Homeಕರ್ನಾಟಕಆತ್ಮಹತ್ಯೆಗೆ ಯತ್ನಿಸಿದ ಸ್ಯಾಂಟ್ರೋ ರವಿ; ಆಸ್ಪತ್ರೆಗೆ ದಾಖಲು

ಆತ್ಮಹತ್ಯೆಗೆ ಯತ್ನಿಸಿದ ಸ್ಯಾಂಟ್ರೋ ರವಿ; ಆಸ್ಪತ್ರೆಗೆ ದಾಖಲು

- Advertisement -
- Advertisement -

ರಾಜಕೀಯವಾಗಿ ಭಾರಿ ವಿವಾದವೆಬ್ಬಿಸಿದ್ದ, ಪ್ರಸ್ತುತ ಸಿಐಡಿ ವಶದಲ್ಲಿ ಇರುವ ‘ಸ್ಯಾಂಟ್ರೋ ರವಿ’ ಅಲಿಯಾಸ್ ಕೆ.ಎಸ್.ಮಂಜುನಾಥ್ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಸ್ಯಾಂಟ್ರೋ ರವಿ ಆಡಳಿತಾರೂಢ ಬಿಜೆಪಿಯ ಪ್ರಮುಖ ನಾಯಕರೊಂದಿಗೆ ನಿಕಟ ಸಂಪರ್ಕ ಹೊಂದಿದ್ದಾರೆ ಎಂದು ಆರೋಪಿಸಲಾಗುತ್ತಿದೆ.

ಆತ್ಮಹತ್ಯೆ ಯತ್ನಿಸಿದ ನಂತರ ಅವರನ್ನು ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಪ್ರಸ್ತುತ ರವಿಯ ಆರೋಗ್ಯ ಸ್ಥಿರವಾಗಿದೆ ಎಂದು ವರದಿಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮಾನವ ಕಳ್ಳಸಾಗಣೆ ಆರೋಪದ ಮೇಲೆ ಈ ಹಿಂದೆ ಹಲವು ಬಾರಿ ಬಂಧನಕ್ಕೊಳಗಾಗಿದ್ದ, ರವಿ ಇತ್ತೀಚೆಗೆ ಮತ್ತೆ ವಿಚಾರಣೆಗೆ ಒಳಗಾದ್ದರು. ವರದಕ್ಷಿಣೆ ಕಿರುಕುಳ, ಅತ್ಯಾಚಾರ ಮತ್ತು ದೈಹಿಕ ಹಲ್ಲೆ ಆರೋಪದ ಮೇಲೆ ದಲಿತ ಮಹಿಳೆಯೊಬ್ಬರು ಮೈಸೂರು ಪೊಲೀಸರಿಗೆ ದೂರು ನೀಡಿದ್ದರು.

ಇದರ ನಂತರ ತಲೆಮರೆಸಿಕೊಂಡಿದ್ದ ರವಿ ಪತ್ತೆಗೆ ಪೊಲೀಸರು ಆರು ತಂಡಗಳನ್ನು ರಚಿಸಿಲಾಗಿತ್ತು. ತನಿಖಾ ತಂಡಗಳನ್ನು ತೆಲಂಗಾಣ, ಕೇರಳ ಸೇರಿದಂತೆ ನೆರೆಯ ರಾಜ್ಯಗಳಿಗೆ ಕಳುಹಿಸಲಾಗಿತ್ತು. ಅಂತಿಮವಾಗಿ ಜನವರಿ 13 ರಂದು ಗುಜರಾತಿನ ಅಹಮದಾಬಾದ್‌ನಲ್ಲಿ ಅವರನ್ನು ಬಂಧಿಸಲಾಗಿತ್ತು.

