ಉಡುಪಿಯ ಲಾಡ್ಜ್‌ನಲ್ಲಿ ಜೀವ ಕಳೆದುಕೊಂಡಿರುವ ಬಿಜೆಪಿ ಕಾರ್ಯಕರ್ತ, ಗುತ್ತಿಗೆದಾರ ಸಂತೋಷ್ ಪಾಟೀಲ್ ಮೃತದೇಹವನ್ನು, ಸಚಿವ ಈಶ್ವರಪ್ಪ ಅವರನ್ನು ಬಂಧಿಸುವವರೆಗೂ ಅಂತ್ಯಕ್ರಿಯೆ ಮಾಡುವುದಿಲ್ಲ ಎಂದು ಅವರ ಸಹೋದರ ಪ್ರಶಾಂತ್ ಪಾಟೀಲ್ ಮಂಗಳವಾರ ಪ್ರತಿಜ್ಞೆ ಮಾಡಿದ್ದಾರೆ.
“ನನ್ನ ತಮ್ಮ ಸಂತೋಷ್ ಗುತ್ತಿಗೆದಾರನಾಗಿದ್ದ, ಅವರ ನ ಸಾವಿಗೆ ಸಚಿವ ಕೆ.ಎಸ್. ಈಶ್ವರಪ್ಪ ಅವರೇ ನೇರ ಕಾರಣ. 4 ಕೋಟಿ ರೂ. ಮೊತ್ತದ ಕೆಲಸ ಮಾಡಿದ್ದೇನೆ. ಹಣ ಬಂದಿಲ್ಲ, ಬಹಳ ಕಷ್ಟವಾಗಿದೆ ಎಂದು ಹೇಳಿದ್ದ. ಅವರ ಸಾವಿಗೆ ನ್ಯಾಯ ದೊರಕಿಸಿಕೊಡಬೇಕು. ನಮ್ಮ ಸಮುದಾಯದವರೇ ಆದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಯಡಿಯೂರಪ್ಪ ಅವರು ನಮಗೆ ನ್ಯಾಯ ದೊರಕಿಸಿಕೊಡಬೇಕು” ಎಂದು ಪ್ರಶಾಂತ್ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others
“ಸಂತೋಷ್ ಅವರು ಸಚಿವ ಈಶ್ವರಪ್ಪ ಜೊತೆ ಚೆನ್ನಾಗಿದ್ದರು. ಸಂತೋಷ್ ಪರಿಚಯವೇ ಇಲ್ಲ ಎಂದು ಈಶ್ವರಪ್ಪ ಸುಳ್ಳು ಹೇಳುತ್ತಿದ್ದಾರೆ. ಈಶ್ವರಪ್ಪ ಅವರನ್ನು ಬಂಧಿಸುವವರೆಗೂ ಮೃತದೇಹವನ್ನು ನಾವು ಅಂತ್ಯಕ್ರಿಯೆ ನಡೆಸುವುದಿಲ್ಲ” ಎಂದು ಅವರು ಪ್ರತಿಜ್ಞೆ ಮಾಡಿದ್ದಾರೆ.
ಇದನ್ನೂ ಓದಿ: ಸಚಿವ ಈಶ್ವರಪ್ಪ ವಿರುದ್ಧ 40% ಕಮೀಷನ್ ಆರೋಪ ಮಾಡಿದ್ದ ಬಿಜೆಪಿ ಕಾರ್ಯಕರ್ತ ಉಡುಪಿ ಲಾಡ್ಜ್‌ನಲ್ಲಿ ಶವವಾಗಿ ಪತ್ತೆ
ಬೆಳಗಾವಿಯ ಬಿಜೆಪಿ ಕಾರ್ಯಕರ್ತ ಹಾಗೂ ಗುತ್ತಿಗೆದಾರ ಸಂತೋಷ ಪಾಟೀಲ್ ಅವರು ಸಚಿವ ಕೆ.ಎಸ್. ಈಶ್ವರಪ್ಪ ಅವರು 40% ಕಮೀಷನ್‌ಗೆ ಪೀಡಿಸುತ್ತಿದ್ದಾರೆ ಎಂದು ಆರೋಪಿಸಿ ಪ್ರಧಾನಿಗೆ ಇತ್ತೀಚೆಗೆ ಪತ್ರ ಬರೆದಿದ್ದರು. ಇದು ರಾಜ್ಯದ ರಾಜಕೀಯ ವಲಯದಲ್ಲಿ ಭಾರಿ ಸಂಚಲನ ಮೂಡಿಸಿತ್ತು. ಇದೀಗ ಸಂತೋಷ್ ಅವರು ಉಡುಪಿಯ ಲಾಡ್ಜ್ ಒಂದರಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ನಿನ್ನೆ ತಡರಾತ್ರಿಯೆ ಅವರು ಆತ್ಮಹತ್ಯೆ ನೋಟ್ ಬರೆದು ಅದನ್ನು ಮಾಧ್ಯಮ ಪತ್ರಿನಿಧಿಗಳಿಗೆ ಕಳುಹಿಸಿದ್ದರು ಎಂದು ವರದಿಯಾಗಿದ್ದು, ಈ ಡೆತ್ ನೋಟ್ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಈ ಪತ್ರದಲ್ಲಿ ಅವರು ನೇರವಾಗಿಯೆ, “ನನ್ನ ಸಾವಿಗೆ ಈಶ್ವರಪ್ಪ ಕಾರಣ” ಎಂದು ಬರೆದಿದ್ದಾರೆ.
ಸಂತೋಷ್ ಸಾವಿಗೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಆರಗ ಜ್ಞಾನೇಂದ್ರ, “ಡೆತ್ ನೋಟ್ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಡೆತ್ ನೋಟ್ ಇದೆಯೋ ಇಲ್ಲವೊ ಮಾಹಿತಿ ಪಡೆದುಕೊಳ್ಳುತ್ತೇನೆ. ಬಹುಶಃ ಅದು ಡೆತ್‌ನೋಟ್ ಅಲ್ಲ ಎನ್ನಿಸುತ್ತದೆ” ಎಂದು ಹೇಳಿದ್ದಾರೆ.
“ಆರೋಪ ಮಾಡೋದು, ಸಾಬೀತು ಮಾಡೋದು, ಎಲ್ಲದಕ್ಕೂ ವಿಧಾನಗಳಿವೆ. ಆತ್ಮಹತ್ಯೆಗೆ ಕಾರಣವೇನು ಎನ್ನುವ ವಿವರ ಮೊದಲು ಪಡೆದುಕೊಳ್ಳುತ್ತೇನೆ. ಎಲ್ಲ ಆಯಾಮಗಳಲ್ಲೂ ತನಿಖೆ ನಡೆಯುತ್ತದೆ” ಎಂದು ಆರಗ ಅವರು ಹೇಳಿದ್ದಾರೆ.
ಇದನ್ನೂ ಓದಿ: ಸಂತೋಷ್ ಸಾವು ಪ್ರಕರಣ; ಡೆತ್‌ನೋಟ್ ಕುರಿತು ಯಾವುದೆ ಮಾಹಿತಿ ಇಲ್ಲ ಎಂದ ಗೃಹ ಸಚಿವ ಆರಗ ಜ್ಞಾನೇಂದ್ರ
ಸಂತೋಷ್ ಪಾಟಿಲ್ ಅವರು ಬರೆದಿದ್ದಾರೆ ಎಂದು ಎನ್ನಲಾಗಿರುವ ಪತ್ರದಲ್ಲಿ, “ನನ್ನ ಸಾವಿಗೆ ನೇರ ಕಾರಣ ಸಚಿವ ಕೆ.ಎಸ್. ಈಶ್ವರಪ್ಪ. ಅವರಿಗೆ ತಕ್ಕ ಶಿಕ್ಷೆ ಆಗಬೇಕು. ನನ್ನೆಲ್ಲಾ ಆಸೆಗಳನ್ನು ಬದಿಗೊತ್ತಿ ಈ ನಿರ್ಧಾರ ಮಾಡಿರುತ್ತೇನೆ” ಎಂದು ಬರೆಯಲಾಗಿದೆ.
“ನನ್ನ ಹೆಂಡತಿ ಮಗುವಿಗೆ ಸರ್ಕಾರ ಅಂದರೆ ಮಾನ್ಯ ಪ್ರಧಾನಮಂತ್ರಿಗಳು ಹಾಗೂ ಮಾನ್ಯ ಮುಖ್ಯಮಂತ್ರಿಗಳು ಹಾಗೂ ನಮ್ಮ ಹಿರಿಯ ಲಿಂಗಾಯತ ನಾಯಕರಾದ ಬಿ.ಎಸ್. ಯಡಿಯೂರಪ್ಪನವರು ಹಾಗೆ ಅವರಿವರಿಂದನೆ ಎಲ್ಲರು ಸಹಾಯ ಹಸ್ತ ನೀಡಬೇಕೆಂದು ಕೈ ಮುಗಿದು ಕೇಳಿಕೊಳ್ಳುತ್ತೇನೆ. ಮಾಧ್ಯಮ ಮಿತ್ರರಿಗೆ ಕೋಟಿ ಕೋಟಿ ಧನ್ಯವಾದಗಳು” ಎಂದು ಬರೆದಿದ್ದಾರೆ.
ಪತ್ರದಲ್ಲಿ ಅವರು “ನನ್ನ ಜೊತೆ ಬಂದ ನನ್ನ ಗೆಳಯರಾದ ಸಂತೋಷ ಮತ್ತು ಪ್ರಶಾಂತ್‌ಗೆ ನಾನು ಪ್ರವಾಸ ಹೋಗೋಣ ಎಂದು ನನ್ನ ಜೊತೆಗೆ ಕಳೆದುಕೊಂಡ ಬಂದಿರುತ್ತೆನೆ ಅಷ್ಟೆ. ಅವರಿಗೆ ನನ್ನ ಸಾವಿನ ಬಗ್ಗೆ ಯಾವುದೆ ಸಂಬಂಧ ಇರುವುದಿಲ್ಲ” ಎಂದು ಪತ್ರವನ್ನು ಕೊನೆಗೊಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others
ಇದನ್ನೂ ಓದಿ: ಇವರದೊಂದು ಜನ್ಮನಾ, ನಾಯಿ ಜನ್ಮ: ಈಶ್ವರಪ್ಪ ವಿರುದ್ಧ ಸಂತೋಷ್ ಪತ್ನಿ ಆಕ್ರೋಶ


