯುವ ವಿಧವೆಯ ಪಾತ್ರಕ್ಕಾಗಿ ಅಂತಾರಾಷ್ಟ್ರೀಯ ಪ್ರಶಂಸೆಯನ್ನು ಗಳಿಸಿದೆ.

ಚಿತ್ರವು ಭಾರತೀಯ ಪೋಲಿಸ್ ಪಡೆಯಲ್ಲಿನ ಅತ್ಯಂತ ಹೀನ ಅಂಶಗಳ ಆಳವಾದ ಕಾಲ್ಪನಿಕ ಚಿತ್ರಣವಾಗಿದ್ದು,‌ ಆಳವಾಗಿ ಬೇರೂರಿರುವ ಸ್ತ್ರೀದ್ವೇಷ, ದಲಿತರ ವಿರುದ್ಧದ ತಾರತಮ್ಯ ಹಾಗೂ ಪೋಲಿಸ್ ಅಧಿಕಾರಿಗಳಿಂದ ಸಾಮಾನ್ಯವಾಗಿ ನಡೆಯುವ ದೌರ್ಜನ್ಯ ಮತ್ತು ಹಿಂಸೆಯನ್ನು ಬಿಂಬಿಸಿದೆ. ಚಿತ್ರವು ಭಾರತದ, ವಿಶೇಷವಾಗಿ ದುರ್ಬಲ ವರ್ಗದ ಮಹಿಳೆಯರ ವಿರುದ್ಧ ಲೈಂಗಿಕ ಹಿಂಸಾಚಾರ ಮತ್ತು ದೇಶದಲ್ಲಿ ಹೆಚ್ಚುತ್ತಿರುವ ಮುಸ್ಲಿಮ್ ವಿರೋಧಿ ಪೂರ್ವಾಗ್ರಹವನ್ನು ಮುನ್ನೆಲೆಗೆ ತಂದಿದೆ.

ಯುಕೆಯಿಂದ ಆಸ್ಕರ್‌ಗೆ ಅಧಿಕೃತ ಪ್ರವೇಶದ ಜೊತೆಗೆ, ಈ ವರ್ಷದ ಅತ್ಯುತ್ತಮ ಚೊಚ್ಚಲ ನಿರ್ದೇಶನದ ಚಿತ್ರವಾಗಿ ಬಾಫ್ಟಾ ಪ್ರಶಸ್ತಿಗೆ ಸಂತೋಷ್ ನಿರ್ದೇಶನಗೊಂಡಿತ್ತು. ‘ಅಬ್ಸರ್ವರ್’ನಲ್ಲಿ ಫೈವ್ ಸ್ಟಾರ್ ರೇಟಿಂಗ್ ಒಳಗೊಂಡಂತೆ ಅತ್ಯುತ್ತಮ ವಿಮರ್ಶೆಗಳಿಗೆ ಪಾತ್ರವಾಗಿತ್ತು. ಚಿತ್ರದಲ್ಲಿ ಮುಖ್ಯ ಪಾತ್ರವನ್ನು ನಿರ್ವಹಿಸಿರುವ ಶಹನಾ ಗೋಸ್ವಾಮಿ ಇತ್ತಿಚಿಗೆ ಏಷ್ಯನ್‌ ಫಿಲ್ಮ್ ಅವಾರ್ಡ್ಸ್‌ಗಳ ಅತ್ತುತ್ತಮ ನಟಿ ಪ್ರಶಸ್ತಿಯನ್ನು ಗೆದ್ದುಕೊಂಡಿದ್ದಾರೆ.