ಸ್ಯಾಂಟ್ರೋ ರವಿ ಪೊಲೀಸರಿಂದ ತಪ್ಪಿಸಿಕೊಳ್ಳಲು ಬಿಜೆಪಿ ಸಹಾಯ ಮಾಡಿದೆ ಎಂದು ಪ್ರತಿಪಕ್ಷಗಳು ಆರೋಪಿಸಿದ್ದವು. ಅಲ್ಲದೆ, ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಗುಜರಾತಿನಲ್ಲಿ ಇದ್ದ ದಿನವೇ ರವಿಯನ್ನು ಪೊಲೀಸರು ಅದೇ ರಾಜ್ಯದಲ್ಲಿ ಬಂಧಿಸಿದ್ದರು. ಅಷ್ಟೆ ಅಲ್ಲದೆ, ಆರೋಪಿ ರವಿ ರಾಜ್ಯದ ವಿವಿಧ ಸಚಿವರೊಂದಿಗೆ ಇರುವ ಚಿತ್ರಗಳು ಕೂಡಾ ಹೊರಬಿದ್ದಿವೆ. ಮುಖ್ಯವಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ, ಆರೋಗ್ಯ ಸಚಿವ ಕೆ. ಸುಧಾಕರ್ ಮತ್ತು ಪ್ರಾಥಮಿಕ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಸೇರಿದಂತೆ ಹಲವರೊಂದಿಗೆ ಇರುವ ಇರುವ ಚಿತ್ರಗಳು ಹೊರಹೊಮ್ಮಿವೆ.

ಇಷ್ಟೆ ಅಲ್ಲದೆ, ಬಿಜೆಪಿ ಮತ್ತು ರಾಜ್ಯ ಪೊಲೀಸರೊಂದಿಗೆ ತನಗೆ ಸಂಪರ್ಕ ಇದೆ ಎಂದು ಆರೋಪಿ ರವಿ ಬಡಾಯಿ ಕೊಚ್ಚಿಕೊಳ್ಳುತ್ತಿರುವ ಆಡಿಯೋ ಕ್ಲಿಪ್‌ಗಳು ಕೂಡ ಹೊರಬಿದ್ದಿವೆ. ಜನವರಿ 16 ರಂದು ಕರ್ನಾಟಕ ಸರ್ಕಾರವು ಪ್ರಕರಣವನ್ನು ಸಿಐಡಿಗೆ ಹಸ್ತಾಂತರಿಸಿತ್ತು.

ಜೀವ ಅಮೂಲ್ಯವಾಗಿದೆ. ಎಲ್ಲಾ ಸಮಸ್ಯೆಗಳಿಗೂ ಪರಿಹಾರವಿದೆ. ಮಾನಸಿಕ ಆರೋಗ್ಯ ಸಮಸ್ಯೆಗಳಿದ್ದರೆ ಅಥವಾ ಆತ್ಮಹತ್ಯೆ ಮಾಡಿಕೊಳ್ಳುವ ಭಾವನೆ ಬಂದರೆ ನಿಮಗೆ ಭಾವನಾತ್ಮಕ ಬೆಂಬಲವನ್ನು ನೀಡಿ ಆತ್ಮಹತ್ಯೆ ತಡೆಗಟ್ಟುವ ಸಂಸ್ಥೆಗಳ ಕೆಲವು ಸಹಾಯವಾಣಿ ಸಂಖ್ಯೆಗಳು ಇಲ್ಲಿವೆ.
ಸಹಾಯ (24-ಗಂಟೆ): 080 65000111, 080 65000222
24×7 ಸಹಾಯವಾಣಿ: 98204667260
ಭಾರತದಾದ್ಯಂತ ಸಹಾಯವಾಣಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಇದನ್ನೂ ಓದಿ: ಪ್ರತಿಪಕ್ಷ ನಾಯಕರನ್ನು ಹೀಗಳೆದಾಗ ದೇಶದ ಗೌರವಕ್ಕೆ ಧಕ್ಕೆ ಆಗಲಿಲ್ಲವೇ?: ಬಿಬಿಸಿ ಸಾಕ್ಷ್ಯಚಿತ್ರ ಹಿನ್ನೆಲೆ ಸಿದ್ದರಾಮಯ್ಯ ಪ್ರಶ್ನೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ಲೈಂಗಿಕ ದೌರ್ಜನ್ಯದ ಸಂತ್ರಸ್ತೆಯರಿಗೆ ರಾಜ್ಯ ಸರ್ಕಾರದಿಂದ ಆರ್ಥಿಕ ನೆರವು: ಸುರ್ಜೇವಾಲ

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಲೈಂಗಿಕ ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ರಾಜ್ಯ ಸರ್ಕಾರ ಆರ್ಥಿಕ ನೆರವು ನೀಡಲಿದೆ ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ತಿಳಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ...