Homeಕರ್ನಾಟಕಈಶ್ವರಪ್ಪ ಅವರನ್ನು ಬಂಧಿಸುವವರೆಗೂ ಅಂತ್ಯಕ್ರಿಯೆ ನಡೆಸಲ್ಲ: ಮೃತ ಸಂತೋಷ್‌ ಸಹೋದರ ಪ್ರತಿಜ್ಞೆ

ಈಶ್ವರಪ್ಪ ಅವರನ್ನು ಬಂಧಿಸುವವರೆಗೂ ಅಂತ್ಯಕ್ರಿಯೆ ನಡೆಸಲ್ಲ: ಮೃತ ಸಂತೋಷ್‌ ಸಹೋದರ ಪ್ರತಿಜ್ಞೆ

- Advertisement -
- Advertisement -

ಉಡುಪಿಯ ಲಾಡ್ಜ್‌‌ನಲ್ಲಿ ಜೀವ ಕಳೆದುಕೊಂಡಿರುವ ಬಿಜೆಪಿ ಕಾರ್ಯಕರ್ತ, ಗುತ್ತಿಗೆದಾರ ಸಂತೋಷ್ ಪಾಟೀಲ್ ಮೃತದೇಹವನ್ನು, ಸಚಿವ ಈಶ್ವರಪ್ಪ ಅವರನ್ನು ಬಂಧಿಸುವವರೆಗೂ ಅಂತ್ಯಕ್ರಿಯೆ ಮಾಡುವುದಿಲ್ಲ ಎಂದು ಅವರ ಸಹೋದರ ಪ್ರಶಾಂತ್‌ ಪಾಟೀಲ್‌‌ ಮಂಗಳವಾರ ಪ್ರತಿಜ್ಞೆ ಮಾಡಿದ್ದಾರೆ.

“ನನ್ನ ತಮ್ಮ ಸಂತೋಷ್‌ ಗುತ್ತಿಗೆದಾರನಾಗಿದ್ದ, ಅವರ ನ ಸಾವಿಗೆ ಸಚಿವ ಕೆ.ಎಸ್. ಈಶ್ವರಪ್ಪ ಅವರೇ ನೇರ ಕಾರಣ. 4 ಕೋಟಿ ರೂ. ಮೊತ್ತದ ಕೆಲಸ ಮಾಡಿದ್ದೇನೆ. ಹಣ ಬಂದಿಲ್ಲ, ಬಹಳ ಕಷ್ಟವಾಗಿದೆ ಎಂದು ಹೇಳಿದ್ದ. ಅವರ ಸಾವಿಗೆ ನ್ಯಾಯ ದೊರಕಿಸಿಕೊಡಬೇಕು. ನಮ್ಮ ಸಮುದಾಯದವರೇ ಆದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಯಡಿಯೂರಪ್ಪ ಅವರು ನಮಗೆ ನ್ಯಾಯ ದೊರಕಿಸಿಕೊಡಬೇಕು” ಎಂದು‌ ಪ್ರಶಾಂತ್‌ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಸಂತೋಷ್ ಅವರು ಸಚಿವ ಈಶ್ವರಪ್ಪ ಜೊತೆ ಚೆನ್ನಾಗಿದ್ದರು.‌ ಸಂತೋಷ್ ಪರಿಚಯವೇ ಇಲ್ಲ ಎಂದು ಈಶ್ವರಪ್ಪ ಸುಳ್ಳು ಹೇಳುತ್ತಿದ್ದಾರೆ. ಈಶ್ವರಪ್ಪ ಅವರನ್ನು ಬಂಧಿಸುವವರೆಗೂ ಮೃತದೇಹವನ್ನು ನಾವು ಅಂತ್ಯಕ್ರಿಯೆ ನಡೆಸುವುದಿಲ್ಲ” ಎಂದು ಅವರು ಪ್ರತಿಜ್ಞೆ ಮಾಡಿದ್ದಾರೆ.

ಇದನ್ನೂ ಓದಿ: ಸಚಿವ ಈಶ್ವರಪ್ಪ ವಿರುದ್ಧ 40% ಕಮೀಷನ್‌ ಆರೋಪ ಮಾಡಿದ್ದ ಬಿಜೆಪಿ ಕಾರ್ಯಕರ್ತ ಉಡುಪಿ ಲಾಡ್ಜ್‌‌ನಲ್ಲಿ ಶವವಾಗಿ ಪತ್ತೆ

ಬೆಳಗಾವಿಯ ಬಿಜೆಪಿ ಕಾರ್ಯಕರ್ತ ಹಾಗೂ ಗುತ್ತಿಗೆದಾರ ಸಂತೋಷ ಪಾಟೀಲ್  ಅವರು ಸಚಿವ ಕೆ.ಎಸ್. ಈಶ್ವರಪ್ಪ ಅವರು 40% ಕಮೀಷನ್‌‌‌ಗೆ ಪೀಡಿಸುತ್ತಿದ್ದಾರೆ ಎಂದು ಆರೋಪಿಸಿ ಪ್ರಧಾನಿಗೆ ಇತ್ತೀಚೆಗೆ ಪತ್ರ ಬರೆದಿದ್ದರು. ಇದು ರಾಜ್ಯದ ರಾಜಕೀಯ ವಲಯದಲ್ಲಿ ಭಾರಿ ಸಂಚಲನ ಮೂಡಿಸಿತ್ತು. ಇದೀಗ ಸಂತೋಷ್‌ ಅವರು ಉಡುಪಿಯ ಲಾಡ್ಜ್‌ ಒಂದರಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ನಿನ್ನೆ ತಡರಾತ್ರಿಯೆ ಅವರು ಆತ್ಮಹತ್ಯೆ ನೋಟ್ ಬರೆದು ಅದನ್ನು ಮಾಧ್ಯಮ ಪತ್ರಿನಿಧಿಗಳಿಗೆ ಕಳುಹಿಸಿದ್ದರು ಎಂದು ವರದಿಯಾಗಿದ್ದು, ಈ ಡೆತ್‌ ನೋ‌ಟ್‌ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಈ ಪತ್ರದಲ್ಲಿ ಅವರು ನೇರವಾಗಿಯೆ, “ನನ್ನ ಸಾವಿಗೆ ಈಶ್ವರಪ್ಪ ಕಾರಣ” ಎಂದು ಬರೆದಿದ್ದಾರೆ.