IIFA 2025 | ವಿವಿಧ ವಿಭಾಗಗಳಲ್ಲಿ ‘ಲಾಪತಾ ಲೇಡಿಸ್’ ಚಿತ್ರಕ್ಕೆ ಪ್ರಶಸ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗೋ: 5 ತಿಂಗಳಲ್ಲಿ 600 ಕ್ಕೂ ಹೆಚ್ಚು ಜನರಿಗೆ ಮರಣದಂಡನೆ; 1,300 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ; ವಿಶ್ವಸಂಸ್ಥೆ 

ಆಫ್ರಿಕಾ ಖಂಡದಲ್ಲಿ ಎರಡನೇ ಅತಿ ದೊಡ್ಡ ದೇಶವಾಗಿರುವ ಕಾಂಗೋ ಪ್ರಜಾಸತ್ತಾತ್ಮಕ ಗಣರಾಜ್ಯವು ಹದಗೆಡುತ್ತಿರುವ ಮಾನವೀಯ ಮತ್ತು ಮಾನವ ಹಕ್ಕುಗಳ ಬಿಕ್ಕಟ್ಟನ್ನು ಎದುರಿಸುತ್ತಿದೆ. ಸಶಸ್ತ್ರ ಗುಂಪುಗಳು, ವಿದೇಶಿ ಹಸ್ತಕ್ಷೇಪ ಮತ್ತು ನೈಸರ್ಗಿಕ ಸಂಪನ್ಮೂಲಗಳ ಮೇಲಿನ...

60 ದಿನಗಳಿಗಾಗುವಷ್ಟು ಕಚ್ಚಾ ತೈಲ ಸಂಗ್ರಹವಿದೆ, 1 ತಿಂಗಳ ಎಲ್‌ಪಿಜಿ ಪೂರೈಕೆಗೆ ವ್ಯವಸ್ಥೆ ಮಾಡಲಾಗಿದೆ: ಕೇಂದ್ರ ಸರ್ಕಾರ

ಭಾರತದ ಪೆಟ್ರೋಲಿಯಂ ಮತ್ತು ಎಲ್‌ಪಿಜಿ ಪೂರೈಕೆ ಪರಿಸ್ಥಿತಿ ಸಂಪೂರ್ಣವಾಗಿ ಸುರಕ್ಷಿತ ಹಾಗೂ ನಿಯಂತ್ರಣದಲ್ಲಿದೆ ಎಂದು ಸರ್ಕಾರ ಗುರುವಾರ ಪ್ರತಿಪಾದಿಸಿದೆ. "ಉದ್ದೇಶಪೂರ್ವಕವಾಗಿ ದುರುದ್ದೇಶಪೂರಿತ, ಸಂಘಟಿತ ತಪ್ಪು ಮಾಹಿತಿಯ ಅಭಿಯಾನದಿಂದ ನಿವಾಸಿಗಳು ಮೋಸಹೋಗಬಾರದು" ಎಂದು ಎಚ್ಚರಿಸಿದೆ. "ಭಾರತವು...

ಮುಡಾ ಪ್ರಕರಣ : ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿಗೆ ಹೈಕೋರ್ಟ್ ನೋಟಿಸ್

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಇತರರ ವಿರುದ್ಧ ದಾಖಲಾಗಿರುವ ಮುಡಾ ಭೂ ಹಗರಣ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ಸಲ್ಲಿಸಿದ 'ಬಿ ರಿಪೋರ್ಟ್' / ಮುಕ್ತಾಯ ವರದಿಯನ್ನು ವಿಚಾರಣಾ ನ್ಯಾಯಾಲಯ ಸ್ವೀಕರಿಸುವುದನ್ನು ಪ್ರಶ್ನಿಸಿ ಸ್ನೇಹಮಯಿ...

ದೆಹಲಿ| ಹೊಸ ಮಸೂದೆ ವಿರೋಧಿಸಿ ಟ್ರಾನ್ಸ್‌ಜೆಂಡರ್ ಸಮುದಾಯದಿಂದ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ

ಹೊಸದಾಗಿ ಪರಿಚಯಿಸಲಾದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಯನ್ನು ವಿರೋಧಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ಟ್ರಾನ್ಸ್‌ಜೆಂಡರ್ ಸಮುದಾಯದ ಸದಸ್ಯರು ಗುರುವಾರ ಪ್ರತಿಭಟನೆ ನಡೆಸಿದರು. "ಹೊಸ ಮಸೂದೆ ನಮ್ಮ ಹಕ್ಕುಗಳು ಮತ್ತು ಘನತೆಯನ್ನು...

ವಂದೇ ಭಾರತ್ ಪ್ರಯಾಣಿಕನಿಗೆ ಕೊಟ್ಟ ಮೊಸರಿನಲ್ಲಿ ಜೀವಂತ ಹುಳುಗಳು ಪತ್ತೆ; ಮಾರಾಟಗಾರನಿಗೆ ದಂಡ

ಪಾಟ್ನಾ-ಟಾಟಾನಗರ ನಡುವಿನ ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಕನೊಬ್ಬನಿಗೆ ನೀಡಿದ ಪ್ಯಾಕ್ ಮಾಡಿದ ಮೊಸರಿನಲ್ಲಿ ಹುಳುಗಳು ಕಂಡುಬಂದ ನಂತರ ರೈಲ್ವೆ ಇಲಾಖೆ ಮಾರಾಟಗಾರನ ನಡುವಿನ ಒಪ್ಪಂದವನ್ನು ರದ್ದುಗೊಳಿಸಿದ್ದಿ, ಕಂಪನಿಗೆ 50 ಲಕ್ಷ ರೂ. ದಂಡ...

ಮಹಾರಾಷ್ಟ್ರ: ಪ್ರತಿಷ್ಠಿತ ಶಾಲೆಯಲ್ಲಿ ಶಿಕ್ಷಕಿಗೆ ಲೈಂಗಿಕ ಕಿರುಕುಳ ಆರೋಪ: ಶಾಲಾ ಟ್ರಸ್ಟಿಯ ಮಗ ಬಂಧನ

ಮಹಾರಾಷ್ಟ್ರದ ಡೊಂಬಿವ್ಲಿಯ ಸಾಗವ್ ಪ್ರದೇಶದ ಪ್ರಸಿದ್ಧ ಶಾಲೆಯಲ್ಲಿ ಶಾಲಾ ಟ್ರಸ್ಟಿಯ ಮಗ ಶಿಕ್ಷಕಿಯೊಬ್ಬರಿಗೆ ಅಶ್ಲೀಲ ಸಂದೇಶಗಳು ಮತ್ತು ವಿಡಿಯೋಗಳನ್ನು ಕಳುಹಿಸಿದ್ದಾನೆ ಎಂದು ಆರೋಪಿಸಲಾಗಿದೆ. ಅದಲ್ಲದೇ ಶಿಕ್ಷಕಿಯನ್ನು ದೈಹಿಕ ಸಂಬಂಧಕ್ಕಾಗಿ ಪೀಡಿಸಿರುವ ಆರೋಪದ ಮೇಲೆ...

ಒಂದೂವರೆ ವರ್ಷದ ಪ್ಯಾಲೆಸ್ತೀನಿಯನ್ ಮಗುವಿಗೆ ಸಿಗರೇಟ್‌ನಿಂದ ಸುಟ್ಟು, ಮೊಳೆ ಚುಚ್ಚಿ ಚಿತ್ರಹಿಂಸೆ ಕೊಟ್ಟ ಇಸ್ರೇಲಿ ಸೈನಿಕರು

ಗಾಝಾದ ಪ್ಯಾಲೆಸ್ತೀನಿಯನ್ ವ್ಯಕ್ತಿಯೊಬ್ಬರಿಂದ ಬಲವಂತವಾಗಿ ತಪ್ಪೊಪ್ಪಿಗೆ ಪಡೆಯಲು, ಅವರ 18 ತಿಂಗಳ ಮಗುವಿಗೆ ಇಸ್ರೇಲಿ ಸೈನಿಕರು ತೀವ್ರ ಚಿತ್ರಹಿಂಸೆ ಕೊಟ್ಟಿರುವ ಬಗ್ಗೆ ಅಂತಾರಾಷ್ಟ್ರೀಯ ಮಾಧ್ಯಮಗಳು ಸೋಮವಾರ (ಮಾ.23) ವರದಿ ಮಾಡಿವೆ. ಮಾರ್ಚ್ 21ರಂದು...

ಇಂಧನ ಕೊರತೆ ವದಂತಿ; ಕಾಶ್ಮೀರದ ಪೆಟ್ರೋಲ್‌ ಬಂಕ್‌ಗಳಲ್ಲಿ ಖರೀದಿಗೆ ಮುಗಿಬಿದ್ದ ಜನ

ಪಶ್ಚಿಮ ಏಷ್ಯಾ ಸಂಘರ್ಷಕ್ಕೆ ಸಂಬಂಧಿಸಿದ ಇಂಧನ ಕೊರತೆಯ ವದಂತಿಗಳು ಹರಡುತ್ತಿದ್ದಂತೆ ಗುರುವಾರ ಕಾಶ್ಮೀರದಾದ್ಯಂತ ಪೆಟ್ರೋಲ್ ಪಂಪ್‌ಗಳು ಭಾರಿ ಜನದಟ್ಟಣೆಯಾಯಿತು; ಭೀತಿಯಿಂದ ಜನ ಖರೀದಿಗೆ ಮುಗಿಬಿದ್ದರು. ಇಂಧನ ಸರಬರಾಜು ಸಾಕಷ್ಟು ಲಭ್ಯವಿದೆ ಎಂದು ಅಧಿಕಾರಿಗಳು...

ರಾಮ ಮಂದಿರವನ್ನು ಎಂದಿಗೂ ವಿರೋಧಿಸಿಲ್ಲ; ಅದಕ್ಕಾಗಿ ದೇಣಿಗೆ ನೀಡಿದ್ದೇನೆ: ದಿಗ್ವಿಜಯ ಸಿಂಗ್

ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ, ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಗುರುವಾರ ಅಯೋಧ್ಯೆಗೆ ತೆರಳಿ ರಾಮ ಜನ್ಮಭೂಮಿ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದರು. "ನಾನು ರಾಮಮಂದಿರ ನಿರ್ಮಾಣವನ್ನು ಎಂದಿಗೂ ವಿರೋಧಿಸಿಲ್ಲ, ದೇವಾಲಯ ಟ್ರಸ್ಟ್‌ಗೆ ದೇಣಿಗೆ...

ಮೀಸಲಾತಿ ವಿರೋಧಿ ಹೇಳಿಕೆ: ಖಾಸಗಿ ಆಸ್ಪತ್ರೆಯಲ್ಲಿ ಸೋನಿಯಾ ಗಾಂಧಿ ಚಿಕಿತ್ಸೆ ಬಗ್ಗೆ ಪ್ರಶ್ನಿಸಿದ ಬಿಜೆಪಿ ಸಂಸದನಿಗೆ ಕಾಂಗ್ರೆಸ್ ತಿರುಗೇಟು

ಗುರುವಾರ ಬಿಜೆಪಿ ಸಂಸದ ನಿಶಿಕಾಂತ್ ದುಬೆ ಅವರು ಹಿರಿಯ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರಿಗೆ ಖಾಸಗಿ ಆಸ್ಪತ್ರೆಯಲ್ಲಿ ನೀಡಲಾಗುತ್ತಿರುವ ಚಿಕಿತ್ಸೆಯನ್ನು ಪ್ರಶ್ನಿಸುವ ಮೂಲಕ ತಮ್ಮ ಮೀಸಲಾತಿ ವಿರೋಧಿ ಮನಸ್ಥಿತಿಯನ್ನು ಅನಾವರಣಗೊಳಿಸಿದ್ದಾರೆ. ಅವರ...