ಸಂತೋಷ್ ಸಾವಿಗೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಆರಗ ಜ್ಞಾನೇಂದ್ರ, “ಡೆತ್ ನೋಟ್ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಡೆತ್‌ ನೋಟ್‌ ಇದೆಯೋ ಇಲ್ಲವೊ ಮಾಹಿತಿ ಪಡೆದುಕೊಳ್ಳುತ್ತೇನೆ. ಬಹುಶಃ ಅದು ಡೆತ್​ನೋಟ್ ಅಲ್ಲ ಎನ್ನಿಸುತ್ತದೆ” ಎಂದು ಹೇಳಿದ್ದಾರೆ.

“ಆರೋಪ ಮಾಡೋದು, ಸಾಬೀತು ಮಾಡೋದು, ಎಲ್ಲದಕ್ಕೂ ವಿಧಾನಗಳಿವೆ. ಆತ್ಮಹತ್ಯೆಗೆ ಕಾರಣವೇನು ಎನ್ನುವ ವಿವರ ಮೊದಲು ಪಡೆದುಕೊಳ್ಳುತ್ತೇನೆ. ಎಲ್ಲ ಆಯಾಮಗಳಲ್ಲೂ ತನಿಖೆ ನಡೆಯುತ್ತದೆ” ಎಂದು ಆರಗ ಅವರು ಹೇಳಿದ್ದಾರೆ.

ಇದನ್ನೂ ಓದಿ: ಸಂತೋಷ್‌ ಸಾವು ಪ್ರಕರಣ; ಡೆತ್‌ನೋಟ್‌‌ ಕುರಿತು ಯಾವುದೆ ಮಾಹಿತಿ ಇಲ್ಲ ಎಂದ ಗೃಹ ಸಚಿವ ಆರಗ ಜ್ಞಾನೇಂದ್ರ

ಸಂತೋಷ್‌ ಪಾಟಿಲ್‌‌ ಅವರು ಬರೆದಿದ್ದಾರೆ ಎಂದು ಎನ್ನಲಾಗಿರುವ ಪತ್ರದಲ್ಲಿ, “ನನ್ನ ಸಾವಿಗೆ ನೇರ ಕಾರಣ ಸಚಿವ ಕೆ.ಎಸ್. ಈಶ್ವರಪ್ಪ. ಅವರಿಗೆ ತಕ್ಕ ಶಿಕ್ಷೆ ಆಗಬೇಕು. ನನ್ನೆಲ್ಲಾ ಆಸೆಗಳನ್ನು ಬದಿಗೊತ್ತಿ ಈ ನಿರ್ಧಾರ ಮಾಡಿರುತ್ತೇನೆ” ಎಂದು ಬರೆಯಲಾಗಿದೆ.

“ನನ್ನ ಹೆಂಡತಿ ಮಗುವಿಗೆ ಸರ್ಕಾರ ಅಂದರೆ ಮಾನ್ಯ ಪ್ರಧಾನಮಂತ್ರಿಗಳು ಹಾಗೂ ಮಾನ್ಯ ಮುಖ್ಯಮಂತ್ರಿಗಳು ಹಾಗೂ ನಮ್ಮ ಹಿರಿಯ ಲಿಂಗಾಯತ ನಾಯಕರಾದ ಬಿ.ಎಸ್. ಯಡಿಯೂರಪ್ಪನವರು ಹಾಗೆ ಅವರಿವರಿಂದನೆ ಎಲ್ಲರು ಸಹಾಯ ಹಸ್ತ ನೀಡಬೇಕೆಂದು ಕೈ ಮುಗಿದು ಕೇಳಿಕೊಳ್ಳುತ್ತೇನೆ. ಮಾಧ್ಯಮ ಮಿತ್ರರಿಗೆ ಕೋಟಿ ಕೋಟಿ ಧನ್ಯವಾದಗಳು” ಎಂದು ಬರೆದಿದ್ದಾರೆ.

ಪತ್ರದಲ್ಲಿ ಅವರು “ನನ್ನ ಜೊತೆ ಬಂದ ನನ್ನ ಗೆಳಯರಾದ ಸಂತೋಷ ಮತ್ತು ಪ್ರಶಾಂತ್‌ಗೆ ನಾನು ಪ್ರವಾಸ ಹೋಗೋಣ ಎಂದು ನನ್ನ ಜೊತೆಗೆ ಕಳೆದುಕೊಂಡ ಬಂದಿರುತ್ತೆನೆ ಅಷ್ಟೆ. ಅವರಿಗೆ ನನ್ನ ಸಾವಿನ ಬಗ್ಗೆ ಯಾವುದೆ ಸಂಬಂಧ ಇರುವುದಿಲ್ಲ” ಎಂದು ಪತ್ರವನ್ನು ಕೊನೆಗೊಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ: ಇವರದೊಂದು ಜನ್ಮನಾ, ನಾಯಿ ಜನ್ಮ: ಈಶ್ವರಪ್ಪ ವಿರುದ್ಧ ಸಂತೋಷ್‌ ಪತ್ನಿ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...